ಬಜರಂಗದಳ ಜಿಲ್ಲಾ ಸಂಯೋಜಕ ಸ್ಥಾನಕ್ಕೆ ಪ್ರವೀಣ್‌ ರಾಜೀನಾಮೆ – ಯಾವುದೇ ಸಂಘಟನೆಗಳಲ್ಲಿ ಗುರುತಿಸಿಕೊಳ್ಳುವುದಿಲ್ಲ ಎಂದ ಯುವ ನಾಯಕ..!

Coorg Buzz ಸಿದ್ದಾಪುರ : ಬಜರಂಗದಳದ ಜಿಲ್ಲಾ ಸಂಯೋಜಕ ಸ್ಥಾನಕ್ಕೆ ಪ್ರವೀಣ್‌ ಸಿದ್ದಾಪುರ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ತಮ್ಮ ಸೋಷಿಯಲ್‌ ಮೀಡಿಯಾ ಖಾತೆಯಲ್ಲಿ ಸ್ಪಷ್ಟಪಡಿಸಿದ್ದಾರೆ. ನನ್ನ ವೈಯುಕ್ತಿಕ ಕಾರಣಗಳಿಂದಾಗಿ ಕಳೆದ ಕೆಲವು ಸಮಯಗಳಿಂದ ಬಜರಂಗದಳದ ಕೊಡಗು ಜಿಲ್ಲಾ ಸಂಯೋಜಕ ಜವಾಬ್ದಾರಿಯನ್ನು ನನಗೆ ನಿರ್ವಹಿಸಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಕೊಡಗು ಜಿಲ್ಲಾ ಬಜರಂಗದಳದ ಜವಾಬ್ದಾರಿಯಿಂದ ಸ್ವಯಂ ಮುಕ್ತಿಗೊಳ್ಳುತ್ತಿದ್ದೇನೆ. ಮುಂದೆ ಸಾಮಾಜಿಕ ಕೆಲಸ ಮಾಡುತ್ತೇನೆ ಹೊರತು ಯಾವುದೇ ಸಂಘಟನೆಗಳಲ್ಲಿ ಗುರುತಿಸಿಕೊಳ್ಳುವುದಿಲ್ಲ ಎಂದು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ಪಕ್ಷ ಹಾಗೂ ಸಂಘಟನೆಯ ನಾಯಕರ […]

ಕೊಡಗಿನಲ್ಲಿ ಜೂನ್‌ 12ರಂದು ಭಾರಿ ಮಳೆ ಮುನ್ಸೂಚನೆ – ಹವಾಮಾನ ಇಲಾಖೆಯಿಂದ ರೆಡ್‌ ಅಲರ್ಟ್‌ ಘೋಷಣೆ – ಮಳೆಗೂ ಮುನ್ನವೇ ಶಾಲೆ, ಕಾಲೇಜಿಗೆ ರಜೆ ಘೋಷಿಸಿದ ಜಿಲ್ಲಾಡಳಿತ..!

ಮಡಿಕೇರಿ : ಜಿಲ್ಲೆಯಲ್ಲಿ ಮುಂಗಾರು ಮಳೆ ಆರಂಭವಾದ ಲಕ್ಷಣ ಗೋಚರಿಸುತ್ತಿದ್ದು, ನಾಳೆಯಿಂದ(ಜೂ.೧೨) ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಹೀಗಾಗಿ ಕೊಡಗಿನಲ್ಲಿ ರೆಡ್‌ ಅಲರ್ಟ್‌ ಘೋಷಣೆಯಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಕೂಡಾ ಅಲರ್ಟ್‌ ಆಗಿದೆ. ನಾಳೆ (ಜೂನ್ 12) ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದೆ. ಈ ಕುರಿತು ಜಿಲ್ಲಾಧಿಕಾರಿ ಕೆ. ವೆಂಕಟ್‌ ರಾಜಾ ಅವರು ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ. ಮೇ ಕೊನೇ ವಾರದಲ್ಲಿ […]

ಕೊಡಗು ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ನಾಪಂಡ ರವಿ ಕಾಳಪ್ಪ ಮುಂದುವರಿಕೆ – ಬದಲಾವಣೆಗೆ ಆಸಕ್ತಿ ತೋರದ ವರಿಷ್ಠರು..!

ಮಡಿಕೇರಿ : ಕೊಡಗು ಜಿಲ್ಲಾ ಬಿಜೆಪಿಯ ಅಧ್ಯಕ್ಷರಾಗಿ ನಾಪಂಡ ರವಿ ಕಾಳಪ್ಪ ಪುನಾರಾಯ್ಕೆಯಾಗಿದ್ದಾರೆ. ಎರಡನೆ ಹಂತದಲ್ಲಿ ಹತ್ತು ಜಿಲ್ಲೆಗಳ ಜಿಲ್ಲಾಧ್ಯಕ್ಷರನ್ನು ಆಯ್ಕೆ ಮಾಡಲಾಗಿದ್ದು, ಕೊಡಗು ಜಿಲ್ಲಾಧ್ಯಕ್ಷ ಸ್ಥಾನವನ್ನು ರವಿ ಕಾಳಪ್ಪ ಎರಡನೇ ಅವಧಿಗೆ ಮುಂದುವರೆಸಲಿದ್ದಾರೆ. ಈ ಬಗ್ಗೆ ಬಿಜೆಪಿಯ ಪ್ರಸ್ತುತ ಸಂಘಟನಾ ಪರ್ವದ ಚುನಾವಣಾಧಿಕಾರಿಯಾದ ಕ್ಯಾ. ಗಣೇಶ್‌ ಕಾರ್ಣಿಕ್‌ ಅವರು ಪ್ರಕಟಣೆ ಹೊರಡಿಸಿದ್ದಾರೆ.

ದಿ ಕೂರ್ಗ್ ಡಿಸ್ಟ್ರಿಕ್ಟ್ ಮುಸ್ಲಿಂ ಅಸೋಸಿಯೇಷನ್ ಸಭೆ : ಸದಸ್ಯತ್ವ ಹೆಚ್ಚಿಸಲು, ಸಾಮಾಜಿಕ ಕಳಕಳಿಯ ಕಾರ್ಯಕ್ರಮ ರೂಪಿಸಲು ನಿರ್ಧಾರ

ಮಡಿಕೇರಿ : ದಿ ಕೂರ್ಗ್ ಡಿಸ್ಟ್ರಿಕ್ಟ್ ಮುಸ್ಲಿಂ ಅಸೋಸಿಯೇಷನ್ ನ ಸದಸ್ಯರ ಸಂಖ್ಯೆಯನ್ನು ಹೆಚ್ಚಿಸಿ ಸಂಘಟನೆಯನ್ನು ಸದೃಢಗೊಳಿಸಲಾಗುವುದು ಮತ್ತು ಸಾಮಾಜಿಕ ಕಳಕಳಿಯ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು ಎಂದು ಅಸೋಸಿಯೇಷನ್ ನ ಉಪಾಧ್ಯಕ್ಷ ಎರ್ಮು ಹಾಜಿ ತಿಳಿಸಿದ್ದಾರೆ. ನಗರದ ಕೂರ್ಗ್ ಕಮ್ಯೂನಿಟಿ ಹಾಲ್ ನಲ್ಲಿ ನಡೆದ ಅಸೋಸಿಯೇಷನ್ ನ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸಂಘದ ಅಭಿವೃದ್ಧಿಗೆ ಸದಸ್ಯರ ಸಂಖ್ಯೆ ಹೆಚ್ಚಾಗಬೇಕಾಗಿದೆ, ಸಮುದಾಯದ ವಿವಿಧ ಸಂಘ-ಸAಸ್ಥೆಗಳ ಪ್ರಮುಖರೊಂದಿಗೆ ಚರ್ಚಿಸಿ ಸದಸ್ಯತ್ವವನ್ನು ಹೆಚ್ಚಿಸುವ ಕುರಿತು ಸಿದ್ದಾಪುರದಲ್ಲಿ ನಡೆದ ಸಭೆಯಲ್ಲಿ ನಿರ್ಧರಿಸಲಾಗಿದೆ. […]

ಜೂ.11 ರಂದು ಪೌರಾಡಳಿತ ಮತ್ತು ಹಜ್ ಸಚಿವ ರಹೀಂ ಖಾನ್ ಕೊಡಗು ಜಿಲ್ಲಾ ಪ್ರವಾಸ

ಮಡಿಕೇರಿ  : ಪೌರಾಡಳಿತ ಮತ್ತು ಹಜ್ ಸಚಿವರಾದ ರಹೀಂ ಖಾನ್ ಅವರು ಜೂನ್, 11 ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಮಾನ್ಯ ಸಚಿವರು ಜೂನ್, 11 ರಂದು ಬೆಳಗ್ಗೆ 10.45 ಗಂಟೆಗೆ ಕುಶಾಲನಗರದ ಇಂದಿರಾ ಕ್ಯಾಂಟೀನ್ ಭೇಟಿ ಹಾಗೂ ಪರಿಶೀಲನೆ ಮಾಡಲಿದ್ದಾರೆ. ನಂತರ ಬೆಳಗ್ಗೆ 11 ಗಂಟೆಗೆ ನಗರಾಭಿವೃದ್ದಿ ಮತ್ತು ಪೌರಾಡಳಿತ ಇಲಾಖೆ ವತಿಯಿಂದ ಕುಶಾಲನಗರದಲ್ಲಿ ‘ನೂತನ ಪುರಸಭಾ ಕಚೇರಿ ಕಟ್ಟಡ’ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ಬಳಿಕ ಮಧ್ಯಾಹ್ನ 12.45 ಗಂಟೆಗೆ ಕೊಡಗು ಜಿಲ್ಲೆಯ […]

ಜೂ.11 ರಂದು ಲೋಕಾಯುಕ್ತದಿಂದ ದೂರು ಅರ್ಜಿ ಸ್ವೀಕಾರ – ನೀವೂ ದೂರು ಸಲ್ಲಿಸಹುದು..!?

ಮಡಿಕೇರಿ : ಕರ್ನಾಟಕ ಲೋಕಾಯುಕ್ತ, ಕೊಡಗು ಜಿಲ್ಲೆ, ಮಡಿಕೇರಿಯ ಲೋಕಾಯುಕ್ತ(lokayukta) ಅಧಿಕಾರಿಗಳು ಜೂನ್ 11 ರಂದು ಬೆಳಗ್ಗೆ 11 ಗಂಟೆಯಿಂದ 1 ಗಂಟೆಯವರೆಗೆ ಮಡಿಕೇರಿ ತಾಲ್ಲೂಕು ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ದೂರು ಅರ್ಜಿ ವಿತರಿಸಲಿರುವರು. ಭರ್ತಿ ಮಾಡಿದ ಮತ್ತು ನೋಟರಿಯಿಂದ ಆಫಿಡೆವಿಟ್ ಮಾಡಿಸಿದ ಅರ್ಜಿ ಸ್ವೀಕರಿಸಲಾಗುವುದು. ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೆ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ/ ನೌಕರರ ವಿರುದ್ದ ಸಾರ್ವಜನಿಕರು ದೂರುಗಳನ್ನು ನಿಗದಿತ ಪ್ರತದಲ್ಲಿ ನೀಡಬಹುದಾಗಿದೆ. ಸಾರ್ವಜನಿಕರು […]

ಜಾತಿಗಣತಿ ವರದಿಗೆ ತಾತ್ವಿಕ ಒಪ್ಪಿಗೆ: ಸಮೀಕ್ಷೆ ಮರುಗಣತಿಗೆ ನಿರ್ಧಾರ: ಸಿಎಂ‌ ಸಿದ್ದರಾಮಯ್ಯ

ನವದೆಹಲಿ(new dellhi) : ಜಾತಿಗಣತಿ ವರದಿ ಬಗ್ಗೆ ಅಪಸ್ವರ ಎದ್ದಿರುವ ಹಿನ್ನಲೆಯಲ್ಲಿ, ಈಗಾಗಲೇ ಸಲ್ಲಿಕೆಯಾಗಿರುವ ಜಾತಿಗಣತಿ ವರದಿಗೆ ತಾತ್ವಿಕ ಒಪ್ಪಿಗೆ ನೀಡಿ, ಸಮೀಕ್ಷೆಗೆ ಮರುಗಣತಿ ನಡೆಸಲು ನಿರ್ಧಾರ ಕೈಗೊಂಡಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ(siddaramaiah) ತಿಳಿಸಿದರು. ನವದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಇಂದು ಕರ್ನಾಟದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳ ಬಗ್ಗೆ ಕಾಂಗ್ರೆಸ್ ಪಕ್ಷದ ವರಿಷ್ಠರೊಂದಿಗೆ ಚರ್ಚಿಸಲಾಗಿದೆ. ವಿವಿಧ ಜಾತಿಗಳ ಸಂಘಸಂಸ್ಥೆಗಳು, ಮಠಾಧೀಶರು, ಸಮುದಾಯದಗಳ ಮುಖಂಡರು, ಸಚಿವರು ಜಾತಿಗಣತಿ ವರದಿ ಬಗ್ಗೆ ಅಪಸ್ವರ ಎತ್ತಿರುವ ಬಗ್ಗೆ ಚರ್ಚಿಸಲಾಗಿ, ಜಾತಿಗಣತಿ ವರದಿಯನ್ನು […]

‘ನಾಲ್ವಡಿ ಕೃಷ್ಣರಾಜ ಒಡೆಯರ್ ಜನ್ಮದಿನೋತ್ಸವ – ಸ್ಮಿತಾ ಅಮೃತರಾಜ್‌ಗೆ ʼವಿಜಯ ವಿಷ್ಣು ಭಟ್ ದತ್ತಿ’ ಪ್ರಶಸ್ತಿ ಪ್ರದಾನ

ಮಡಿಕೇರಿ : ಕನ್ನಡ ನಾಡಿಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಕೊಡುಗೆ ಅಪಾರವಾಗಿದೆ. ಶಿಕ್ಷಣ, ಉದ್ಯೋಗ, ಆರೋಗ್ಯ, ನೀರಾವರಿ, ಕೈಗಾರಿಕೆ, ವಿದ್ಯುತ್, ಆರ್ಥಿಕ, ಹೀಗೆ ಹಲವು ಕ್ಷೇತ್ರಗಳ ಅಭಿವೃದ್ಧಿಗೆ ಚಾಲನೆ ನೀಡಿದ್ದರು ಎಂದು ಸಾಹಿತಿ ಹಾಗೂ ಆಕಾಶವಾಣಿ ನಿವೃತ್ತ ಉದ್ಘೋಷಕರಾದ ಸುಬ್ರಾಯ ಸಂಪಾಜೆ ಅವರು ಸ್ಮರಿಸಿದರು. ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಸರ್ಕಾರಿ ಪದವಿ ಪೂರ್ವ ಕಾಲೇಜು ಮತ್ತು ಸರ್ಕಾರಿ ಪ್ರೌಢ ಶಾಲೆ ಇವರ ಸಂಯುಕ್ತ ಆಶ್ರಯದಲ್ಲಿ ನಗರದ ಸರ್ಕಾರಿ ಪ್ರೌಢಶಾಲಾ ಸಭಾಂಗಣದಲ್ಲಿ ಬುಧವಾರ ನಡೆದ […]

ಪೊನ್ನಂಪೇಟೆ : ಸಿಐಟಿ ಕಾಲೇಜಿನಲ್ಲಿ ಪದವಿ ಪ್ರದಾನ – ವಿದ್ಯಾರ್ಥಿಗಳು ಪಾಲಕರ ತ್ಯಾಗ ಮರೆಯಬಾರದು : ಡಾ.ಕೆ.ಎನ್.ಸುಬ್ರಹ್ಮಣ್ಯ ಅಭಿಪ್ರಾಯ

ಪೊನ್ನಂಪೇಟೆ : ಪೊನ್ನಂಪೇಟೆಯ ಕೂರ್ಗ್ ತಾಂತ್ರಿಕ ಮಹಾವಿದ್ಯಾಲಯದಲ್ಲಿ ೨೦೨೧–೨೦೨೫ ಬ್ಯಾಚ್ ನ ಪದವಿ ಪ್ರದಾನ ಕಾರ್ಯಕ್ರಮ ಸಂಭ್ರಮದಿಂದ ನಡೆಯಿತು. ಕಾಲೇಜು ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಬೆಂಗಳೂರಿನ ಆರ್‌ವಿ ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಡಾ.ಕೆ.ಎನ್.ಸುಬ್ರಹ್ಮಣ್ಯ, ಹೊಸ ತಂತ್ರಜ್ಞಾನದೊಂದಿಗೆ ನವೀಕರಿಸಿಕೊಳ್ಳುವುದು ಹಾಗೂ ತಮ್ಮ ಕೌಶಲ್ಯವನ್ನು ಸದಾ ಮೆರುಗು ಪಡಿಸಿಕೊಳ್ಳುವುದು ಅತ್ಯಗತ್ಯ. ಜೊತೆಯಲ್ಲಿ ಪಾಲಕರ ತ್ಯಾಗವನ್ನು ಸದಾ ನೆನಪಿನಲ್ಲಿ ಇಟ್ಟುಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಕೊಡವ ಶಿಕ್ಷಣ ಸಂಸ್ಥೆಯ ಮಾಜಿ […]

ಬಾನು ಮುಷ್ತಾಕ್  ಕನ್ನಡದ ಕೀರ್ತಿ ಹೆಚ್ಚಿಸಿದ್ದಾರೆ – ಇದು ಇಡೀ ಕನ್ನಡ ಜಗತ್ತಿನ ಹೆಮ್ಮೆ: ಸಿ.ಎಂ – ಇಬ್ಬರಿಗೂ ತಲಾ 10 ಲಕ್ಷ ಪುರಸ್ಕಾರ ಘೋಷಿಸಿದ ಮುಖ್ಯಮಂತ್ರಿ 

ಬೆಂಗಳೂರು : ಸಾಹಿತ್ಯಕ್ಕೆ ಸಮಾಜವನ್ನು ಬೆಸೆಯುವ ಶಕ್ತಿ ಇದೆ. ಸಾಹಿತ್ಯದ ಮೂಲಕ ಸಮಾಜವನ್ನು ಒಗ್ಗೂಡಿಸಬೇಕೇ ಹೊರತು ವಿಭಜಿಸಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ(siddaramaiah) ಅಭಿಪ್ರಾಯಪಟ್ಟರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬ್ಯಾಂಕ್ವೆಂಟ್ ಹಾಲ್ ನಲ್ಲಿ ಆಯೋಜಿಸಿದ್ದ ಬುಕರ್(buker) ಪ್ರಶಸ್ತಿ ಪುರಸ್ಕೃತ ಬಾನು ಮುಷ್ತಾಕ್ ಅವರ ಸರ್ಕಾರಿ ಅಭಿನಂದನಾ ಕಾರ್ಯಕ್ರಮದಲ್ಲಿ ಬಾನು ಅವರನ್ನು ಅಭಿನಂದಿಸಿ, ಸನ್ಮಾನಿಸಿ ಮಾತನಾಡಿದರು. ಬಾನು ಮುಷ್ತಾಕ್(banu mushtaq) ಅವರು ನಮ್ಮ ಭಾಷೆಗೆ ಬುಕರ್ ಒದಗಿಸಿಕೊಡುವ ಮೂಲಕ ಕನ್ನಡದ ಕೀರ್ತಿ ಹೆಚ್ಚಿಸಿದ್ದಾರೆ. ಇದು ಇಡೀ ಕನ್ನಡ ಜಗತ್ತಿನ […]