ಬೇಟೋಳಿ ಪುದುಪಾಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಶ್ರದ್ಧಾ ಭಕ್ತಿಯಿಂದ ಜರುಗಿದ ಶ್ರೀ ಅಯ್ಯಪ್ಪ ಮಹೋತ್ಸವ

ವಿರಾಜಪೇಟೆ: ಸಮೀಪದ ಬೇಟೋಳಿ ರಾಮನಗರದಲ್ಲಿರುವ ಪುದುಪಾಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಶ್ರೀ ಅಯ್ಯಪ್ಪ ಮಹೋತ್ಸವ ಹಾಗೂ ಮಕರ ಜ್ಯೋತಿ ಪೂಜಾ ಕಾರ್ಯಕ್ರಮವನ್ನು ಶ್ರದ್ಧಾ ಭಕ್ತಿಯಿಂದ ನೆರವೇರಿಸಲಾಯಿತು. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರುವಿನ ಅರ್ಚಕರಾದ ಪ್ರವೀಣ್ ಭಟ್ ರವರು ಪೂಜಾ ಕಾರ್ಯಕ್ರಮವನ್ನು ನೆರವೇರಿಸಿದರು. ಶ್ರೀ ಅಯ್ಯಪ್ಪ ಉತ್ಸವದ ಪ್ರಯುಕ್ತ ಬೆಳಿಗ್ಗೆ ದೇವಸ್ಥಾನದಲ್ಲಿ ದೇವತಾ ಪ್ರಾರ್ಥನೆಯನ್ನು ಮಾಡಲಾಯಿತು. ತದನಂತರ ಅರ್ಚಕರು ಗಣಪತಿ ಹೋಮವನ್ನು ನೆರವೇರಿಸಿದರು. ಶ್ರೀ ಅಯ್ಯಪ್ಪ ದೇವಸ್ಥಾನದ ಒಳ ಆವರಣದಲ್ಲಿರುವ ಶ್ರೀ ಮಹಾಗಣಪತಿ, ಶ್ರೀ ನಾಗ, ಶ್ರೀ […]
ಕೆಎಂಎ ವತಿಯಿಂದ ಡಾ. ಮಂತರ್ ಗೌಡರಿಗೆ ಸನ್ಮಾನ

ಪೊನ್ನಂಪೇಟೆ: ಕೊಡಗಿನ ಜಮ್ಮಾ ಹಿಡುವಳಿದಾರರನ್ನು ದಶಕಗಳದಿಂದ ಕಾಡುತ್ತಿದ್ದ ಜಮ್ಮಾ ಬಾಣೆ ಭೂಮಿಗೆ ಸಂಬಂಧಿಸಿದ ತಿದ್ದುಪಡಿ ವಿಧೇಯಕವನ್ನು ಕಳೆದ ಚಳಿಗಾಲದ ಅಧಿವೇಶನದಲ್ಲಿ ಮಂಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಮಡಿಕೇರಿ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಡಾ. ಮಂತರ್ ಗೌಡ ಅವರನ್ನು ಕೊಡವ ಮುಸ್ಲಿಂ ಅಸೋಸಿಯೇಷನ್ (ಕೆ.ಎಂ.ಎ.) ವತಿಯಿಂದ ಸನ್ಮಾನಿಸಿ ಕೃತಜ್ಞತೆ ಸಲ್ಲಿಸಲಾಯಿತು. ಕೊಡವ ಮುಸ್ಲಿಂ ಅಸೋಸಿಯೇಷನ್ (ಕೆ.ಎಂ.ಎ.) ನ ಮಾನ್ಯ ಅಧ್ಯಕ್ಷರಾದ ದುದ್ದಿಯಂಡ ಹೆಚ್. ಸೂಫಿ ಹಾಜಿಯವರ ನೇತೃತ್ವದ ನಿಯೋಗ ಮಂಗಳವಾರದಂದು ಶಾಸಕರ ಸೋಮವಾರಪೇಟೆಯ ನಿವಾಸದಲ್ಲಿ ಭೇಟಿ ಮಾಡಿ […]
ಜಮ್ಮಾಬಾಣೆ ಮಸೂದೆ ಬಗ್ಗೆ ಅಪಪ್ರಚಾರ ಬೇಡ : ಬಿಜೆಪಿ ಮಾಜಿ ಶಾಸಕರ ಅಪಸ್ವರಕ್ಕೆ ಪೊನ್ನಣ್ಣ ಬೇಸರ ಅಸಮಾಧಾನ

ಕೊಡಗಿನ ಜಮ್ಮಾಬಾಣೆ ಸಮಸ್ಯೆ ನಿವಾರಣೆಗೆ ಕರ್ನಾಟಕ ರಾಜ್ಯ ಕಾಂಗ್ರೆಸ್ ಸರ್ಕಾರ ಅಂಗೀಕಾರ ಮಾಡಿರುವ ಕರ್ನಾಟಕ ಭೂಕಂದಾಯ ತಿದ್ದುಪಡಿ ಮಸೂದೆ-2025ರ ಕುರಿತಾಗಿ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ವಿವರಣೆ ನೀಡಲು ಪತ್ರಿಕಾಗೋಷ್ಠಿ ನಡೆಸಿದರು. ಜನರ ಸಮಸ್ಯೆ ಬಗೆಹರಿಸಲು ತಾವು ಕೈಗೊಂಡ ಹಲವಾರು ನಡೆಗಳ ಬಗ್ಗೆ ವಿವರಿಸುತ್ತಾ, ಇದರಿಂದ ಕೊಡಗಿನ ಜನತೆಗೆ ಆಗುವ ಅನುಕೂಲಗಳ ಬಗ್ಗೆ ಮಾಹಿತಿ ನೀಡಿದರು. ಜಮ್ಮ ಬಾಣೆ ಸಮಸ್ಯೆ ನಿವಾರಿಸುವಲ್ಲಿ ತಾವು ಕೈಗೊಂಡ ಶ್ರಮದ […]
ವ್ಯಸನಕ್ಕೆ ದಾಸರಾಗುವುದು ಬಲು ಸುಲಭ, ವ್ಯಸನ ಮುಕ್ತರಾಗುವುದು ಬಲು ಕಷ್ಟ: ಡಾ. ಚೇಂದಿರ ಬೋಪಣ್ಣ

ಇಂದಿನ ಸಮಾಜದಲ್ಲಿ ತಂಬಾಕು ಸೇವನೆ ಪ್ರತಿಷ್ಠೆ ಹಾಗೂ ಗೌರವದ ಪ್ರತಿಕವೆಂಬಂತೆ ಬಿಂಬಿತವಾಗುತ್ತಿರುದರಿಂದ ಯುವ ಜನತೆ ಹೆಚ್ಚಾಗಿ ತಂಬಾಕು ಉತ್ಪನ್ನಗಳ ಕಡೆ ಆಕರ್ಷಿತರಾಗುತ್ತಿರುವುದು ಕಳವಳಕಾರಿ ವಿಚಾರ ಎಂದು ಆಶೀರ್ವಾದ ಆಸ್ಪತ್ರೆಯ ವೈದ್ಯರಾದ ಡಾ. ಚೇಂದಿರ ಬೋಪಣ್ಣ ಅಭಿಪ್ರಾಯ ವ್ಯಕ್ತಪಡಿಸಿದರು. ಶ್ರೀ ಮುತ್ತಪ್ಪನ್ ಮಲೆಯಾಳಿ ಸಮಾಜ ವತಿಯಿಂದ ವಿರಾಜಪೇಟೆ ಸಂತ ಅನ್ನಮ್ಮ ಶಾಲೆಯ ಸಭಾಭವನದಲ್ಲಿ ಶನಿವಾರ ನಡೆಸಲಾಗ ತಂಬಾಕು ಮುಕ್ತ ಸಮಾಜ ಜಾಗೃತಿ ಕಾರ್ಯಕ್ರಮ ಹಾಗೂ ಕೃತಕ ಕಾಲು ಜೋಡಣೆ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ […]
ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ

ಮಡಿಕೇರಿ:- ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ 9 ಕೋಟಿ ರೂ. ವೆಚ್ಚದಲ್ಲಿ ಸಿಂಥಟಿಕ್ ಅಥ್ಲೆಟಿಕ್ ಟ್ರ್ಯಾಕ್ ನಿರ್ಮಾಣಕ್ಕೆ ಸರ್ಕಾರದಿಂದ ಮಂಜೂರಾತಿ ದೊರೆತಿದ್ದು, ಈಗಾಗಲೇ 20 ಲಕ್ಷ ರೂ. ಬಿಡುಗಡೆಯಾಗಿದೆ ಎಂದು ಶಾಸಕರಾದ ಡಾ.ಮಂತರ್ ಗೌಡ ಅವರು ತಿಳಿಸಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ರಾಜ್ಯ ಸರ್ಕಾರಿ ನೌಕರರ ಸಂಘ, ಜಿಲ್ಲಾ ಶಾಖೆ ಇವರ ಸಂಯುಕ್ತ ಆಶ್ರಯದಲ್ಲಿ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಕೊಡಗು ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ […]
ಕೊಡವ ಮುಸ್ಲಿಮರ ಮಾತೃಭಾಷೆಯ ನಿಘಂಟು ಹೊರತರಲು ನಿರ್ಧಾರ

ಪೊನ್ನಂಪೇಟೆ: ಕೊಡಗಿನ ಮೂಲ ನಿವಾಸಿ ಸಮುದಾಯಗಳಲ್ಲಿ ಒಂದಾಗಿರುವ ಕೊಡವ ಮುಸ್ಲಿಮರ ಮಾತೃಭಾಷೆಯ ಎಲ್ಲಾ ಪದಗಳನ್ನು ಸಂಗ್ರಹಿಸಿ ನಿಘಂಟನ್ನು (ಶಬ್ದ ಭಂಡಾರ) ಹೊರತರಲು ಕೊಡವ ಮುಸ್ಲಿಂ ಅಸೋಸಿಯೇಷನ್ (ಕೆಎಂಎ) ನಿರ್ಧರಿಸಿದೆ. ಕೆಎಂಎ ಅಧ್ಯಕ್ಷರಾದ ದುದ್ದಿಯಂಡ ಹೆಚ್. ಸೂಫಿ ಹಾಜಿ ಅವರ ಅಧ್ಯಕ್ಷತೆಯಲ್ಲಿ ವಿರಾಜಪೇಟೆಯಲ್ಲಿರುವ ಸಂಸ್ಥೆಯ ಪ್ರಧಾನ ಕಚೇರಿ ಸಭಾಂಗಣದಲ್ಲಿ ನಡೆದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ಮಹತ್ವದ ತೀರ್ಮಾನ ತೆಗೆದುಕೊಳ್ಳಲಾಗಿದೆ. ಕೊಡವ ಮುಸ್ಲಿಮರ ಮಾತೃಭಾಷೆಯಾದ ‘ಪಯಕ’ದ ಬೆಳವಣಿಗೆ ಮತ್ತು ದಾಖಲೀಕರಣದ ನಿಟ್ಟಿನಲ್ಲಿ ಇದೊಂದು ಮಹತ್ವದ ಯೋಜನೆಯಾಗಿದ್ದು, ಇದಕ್ಕಾಗಿ ಸಮುದಾಯದ […]
ಬೆಟ್ಟಗೇರಿಯಲ್ಲಿ ಎ.ಎಸ್.ಪೊನ್ನಣ್ಣ ರಸ್ತೆ ಕಾಮಗಾರಿಗೆ ಚಾಲನೆ

ಮಡಿಕೇರಿ:- ತಾಲೂಕಿನ ಬೆಟ್ಟಗೇರಿಯಲ್ಲಿ ಶಾಸಕರ ವಿಶೇಷ ಅನುದಾನದಲ್ಲಿ ನಿರ್ಮಾಣವಾಗುತ್ತಿರುವ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ ಅವರು ಭೂಮಿ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು. ಕೆಆರ್‍ಐಡಿಎಲ್ ಸಂಸ್ಥೆ ಮೂಲಕ ವಿರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 40 ಕೋಟಿ ವೆಚ್ಚದಲ್ಲಿ ಒಟ್ಟು 252 ಕಾಮಗಾರಿಗಳನ್ನು ಎ.ಎಸ್.ಪೊನ್ನಣ್ಣ ಅವರು ಜನರ ಕೋರಿಕೆಯ ಮೇರೆಗೆ ಗುರುತಿಸಿ ಅನುದಾನದ ಹಂಚಿಕೆ ಮಾಡಿದ್ದಾರೆ. ಕ್ಷೇತ್ರದ ಕಟ್ಟಕಡೆಯ ವ್ಯಕ್ತಿಗೂ ಮೂಲಭೂತ ವ್ಯವಸ್ಥೆ ದೊರಕಬೇಕು ಎಂಬ […]
ನಿವೃತ್ತ ಪ್ರಾಂಶುಪಾಲೆ ತಾತಂಡ ಜ್ಯೋತಿ ಪ್ರಕಾಶ್ ರವರಿಗೆ ಬೀಳ್ಕೊಡುಗೆ ಸಮಾರಂಭ

ವಿರಾಜಪೇಟೆ: ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಜೀವಶಾಸ್ತ್ರ ಉಪನ್ಯಾಸಕಿಯಾಗಿ ಹಾಗೂ ಕಾಲೇಜಿನ ಪ್ರಾಂಶುಪಾಲೆಯಾಗಿ ಸುದೀರ್ಘ ಸೇವೆಯನ್ನು ಸಲ್ಲಿಸಿ ನಿವೃತ್ತರಾದ ಪ್ರಾಂಶುಪಾಲೆ ತಾತಂಡ ಜ್ಯೋತಿ ಪ್ರಕಾಶ್ ರವರನ್ನು ಕಾಲೇಜಿನ ವತಿಯಿಂದ ಬೀಳ್ಕೊಡುಗೆಯನ್ನು ನೀಡಿ ಸನ್ಮಾನಿಸಿ ಗೌರವಿಸಲಾಯಿತು. ಈ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾದ ಚಿಲ್ಲವಂಡ ಕಾವೇರಪ್ಪರವರು ಮಾತನಾಡುತ್ತಾ ಪ್ರಾಂಶುಪಾಲರ ಶಿಸ್ತು ಹಾಗೂ ಕರ್ತವ್ಯ ನಿಷ್ಠೆ ಸಂಸ್ಥೆಯ ಬೆಳವಣಿಗೆಗೆ ಭದ್ರ ಬುನಾದಿಯನ್ನು ಹಾಕಿದೆ. ಅವರ ಮಾರ್ಗದರ್ಶನದಲ್ಲಿ ಸಾವಿರಾರು ವಿದ್ಯಾರ್ಥಿಗಳು ಉತ್ತಮ ಭವಿಷ್ಯವನ್ನು ಕಂಡುಕೊಂಡಿದ್ದಾರೆ ಎಂದು […]
ಬಯವಂಡ ರಿಹಾನ್ ಮುತ್ತಣ್ಣಗೆ ತ.ರಾ.ಸು. ಪ್ರಶಸ್ತಿ

ಪೊನ್ನಂಪೇಟೆ: ಬೆಂಗಳೂರಿನ ಜನ್ಮ ಭೂಮಿ ಸಾಂಸ್ಕೃತಿಕ ನಾಗರೀಕ ವೇದಿಕೆಯ ವತಿಯಿಂದ ದ್ವಿತೀಯ ಪಿ.ಯು. ವಾರ್ಷಿಕ ಪರೀಕ್ಷೆಯಲ್ಲಿ ಕನ್ನಡದಲ್ಲಿ ಅತಿ ಹೆಚ್ಚು ಅಂಕ ಗಳಿಸಿರುವ ಸಾಧಕ ವಿದ್ಯಾರ್ಥಿಗಳಿಗೆ ನೀಡುವ ತ.ರಾ.ಸು. ಪ್ರಶಸ್ತಿಯನ್ನು ಕೊಡಗಿನ ಬಯವಂಡ ರಿಹಾನ್ ಮುತ್ತಣ್ಣ ಪಡೆದುಕೊಂಡಿದ್ದಾರೆ. ಕಳೆದ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ಕಾರಣ ಈ ಪ್ರಶಸ್ತಿಗೆ ರಿಹಾನ್ ಮುತ್ತಣ್ಣ ಅವರನ್ನು ಆಯ್ಕೆಗೊಳಿಸಲಾಗಿತ್ತು. ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಶ್ರೀ ಕೃಷ್ಣದೇವರಾಯ ಕಲಾಮಂದಿರದಲ್ಲಿ ಮಂಗಳವಾರ ನಡೆದ ಕಾರ್ಯಕ್ರಮದಲ್ಲಿ ರಿಹಾನ್ ಮುತ್ತಣ್ಣ ಅವರಿಗೆ ಈ […]
ಪೊನ್ನಂಪೇಟೆಯಲ್ಲಿ ಪೌರಕಾರ್ಮಿಕರ ದಿನಾಚರಣೆ

ಪೊನ್ನಂಪೇಟೆ: ಇಲ್ಲಿನ ಗ್ರಾಮ ಪಂಚಾಯಿತಿಯು ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೇರಿದ ನಂತರ ಇದೇ ಮೊದಲ ಬಾರಿಗೆ ಪೊನ್ನಂಪೇಟೆ ಪಟ್ಟಣ ಪಂಚಾಯಿತಿ ವತಿಯಿಂದ ಪೌರ ಕಾರ್ಮಿಕರ ದಿನಾಚರಣೆಯನ್ನು ಆಚರಿಸಲಾಯಿತು. ಪಟ್ಟಣ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅಣ್ಣೀರ ಹರೀಶ್, ಇಡೀ ಪಟ್ಟಣ ಸ್ವಚ್ಛಂದ ಮತ್ತು ಸುಂದರವಾಗಿ ಕಾಣಬೇಕಾದರೆ ಆಯಾ ವ್ಯಾಪ್ತಿಯ ಪೌರಕಾರ್ಮಿಕರ ಕ್ರಮವನ್ನು ಅವಲಂಬಿಸಿದೆ. ಬೆಳಗಿನ ಜಾವ ಇವರು ಮಾಡುವ ಸ್ವಚ್ಛತಾ ಕಾಯಕವೇ ಆರೋಗ್ಯ ಪೂರ್ಣ ಪಟ್ಟಣ ನಿರ್ಮಾಣಕ್ಕೆ ಪ್ರಮುಖ ಕಾರಣವಾಗಿದೆ. ತಮ್ಮ ಆರೋಗ್ಯ ಲೆಕ್ಕಿಸದೆ ಪಟ್ಟಣದ […]