ಕೊಡಗು ವಿಶ್ವವಿದ್ಯಾಲಯ ಮುಚ್ಚುವ ನಿರ್ಧಾರಕ್ಕೆ ಕೆ. ಎಂ. ಎ. ತೀವ್ರ ವಿರೋಧ

ಕಳೆದ ಎರಡು ವರ್ಷದಿಂದ ಉತ್ತಮವಾಗಿ ಕಾರ್ಯನಿರ್ವಹಿಸಿಕೊಂಡು ಬಂದಿರುವ ಕೊಡಗು ವಿಶ್ವವಿದ್ಯಾಲಯವನ್ನು (Kodagu University) ಮುಚ್ಚುವ ಬಗ್ಗೆ ಸಚಿವ ಸಂಪುಟದ ಉಪ ಸಮಿತಿ ನಿರ್ಧಾರ ತೆಗೆದುಕೊಂಡಿರುವ ಕುರಿತು ಜಿಲ್ಲಾಧ್ಯಂತ ಜನರಿಗೆ ಆತಂಕ ಮೂಡಿದೆ. ಕೊಡಗು ವಿಶ್ವವಿದ್ಯಾಲಯವನ್ನು ಸ್ಥಗಿತಗೊಳಿಸುವ ಅಥವಾ ಬೇರೆ ವಿ.ವಿ.ಯೊಂದಿಗೆ ವಿಲೀನಗೊಳಿಸುವ ಪ್ರಸ್ತಾಪ ಸರಕಾರದ ಮುಂದಿದ್ದರೆ ತಕ್ಷಣ ಅದನ್ನು ಕೈ ಬಿಟ್ಟು ಕೊಡಗು ವಿಶ್ವವಿದ್ಯಾಲಯವನ್ನು ಯಥಾಸ್ಥಿತಿಯಲ್ಲಿ ಮುಂದುವರೆಸಬೇಕೆಂದು ಕೊಡವ ಮುಸ್ಲಿಂ ಅಸೋಸಿಯೇಷನ್ (ಕೆಎಂಎ), ಒಂದು ವೇಳೆ ಕೊಡಗು ವಿಶ್ವವಿದ್ಯಾಲಯವನ್ನು ಮುಚ್ಚಿದರೆ ಅದು ಕೊಡಗು (Kodagu) ಜಿಲ್ಲೆಗೆ ಮಾಡಿದ […]
ಕೊಡಗು ವಿವಿ ಮುಚ್ಚುವ ನಿರ್ಧಾರಕ್ಕೆ FMC ಕಾಲೇಜಿನ ಹಳೇ ವಿದ್ಯಾರ್ಥಿ ಸಂಘ ಖಂಡನೆ

ಶೈಕ್ಷಣಿಕವಾಗಿ ಹಿಂದುಳಿದಿರುವ ಕೊಡಗು ಜಿಲ್ಲೆಯಲ್ಲಿ ತನ್ನದೇ ಆದ ವಿಶ್ವವಿದ್ಯಾಲಯವನ್ನು ಹಲವು ವರ್ಷಗಳ ನಂತರ ಪಡೆದು ಅದು ಬೆಳವಣಿಗೆಯ ಗತಿಯಲ್ಲಿ ಫಲಾನುಭವಿಗಳಿಗೆ ತಲುಪುತ್ತಿರುವ ಸಮಯದಲ್ಲಿ ಕೊಡಗು ವಿಶ್ವವಿದ್ಯಾಲಯವನ್ನು ಮುಚ್ಚುವ, ವಿಲೀನಗೊಳಿಸುವ ಪ್ರಸ್ತಾವನೆಯನ್ನು ಸರಕಾರವು ಮುಂದಿಟ್ಟಿರುವುದನ್ನು ಮಡಿಕೇರಿಯ ಫೀಲ್ಡ್ ಮಾರ್ಷಲ್ ಕೆ.ಎಂ, ಕಾರ್ಯಪ್ಪ ಹಳೇ ವಿದ್ಯಾರ್ಥಿ ಸಂಘ ಉಗ್ರವಾಗಿ ಖಂಡಿಸುತ್ತದೆ ಎಂದು ಅಧ್ಯಕ್ಷರಾದ ಶ್ರೀ ಬೊಳ್ಳಜಿರ ಬಿ. ಅಯ್ಯಪ್ಪ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಜಗತ್ತಿನ ಯಾವುದೇ ದೇಶದಲ್ಲಿ ಹಣಕಾಸಿನ ಕ್ಷುಲ್ಲಕ ಕಾರಣ ನೀಡಿ ಸರ್ಕಾರಗಳು ಶಿಕ್ಷಣ ಸಂಸ್ಥೆಗಳನ್ನು ಮುಚ್ಚಿದ ನಿದರ್ಶನಗಳು […]
ಯುವಜನತೆಗೆ ಗುಡ್ ನ್ಯೂಸ್: ಫೆ.24 ರಂದು ಕೊಡಗಿನಲ್ಲಿ ಉದ್ಯೋಗ ಮೇಳ

ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಫೆಬ್ರವರಿ 24 ರಂದು ಬೆಳಗ್ಗೆ 10.30 ರಿಂದ ಅಪರಾಹ್ನ 3 ಗಂಟೆವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ‘ಉದ್ಯೋಗ ಮೇಳ’ ನಡೆಯಲಿದೆ. ಈ ಉದ್ಯೋಗ ಮೇಳದಲ್ಲಿ ಮಡಿಕೇರಿ ತಾಜ್ ರೆಸಾರ್ಟ್, ವಿರಾಜಪೇಟೆ ತಾಮರ ರೆಸಾರ್ಟ್, ಮಡಿಕೇರಿ ಕಲ್ಯಾಣಿ ಮೋಟಾರ್ಸ್, ಪ್ಯಾಲೇಸ್ ಟೊಯೋಟಾ ಕಾರ್ ಶೋ ರೂಮ್ ಕುಶಾಲನಗರ, ಪೆಂಟಾಟೆಕ್ ಮತ್ತು ಕ್ಲಬ್ ಮಹೀಂದ್ರ ರೆಸಾರ್ಟ್ ತಮ್ಮ ಸಂಸ್ಥೆಗಳಲ್ಲಿ ಖಾಲಿಯಿರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಈ ಮೇಳದಲ್ಲಿ ಖಾಸಗಿ ಕಂಪೆನಿಗಳು ಭಾಗವಹಿಸಿ […]
Coffe: ಕಾಫಿ ಉತ್ಪಾದನೆಯನ್ನು ಹೆಚ್ಚಿಸಲು ಸಿಂಪಲ್ ಟಿಪ್ಸ್

ಗುಡ್ಡಗಾಡು ಪ್ರದೇಶಗಳಲ್ಲಿ ಕಾಫಿ ತೋಟಗಳು ಸಾಮಾನ್ಯ ದೃಶ್ಯ. ಭಾರತದಲ್ಲಿ ಕಾಫಿ ಮತ್ತು ಟೀ ಭಾರತದಲ್ಲಿ ಅತಿ ಜನಪ್ರಿಯ ಪಾನೀಯಗಳು. ನಮ್ಮ ದೇಶ ಸಾಂಪ್ರದಾಯಿಕವಾಗಿ ಟೀ ರಫ್ತಿಗೆ ಬಹಳ ಪ್ರಸಿದ್ಧಿಯಾಗಿತ್ತು. ಆದರೆ ಈಗ ದೇಶ ಜಗತ್ತಿಗೆ ಕಾಫಿ ಕುಡಿಸುತ್ತಿದೆ. 2024ರಲ್ಲಿ ಗಣನೀಯ ಪ್ರಮಾಣದಲ್ಲಿ ದೇಶದಲ್ಲಿ ಕಾಫಿ ರಫ್ತು ಹೆಚ್ಚಾಗಿದೆ. ಈಗ ಕಾಫಿಗೆ ಭಾರೀ ಬೇಡಿಕೆ ಇದ್ದು, ಬೆಲೆಯು ಗಗನಕ್ಕೇರಿದೆ. ಇದರಿಂದ ಕಾಫಿ ಬೆಳಗಾರರು ಫುಲ್ ಖುಷ್ ಆಗಿದ್ದಾರೆ. ಕಾಫಿ ಇಳುವರಿಯನ್ನು ಹೆಚ್ಚಿಸಲು ನಿಮಗೆ ಇಲ್ಲಿದೆ ಸಖತ್ ಟಿಪ್ಸ್. ಉತ್ತಮ […]
ಡಾ.ಬಿ.ಆರ್.ಅಂಬೇಡ್ಕರ್ ಅವರ ಬದುಕು ಮತ್ತು ಸಾಧನೆ ಕುರಿತು ಕಾರ್ಯಕ್ರಮ

ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರು ಕಾನೂನು ಸಚಿವರಾಗಿ ರಾಷ್ಟ್ರದಲ್ಲಿ ಪ್ರಥಮ ಬಾರಿಗೆ ಹಿಂದೂ ಕೋಡ್ ಬಿಲ್ ಜಾರಿಗೊಳಿಸುವ ಮೂಲಕ ಮಹಿಳೆಯರಿಗೆ ಸಮಾನ ಅವಕಾಶ ಮತ್ತು ಹಕ್ಕುಗಳನ್ನು ನೀಡಿದ್ದಾರೆ ಎಂದು ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಸಹ ಪ್ರಾಧ್ಯಾಪಕರಾದ ಡಾ.ಮಹದೇವ ಅತ್ನಿ ಅವರು ತಿಳಿಸಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ವತಿಯಿಂದ ಕಾಲೇಜಿನ ಕಾರ್ಯಪ್ಪ ಸಭಾಂಗಣದಲ್ಲಿ ಶುಕ್ರವಾರ ನಡೆದ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ ಬದುಕು ಮತ್ತು ಸಾಧನೆ ಕುರಿತು […]
Champions Trophy IND vs PAK: ನಾಳೆ ಭಾರತ – ಪಾಕ್ ಹೈವೋಲ್ಟೇಜ್ ಪಂದ್ಯ

ಭಾರತ ಚಾಂಪಿಯನ್ಸ್ ಟ್ರೋಫಿಯಲ್ಲಿ ಶುಭಾರಂಭ ಮಾಡಿದೆ. ಆಡಿದ ಮೊದಲ ಪಂದ್ಯದಲ್ಲಿ ಭಾರತ, ಬಾಂಗ್ಲಾದೇಶ ವಿರುದ್ಧ ಜಯ ಸಾಧಿಸಿದೆ. ಈಗ ಎರಡನೇ ಪಂದ್ಯದ ಮೇಲೆ ಎಲ್ಲರ ಚಿತ್ತ. ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ನಡೆಯುವ ಭಾರತ-ಪಾಕಿಸ್ತಾನ ನಡುವಣ ಹೈವೋಲ್ಟೇಜ್ ಪಂದ್ಯಕ್ಕೆ ಕೇವಲ ಎರಡು ದೇಶಗಳ ಕ್ರೀಡಾಭಿಮಾನಿಗಳಷ್ಟೇ ಅಲ್ಲ, ಜಗತ್ತಿನ ಕ್ರೀಡಾಭಿಮಾನಿಗಳೇ ಎದುರು ನೋಡುತ್ತಿದೆ. ಎರಡೂ ದೇಶಗಳಿಗೂ ಪ್ರತಿಷ್ಠೆಯ ಪಂದ್ಯವಾಗಿರುವುದರಿಂದ ಗೆಲುವಿಗಾಗಿ ಪ್ರಬಲ ಪೈಪೋಟಿ ಇರುತ್ತದೆ. ಫೆಬ್ರವರಿ 23 ರಂದು ಭಾರತ ಹಾಗೂ ಪಾಕಿಸ್ತಾನ ನಡುವಣ ಹೈವೋಲ್ಟೇಜ್ ಪಂದ್ಯಕ್ಕೆ ದುಬೈನ […]
ಗಂಗಾ ಪುಣ್ಯ ಸ್ನಾನ ಮಾಡಿ, ಸೇವೆ ಮಾಡುವ ಭಾಗ್ಯ ನನಸು ಮಾಡಿಕೊಂಡ ನಟಿ ಕಾರುಣ್ಯ ರಾಮ್

ಮಹಾಕುಂಭ ಮೇಳಕ್ಕೆ ಪ್ರತಿದಿನವೂ ಹಲವಾರು ಜನರು ಆಗಮಿಸುತ್ತಿದ್ದಾರೆ. ಪ್ರಯಾಗ್ ರಾಜ್‌ನ್ನು ಭೇಟಿಯಾಗಿ ತ್ರಿವೇಣಿ ಸಂಗಮದಲ್ಲಿ ನುಗ್ಗಿ, ನಮ್ಮ ಜನ್ಮ ಪಾವನವಾಯಿತು ಎಂದು ಸಾರ್ಥಕ ಭಾವನೆಯನ್ನು ಹೊಂದಿ ಮನೆ ಕಡೆ ಹಿಂತಿರುಗುತ್ತಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ, ಈಗಾಗಲೇ ಸುಮಾರು 50 ಕೋಟಿ ಹೆಚ್ಚಿನ ಭಕ್ತರು ಮಹಾಕುಂಭ ಮೇಳಕ್ಕೆ ಬೇಟಿ ನೀಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಮಹಾಕುಂಭ ಮೇಳದ ವಿಶೇಷವಾದ ಸಂಗತಿ ಎಂದರೆ, ಈ ಬಾರಿ ಪುಣ್ಯಸ್ನಾನವು ಕೇವಲ ಜನಸಾಮಾನ್ಯರಷ್ಟೇ ಮಾಡುತ್ತಿಲ್ಲ. ಚಿತ್ರರಂಗದಲ್ಲಿ ಹೆಸರಾಗಿದ್ದ ಹಲವರು ಕೂಡ ಪುಣ್ಯಸ್ನಾನ ಮಾಡುತ್ತಿದ್ದಾರೆ. […]