Power Cut: ಕೊಡಗಿನ ಈ ಪ್ರದೇಶಗಳಲ್ಲಿ ನಾಳೆ ಕರೆಂಟ್ ಇರಲ್ಲ!

ಫೆಬ್ರುವರಿ 10 ರಂದು ಬೆಳಗ್ಗೆ 10 ರಿಂದ 06 ಗಂಟೆ ವರೆಗೆ ತುರ್ತು ನಿರ್ವಹಣಾ ಕಾಮಗಾರಿ ನಡೆಸಬೇಕಿರುವುದರಿಂದ, ವಿರಾಜಪೇಟೆ ಪಟ್ಟಣ, ಬಿಟ್ಟಂಗಾಲ, ಬಿ ಶೆಟ್ಟಿಗೇರಿ, ಕೆದಮುಳ್ಳೂರು, ಕಾಕೋಟುಪರಂಬು, ಕದನೂರು, ಆರ್ಜಿ, ಬೇಟೋಳಿ, ಸಿದ್ದಾಪುರ ಪಟ್ಟಣ, ಮಾಲ್ದಾರೆ, ಗುಹ್ಯ, ಅಮ್ಮತ್ತಿ, ಚೆಂಬೆಬೆಳ್ಳೂರು, ಹಾಲುಗುಂದ, ಕಣ್ಣಂಗಾಲ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಈ ಮೇಲೆ ತಿಳಿಸಿರುವ ಸಮಯದಲ್ಲಿ ಹಾಗೂ ಸ್ಥಳದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಫೆಬ್ರುವರಿ 10 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ, ಪಾರಾಣೆ, ನಾಪೋಕ್ಲು, ಮೂರ್ನಾಡು, […]
ಕಾಡಾನೆ ದಾಳಿ: ಜೀವಾಪಾಯದಿಂದ ಪಾರು

ನಾಪೋಕ್ಲು :ಇಲ್ಲಿಗೆ ಸಮೀಪದ ಮದನಾಡು ಗ್ರಾಮದಲ್ಲಿ ಕಾಡಾನೆ ಹಿಂಡು ದಾಳಿ ಮಾಡಿ ಬೈಕ್ ಸವಾರ ತೀವ್ರವಾಗಿ ಗಾಯಗೊಂಡು ಜೀವಪಾಯದಿಂದ ಪಾರಾ ಘಟನೆ ಭಾನುವಾರ ಸಂಜೆ ನಡೆದಿದೆ. ಮದೆ ನಾಡು ಗ್ರಾಮದ ನಿವಾಸಿ ದಿವಂಗತ ಪಟ್ಟಡ ಅಯ್ಯಪ್ಪ ಎಂಬವರ ಮಗ ಭರತ್ ಕುಮಾರ್ (50) ಕಾಡಾನೆ ದಾಳಿಗೆ ಒಳಗಾದ ದುರ್ದೈವಿ. . ರೆಸಾರ್ಟ್ ಒಂದರಲ್ಲಿ ಕೆಲಸ ಮಾಡುತ್ತಿರುವ ಭರತ್ ಕುಮಾರ್ ಎಂದಿನಂತೆ ತಮ್ಮ ಬೈಕಿನಲ್ಲಿ ಮದನಾಡು – ಬೆಟ್ಟತ್ತೂರು ರಸ್ತೆಯಲ್ಲಿ ಸಂಚರಿಸುತ್ತಿರುವ ಸಂದರ್ಭ ಸಾಲಪು ಎಂಬಲ್ಲಿ ರಸ್ತೆಯ ಮಧ್ಯೆ […]
ಪ್ರಸ್ತುತ ಸಮಾಜದಲ್ಲಿ ಮಕ್ಕಳಿಗೆ ಸಾತ್ವಿಕ ಶಿಕ್ಷಣ ನೀಡುವ ಜವಾಬ್ದಾರಿ ಪೋಷಕರ ಮೇಲಿದೆ: ಡಿವೈಎಸ್ಪಿ ಮಹೇಶ್ ಕುಮಾರ್

ವಿರಾಜಪೇಟೆ: ಮಕ್ಕಳಿಗೆ ಮಹನೀಯರ ಆದರ್ಶವನ್ನು ನೀಡಿ ಉತ್ತಮ ವ್ಯಕ್ತಿತ್ವ ರೂಪಿಸುವ ಜವಾಬ್ದಾರಿ ಪೋಷಕರ ಮೇಲಿದೆ ಎಂದು ವಿರಾಜಪೇಟೆ ಡಿವೈಎಸ್ ಪಿ ಮಹೇಶ್ ಕುಮಾರ್ ಅಭಿಪ್ರಾಯ ವ್ಯಕ್ತಪಡಿಸಿದರು .ವಿರಾಜಪೇಟೆ ಮಗ್ಗುಲ ಗ್ರಾಮದಲ್ಲಿರುವ ಲಿಟಲ್ ಸ್ಕಾಲರ್ಸ್ ಅಕಾಡೆಮಿಯ ವತಿಯಿಂದ ಆಯೋಜಿಸಲಾದ ಸ್ಪೋರ್ಟ್ಸ್ ಸ್ಪೆಕ್ಟ್ರಾ 2026 ಕಾರ್ಯಕ್ರಮವು ನಾಂಗಾಲ ಗ್ರಾಮದಲ್ಲಿರುವ ಎಲ್. ಎಸ್. ಎ. ಯ ನೂತನ ಕ್ಯಾಂಪಸ್ ನಲ್ಲಿ ಜರುಗಿತು. ಕ್ರೀಡಾ ದಿನಾಚರಣೆಗೆ ಮುಖ್ಯ ಅತಿಥಿಯಾಗಿ ಆಗಮಿಸಿ ಕ್ರೀಡಾ ಜ್ಯೋತಿಯನ್ನು ಬೆಳಗಿಸಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಡಿವೈಎಸ್‌ಪಿ ಮಹೇಶ್ ಕುಮಾರ್ […]
ಮಡಿಕೇರಿ: ಶ್ರದ್ಧಾಭಕ್ತಿಯಿಂದ ಜರುಗಿದ ಹುತಾತ್ಮ ದಿನಾಚರಣೆ

ಜಿಲ್ಲಾಡಳಿತ, ನಗರಸಭೆ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಸರ್ವೋದಯ ಸಮಿತಿ ವತಿಯಿಂದ ‘ಹುತಾತ್ಮರ ದಿನಾಚರಣೆ’ಯು ನಗರದಲ್ಲಿ ಶುಕ್ರವಾರ ಶ್ರದ್ಧಾಭಕ್ತಿಯಿಂದ ಜರುಗಿತು. ನಗರದ ಜಿಲ್ಲಾಡಳಿತ ಭವನದ ಜಿಲ್ಲಾ ಖಜಾನೆಯಲ್ಲಿರಿಸಲಾಗಿದ್ದ ಮಹಾತ್ಮ ಗಾಂಧೀಜಿಯವರ ‘ಚಿತಾಭಸ್ಮ’ವನ್ನು ಹೊರತೆಗೆದು ಪುಷ್ಪಮಾಲೆಗಳಿಂದ ಶೃಂಗರಿಸಿ ಗೌರವ ಸಮರ್ಪಿಸಲಾಯಿತು. ಜಿಲ್ಲಾಡಳಿತ ಹಾಗೂ ಸರ್ವೋದಯ ಸಮಿತಿ ಸದಸ್ಯರ ನೇತೃತ್ವದಲ್ಲಿ ಪೊಲೀಸ್ ವಾದ್ಯದೊಂದಿಗೆ ನಗರದ ಮಂಗೇರಿರ ಮುತ್ತಣ್ಣ ಹಾಗೂ ಜನರಲ್ ಕೆ.ಎಸ್.ತಿಮ್ಮಯ್ಯ ವೃತ್ತದ ಮುಖ್ಯ ರಸ್ತೆ ಮೂಲಕ ಗಾಂಧೀಜಿಯವರ ಚಿತಾಭಸ್ಮವನ್ನು ಕೊಂಡೊಯ್ದು ಗಾಂಧಿ ಮಂಟಪ ಬಳಿ ಇರಿಸಿ ಪೊಲೀಸ್ […]
Power Cut: ನಾಳೆ ಕೊಡಗಿನಲ್ಲಿ ಎಲ್ಲೆಲ್ಲಿ ಕರೆಂಟ್ ಇರಲ್ಲ?

66/11 ಕೆ.ವಿ ಪೊನ್ನಂಪೇಟೆ ವಿದ್ಯುತ್ ವಿತರಣಾ ಉಪ ಕೇಂದ್ರದಲ್ಲಿ ನೂತನ ಬ್ರೇಕರ್‍ಗಳ ನಿರ್ವಹಣೆ ಕಾಮಗಾರಿ ಕೈಗೆತ್ತಿಕೊಳ್ಳುತ್ತಿರುವುದರಿಂದ, ಜನವರಿ, 30 ರಂದು ಬೆಳಗ್ಗೆ 10 ರಿಂದ ಸಂಜೆ 6 ಗಂಟೆ ವರೆಗೆ ಪೊನ್ನಂಪೇಟೆ, ಗೋಣಿಕೊಪ್ಪ, ತಿತಿಮತಿ, ಹಾತೂರು, ಅತ್ತೂರು, ಕಾನೂರು, ಬಾಳೆಲೆ, ರಾಜಪುರ, ದೇವನೂರು, ಮಲ್ಲೂರು, ಕಿರುಗೂರು, ವಡ್ಡರಮಾಡು, ಮಾಯಮುಡಿ, ಸುಳುಗೋಡು, ಧನುಗಾಲ, ಕಾರ್ಮಾಡು, ಕೊಟ್ಟಗೇರಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ರಾಮಚಂದ್ರ […]
ಹೆಗ್ಗಳ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸಂಭ್ರಮದ ಗಣರಾಜ್ಯೋತ್ಸವ

ವಿರಾಜಪೇಟೆ: ಸಮೀಪದ ಹೆಗ್ಗಳ ಗ್ರಾಮದಲ್ಲಿರುವ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಗಣರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಎಸ್ ಡಿ ಎಂ ಸಿ ಸದಸ್ಯರಾದ ವಿನೋದ್ ಟಿ. ಆರ್. ರವರು ಧ್ವಜಾರೋಹಣವನ್ನು ನೆರವೇರಿಸಿದರು. ಈ ಸಂದರ್ಭದಲ್ಲಿ ಸಂವಿಧಾನದ ಪ್ರಸ್ತಾವನೆಯ ಪೂರ್ವ ಪೀಠಿಕೆಯ ಪ್ರತಿಜ್ಞೆಯನ್ನು ಸ್ವೀಕರಿಸಲಾಯಿತು.ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ವಿರಾಜಪೇಟೆಯ ಸಂತ ಅನ್ನಮ್ಮ ಪದವಿ ಕಾಲೇಜಿನ ಉಪನ್ಯಾಸಕರು ಹಾಗೂ ಎನ್ ಎಸ್ ಎಸ್ ಅಧಿಕಾರಿಗಳಾದ ಬಿ. ಎನ್. ಶಾಂತಿಭೂಷಣ್ ಬೋರ್ಕರ್ ರವರು ದಿನದ ಮಹತ್ವದ ಕುರಿತು ಮಾತನಾಡುತ್ತಾ ಭಾರತವು ವಿಶ್ವದಲ್ಲಿಯೇ […]
ಪ್ರೊ. ಬಸವರಾಜುಗೆ ಕನ್ನಡ ರತ್ನ ಪ್ರಶಸ್ತಿ

ವಿರಾಜಪೇಟೆ: ಶಿಕ್ಷಣ, ಸಾಹಿತ್ಯ ಕ್ಷೇತ್ರದಲ್ಲಿನ ಸೇವೆಯನ್ನು ಪರಿಗಣಿಸಿ ಪ್ರಾಧ್ಯಾಪಕ ಪ್ರೊ. ಬಸವರಾಜು ಕೆ ರವರಿಗೆ ಕನ್ನಡ ರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಡಾ. ಜೀಶಂಪ ಸಾಹಿತ್ಯ ವೇದಿಕೆ, ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಫಿಲಂಸ್ ಕನ್ನಂಬಾಡಿ ದಿನಪತ್ರಿಕೆ ಮಂಡ್ಯ ಇವರ ಸಂಯುಕ್ತ ಆಶ್ರಯದಲ್ಲಿ ಸಂಕ್ರಾಂತಿ ಅಂಗವಾಗಿ ಸುಗ್ಗಿ ಸಂಭ್ರಮ ದ ಪ್ರಯುಕ್ತ 15 ನೇ ಅಖಿಲ ಕರ್ನಾಟಕ ಕನ್ನಡ ಅಕ್ಷರ ಜಾತ್ರೆ ಹಾಗೂ ಪ್ರಶಸ್ತಿ ಪ್ರಧಾನ ಸಮಾರಂಭವು ಇತ್ತೀಚೆಗೆ ಮಂಡ್ಯದ ಕೆ. ವಿ. ಶಂಕರಗೌಡ ಶತಮಾನೋತ್ಸವ ಭವನ […]
ಲಾವಣ್ಯ ಬೋರ್ಕರ್‌ಗೆ ಅನರ್ಘ್ಯ ರತ್ನ ರಾಷ್ಟ್ರೀಯ ಪ್ರಶಸ್ತಿ

ವಿರಾಜಪೇಟೆ: ವಿರಾಜಪೇಟೆಯ ಭರತನಾಟ್ಯ ಕಲಾವಿದೆ ಬಿ. ಎನ್ ಲಾವಣ್ಯ ಬೋರ್ಕರ್ ರವರಿಗೆ ಅನರ್ಘ್ಯ ರತ್ನ ರಾಷ್ಟ್ರೀಯ ಪ್ರಶಸ್ತಿಯನ್ನು ಪ್ರಧಾನ ಮಾಡಲಾಯಿತು.ವಿರಾಜಪೇಟೆಯ ನಾಟ್ಯ ಮಯೂರಿ ನೃತ್ಯ ಶಾಲೆ ಟ್ರಸ್ಟ್ ಹಾಗೂ ಹಾಸನ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ನ ಸಹಯೋಗದಲ್ಲಿ ಸ್ವಾಮಿ ವಿವೇಕಾನಂದ ಜಯಂತಿ ಉತ್ಸವದ ಪ್ರಯುಕ್ತ ಜರುಗಿದ ಸಮಾರಂಭದಲ್ಲಿ ಲಾವಣ್ಯ ಬೋರ್ಕರ್ ರವರ ಕಲಾ ಹಾಗೂ ಭರತನಾಟ್ಯದಲ್ಲಿನ ಸಾಧನೆಯನ್ನು ಪರಿಗಣಿಸಿ ಈ ಪ್ರಶಸ್ತಿಯನ್ನು ನೀಡಲಾಗಿದೆ. ಇತ್ತೀಚೆಗೆ ಹಾಸನದ ಡಾ. ಬಿ. ಆರ್. ಅಂಬೇಡ್ಕರ್ ಭವನದಲ್ಲಿ ಜರುಗಿದ ಸಮಾರಂಭದಲ್ಲಿ […]
ಕೂರ್ಗ್ ವ್ಯಾಲಿ ಶಾಲೆಯ ರಜತ ಮಹೋತ್ಸವ ಕಾರ್ಯಕ್ರಮ

ವಿರಾಜಪೇಟೆ: ಮಕ್ಕಳಿಗೆ ಉತ್ತಮವಾದ ಶಿಕ್ಷಣವನ್ನು ನೀಡಬೇಕು. ಜೊತೆಗೆ ಪೋಷಕರು ಮಕ್ಕಳಿಗೆ ಸಂಸ್ಕಾರವನ್ನು ಕಲಿಸುವುದರ ಮೂಲಕ ಅವರನ್ನು ಉತ್ತಮ ಪ್ರಜೆಗಳನ್ನಾಗಿ ರೂಪಿಸಿ ಎಂದು ಅರಮೇರಿ ಕಳಂಚೇರಿ ಮಠದ ಮಠಾಧಿಪತಿಗಳಾದ ಶ್ರೀ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಯವರು ಹೇಳಿದರು. ಅವರು ವಿರಾಜಪೇಟೆಯ ತಾಲೂಕು ಮೈದಾನದಲ್ಲಿ ಜರುಗಿದ ಪಟ್ಟಣದ ಕೂರ್ಗ್ ವ್ಯಾಲಿ ಶಾಲೆಯ 25 ನೇ ವರ್ಷದ ರಜತ ಮಹೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಕೂರ್ಗ್ ವ್ಯಾಲಿ ವಿದ್ಯಾಸಂಸ್ಥೆಯು 25 ವರ್ಷಗಳನ್ನು ಪೂರೈಸಿದ್ದು ಉತ್ತಮ ಪ್ರಜೆಗಳನ್ನು ಸಮಾಜಕ್ಕೆ ಕೊಡುಗೆಯಾಗಿ ನೀಡಿದೆ. ಈ […]
ವಾಲಿಬಾಲ್ ಕ್ರೀಡೆಯ ಉತ್ತೇಜನಕ್ಕೆ ಯೋಜನೆ ರೂಪಿಸಿ: ಶಾಸಕ ಪೊನ್ನಣ್ಣ

ಪೊನ್ನಂಪೇಟೆ: ಕೊಡಗು ಜಿಲ್ಲೆಯಲ್ಲಿ ಸಾಕಷ್ಟು ವಾಲಿಬಾಲ್ ಕ್ರೀಡಾಪಟುಗಳಿದ್ದಾರೆ. ವಾಲಿಬಾಲ್ ಕ್ರೀಡೆಗೆ ಜಿಲ್ಲೆಯ ಕ್ರೀಡಾಪಟುಗಳ ಕೊಡುಗೆ ಅಪಾರವಾಗಿದೆ. ಆದ್ದರಿಂದ ಜಿಲ್ಲೆಯಲ್ಲಿ ವಾಲಿಬಾಲ್ ಕ್ರೀಡೆಯನ್ನು ಮತ್ತಷ್ಟು ಉತ್ತೇಜಿಸಲು ಸೂಕ್ತವಾದ ಕಾರ್ಯ ಯೋಜನೆಗಳನ್ನು ರೂಪಿಸುವಂತೆ ವಿರಾಜಪೇಟೆ ಶಾಸಕರು ಮತ್ತು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಸಲಹೆ ನೀಡಿದ್ದಾರೆ. ಕೊಡಗು ವಾಲಿಬಾಲ್ ಅಸೋಸಿಯೇಷನ್ ವತಿಯಿಂದ ವಿರಾಜಪೇಟೆಯ ಅಂಬೇಡ್ಕರ್ ಭವನದ ಸಭಾಂಗಣದಲ್ಲಿ ಮಂಗಳವಾರದಂದು ನಡೆದ ವಿಶೇಷ ಸಭೆಯಲ್ಲಿ ಪಾಲ್ಗೊಂಡು ವಿವಿಧ ಬೇಡಿಕೆಗಳನ್ನುೊಳಗೊಂಡ ಸಂಸ್ಥೆಯ ಮನವಿ ಪತ್ರವನ್ನು ಸ್ವೀಕರಿಸಿ ಮಾತನಾಡಿದ ಅವರು, ಕೊಡಗಿನಲ್ಲಿ […]