ರೈತರಿಗೆ ಮಾಹಿತಿ : ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಗೆ ಹೆಸರು ನೋಂದಾಯಿಸಲು ಅವಕಾಶ

ಮಡಿಕೇರಿ : ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯು ೨೦೨೫-೨೬ನೇ ಸಾಲಿನಲ್ಲಿಯೂ ಜಾರಿಯಲ್ಲಿದೆ. ಅತಿವೃಷ್ಟಿ, ಅನಾವೃಷ್ಟಿ, ಅಕಾಲಿಕ ಮಳೆ, ಮುಂತಾದ ಪ್ರಾಕೃತಿಕ ವಿಕೋಪ ಸೇರಿದಂತೆ ಹಲವಾರು ಕಾರಣಗಳಿಂದ ಬೆಳೆ ನಷ್ಟ ಉಂಟಾದಾಗ ರೈತರಿಗೆ ವಿಮಾ ರಕ್ಷಣೆ ಮತ್ತು ಆರ್ಥಿಕ ಬೆಂಬಲ ನೀಡುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ. ಈ ಯೋಜನೆಯಡಿಯಲ್ಲಿ ರೈತರ ವಿಮಾ ಕಂತನ್ನು ಆಹಾರ ಮತ್ತು ಎಣ್ಣೆಕಾಳು ಬೆಳೆಗಳಿಗೆ ಮುಂಗಾರು ಹಂಗಾಮಿಗೆ ಶೇ.೨ ಎಂದು ಪರಿಗಣಿಸಲಾಗಿದೆ. ಮುಖ್ಯ ಬೆಳೆಗಳಿಗೆ ಯೋಜನೆಯನ್ನು ಗ್ರಾಮ ಪಂಚಾಯಿತಿ ಮಟ್ಟಕ್ಕೆ […]
ಗ್ರಾಮ ಒನ್ ಕೇಂದ್ರ ನಡೆಸಲು ಆಸಕ್ತಿ ಹೊಂದಿದ್ದೀರಾ?- ಈ ಗ್ರಾಮಗಳಲ್ಲಿ ಅವಕಾಶವಿದೆ..!

ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ಪ್ರಸ್ತುತ ೧೦ ಗ್ರಾಮ ಪಂಚಾಯತ್‌ಗಳಲ್ಲಿ ಸಮಗ್ರ ನಾಗರಿಕ ಸೇವಾ ಕೇಂದ್ರ/ ಗ್ರಾಮ ಒನ್ ಕೇಂದ್ರಗಳಿಗೆ ಆಸಕ್ತ ಪ್ರಾಂಚೈಸಿಗಳಿಂದ ಇಡಿಸಿಎಸ್, ಬೆಂಗಳೂರಿನಿಂದ ಅರ್ಜಿ ಆಹ್ವಾನಿಸಲಾಗಿದೆ. ಸೋಮವಾರಪೇಟೆ ತಾಲ್ಲೂಕಿನ ಗರ್ವಾಲೆ, ಪೊನ್ನಂಪೇಟೆಯ ಬಿ.ಶೆಟ್ಟಿಗೇರಿ, ನಾಲ್ಕೇರಿ, ಕೆ.ಬಾಡಗ, ನಿಟ್ಟೂರು, ಬಲ್ಯಮಂಡೂರು ಮತ್ತು ಕಿರುಗೂರು, ಮಡಿಕೇರಿ ತಾಲ್ಲೂಕಿನ ಹಾಕತ್ತೂರು ಮತ್ತು ಕರಿಕೆ, ವಿರಾಜಪೇಟೆ ತಾಲ್ಲೂಕಿನ ಅಮ್ಮತ್ತಿ. ಆಸಕ್ತ ಪ್ರಾಂಚೈಸಿಗಳು https://kal-mys.gramaone.karnataka.gov.in/ ಲಿಂಕ್ ಮೂಲಕ ಅರ್ಜಿ ಸಲ್ಲಿಸಲು ಜುಲೈ ೧೫ ರವರೆಗೆ ಅವಕಾಶ ಕಲ್ಪಿಸಲಾಗಿದೆ. ಹೆಚ್ಚಿನ ಮಾಹಿತಿಗೆ care@blsinternational.net […]
ಕೊಡಗು ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ – ೧೦ ಮಂದಿ ಪತ್ರಕರ್ತರಿಗೆ ವಾರ್ಷಿಕ ಪ್ರಶಸ್ತಿ ಪ್ರದಾನ – ಪ್ರಜಾಪ್ರಭುತ್ವ ವ್ಯವಸ್ಥೆ ರಕ್ಷಣೆಗೆ ಪತ್ರಿಕಾ ರಂಗದ ಕೊಡುಗೆ ಅಪಾರ : ಶಿವಕುಮಾರ್ ನಾಣಯ್ಯ ಅಭಿಮತ

ಮಡಿಕೇರಿ : ಪ್ರಜಾತಂತ್ರ ವ್ಯವಸ್ಥೆಗೆ ವಿವಿಧ ಕಾಲ ಘಟ್ಟಗಳಲ್ಲಿ ಎದುರಾದ ಸಂಕಷ್ಟಗಳ ಸಂದರ್ಭಗಳಲ್ಲೆಲ್ಲ ಪತ್ರಿಕಾ ಕ್ಷೇತ್ರ ಅದಕ್ಕೆ ಎದುರಾಗಿ ಕಾರ್ಯ ನಿರ್ವಹಿಸುವ ಮೂಲಕ ‘ಪ್ರಜಾಪ್ರಭುತ್ವ’ ವ್ಯವಸ್ಥೆಯ ಸಂರಕ್ಷಣೆಗೆ ಶ್ರಮಿಸಿರುವುದಾಗಿ ಸಮಾಜ ಸೇವಕ ತೇಲಪಂಡ ಶಿವಕುಮಾರ್ ನಾಣಯ್ಯ ಅಭಿಪ್ರಾಯಿಸಿದರು. ಕೊಡಗು ಪತ್ರಕರ್ತರ ಸಂಘದ ವತಿಯಿಂದ ನಗರದ ಪತ್ರಿಕಾ ಭವನ ಸಭಾಂಗಣದಲ್ಲಿ ಆಯೋಜಿತ ‘ಪತ್ರಿಕಾ ದಿನಾಚರಣೆ’ ಮತ್ತು ವಾರ್ಷಿಕ ಪ್ರಶಸ್ತಿ ಪದಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಕೊಡಗು ಪತ್ರಕರ್ತರ ಸಂಘದ ‘ಸ್ವಾಸ್ಥ್ಯ ಸುಂದರ, ಸಮಾಜ’ ಎನ್ನುವ ಘೋಷವಾಕ್ಯದಂತೆ ಪತ್ರಿಕಾ ಕ್ಷೇತ್ರವು […]
ಕೊಡವ ಹಾಕಿ ಪ್ರೀಮಿಯರ್ ಲೀಗ್ – ಪಳೆ ತಾಲೂಕ್ ಚಾಂಪಿಯನ್, ಕೂರ್ಗ್ ಟೈಟಾನ್ಸ್ ರನ್ನರಪ್..!

ಮೈಸೂರು : ಚಾಮುಂಡಿ ವಿಹಾರ ಹಾಕಿ ಕ್ರೀಡಾಂಗಣದಲ್ಲಿ ಮೂರು ದಿನಗಳ ಕಾಲ ನಡೆದ ಕೊಡವ ಹಾಕಿ ಪ್ರೀಮಿಯರ್ ಲೀಗ್‌ನಲ್ಲಿ ಪಳೆ ತಾಲೂಕ್ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಪಳೆ ತಾಲೂಕ್ ಹಾಗೂ ಕೂರ್ಗ್ ಟೈಟಾನ್ಸ್ ನಡುವೆ ಫೈನಲ್ ಪಂದ್ಯ ನಡೆಯಿತು. ಪಳೆ ತಾಲೂಕ್ ತಂಡ 3-1 ಗೋಲುಗಳ ಅಂತರದಲ್ಲಿ ಗೆದ್ದು ಕೊಡವ ಹಾಕಿ ಪ್ರೀಮಿಯರ್ ಲೀಗ್ ಚಾಂಪಿಯನ್ ಪಟ್ಟ ಅಲಂಕರಿಸಿತು. ರನ್ನರಪ್ ಪ್ರಶಸ್ತಿಗೆ ಕೂರ್ಗ್ ಟೈಟಾನ್ಸ್ ಭಾಜನವಾದರೆ, ಮೂರನೇ ಸ್ಥಾನಕ್ಕೆ ಕೊಡವು ವಾರಿಯರ್ಸ್ ತಂಡ ತೃಪ್ತಿ ಪಟ್ಟುಕೊಂಡಿತು. […]
ಉಪನ್ಯಾಸಕ ಡಾ. ಜ಼ಮೀರ್ ಅಹಮದ್ ಅವರಿಗೆ ‘ನಾಡೋಜ ಕರೀಂ ಖಾನ್ ರಾಜ್ಯ ಪ್ರಶಸ್ತಿ’ ಪ್ರದಾನ

ಬೆಂಗಳೂರು : ಕನ್ನಡ ಜಾನಪದ ಪರಿಷತ್ ವತಿಯಿಂದ ಕೊಡಗು ವಿಶ್ವವಿದ್ಯಾಲಯದ ಕನ್ನಡ ಉಪನ್ಯಾಸಕ ಡಾ. ಜ಼ಮೀರ್ ಅಹಮದ್ ಅವರಿಗೆ ಕರ್ನಾಟಕ ಜಾನಪದ ಕಲೆ, ಸಾಹಿತ್ಯದ ಸಂರಕ್ಷಣೆಗಾಗಿ ಸಲ್ಲಿಸಿದ ಅಮೂಲ್ಯ ಸೇವೆಯನ್ನು ಗುರುತಿಸಿ ‘ನಾಡೋಜ ಕರೀಂ ಖಾನ್ ರಾಜ್ಯ ಪ್ರಶಸ್ತಿ’ ನೀಡಿ ಗೌರವಿಸಲಾಯಿತು. ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ಪ್ರಥಮ ಕನ್ನಡ ಜಾನಪದ ಸಮ್ಮೇಳನದಲ್ಲಿ 2025ನೇ ಸಾಲಿನ ಪ್ರಶಸ್ತಿ ಪ್ರದಾನ ಮಾಡಲಾಯಿತು. ಕನ್ನಡ ಸಾಹಿತ್ಯ ವಿದ್ಯಾರ್ಥಿಯಾಗಿರುವ ಜಮೀರ್ ಅಹಮದ್, ಕುವೆಂಪು ಅವರ ವಿಶ್ವಮಾನವ ಸಂದೇಶವನ್ನು ಬದುಕಿನುದ್ದಕ್ಕೂ ಮೈಗೂಡಿಸಿಕೊಂಡು ಸರ್ವ […]
ಕೊಡಗಿನಲ್ಲಿ ಕಳೆದ 24 ಗಂಟೆ ಅವಧಿಯಲ್ಲಿ ಆರ್ಭಟಿಸಿದ ಮಳೆ ಡಿಟೇಲ್ಸ್

ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 40.50 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 92.22 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 1367.96 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 737.17 ಮಿ.ಮೀ ಮಳೆಯಾಗಿತ್ತು. ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 71.28 ಮಿ.ಮೀ. ಕಳೆದ ವರ್ಷ ಇದೇ ದಿನ 160.07 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1950.48 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 1083 […]
ಬೂಕರ್ ಪ್ರಶಸ್ತಿ ವಿಜೇತೆ ದೀಪಾಭಾಸ್ತಿಗೆ ಭಾನುವಾರ ‘ಅಭಿವಂದನಾ ದೀಪಾ’ ಗೌರವ ಸಮರ್ಪಣೆ – ಏಕ ಕಾಲದಲ್ಲಿ ಹಲವಾರು ಸಂಘಟನೆಗಳಿಂದ ಸನ್ಮಾನ..

ಮಡಿಕೇರಿ : ಸಾಹಿತ್ಯ ಲೋಕದ ಪ್ರತಿಷ್ಟಿತ ಅಂತರರಾಷ್ಟ್ರೀಯ ಬೂಕರ್ ಪ್ರಶಸ್ತಿ ಪಡೆದ ಕೊಡಗಿನ ಹೆಮ್ಮೆಯ ಲೇಖಕಿ ಮಡಿಕೇರಿಯ ದೀಪಾಭಾಸ್ತಿಯವರಿಗೆ ಕೊಡಗು ಪತ್ರಕತ೯ರ ಸಂಘದ ಆಶ್ರಯದಲ್ಲಿ ಜೂನ್ 29 ರಂದು ಭಾನುವಾರ ಜಿಲ್ಲೆಯ ವಿವಿಧ ಸಂಘ ಸಂಸ್ಥೆಗಳಿಂದ ಅಭಿನಂದನಾ ಸಮಾರಂಭ ಆಯೋಜಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಅನಿಲ್ ಹೆಚ್.ಟಿ. ತಿಳಿಸಿದ್ದಾರೆ. ಜೂನ್ 29 ರಂದು ಭಾನುವಾರ ಸಂಜೆ 5 ಗಂಟೆಗೆ ಮಡಿಕೇರಿಯ ರೆಡ್ ಬ್ರಿಕ್ಸ್ ಇನ್ ನ ಸತ್ಕಾರ್ ಸಭಾಂಗಣದಲ್ಲಿ ಮಡಿಕೇರಿ ಕ್ಷೇತ್ರ ಶಾಸಕ ಡಾ.ಮಂಥರ್ ಗೌಡ ಅಧ್ಯಕ್ಷತೆಯಲ್ಲಿ […]
ಕೊಡಗಿನಲ್ಲಿ ಕಳೆದ 24 ಗಂಟೆ ಅವಧಿಯಲ್ಲಿ ಸುರಿದ ಮಳೆ ಮಾಹಿತಿ ಇಲ್ಲಿದೆ

ಕೊಡಗು ಜಿಲ್ಲೆಯಲ್ಲಿ ಗುರುವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 92.55 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 62.63 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 1327.46 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 644.95 ಮಿ.ಮೀ ಮಳೆಯಾಗಿತ್ತು. ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 79 ಮಿ.ಮೀ. ಕಳೆದ ವರ್ಷ ಇದೇ ದಿನ 90.13 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1879.20 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ […]
ಜಿಲ್ಲೆಯಲ್ಲಿ ಭಾರೀ ಮಳೆ ಮುನ್ಸೂಚನೆ – ಈ ಮುಂಜಾಗ್ರತಾ ಕ್ರಮಗಳನ್ನು ಪಾಲಿಸಲು ವಿಪತ್ತು ನಿರ್ವಹಣಾ ಪ್ರಾಧಿಕಾರ ಸೂಚನೆ – ಇಲ್ಲಿದೆ ಮಾಹಿತಿ

ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ನಾಳೆ ಮುಂಜಾನೆ 08:30 ರವರೆಗೆ ರೆಡ್ ಅಲರ್ಟ್ ಘೋಷಿಸಿದೆ. ನಂತರ ಆರೆಂಜ್ ಅಲರ್ಟ್ ಘೋಷಿಸಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕರಿಗೆ ಈ ಕೆಳಕಂಡಂತೆ ಸೂಚನೆಗಳನ್ನು ನೀಡಲಾಗಿದೆ. ಸಾರ್ವಜನಿಕರು/ಮಕ್ಕಳು/ಕಾರ್ಮಿಕರು ಮಳೆ ಗಾಳಿ/ಸಿಡಿಲು ಬೀಳುವ ಸಂದರ್ಭದಲ್ಲಿ ಹೊರಗೆ ತಿರುಗಾಡದೆ, ಸೂಕ್ತ ಕಟ್ಟಡದಲ್ಲಿ ಆಶ್ರಯ ಪಡೆಯುವುದು, ಕೃಷಿಕರು ಮಳೆ/ಸಿಡಿಲಿನಂತಹ ಸಂದರ್ಭದಲ್ಲಿ ಹೊರಗಿನ ಕೃಷಿ ಚಟುವಟಿಕೆಯಿಂದ ದೂರವಿರುವುದು ಮತ್ತು ಸಾರ್ವಜನಿಕರು/ಪ್ರವಾಸಿಗರು/ಮೀನುಗಾರರು ನದಿ/ನೀರಿರುವ ಪ್ರದೇಶಕ್ಕೆ […]
ಸೈಬರ್ ಪೊಲೀಸರ ಹೆಸರಿನಲ್ಲಿ 07 ಲಕ್ಷ ರೂ ವಂಚನೆ – ಐವರು ವಂಚಕರು ಪೊಲೀಸರ ಬಲೆಗೆ..!

ಕುಶಾಲನಗರ : ಸೈಬರ್ ಪೊಲೀಸರೆಂದು ಹೇಳಿಕೊಂಡು ವ್ಯಕ್ತಿಯೊಬ್ಬರಿಗೆ ಬ್ಲ್ಯಾಕ್ ಮೇಲ್ ಮಾಡಿ ಏಳು ಲಕ್ಷ ರೂಪಾಯಿ ವಂಚಿಸಿದ ನಕಲಿ ಪೊಲೀಸರ ತಂಡವೊಂದರ ಐವರು ಖತರ್ನಾಕ್‌ಗಳನ್ನು ಕುಶಾಲನಗರ ಟೌನ್ ಪೊಲೀಸರು ಬಂಧಿಸಿದ್ದಾರೆ. ಮಡಿಕೇರಿ ತಾಲ್ಲೂಕು ಹಾಲೇರಿ ಗ್ರಾಮದ ಇಬ್ರಾಹಿಂ ಬಾದುಷಾ(25), ಮೇಲುಕೋಟೆ ಬಳಿಘಟ್ಟ ಗ್ರಾಮದ ರಾಘವೇಂದ್ರ ಬಿ.ಎಂ.(19), ಬೆಂಗಳೂರು ಬನಶಂಕರಿಯ ಸಂಗೀತ, ಕುಶಾಲನಗರ ಆದರ್ಶ ದ್ರಾವಿಡ ಕಾಲೋನಿಯ ಚರಣ್ ಸಿ.ಕೆ.(19) ಹಾಗೂ ಅಪ್ರಾಪ್ತ ಬಾಲಕನನ್ನು ಬಂಧಿಸಲಾಗಿದೆ. ಮಾದಾಪಟ್ಟಣ ನಿವಾಸಿ ಪರಶಿವಮೂರ್ತಿ ಎಂಬವರು 2024ನೇ ಅಕ್ಟೊಬರ್ ತಿಂಗಳಿನಲ್ಲಿ ಫೇಸ್ಬುಕ್‌ನಲ್ಲಿ ಯಾರೋ […]