ಲೆದರ್‌ಬಾಲ್ ಕ್ರಿಕೆಟ್: ಜಿಲ್ಲಾ ತಂಡಕ್ಕೆ ಪ್ರಗತಿ ಶಾಲೆಯ ವಿದ್ಯಾರ್ಥಿನಿಯರು ಆಯ್ಕೆ

ವಿರಾಜಪೇಟೆ : ವಿರಾಜಪೇಟೆಯ ಪ್ರಗತಿ ನರ್ಸರಿ, ಪ್ರೈಮರಿ ಮತ್ತು ಹೈ ಸ್ಕೂಲ್ ಹಾಗೂ ಪ್ರಗತಿ ಕ್ರಿಕೆಟ್ ಅಕಾಡೆಮಿಯ ವಿದ್ಯಾರ್ಥಿನಿಯರು ಕೊಡಗು ಜಿಲ್ಲಾ ಲೆದರ್‌ಬಾಲ್ ಕ್ರಿಕೆಟ್ ತಂಡಕ್ಕೆ ಆಯ್ಕೆಯಾಗಿದ್ದು, ಶಾಲೆಗೆ ಕೀರ್ತಿ ತಂದಿದ್ದಾರೆ. ಅಂಡರ್-15 ವಿಭಾಗದಲ್ಲಿ ವಿನ್ಯಾ ಎನ್. ಎಸ್. ಪ್ರತೀಕ್ಷಾ ಕೆ ಎನ್ , ವರ್ಷಿಣಿ ಕೆ ಎಚ್ ಹಾಗೂ ಅಂಡರ್-19 ವಿಭಾಗದಲ್ಲಿ ಸಾನ್ವಿ ಎಸ್ ಭಟ್, ಧನ್ವಿ ಬಿ. ಆರ್.ಇವರು ಕೊಡಗು ಜಿಲ್ಲಾ ಲೆದರ್‌ಬಾಲ್ ಕ್ರಿಕೆಟ್ ತಂಡವನ್ನು ಪ್ರತಿನಿಧಿಸಿ ಉಡುಪಿಯಲ್ಲಿ ನಡೆಯಲಿರುವ ಪಂದ್ಯಗಳಲ್ಲಿ ಭಾಗವಹಿಸಲಿದ್ದಾರೆ. ಈ ಪಂದ್ಯಗಳಲ್ಲಿ ಉಡುಪಿ, ದಕ್ಷಿಣ […]
ಕೊಡಗಿನಲ್ಲಿ ಕೆಲಸ ಹುಡುಕುತ್ತಿರುವವರಿಗೆ ಗುಡ್ ನ್ಯೂಸ್: ಉದ್ಯೋಗ ಮೇಳ

ಜಿಲ್ಲಾ ಉದ್ಯೋಗ ವಿನಿಮಯ ಇಲಾಖೆ ವತಿಯಿಂದ ಏಪ್ರಿಲ್, 8 ರಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮಿನಿ “ಉದ್ಯೋಗಮೇಳ” ನಡೆಯಲಿದೆ. ಈ ಉದ್ಯೋಗ ಮೇಳದಲ್ಲಿ ಜಾಯ್ ಆಲುಕಾಸ್ ಜ್ಯುವೆಲ್ಲರಿ, ಮೈಸೂರು, ಕಲ್ಯಾಣಿ ಮೋಟಾರ್ಸ್ ಕಾರ್ ಶೋ ರೂಂ, ಮಡಿಕೇರಿ, ಕೂರ್ಗ್ ಕ್ಲಿಪ್ಟ್ಸ್ ರೆಸಾರ್ಟ್, ಮಡಿಕೇರಿ, ಹ್ಯೂಂಡಾಯಿ ಕಾರ್ ಶೋ ರೂಮ್, ಮಡಿಕೇರಿ, ಇವೊಲೋಬ್ಯಾಕ್ ರೆಸಾರ್ಟ್, ಮಡಿಕೇರಿ ಇವರು ತಮ್ಮ ಸಂಸ್ಥೆಗಳಲ್ಲಿ ಖಾಲಿಯಿರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಈ ಮೇಳದಲ್ಲಿ […]
ಕೊಡಗು: ನಾಳೆ ಎಲ್ಲೆಲ್ಲಿ ಕರೆಂಟ್ ಇರಲ್ಲ?

ಭಾಗಮಂಡಲ ಫೀಡರ್‍ನಲ್ಲಿ ಏಪ್ರಿಲ್, 08 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ, ತಾಳತ್ಮನೆ, ಅಪ್ಪಂಗಳ, ಬೆಟ್ಟಗೇರಿ, ಚೇರಂಬಾಣೆ, ಚೆಟ್ಟಿಮಾನಿ, ಭಾಗಮಂಡಲ, ತಲಕಾವೇರಿ, ಅಯ್ಯಂಗೇರಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.
ಕೊಡವ ಜಮ್ಮಾ ಮುಸ್ಲಿಂ ಕುಟುಂಬಸ್ಥರ ವತಿಯಿಂದ ಕೌಟುಂಬಿಕ ವಾಲಿಬಾಲ್ ಕ್ರೀಡಾಕೂಟ ಆಯೋಜನೆ

ವಿರಾಜಪೇಟೆ: ಕೊಡವ ಜಮ್ಮಾ ಮುಸ್ಲಿಂ ಹಾಗೂ ಎಮ್ಮೆಮಾಡು 18 ಜಮ್ಮ ಮುಸ್ಲಿಂ ಕುಟುಂಭಸ್ತರ ಸಂಯುಕ್ತ ಆಶ್ರಯದಲ್ಲಿ ಎಮ್ಮೆಮಾಡು ಕುಟುಂಬದ ಮೈದಾನದಲ್ಲಿ ಮೇ 8,9 ಹಾಗೂ 10 ರಂದು ಜಮ್ಮಾ ಮುಸ್ಲಿಂ ಕುಟುಂಬಗಳ ನಡುವೆ ಕೌಟುಂಬಿಕ ವಾಲಿಬಾಲ್ ಕ್ರೀಡಾಕೂಟವನ್ನು ಆಯೋಜಿಸಲಾಗಿದೆ ಎಂದು ಕ್ರೀಡಾಕೂಟದ ಆಯೋಜನಾ ಸಮಿತಿಯ ಸದಸ್ಯ ನೆರುಟ್ಟು ಕಾರಂಡ ರಜಾಕ್ ರವರು ಪತ್ರಿಕಾಗೋಷ್ಠಿಯಲ್ಲಿ ಹೇಳಿದರು. ವಿರಾಜಪೇಟೆಯ ಪತ್ರಕರ್ತರ ವೇದಿಕೆಯಲ್ಲಿ ಜರುಗಿದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿ, ಈ ಭಾರಿಯ ವಾಲಿಬಾಲ್ ಕ್ರೀಡಾಕೂಟಕ್ಕೆ ಸುಮಾರು 60 ರಿಂದ […]
ನಾಳೆ ಕೊಡಗಿನ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ!

ಪೊನ್ನಂಪೇಟೆ ಮತ್ತು ಶ್ರೀಮಂಗಲದಲ್ಲಿ ಮಾಸಿಕ ನಿರ್ವಹಣೆ ಕಾರ್ಯವನ್ನು ಕೈಗೆತ್ತಿಕೊಳ್ಳುತ್ತಿರುವುದರಿಂದ ಮಾರ್ಚ್ 26 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ, ಸುಳುಗೋಡು, ಕೋಣನಕಟ್ಟೆ, ಬಾಳೆಲೆ, ದೇವನೂರು, ಪೊನ್ನಂಪೇಟೆ, ಗೋಣಿಕೊಪ್ಪ, ತಿತಿಮತಿ, ಹಾತೂರು, ಕುಂದ, ಕಾನೂರು, ದೇವರಪುರ, ಜಾಗಲೆ, ನಿಟ್ಟೂರು, ಕಿರಗೂರು, ಅತ್ತೂರು, ಕಾಯಿಮನೆ, ಮಂಚಳ್ಳಿ, ತೈಲ, ಸಿಂಕೋನ, ಶ್ರೀಮಂಗಲ, ಕುಟ್ಟ, ಕೆಟ್ಟಗೇರಿ, ಹರಿಹರ, ಬಿರುನಾಣಿ, ಕೆ.ಬಾಡಗ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ […]
ವಿರಾಜಪೇಟೆ ಖಾಸಗಿ ಬಸ್ ನಿಲ್ದಾಣದಲ್ಲಿ ಖಾಸಗಿ ವಾಹನ ಪಾರ್ಕಿಂಗ್‌ಗೆ ವಿರೋಧ

ವಿರಾಜಪೇಟೆ: ವಿರಾಜಪೇಟೆಯ ಖಾಸಗಿ ಬಸ್ಸು ನಿಲ್ದಾಣದಲ್ಲಿ (By stand) ಖಾಸಗಿ ವಾಹನಗಳನ್ನು ನಿಲುಗಡೆ ಮಾಡುತ್ತಿರುವುದರಿಂದ ಖಾಸಗಿ ಬಸ್ಸುಗಳಿಗೆ ಸಮಸ್ಯೆಯಾಗುತ್ತಿದೆ ಎಂದು ಖಾಸಗಿ ಬಸ್ಸು ಕಾರ್ಮಿಕರ ಸಂಘದ ಖಜಾಂಚಿ ದಿನೇಶ್ ನಾಯರ್ ಆರೋಪಿಸಿದರು. ಖಾಸಗಿ ಬಸ್ಸು ನಿಲ್ದಾಣದಲ್ಲಿ ವಾಹನಗಳ ಪಾರ್ಕಿಂಗ್‌ನಿಂದ ಉಂಟಾಗುತ್ತಿರುವ ಸಮಸ್ಯೆಗಳ ಕುರಿತು ಮಾದ್ಯಮದವರಿಗೆ ಮಾಹಿತಿ ನೀಡಿದ ದಿನೇಶ್ ಅವರು, ದಿನನಿತ್ಯದ ಸಂಬಳಕ್ಕಾಗಿ ದುಡಿಯುವ ಕಾರ್ಮಿಕ ವರ್ಗದ ಬಸ್ಸು ಚಾಲಕ ಮತ್ತು ನಿರ್ವಾಹಕರು ಇಲ್ಲಿದ್ದಾರೆ. ಬಸ್ಸು ನಿಲ್ದಾಣದಲ್ಲಿ ಬಂದು ಅವರಿಗೆ ತಿನ್ನಲು ಕುಡಿಯಲು ಕೇವಲ ೫-೧೦ ನಿಮಿಷಗಳ […]
ವಿರಾಜಪೇಟೆಯ ಆರ್ಜಿ ಗ್ರಾಮದ ಕಲ್ಲುಬಾಣೆಯ ಶ್ರೀ ಮುತ್ತಪ್ಪ ಸೇವಾ ಸಂಘದಿಂದ ಕಲಶ ಪೂಜೆ

ವಿರಾಜಪೇಟೆ: ವಿರಾಜಪೇಟೆಯ ಆರ್ಜಿ ಗ್ರಾಮದ ಕಲ್ಲುಬಾಣೆಯ ಶ್ರೀ ಮುತ್ತಪ್ಪ ಸೇವಾ ಸಂಘದ ವತಿಯಿಂದ ಕಲ್ಲುಬಾಣೆಯಲ್ಲಿ ೧೧ ನೇ ವರ್ಷದ ಕಳಶ ಮಹೋತ್ಸವ ೨ ದಿನಗಳ ಕಾಲ ಅತ್ಯಂತ ಶ್ರದ್ದಾ ಭಕ್ತಿಯಿಂದ ಯಶಸ್ವಿಯಾಗಿ ನಡೆಯಿತು. ಮೊದಲ ದಿನ ಕಳಸ ಪ್ರತಿಷ್ಠಾಪನೆ, ಶ್ರೀ ಮುತ್ತಪ್ಪ ದೇವರ ಪೈಂಗುತ್ತಿ ಸೇವೆ ನಡೆಯಿತು. ಬಳಿಕ ಸಂಜೆ ಸ್ಥಳೀಯ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಪ್ರದರ್ಶನ ನಡೆಯಿತು. ಕಳಸ ಮಹೋತ್ಸವದ ಅಂಗವಾಗಿ ವಿವಿಧ ಸಾಧಕರನ್ನು, ಗ್ರಾಮದ ಹಿರಿಯರನ್ನು ಸನ್ಮಾನಿಸಿ ಗೌರವಿಸಲಾಯಿತು. ಆರ್ಜಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ […]
ಶ್ರೀ ವಿನಾಯಕ ಸೇವಾ ಟ್ರಸ್ಟ್ ವತಿಯಿಂದ ರಾಮನವಮಿ, ವಾರ್ಷಿಕ ಮಹಾಸಭೆ ಮಾ.26ಕ್ಕೆ

ಮಡಿಕೇರಿ : ಶ್ರೀ ವಿನಾಯಕ ಸೇವಾ ಟ್ರಸ್ಟ್ ಕತ್ತಲೆಕಾಡು-ಜೇನುಕೊಲ್ಲಿ ವತಿಯಿಂದ ಶ್ರೀರಾಮನವಮಿ ಆಚರಣೆ ಹಾಗೂ ಟ್ರಸ್ಟ್‌ನ 2025-26 ವಾರ್ಷಿಕ ಮಹಾಸಭೆ ಮಾರ್ಚ್ 26ರಂದು ನಡೆಯಲಿದೆ. ಟ್ರಸ್ಟ್‌ಗೆ ನೂತನವಾಗಿ ಖರೀದಿಸಿರುವ ಜಾಗದ ಆವರಣದಲ್ಲಿ ಅಂದು ಬೆಳಗ್ಗೆ 9 ಗಂಟೆಗೆ ಬ್ರಹ್ಮಶ್ರೀ ವೇದಮೂರ್ತಿ ಗಿರೀಶ್ ತಂತ್ರಿ ಅವರ ನೇತೃತ್ವದಲ್ಲಿ ಗಣಹೋಮ, ಬಳಿಕ ದುರ್ಗಾ ಹೋಮ, 11 ಗಂಟೆಗೆ ಶ್ರೀರಾಮನವಿ ಪ್ರಯುಕ್ತ ವಿಶೇಷ ಪೂಜೆ, ಶ್ರೀರಾಮನಿಗೆ ಆರತಿ ನೆರವೇರಲಿದೆ. ನಂತರ ಟ್ರಸ್ಟ್‌ನ ಭಜನಾ ತಂಡದಿಂದ ಭಜನೆ, ಧಾರ್ಮಿಕ ಕಾರ್ಯಕ್ರಮ ನಡೆಯಲಿದೆ. ಅಪರಾಹ್ನ […]
ಅದ್ಧೂರಿಯಾಗಿ ನೆರವೇರಿತು ವಿರಾಜಪೇಟೆಯಲ್ಲಿ ಮುತ್ತಪ್ಪ ತೆರೆ ಮಹೋತ್ಸವ

ವಿರಾಜಪೇಟೆಯ ಮೀನುಪೇಟೆಯ ಚೈತನ್ಯ ಮಠಪುರ ಶ್ರೀ ಮುತ್ತಪ್ಪ ದೇವಸ್ಥಾನದ ೮೨ ನೇ ವರ್ಷದ ಶ್ರೀ ಮುತ್ತಪ್ಪ ತೆರೆ ಮಹೋತ್ಸವವು ೩ ದಿನಗಳ ಕಾಲ ಸಕಲ ಪೂಜಾ ವಿಧಿ ವಿಧಾನಗಳೊಂದಿಗೆ ಅತಿ ವಿಜ್ರಂಭಣೆಯಿಂದ ಆಚರಿಸಲಾಯಿತು. ಸಾವಿರಾರು ಭಕ್ತಾಧಿಗಳು ಬುಧವಾರ ರಾತ್ರಿಯಿಂದ ಗುರುವಾರ ಸಂಜೆವರೆಗೂ ಜಾಗರಣೆಯಿದ್ದು, ದೇವರ ದರ್ಶನ ಪಡೆದರು. ಮಂಗಳವಾರ ಬೆಳಗ್ಗೆಯಿಂದಲೇ ಜಾತ್ರಾ ಮಹೋತ್ಸವ ಪ್ರಾರಂಭಗೊಂಡಿತ್ತು. ಮುತ್ತಪ್ಪ, ವಸೂರಿಮಾಲಾ, ತಿರುವಪ್ಪನ್, ಗುಳಿಗ, ವಿಷ್ಣುಮೂರ್ತಿ, ಪೌವ್ವದಿ ದೇವತೆಗಳು ಭಕ್ತಾಧಿಗಳಿಗೆ ದರ್ಶನ ನೀಡಿದರು. ಪಯಂಗುತ್ತಿ ಹಾಗೂ ತುಲಾಭಾರ, ಇನ್ನಿತರ ಹರಕೆ ಕಾರ್ಯಗಳನ್ನು […]
ಕೊಡಗಿನ ಎಲ್‌ಪಿಜಿ ಗ್ಯಾಸ್ ಬಳಕೆದಾರರಿಗೆ ಇಲ್ಲಿದೆ ಮುಖ್ಯ ಮಾಹಿತಿ!

ಮಡಿಕೇರಿ:- ಜಿಲ್ಲೆಯಲ್ಲಿ ಗೃಹಬಳಕೆ ಎಲ್‍ಪಿಜಿ ಸಿಲಿಂಡರ್‍ಗಳು ಸಮರ್ಪಕ ಸಂಗ್ರಹವಿದ್ದು, ಗೃಹ ಬಳಕೆಯ ಅನಿಲ ಸಿಲಿಂಡರ್‍ಗಳ ಸರಬರಾಜಿನಲ್ಲಿ ಯಾವುದೇ ವ್ಯತ್ಯಯ ಇರುವುದಿಲ್ಲ. ಗ್ರಾಹಕರುಗಳು ಸಾಮಾಜಿಕ ಜಾಲ ತಾಣದಲ್ಲಿ ಹರಿದಾಡುತ್ತಿರುವ ಸುಳ್ಳು ವದಂತಿಗಳಿಗೆ ಕಿವಿಗೊಡಬಾರದು ಹಾಗೂ ಯಾವುದೇ ಆತಂಕಕ್ಕೆ ಒಳಗಾಗದೇ ಅಗತ್ಯವಿರುವ ಪ್ರಮಾಣದಲ್ಲಿ ಮಾತ್ರ ಬುಕ್ ಮಾಡಿ ಗ್ಯಾಸ್ ಸಿಲಿಂಡರ್ ಪಡೆದುಕೊಳ್ಳಬಹುದು.ಅಡುಗೆ ಅನಿಲವನ್ನು ಮಿತ ಬಳಕೆ ಪೂರೈಕೆಗಾಗಿ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಎಲ್‍ಪಿಜಿ ವಿತರಕರೊಂದಿಗೆ ಸಮಾಲೋಚನೆ ನಡೆಸಲಾಗಿದೆ. ಗೃಹ ಬಳಕೆ ಗ್ಯಾಸ್ ಸಿಲಿಂಡರ್‍ಗಳ ಸಮರ್ಪಕ ಸಂಗ್ರಹ ಮತ್ತು ಸರಬರಾಜು ಲಭ್ಯವಿದ್ದು, […]