ಪ್ರೆಸ್‌ ಕ್ಲಬ್‌ ವಾರ್ಷಿಕ ಪ್ರಶಸ್ತಿಗೆ ಭಾಜನರಾದ ಇಸ್ಮಾಯಿಲ್‌, ರಾಕೇಶ್‌, ಆನಂದ್‌ – ಜೂನ್‌ 08ರಂದು ಪ್ರಶಸ್ತಿ ಪ್ರದಾನ..

ಮಡಿಕೇರಿ : ಕೊಡಗು ಪ್ರೆಸ್ ಕ್ಲಬ್(kodagu press club) ವತಿಯಿಂದ ಕೊಡಮಾಡುವ ವಾರ್ಷಿಕ ಪ್ರಶಸ್ತಿಗೆ ಮೂವರು ಪತ್ರಕರ್ತರು ಭಾಜನರಾಗಿದ್ದಾರೆ ಎಂದು ಕೊಡಗು ಪ್ರೆಸ್ ಕ್ಲಬ್ ಪ್ರಧಾನ ಕಾರ್ಯದರ್ಶಿ ಎಂ.ಕೆ.ಆದರ್ಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹಿರಿಯ ಪತ್ರಕರ್ತ ಕೆ.ಬಿ.ಮಹಂತೇಶ್ ಅವರ ಸ್ಮರಣಾರ್ಥ ಕೊಡಗು ಪ್ರೆಸ್ ಕ್ಲಬ್ ವತಿಯಿಂದ ನೀಡುವ ಅತ್ಯುತ್ತಮ ಪರಿಣಾಮಕಾರಿ ವರದಿ ಪ್ರಶಸ್ತಿಗೆ ಶಕ್ತಿ ಪತ್ರಿಕೆಯಲ್ಲಿ ಪ್ರಕಟವಾದ “ರೂ.೭ ಕೋಟಿ ವೆಚ್ಚದ ಜರ್ಮನ್ ತಂತ್ರಜ್ಞಾನದ ತಡೆಗೋಡೆ ಪೂರ್ಣಗೊಳ್ಳುವುದು ಎಂದು?” ಎಂಬ ವರದಿಗೆ ಹೆಚ್.ಜೆ.ರಾಕೇಶ್ ಪಡೆದುಕೊಂಡಿದ್ದಾರೆ. ಕೋವರ್ ಕೊಲ್ಲಿ ಇಂದ್ರೇಶ್ […]

ರಾಜ್ಯದಿಂದ ಆಂಧ್ರಕ್ಕೆ ಆನೆಗಳ ಹಸ್ತಾಂತರ – 3695 ಆನೆ ಸಂಪತ್ತು ರಾಜ್ಯದಲ್ಲಿದೆ ಎಂದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಮಾನವ ಆನೆ(elephant) ಸಂಘರ್ಷ ತಡೆಗಟ್ಟಲು ಅಕ್ಕ ಪಕ್ಕದ ರಾಜ್ಯಗಳ ಸಹಕಾರ ಅಗತ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ(siddaramaiah) ನುಡಿದರು. ರಾಜ್ಯದಿಂದ ಆಂಧ್ರ ಪ್ರದೇಶ ರಾಜ್ಯಕ್ಕೆ ಕುಮ್ಕಿ ಆನೆಗಳನ್ನು ಹಸ್ತಾಂತರಿಸುವ ಒಡಂಬಡಿಕೆಗೆ ಸಹಿ ಹಾಕಿ, ಆನೆಗಳನ್ನು ಹಸ್ತಾಂತರಿಸಿ ಮಾತನಾಡಿದರು. ದೇಶದಲ್ಲೇ ಆನೆ ಸಂಪತ್ತು ಹೆಚ್ಚಾಗಿರುವ ರಾಜ್ಯ ನಮ್ಮದು. 3695 ಆನೆಗಳು ನಮ್ಮಲ್ಲಿವೆ. ಮಾನವ, ಆನೆ ಸಂಘರ್ಷ ತಡೆಯುವುದರಿಂದ ಜೀವ ಹಾನಿ, ಬೆಳೆ ಹಾನಿ ತಪ್ಪುತ್ತದೆ. ಈ ಮಹತ್ವದ ಉದ್ದೇಶದಿಂದಲೇ ರಾಜ್ಯದಿಂದ ಆರು ಕುಮ್ಕಿ ಆನೆಗಳನ್ನು ಆಂಧ್ರಕ್ಕೆ ಹಸ್ತಾಂತರಿಸಲಾಗುತ್ತದೆ […]

ಲೋಕ ಕಲ್ಯಾಣಕ್ಕಾಗಿ ಕೊಡಗಿನಲ್ಲಿ ಜಪಯಜ್ಞ – ಸಹಸ್ರ ಮೋದಕಗಳಿಂದ ಮಹಾಗಣಪತಿ ಹೋಮ

ಮಡಿಕೇರಿ : ಜೀವನದಿ ಕಾವೇರಿ ನದಿಯ ಉಗಮ ಸ್ಥಾನ ತಲಕಾವೇರಿ ಸನ್ನಿಧಿಯಲ್ಲಿ ಮೇ೧೧ ರಿಂದ ಅತಿರುದ್ರ ಜಪಯಜ್ಞ ಆರಂಭಗೊಂಡಿದೆ. ಬೆಳಗ್ಗೆ ೬.೩೦ಕ್ಕೆ ಜಪಯಜ್ಞದೊಂದಿಗೆ ಧಾರ್ಮಿಕ ಕಾರ್ಯ ಆರಂಭವಾಗಿದ್ದು, ಬಳಿಕ ಸಹಸ್ರ ಮೋದಕಗಳಿಂದ ಶ್ರೀ ಮಹಾಗಣಪತಿ ಹೋಮ ನಡೆಯಿತು. ದೇವಾಲಯದ ಪ್ರಧಾನ ಅರ್ಚಕ ವೇ.ಬ್ರ. ಪ್ರಶಾಂತ್ ಆಚಾರ್ಯ ನೇತೃತ್ವದಲ್ಲಿ ಪೂಜಾ ಕಾರ್ಯ ನಡೆಯುತ್ತಿದೆ. ಮೇ ೧೧ರಿಂದ ೨೧ರವರೆಗೆ ನಡೆಯುವ ಜಪಯಜ್ಞಕ್ಕೆ ರಾಜ್ಯದೆಲ್ಲೆಡೆಯಿಂದ ೫೦ಕ್ಕೂ ಅಧಿಕ ಋತ್ವಿಜರು ಆಗಮಿಸಲಿದ್ದಾರೆ. ಅವಧೂತರಾದ ಶ್ರೀ ಶ್ರೀ ಶ್ರೀ ಕಾಂತಾನಂದ ಸರಸ್ವತಿ ಮಹಾರಾಜರು ಸಂಕಲ್ಪಿಸಿರುವ […]

ಕೊಡಗು ಜಿಲ್ಲಾ ವಿಶೇಷಚೇತನರ ಸಂಘದ ಮಹಾಸಭೆ ಮೇ ೧೪ಕ್ಕೆ

ಮಡಿಕೇರಿ : ಕೊಡಗು ಜಿಲ್ಲಾ ವಿಶೇಷಚೇತನರ ಸಂಘದ ವಾರ್ಷಿಕ ಮಹಾಸಭೆಯು ಮೇ ೧೪ ರಂದು ಮಡಿಕೇರಿಯಲ್ಲಿ(madikeri) ನಡೆಯಲಿದೆ. ಅಂದು ಬೆಳಿಗ್ಗೆ ೧೦.೩೦ ಗಂಟೆಗೆ ನಗರಸಭಾ ಆವರಣದಲ್ಲಿರುವ ಸಂಘದ ಕಚೇರಿಯಲ್ಲಿ ಸಭೆ ನಡೆಯಲಿದ್ದು, ಸರ್ವ ಸದಸ್ಯರು ಸಭೆಗೆ ಹಾಜರಾಗುವಂತೆ ಸಂಘದ ಅಧ್ಯಕ್ಷ ಜೆ.ಎ.ಮಹೇಶ್ವರ್ ತಿಳಿಸಿದ್ದಾರೆ.

ಜನಿವಾರ ಧರಿಸಿ ಸಿಇಟಿ ಬರೆಯಲು ಅಧಿಕಾರಿಗಳ ಆಕ್ಷೇಪ – ಕುಶಾಲನಗರದಲ್ಲಿ ಬ್ರಾಹ್ಮಣ ಸಮಾಜದಿಂದ ಪ್ರತಿಭಟನೆ

ಕುಶಾಲನಗರ : ಸಿಇಟಿ ಪರೀಕ್ಷೆ ಬೇಳೆ ವಿದ್ಯಾರ್ಥಿಗೆ ಜನಿವಾರ ತೆಗೆಯಲು ಹೇಳಿದ ಪ್ರಕರಣಕ್ಕೆ ರಾಜ್ಯಾದ್ಯಂತ ತೀವ್ರ ಆಕ್ಷೇಪ ವ್ಯಕ್ತವಾಗುತ್ತಿದೆ. ಕುಶಾಲನಗರದಲ್ಲಿ ಕೂಡಾ ಈ ಪ್ರಕರಣ ಖಂಡಿಸಿ ಪ್ರತಿಭಟನೆ ನಡೆಯಿತು. ದೇವಸ್ಥಾನ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದ ಬ್ರಾಹ್ಮಣ ಕ್ಷೇಮಾಭಿವೃದ್ಧಿ ಸಂಘದ ಸದಸ್ಯರು ಅಧಿಕಾರಿಗಳ ನಡೆಯನ್ನು ಖಂಡಿಸಿದರು.  ಬೀದರ್ ಹಾಗೂ ಶಿವಮೊಗ್ಗದಲ್ಲಿ ನಡೆದಿರುವುದು ಅಮಾನವೀಯ ಘಟನೆ.  ತಪ್ಪೆಸಗಿದವರ ವಿರುದ್ಧ ಕ್ರಮವಾಗಬೇಕೆಂದು ಆಗ್ರಹಿಸಿದರು. ದೇವಾಲಯದಿಂದ ತಹಸೀಲ್ದಾರ್‌ ಕಚೇರಿವರೆಗೆ ಮೆರವಣಿಗೆ ನಡೆಸಿ ಮನವಿ ಪತ್ರ ಸಲ್ಲಿಸಿದರು.

‌ಪತ್ರಕರ್ತರ ಸಂಘದಿಂದ ಏಪ್ರಿಲ್ 11ರಂದು ಸುಂಟಿಕೊಪ್ಪದಲ್ಲಿ ಮಾಧ್ಯಮ ಸಂವಾದ

ಮಡಿಕೇರಿ : ಕೊಡಗು ಪತ್ರಕರ್ತರ ಸಂಘ(ರಿ)ದ ಕುಶಾಲನಗರ ತಾಲೂಕು ಘಟಕದಿಂದ ಸುಂಟಿಕೊಪ್ಪ ಪಟ್ಟಣ ವ್ಯಾಪ್ತಿಯಲ್ಲಿನ ಸಮಸ್ಯೆಗಳು ಹಾಗೂ ಅಭಿವೃದ್ಧಿ ಬಗ್ಗೆ ಗಮನ ಸೆಳೆಯುವ ನಿಟ್ಟಿನಲ್ಲಿ ಏ.೧೧ರ ಶುಕ್ರವಾರ ಬೆಳಗ್ಗೆ ೧೦.೩೦ ಗಂಟೆಗೆ ಸುಂಟಿಕೊಪ್ಪದ ವಿಎಸ್‌ಎಸ್‌ಎನ್ ಸಭಾಂಗಣದಲ್ಲಿ ಮಾಧ್ಯಮ ಸಂವಾದ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಕುಶಾಲನಗರ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ವಿಘ್ನೇಶ್ ಭೂತನಕಾಡು ಅಧ್ಯಕ್ಷತೆ ವಹಿಸಲಿದ್ದಾರೆ. ಸಂವಾದದಲ್ಲಿ ಮುಖ್ಯ ಅತಿಥಿಗಳಾಗಿ ಕೊಡಗು ಪತ್ರಕರ್ತರ ಸಂಘದ ಅಧ್ಯಕ್ಷ ಅನಿಲ್ ಹೆಚ್.ಟಿ, ಪ್ರಭಾರ ಉಪ ತಹಶೀಲ್ದಾರ್ ಎನ್.ಆರ್. ಪ್ರಶಾಂತ್, ಸುಂಟಿಕೊಪ್ಪ ಗ್ರಾಮ […]

ನಾಲ್ನಾಡ್‌ ಹಾಕಿ ಕ್ಲಬ್‌ ಬಲ್ಲಮಾವಟಿ : ಹಾಕಿ ತರಬೇತಿ ಉಚಿತ ಶಿಬಿರ ಸಂಪನ್ನ…

ನಾಪೋಕ್ಲು : ನಾಲ್ನಾಡ್ ಹಾಕಿ ಕ್ಲಬ್ ವತಿಯಿಂದ ಬಲ್ಲಮಾವಟಿ ನೇತಾಜಿ ವಿದ್ಯಾ ಸಂಸ್ಥೆಯ ಆಟದ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದ್ದ ಹಾಕಿ ತರಬೇತಿ ಉಚಿತ ಶಿಬಿರ ಸಂಪನ್ನಗೊಂಡಿತು. ಶಿಬಿರದ ಸಮಾರೋಪ ಸಮಾರಂಭ ಹಿರಿಯರ ಸಮ್ಮುಖದಲ್ಲಿ ಜರುಗಿತು. ಕ್ಲಬ್ ಅಧ್ಯಕ್ಷ ಕರವಂಡ ಸುರೇಶ್ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಖ್ಯಾತ ವೀಕ್ಷಕ ವಿವರಣೆಗಾರ ಚೆಪ್ಪುಡಿರ ಕಾರ್ಯಪ್ಪ, ಅಪ್ಪಚೆಟ್ಟೋಳಂಡ ರವಿ ಮೊಣ್ಣಪ್ಪ, ಕೈಬಿಲಿರ ಟಿಪ್ಪು ಚಂಗಪ್ಪ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಚೌರಿರ ಪೂಣಚ್ಚ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಶಿಬಿರಾರ್ಥಿಗಳಿಗೆ ಉಚಿತ ಟಿ […]

ಕೊಡಗಿನ ಮಾದರಿ ಗ್ರಾಮಕ್ಕೆ ಅಂಡಮಾನ್‌, ನಿಕೋಬಾರ್‌ ದ್ವೀಪದ ಅಧಿಕಾರಿಗಳ ಭೇಟಿ – ಅಭಿವೃದ್ಧಿ ಬಗ್ಗೆ ಅಧ್ಯಯನ..!

ಮೂರ್ನಾಡು : ಒಂದು ಪ್ರದೇಶದ ಅಭಿವೃದ್ಧಿಯ ಅಧ್ಯಯನ ಸಂಬಂಧ ಬೇರೆ ಬೇರೆ ಕಡೆಯ ತಂಡಗಳು ಬಂದು ಪರಿಶೀಲನೆ ಮಾಡುತ್ತವೆ. ಅದೇ ರೀತಿ ಕೊಡಗಿನ ಮಾದರಿ ಗ್ರಾಮ ಪಂಚಾಯಿತಿಯೊಂದಕ್ಕೆ ಅಂಡಮಾನ್‌ ನಿಕೋಬಾರ್‌ ದ್ವೀಪದ ಪ್ರತಿನಿಧಿಗಳು ಭೇಟಿ ನೀಡಿ ಮಾಹಿತಿ ಪಡೆದು ತೆರಳಿದ್ದಾರೆ. ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನ ಹೊದ್ದೂರು ಗ್ರಾಮ ಪಂಚಾಯಿತಿಗೆ ಅಂಡಮಾನ್ ನಿಕೋಬಾರ್ ದ್ವೀಪ ಸಮೂಹಗಳ ಪಂಚಾಯತ್ ರಾಜ್ ಸಂಸ್ಥೆಗಳ ಪ್ರತಿನಿಧಿಗಳು ಮತ್ತು ಅಧಿಕಾರಿಗಳು ಭೇಟಿ ನೀಡಿದರು.  ಪಂಚಾಯಿತ ವ್ಯಾಪ್ತಿಯ ವಿವಿಧ ರೀತಿಯ ಅಭಿವೃದ್ಧಿ ಬಗ್ಗೆ ಇಲ್ಲಿನ […]

ವಿನಯ್‌ ಸೋಮಯ್ಯ ಆತ್ಮಹತ್ಯೆ ಪ್ರಕರಣ – ರೌಡಿಶೀಟರ್‌ ಹಾಕುವ ಬೆದರಿಕೆವೊಡ್ಡಿದ್ದ ಪೊಲೀಸ್‌ ಸಿಬ್ಬಂದಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ದೂರು..!

ಮಡಿಕೇರಿ : ವಿನಯ್ ಸೋಮಯ್ಯ(vinay somaiah) ಮತ್ತು ವಿಷ್ಣು ನಾಚಪ್ಪ) ವಿರುದ್ಧ ರೌಡಿ ಶೀಟರ್ ಹಾಕುವುದಾಗಿ ಹೇಳಿದ್ದ ಪೊಲೀಸ್ ಸಿಬ್ಬಂದಿ ವಿರುದ್ದ ಜಿಲ್ಲಾ ಬಿಜೆಪಿ ವತಿಯಿಂದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ನೀಡಲಾಯಿತು. ಮೃತ ವಿನಯ್ ಸೋಮಯ್ಯ ಸಹೋದರ ಜೀವನ್ ಮಾಜಿ ಸಂಸದ ಪ್ರತಾಪ್ ಸಿಂಹ(pratap simha), ಮಾಜಿ ಶಾಸಕ ಕೆ.ಜಿ ಬೋಪಯ್ಯ(kg bopaiah), ಜಿಲ್ಲಾಧ್ಯಕ್ಷ ರವಿ ಕಾಳಪ್ಪ, ಪ್ರಮುಖರಾದ ಭಾರತೀಶ್, ರಾಬಿನ್ ದೇವಯ್ಯ ಹಾಗೂ ಪ್ರಮುಖ ಮುಖಂಡರು ಈ ಸಂದರ್ಭ ಇದ್ದರು.

ಕತ್ತಲೆಕಾಡು ವಿನಾಯಕ ಸೇವಾ ಟ್ರಸ್ಟ್ ವತಿಯಿಂದ ಶ್ರೀರಾಮ ನವಮಿ ಆಚರಣೆ

ಮಡಿಕೇರಿ : ಕತ್ತಲೆಕಾಡು ಶ್ರೀ ವಿನಾಯಕ ಸೇವಾ ಟ್ರಸ್ಟ್ ವತಿಯಿಂದ ಶ್ರೀ ರಾಮನವಮಿಯನ್ನು ಸಂಭ್ರಮದಿಂದ‌ ಆಚರಿಸಲಾಯಿತು. ಟ್ರಸ್ಟ್ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಟ್ರಸ್ಟ್ ಸದಸ್ಯರು, ವಿದ್ಯಾರ್ಥಿಗಳು, ಗ್ರಾಮಸ್ಥರು ಭಾಗಿಯಾಗಿದ್ದರು. ಮಹಿಳೆಯರು ಆವರಣದಲ್ಲಿ ದೀಪ ಬೆಳಗಿದರು. ಬಳಿಕ ಶ್ರೀರಾಮನಿಗೆ ಸಾಮೂಹಿಕವಾಗಿ ಆರತಿ ಬೆಳಗಲಾಯಿತು. ಟ್ರಸ್ಟ್‌ನ ವಿದ್ಯಾರ್ಥಿ ಘಟಕದ ಸದಸ್ಯರು ಭಜನೆ ಕಾರ್ಯಕ್ರಮ ನಡೆಸಿಕೊಟ್ಟರು. ಮಡಿಕೇರಿಯ ಶ್ರೀ ರಾಮಾಂಜನೇಯ ಭಜನಾ ತಂಡದ ಸುರೇಶ್ ಮಾವಟ್ಕರ್ ಅವರು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ‌ ಮಾಡಿದರು. ರಾಮನವಮಿಯನ್ನು ದೇಶದೆಲ್ಲೆಡೆ ಹಿಂದುಗಳು ಸಡಗರ, ಸಂಭ್ರಮದಿಂದ ಆಚರಿಸುತ್ತಾರೆ. ಮರ್ಯಾದ […]