ಅರೆಕಾಡು ಅಂಗನವಾಡಿ ಕೇಂದ್ರದಲ್ಲಿ LKG-UKG ಪ್ರಾರಂಭೋತ್ಸವ

ಮರಗೋಡು : ಅರೆಕಾಡು ಅಂಗನವಾಡಿ ಕೇಂದ್ರದಲ್ಲಿ ಎಲ್‌ಕೆಜಿ, ಯುಕೆಜಿ ಪ್ರಾರಂಭೋತ್ಸವ ಕಾರ್ಯಕ್ರಮ ನೆರವೇರಿತು. ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ಪ್ರಭಾರ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮೇಪಾಡಂಡ ಸವಿತಾ ಕೀರ್ತನ್ ಮಾತನಾಡಿ, ಹಳ್ಳಿಗಳಲ್ಲಿ ಎಲ್‌ಕೆಜಿ ಇಲ್ಲದಿರುವುದರಿಂದ ಇಂಗ್ಲಿಷ್ ಕಲಿಕೆಗಾಗಿ ಪೋಷಕರು ತಮ್ಮ ಮಕ್ಕಳನ್ನು ದೂರದಲ್ಲಿರುವ ಶಾಲೆಗೆ ವಾಹನಗಳಲ್ಲಿ ಮಕ್ಕಳ ದೈಹಿಕ, ಮಾನಸಿಕ ಒತ್ತಡವನ್ನು ಲೆಕ್ಕಿಸದೆ ಕಳುಹಿಸುತ್ತಿದ್ದರು. ಆದರೆ ಇನ್ನು ಮುಂದೆ ಅಂಗನವಾಡಿ ಕೇಂದ್ರದಲ್ಲಿ LKG, UKG ಶಿಕ್ಷಣವನ್ನು ಪಡೆಯಬಹುದು. ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಕರೆ ನೀಡಿದರು. ಗ್ರಾಮ ಪಂಚಾಯಿತಿಯಿಂದ […]
ಕತ್ತಲೆಕಾಡು ವಿನಾಯಕ ಸೇವಾ ಟ್ರಸ್ಟ್(ರಿ) ವಿದ್ಯಾರ್ಥಿ ಘಟಕ ಪುನಾರಚನೆ – ಅಧ್ಯಕ್ಷರಾಗಿ ಟಿ.ಕೆ. ಕಿರಣ್ ಆಯ್ಕೆ

ಮಡಿಕೇರಿ : ಕತ್ತಲೆಕಾಡುವಿನ ಶ್ರೀ ವಿನಾಯಕ ಸೇವಾ ಟ್ರಸ್ಟ್(ರಿ) ಇದರ ವಿದ್ಯಾರ್ಥಿ ಘಟಕವನ್ನು ಪುನಾರಚಿಸಲಾಗಿದೆ. ನೂತನ ಅಧ್ಯಕ್ಷರಾಗಿ ಟಿ.ಕೆ. ಕಿರಣ್, ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ನಡೆದ ಟ್ರಸ್ಟ್ ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷರಾಗಿ ವೈ.ಒ. ಶ್ರಾವ್ಯ, ಸಹಕಾರ್ಯದರ್ಶಿಯಾಗಿ ಬಿ.ಜೆ. ದೀಕ್ಷಾ, ಖಜಾಂಜಿಯಾಗಿ ಪಿ.ವಿ. ನವಿತ್, ಯು.ಯು. ಮೇಘನಾ, ಕ್ರೀಡಾ ಸಂಚಾಲಕರಾಗಿ ಬಿ.ವೈ. ಸುಜನ್, ಲಿಖಿತ ರೈ, ಪೂಜಾ ಕಾರ್ಯಕ್ರಮದ ಉಸ್ತುವಾರಿಗಳಾಗಿ ಟಿ.ಕೆ. ವಿನಯ್, ಕೆ.ಪಿ. ಪ್ರಜಿತ್, ಆರಾಧ್ಯ, ಕಾವ್ಯಶ್ರೀ, ಭಜನೆ ಕಾರ್ಯಕ್ರಮದ ಉಸ್ತುವಾರಿಗಳಾಗಿ ಯಶಸ್ವಿನಿ, […]
ʼಬೆಳ್ಳಿ ಗೆಜ್ಜೆʼ ಕವನ ಸಂಕಲನ ಬಿಡುಗಡೆ ಜುಲೈ 15ಕ್ಕೆ

ಸೋಮವಾರಪೇಟೆ : ಯುವ ಸಾಹಿತಿ ಹೇಮಂತ್ ಪಾರೇರ ಬರೆದಿರುವ ʼಬೆಳ್ಳಿ ಗೆಜ್ಜೆʼ ಕವನ ಸಂಕಲನ ಬಿಡುಗಡೆ ಕಾರ್ಯಕ್ರಮ ಜು.15ರಂದು ನಡೆಯಲಿದೆ. ಕನ್ನಡಸಿರಿ ಸ್ನೇಹ ಬಳಗ ವತಿಯಿಂದ ಅಂದು ಸಂಜೆ 04 ಗಂಟೆಗೆ ಸೋಮವಾರಪೇಟೆ ಪತ್ರಿಕಾ ಭವನ ಸಭಾಂಗಣದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕನ್ನಡ ಸಿರಿ ಸ್ನೇಹ ಬಳಗದ ಅಧ್ಯಕ್ಷ ಬಿ.ಎಸ್. ಲೋಕೇಶ್ ಸಾಗರ್ ಅಧ್ಯಕ್ಷತೆಯಲ್ಲಿ ಜರುಗುವ ಕಾರ್ಯಕ್ರಮವನ್ನು ಸಿದ್ದಲಿಂಗಪುರ ಅರಿಸಿನಗುಪ್ಪೆ ಮಂಜುನಾಥ ದೇವಾಲಯದ ರಾಜೇಶನಾಥ ಗುರೂಜಿ ಉದ್ಘಾಟಿಸಲಿದ್ದಾರೆ. ಕೃತಿ ಪರಿಚಯವನ್ನು ಲೇಖಕಿ, ಮೀನುಗಾರಿಕೆ ಇಲಾಖೆ ಸಹಾಯಕ ನಿರ್ದೇಶಕಿ ಮಿಲನಾ […]
ಮಡಿಕೇರಿಯಲ್ಲಿ ಗುರುವಂದನಾ ಕಾರ್ಯಕ್ರಮ – ಯೋಗ ಶಿಕ್ಷಕರನ್ನು ಸನ್ಮಾನಿಸಿ ಗೌರವಾರ್ಪಣೆ..!

ಮಡಿಕೇರಿ : ಗುರುಪೂರ್ಣಿಮೆ ಅಂಗವಾಗಿ ಮಡಿಕೇರಿಯ ಯೋಗ ಭಾರತಿ, ಯೋಗ ಸಂದ್ಯಾ, ಆರೋಹಣ ಕೊಡಗು, ರಾಮಾಂಜನೇಯ ಭಜನಾ ಮಂಡಳಿ ವತಿಯಿಂದ ಗುರುವಂದನಾ ಕಾರ್ಯಕ್ರಮ ಶನಿವಾರ ನಡೆಯಿತು. ಮಡಿಕೇರಿಯ ಭಾರತೀಯ ವಿದ್ಯಾ ಭವನದಲ್ಲಿ ಶನಿವಾರ ಸಂಜೆ ನಡೆದ ಕಾರ್ಯಕ್ರಮದಲ್ಲಿ ಭಜನಾ ಮಂಡಳಿ ಸದಸ್ಯರು ಗುರುವಿನ ಮಹತ್ವ ಸಾರುವ ಗೀತೆಗಳನ್ನು ಹಾಡಿದರು. ಕಾರ್ಯಕ್ರಮಕ್ಕೆ ಆಗಮಿಸಿದ್ದ ಮಂದಿ ಭಾರತ ಮಾತೆಯ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಗೌರವ ಸೂಚಿಸಿದರು. ದಿನದ ಮಹತ್ವದ ಬಗ್ಗೆ ಅನಿತಾ ಸುಧಾಕರ್ ಮಾತನಾಡಿದರು. ಯೋಗ ಶಿಕ್ಷಕರಾದ ಮಲ್ಲಿಗೆ […]
ಹಿರಿಯ ಪತ್ರಕರ್ತ ಕಲ್ಯಾಟಂಡ ಬಿ. ಗಣಪತಿ ನಿಧನ

ರಾಜ್ಯದ ಖ್ಯಾತ ಪತ್ರಕರ್ತ ಕಲ್ಯಾಟಂಡ ಬಿ. ಗಣಪತಿ(86) ನಿಧನರಾಗಿದ್ದಾರೆ. ಮೈಸೂರು ಭಾಗದ ಜನಪ್ರಿಯ ಪತ್ರಿಕೆ ಮೈಸೂರು ಮಿತ್ರ, ಸ್ಟಾರ್ ಆಫ್ ಮೈಸೂರು ಸಂಪಾದಕರಾಗಿದ್ದ ಇವರು, 5 ದಶಕಗಳಿಂದ ಮೈಸೂರಿನಲ್ಲಿ ಪತ್ರಿಕೋದ್ಯಮಿಯಾಗಿ ಖ್ಯಾತಿ ಗಳಿಸಿದ್ದರು. ಇಂಗ್ಲೀಷ್ ಹಾಗೂ ಕನ್ನಡ ಭಾಷೆಯಲ್ಲಿ ಅಪಾರ ಜ್ಞಾನ ಹೊಂದಿದ್ದರು. ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಇವರ ನಿಧನಕ್ಕೆ ಪತ್ರಕರ್ತರ ಸಂಘಟನೆಗಳು, ಪತ್ರಕರ್ತರು ಸಂತಾಪ ವ್ಯಕ್ತಪಡಿಸಿದ್ದಾರೆ.
ಲೈನ್‍ಮನೆಗಳಲ್ಲಿರುವ 2 ಸಾವಿರ ಆದಿವಾಸಿ ಬುಡಕಟ್ಟು ಕುಂಟುಂಬಕ್ಕೆ ಶೀಘ್ರ ಹಕ್ಕುಪತ್ರ ವಿತರಣೆ: ಎ.ಎಸ್.ಪೊನ್ನಣ್ಣ

ಜಿಲ್ಲೆಯ ಲೈನ್‍ಮನೆಗಳಲ್ಲಿ ವಾಸಿಸುವ ಬುಡಕಟ್ಟು ಆದಿವಾಸಿಯ 2000 ಕ್ಕೂ ಹೆಚ್ಚು ಕುಟುಂಬಗಳಿಗೆ ನಿವೇಶನ ಹಕ್ಕು ಪತ್ರವನ್ನು ಎರಡು ಮೂರು ತಿಂಗಳಲ್ಲಿ ವಿತರಿಸಲಾಗುವುದು ಎಂದು ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ತಿಳಿಸಿದ್ದಾರೆ. ನಗರದ ಜಿಲ್ಲಾಡಳಿತ ಭವನದಲ್ಲಿರುವ ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶಾಸಕರು ನಿವೇಶನ ಹಕ್ಕು ಪತ್ರ ನೀಡುವ ಸಂಬಂಧ ಆಯಾಯ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಈಗಾಗಲೇ ಜಾಗ ಗುರುತಿಸಲಾಗಿದ್ದು, ಮಾನ್ಯ ಮುಖ್ಯಮಂತ್ರಿಯವರು, ಉಪ ಮುಖ್ಯಮಂತ್ರಿ ಅವರನ್ನು ಆಹ್ವಾನಿಸಿ […]
ಕಡಗದಾಳು ಅಂಗನವಾಡಿಯಲ್ಲಿ LKG, UKG ಪ್ರಾರಂಭೋತ್ಸವ ಹಾಗೂ ವಿಶ್ವ ಜನಸಂಖ್ಯಾ ದಿನಾಚರಣೆ

ಮಡಿಕೇರಿ : ಕಡಗದಾಳು ಅಂಗನವಾಡಿ ಕೇಂದ್ರದಲ್ಲಿ ಎಲ್‌ಕೆಜಿ ಪ್ರಾರಂಭೋತ್ಸವ ಹಾಗೂ ವಿಶ್ವ ಜನಸಂಖ್ಯಾ ದಿನಾಚರಣೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಕುರಿತಾಗಿ ಮಾತನಾಡಿದ ಪ್ರಭಾರ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮೇಪಾಡಂಡ ಸವಿತಾ ಕೀರ್ತನ್, ಐಸಿಡಿಎಸ್ ಸುವರ್ಣ ಮಹೋತ್ಸವದ ಅಂಗವಾಗಿ ಸರ್ಕಾರ ಅಂಗನವಾಡಿ ಕೇಂದ್ರದಲ್ಲಿ ಎಲ್‌ಕೆಜಿ, ಯುಕೆಜಿಯನ್ನು ಪ್ರಾರಂಭಿಸುತ್ತಿದ್ದು, ಮಡಿಕೇರಿ ತಾಲೂಕಿನ 10 ಅಂಗನವಾಡಿ ಕೇಂದ್ರಗಳಲ್ಲಿ ಎಲ್‌ಕೆಜಿ ಯುಕೆಜಿ ಪ್ರಾರಂಭವಾಗಿದೆ. ಪೋಷಕರು ತಮ್ಮ ಮಕ್ಕಳನ್ನು ಕಳುಹಿಸುವ ಮೂಲಕ ಸದುಪಯೋಗ ಪಡೆದುಕೊಳ್ಳಬೇಕೆಂದರು. ಕಡಗದಾಳು ಗ್ರಾಮ ಪಂಚಾಯಿತಿಯಿಂದ 18 ಮಕ್ಕಳಿಗೆ ಸಮವಸ್ತ್ರ, […]
ಕೊಡಗು ಜಿಲ್ಲೆಯ ಮಳೆ ವಿವರ: ಎಲ್ಲಿ ಮಳೆ ತಗ್ಗಿದೆ?

ಕೊಡಗು ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 12.76 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 9.64 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 1665.67 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 1026.73 ಮಿ.ಮೀ ಮಳೆಯಾಗಿತ್ತು. ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 32.48 ಮಿ.ಮೀ. ಕಳೆದ ವರ್ಷ ಇದೇ ದಿನ 7.43 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 2408.07 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ […]
ಮನುಷ್ಯ ಮತ್ತು ಪ್ರಾಣಿಗಳ ನಡುವಿನ ಸಂಬಂಧವು ಸಂವೇದನಾಶೀಲವಾದುದು : ಪ್ರೊ. ಅಶೋಕ ಸಂಗಪ್ಪ ಆಲೂರ

ಕುಶಾಲನಗರ : ಮನುಷ್ಯ ಮತ್ತು ಪ್ರಾಣಿಗಳ ನಡುವಿನ ಸಂಬಂಧವು ಸಂವೇದನಾಶೀಲವಾದುದು, ಮನುಷ್ಯನಿಗಿರುವಷ್ಟೇ ಸ್ವಾತಂತ್ರ್ಯ ಮತ್ತು ಸಮಾನ ಹಕ್ಕುಗಳು ಈ ಭೂಮಿಯಲ್ಲಿ ಜೀವಿಸುತ್ತಿರುವ ಪ್ರಾಣಿ ಸಂಕುಲಕ್ಕೂ ಇದೆ ಕೊಡಗು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಅಶೋಕ ಸಂಗಪ್ಪ ಆಲೂರ ಅಭಿಪ್ರಾಯಿಸಿದರು. ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಬೀದರ ಇಲ್ಲಿನ ವನ್ಯಜೀವಿ ಪಶುವೈದ್ಯಕೀಯ ಸಂಶೋಧನಾ ಸಂಸ್ಥೆ. ಕೊಡಗು ಹಾಗೂ ಕೊಡಗು ವಿಶ್ವವಿದ್ಯಾಲಯ, ಕೊಡಗು ಇವರ ಸಂಯುಕ್ತಾಶ್ರಯದಲ್ಲಿ “ವಿಶ್ವ ಪ್ರಾಣಿ-ಜನ್ಯರೋಗಗಳ” ದಿನದ ಅಂಗವಾಗಿ “ವನ್ಯಜೀವಿ: ಪ್ರಾಣಿಜನ್ಯರೋಗಗಳು” ವಿಷಯದ ಕುರಿತಾದ […]
ಗರವಾಲೆ ಅಂಗನವಾಡಿ ಮೇಲೆ ಮರ ಬಿದ್ದು ಕಟ್ಟಡಕ್ಕೆ ಹಾನಿ

ಅಂಗನವಾಡಿ ಸಹಾಯಕಿಯ ಬೇಬಿ ಅಂಗನವಾಡಿಯ ಒಳಗಿದ್ದ ಸಂದರ್ಭದಲ್ಲಿ ಮರ ಬಿದ್ದು ಗಾಯಗೊಂಡಿದ್ದು, ಅವರನ್ನು ಸ್ಥಳೀಯರು ಮಡಿಕೇರಿಯ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿದ್ದಾರೆ. ತಲೆ ಹಾಗೂ ಎದೆ ಬಾಗಕ್ಕೆ ಗಾಯಗಳಾಗಿವೆ.