ಡಿ. 21ರಿಂದ ವಿ.ಬಾಡಗದಲ್ಲಿ ಕೊಡವ ಕೌಟುಂಬಿಕ ಹಾಕಿ ಪಂದ್ಯಾವಳಿ

ಪೊನ್ನಂಪೇಟೆ: ಬಿಟ್ಟಂಗಾಲ ಸಮೀಪದ ವಿ. ಬಾಡಗದ ಹೈ ಪ್ಲೈಯರ್ಸ್ ತಂಡದ ವತಿಯಿಂದ ವಿಯೋಮನ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಅವರ ಸಹ ಪ್ರಾಯೋಜಕತ್ವದಲ್ಲಿ 4ನೇ ವರ್ಷದ ಕೊಡವ ಕೌಟುಂಬಿಕ ಹಾಕಿ ಪಂದ್ಯಾವಳಿ ಹೈಪ್ಲೈಯರ್ಸ್ ಕಪ್-2025 ಅನ್ನು ಇದೇ ಡಿ.21ರಿಂದ 25ರವರೆಗೆ ಆಯೋಜಿಸಲಾಗಿದೆ. ಬಿಟ್ಟಂಗಾಲ, ಬಿ.ಶೆಟ್ಟಿಗೇರಿ ಮತ್ತು ಹಾತೂರು ಗ್ರಾ. ಪಂ. ವ್ಯಾಪ್ತಿಯಲ್ಲಿ ಐನ್ ಮನೆ ಹೊಂದಿರುವ ಕೊಡವ ಕುಟುಂಬಗಳ ತಂಡಗಳಿಗಾಗಿ ಈ ಹಾಕಿ ಪಂದ್ಯಾವಳಿ ಏರ್ಪಡಿಸಲಾಗಿದೆ ಎಂದು ವಿ. ಬಾಡಗ ಹೈಪ್ಲೈಯರ್ಸ್ ತಂಡದ ಅಧ್ಯಕ್ಷರಾದ ಅಮ್ಮಣಿಚಂಡ ರಂಜು ಪೂಣಚ್ಚ […]

ಬೀದಿ ಶ್ವಾನಗಳ ಸ್ಥಳಾಂತರ: ನಗರಸಭೆಯ ಜೊತೆ ಕೈಜೋಡಿಸಲು ಮನವಿ

ಮಡಿಕೇರಿ ನಗರ ಸ್ಥಳೀಯ ಸಂಸ್ಥೆಯ ವತಿಯಿಂದ ನಗರದ ಸಾರ್ವಜನಿಕ ಆರೋಗ್ಯ, ಸುರಕ್ಷತೆ ಹಾಗೂ ಪ್ರಾಣಿ ಕಲ್ಯಾಣವನ್ನು ಮನನದಲ್ಲಿಟ್ಟುಕೊಂಡು, ಪ್ರಸ್ತುತ ನಗರ ವ್ಯಾಪ್ತಿಯಲ್ಲಿ ಖಾಸಗಿ ಹಾಗು ಸರ್ಕಾರಿ ಶಿಕ್ಷಣ ಸಂಸ್ಥೆಗಳು, ಆಸ್ಪತ್ರೆಗಳು, ಕ್ರೀಡಾ ಸಂಕೀರ್ಣಗಳು, ಬಸ್ ನಿಲ್ದಾಣಗಳ ಆವರಣಗಳಲ್ಲಿ ಇರುವ ಬೀದಿ ನಾಯಿಗಳನ್ನು ಆಶ್ರಯ ಕೇಂದ್ರಗಳಿಗೆ ಸ್ಥಳಾಂತರಿಸುವ ಕಾರ್ಯವನ್ನು ಮಡಿಕೇರಿ ನಗರಸಭೆ ಕೈಗೊಂಡಿದೆ. ಈ ಕಾರ್ಯಕ್ರಮದ ಸತತ ಮತ್ತು ಜವಾಬ್ದರಿಯುತ ಎನ್‍ಜಿಒ ಸಂಸ್ಥೆಗಳ ಸಹಕಾರ ಅತ್ಯಗತ್ಯವಾಗಿದ್ದು, ಮಡಿಕೇರಿ ನಗರಸಭೆಯೊಂದಿಗೆ ಸಹಭಾಗಿತ್ವಕ್ಕಾಗಿ ವಿನಂತಿಸುತ್ತೇವೆ. ಈ ಆಶ್ರಯ ಕೇಂದ್ರಗಳಿಗೆ ಸ್ಥಳಾಂತರ ಗೊಂಡ […]

ನಿಮ್ಮ ಹಣ ನಿಮ್ಮ ಹಕ್ಕು ಜಾಗೃತಿ ಶಿಬಿರಕ್ಕೆ ಜಿಲ್ಲಾಧಿಕಾರಿ ಚಾಲನೆ

ದೀರ್ಘ ಕಾಲದಿಂದ ಬ್ಯಾಂಕ್‍ನಲ್ಲಿರುವ ತಮ್ಮ ಹಣ ಪಡೆಯದೆ ಉಳಿದಿರುವ ಠೇವಣಿ, ವಿಮಾ ಕಂತುಗಳನ್ನು ಅವುಗಳ ಮಾಲೀಕರು ಅಥವಾ ಕಾನೂನುಬದ್ಧ ವಾರಸುದಾರರು ಹಣವನ್ನು ವಾಪಸ್ಸು ಪಡೆಯುವ ಸಂಬಂಧ ‘ನಿಮ್ಮ ಹಣ ನಿಮ್ಮ ಹಕ್ಕು’ ಜಾಗೃತಿ ಶಿಬಿರಕ್ಕೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಸೋಮವಾರ ಚಾಲನೆ ನೀಡಿದರು. ನಗರದ ಜಿ.ಪಂ.ಸಭಾಂಗಣದಲ್ಲಿ ನಡೆದ ಜಾಗೃತಿ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ವಿವಿಧ ಕಾರಣಗಳಿಂದ ಬ್ಯಾಂಕ್‍ನಲ್ಲಿ ದೀರ್ಘಕಾಲದಿಂದ ಇರುವ ಹಣ ಹಾಗೂ ವಿಮಾ ಕಂತನ್ನು ಪಡೆಯದಿರುವ ಗ್ರಾಹಕರಿಗೆ ಮಾಹಿತಿ ನೀಡಿ ಹಣವನ್ನು […]

Power Cut: ನಾಳೆ ಕೊಡಗಿನ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ!

Kodagu power cut

ಶನಿವಾರಸಂತೆಯಲ್ಲಿ ವಿದ್ಯುತ್ ವಿತರಣಾ ಉಪ ಕೇಂದ್ರದಲ್ಲಿ ಮೂರನೇ ತ್ರೈಮಾಸಿಕ ಅವಧಿಯ ನಿರ್ವಹಣೆ ಕಾಮಗಾರಿಯನ್ನು ಕೈಗೆತ್ತಿಕೊಂಡಿರುವುದರಿಂದ ಡಿಸೆಂಬರ್, 10 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಶನಿವಾರಸಂತೆ ಶಾಖೆಯ ಶನಿವಾರಸಂತೆ ಪಟ್ಟಣ, ಅಪ್ಪ್ಡಶೆಟ್ಟಳ್ಳಿ, ಮಾದ್ರೆ, ಚಿಕ್ಕಕೊಳತ್ತೂರು, ದುಂಡಳ್ಳಿ, ಬೆಂಬಳೂರು, ಬಿಳಹ, ಹಂಡ್ಲಿ, ಕಿತ್ತೂರು, ಸಂಪಿಗೆದಳ, ಮಾದ್ರದಳ್ಳಿ, ಮಣಗಲಿ, ಗೌಡಳ್ಳಿ, ಬೀಟಿಕಟ್ಟೆ, ಶುಂಠಿ, ಶಾಂತ್ವೇರಿ, ಬಸವನಕೊಪ್ಪ, ಕೊಡ್ಲಿಪೇಟೆ ಶಾಖೆಯ ಮುಳ್ಳೂರು, ಗೋಪಾಲಪುರ, ಜಾಗೇನಹಳ್ಳಿ, ನಿಡ್ತ, ಚೌಡೇನಹಳ್ಳಿ, ದೊಡ್ಡಳ್ಳಿ, ಹರೆಹೊಸೂರು, ಕೊಡ್ಲಿಪೇಟೆ ಹೋಬಳಿ ವ್ಯಾಪ್ತಿಯ ಬೆಸೂರು ಪಂಚಾಯಿತಿ, ನೀರುಗುಂದ, […]

ವಿರಾಜಪೇಟೆಯ ಸಂತ ಅನ್ನಮ್ಮ ಪ್ರೌಢಶಾಲೆಯ NCC ವಿದ್ಯಾರ್ಥಿಗಳಿಂದ ಸೈಕಲ್ ಜಾಥಾ

ವಿರಾಜಪೇಟೆ : ಪಟ್ಟಣದ ಸಂತ ಅನ್ನಮ್ಮ ಪ್ರೌಢಶಾಲೆಯ ಎನ್‌ಸಿಸಿ ಘಟಕದ ಏರ್ ವಿಂಗ್ ಹಾಗೂ ಆರ್ಮಿ ವಿಂಗ್ ಗಳ ವತಿಯಿಂದ ಆರ್ಮಡ್ ಫೋರ್ಸ್ ಫ್ಲಾಗ್ ಡೇ ಯ ಪ್ರಯುಕ್ತ ಎಂಸಿಸಿ ವಿದ್ಯಾರ್ಥಿಗಳಿಂದಎಂಸಿಸಿ ವಿದ್ಯಾರ್ಥಿಗಳಿಂದ ಸೈಕಲ್ ಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಸಂತ ಅನ್ನಮ್ಮ ಪ್ರೌಢಶಾಲೆಯ ಬಳಿ ವಿದ್ಯಾಸಂಸ್ಥೆ ವ್ಯವಸ್ಥಾಪಕರು ಹಾಗೂ ಸಂತ ಅನ್ನಮ್ಮ ಚರ್ಚ್ ನ ಪ್ರಧಾನ ಗುರುಗಳಾದ ರೆ. ಫಾ. ಜೇಮ್ಸ್ ಡೊಮಿಮಿಕ್ ಹಾಗೂ ಎನ್‌ಸಿಸಿ ವಿಂಗ್ ಕಮಾಂಡರ್ ಆಫೀಸರ್ ಪ್ರವೀಣ್ ಕಾರ್ಯಪ್ಪ ರವರು ಈ ಜಾಥಾಕ್ಕೆ […]

ಕೋವಿ ಕೊಡವರ ಸಂಪ್ರದಾಯದ ಅವಿಭಾಜ್ಯ ಅಂಗ: ಅರುಣ್ ಮಾಚಯ್ಯ

ಪೊನ್ನಂಪೇಟೆ: ಪೂಜ್ಯನೀಯ ಸ್ಥಾನದಲ್ಲಿರುವ ಕೋವಿ ಕೊಡವರ ಪುರಾತನ ಸಂಪ್ರದಾಯದ ಅವಿಭಾಜ್ಯ ಅಂಗವಾಗಿದೆ. ಕೊಡವರ ಸಂಸ್ಕೃತಿ ಮತ್ತು ಪದ್ಧತಿ ಪರಂಪರೆಯಿಂದ ಕೋವಿಯನ್ನು ಹೊರತುಪಡಿಸಲು ಸಾಧ್ಯವಿಲ್ಲ ಎಂದು ಕರ್ನಾಟಕ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷರಾದ, ವಿಧಾನ ಪರಿಷತ್ತಿನ ಮಾಜಿ ಸದಸ್ಯ ಚೆಪ್ಪುಡಿರ ಎಸ್. ಅರುಣ್ ಮಾಚಯ್ಯ ಹೇಳಿದರು. ಮಾಯಾಮುಡಿಯ ರಿಮ್ ಫೈರ್ ಶೂಟರ್ಸ್ ಹಾಗೂ ಗೋಣಿಕೊಪ್ಪಲಿನ ಕಾವೇರಿ ಪೊಮ್ಮಕ್ಕಡ ಕೂಟದ ವತಿಯಿಂದ ಮಾಯಮುಡಿಯ ಸರ್ಕಾರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ನಡೆದ ತೆಂಗಿನಕಾಯಿಗೆ ಗುಂಡು ಹೊಡೆಯುವ ಮುಕ್ತ ಸ್ಪರ್ಧೆ ತೋಕ್ ನಮ್ಮೆ 2025 […]

ಕೊಡವ ಮುಸ್ಲಿಮರಿಂದ ಕಾಟ್ರಕೊಲ್ಲಿ ಪುತ್ತರಿ ಆಚರಣೆ

ಪೊನ್ನಂಪೇಟೆ: ಕೊಡವ ಮುಸ್ಲಿಂ ಅಸೋಸಿಯೇಷನ್ (ಕೆಎಂಎ) ವತಿಯಿಂದ ಪುತ್ತರಿ ಹಬ್ಬದ ಪ್ರಯುಕ್ತ ಸಾಂಪ್ರದಾಯಿಕ ಕದಿರು ತೆಗೆಯುವ ಕಾರ್ಯಕ್ರಮವನ್ನು ಗುರುವಾರ ರಾತ್ರಿ ನೂರಾರು ಕೊಡವ ಮುಸ್ಲಿಂ ಸಮುದಾಯದವರು ದ. ಕೊಡಗಿನ ಕಾಟ್ರಕೊಲ್ಲಿಯಲ್ಲಿ ಅಲ್ಲಿನ ಆಲೀರ ಕುಟುಂಬಸ್ಥರ ಆತಿಥ್ಯದಲ್ಲಿ ಅದ್ದೂರಿಯಾಗಿ ಆಚರಿಸಿದರು. ಕಾಟ್ರಕೊಲ್ಲಿಯ ಆಲೀರ ಎಂ. ಸಾದಲಿ ಅವರ ಗದ್ದೆಯಲ್ಲಿ ಈ ಸಾಂಪ್ರದಾಯಿಕ ಕದಿರು ತೆಗೆಯುವ ಕಾರ್ಯಕ್ರಮವನ್ನು ಕೆಎಂಎ ವತಿಯಿಂದ ಹಮ್ಮಿಕೊಳ್ಳಲಾಗಿತ್ತು. ಕೆ.ಎಂ.ಎ. ಅಧ್ಯಕ್ಷರಾದ ದುದ್ದಿಯಂಡ ಹೆಚ್. ಸೂಫಿ ಹಾಜಿಯವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಆಲೀರ ಕುಟುಂಬದ ಹಿರಿಯರಾದ […]

ವಾಹನ ಚಾಲನೆ ಕಲಿಸುವುದು ಮುಖ್ಯವಲ್ಲ ಸುರಕ್ಷಿತ ಚಾಲನೆಯನ್ನು ಕಲಿಸುವುದು ಅತಿ ಮುಖ್ಯ: ಎಸ್ ಟಿ ಸತೀಶ್

ವಾಹನ ಚಲಾವಣೆಯನ್ನು ಆಸಕ್ತಿಯಿಂದ ಪ್ರತಿಯೊಬ್ಬರು ಕಲಿಯುತ್ತಾರೆ. ಆದರೆ ಸುರಕ್ಷಿತ ಚಾಲನೆಯನ್ನು ಕಲಿಯುವುದು ಅತಿ ಮುಖ್ಯ ಎಂದು ಕೊಡಗು ಜಿಲ್ಲೆಯ ಪ್ರಾದೇಶಿಕ ಸಾರಿಗೆ ಅಧಿಕಾರಿ ಎಸ್ ಟಿ ಸತೀಶ್ ಅಭಿಪ್ರಾಯಪಟ್ಟರು. ವಿರಾಜಪೇಟೆ ಅಪ್ಪಯ್ಯಸ್ವಾಮಿ ರಸ್ತೆಯಲ್ಲಿರುವ ಲಾರ್ಡ್ಸ್ ಡ್ರೈವಿಂಗ್ ಶಾಲೆಯ 30ನೇ ವರ್ಷದ ವಾರ್ಷಿಕೋತ್ಸವ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದವರು ಸಮಾಜದಲ್ಲಿ ಬೆಳವಣಿಗೆಯನ್ನು ಹೊಂದಿದ ಪ್ರತಿಯೊಬ್ಬರಲ್ಲಿಯೂ ಸಮಾಜದ ಕುರಿತಾ ಕೃತಜ್ಞತಾ ಭಾವನೆ ಇರಬೇಕು. ಸೌಜನ್ಯಯುತ ಹಾಗೂ ಮನುಷ್ಯತ್ವದಿಂದ ನೀಡುವ ಕಲಿಕೆ ಇತರರಿಗೂ ಪ್ರೇರಣೆಯಾಗುತ್ತದೆ . ಅದರಂತೆ ವಿರಾಜಪೇಟೆ ಲಾರ್ಡ್ಸ್ ಡ್ರೈವಿಂಗ್ ಶಾಲೆಯು […]

ಸಿಎಂ ಸ್ಥಾನಕ್ಕಾಗಿ ಹಗ್ಗಜಗ್ಗಾಟ : ನನ್ನ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದ ಸಿದ್ದರಾಮಯ್ಯ

ಬೆಂಗಳೂರು : ನನ್ನ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ ಪಕ್ಷದ ವರಿಷ್ಠರು ಹೇಳಿದಂತೆ ನಡೆದುಕೊಳ್ಳುವುದಾಗಿ ಈಗಾಗಲೇ ತಿಳಿಸಿದ್ದೇನೆ. ಈಗಲೂ ಮತ್ತು ನಾಳೆಯೂ ಅದನ್ನೇ ಹೇಳುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪುನರುಚ್ಚರಿಸಿದರು. ಬೆಂಗಳೂರಿನಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಸುತ್ತಾ ಈ ಮಾತು ಹೇಳಿದರು. ಪಕ್ಷದ ವರಿಷ್ಠರು ನನಗೆ ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರಿಗೂ ಕರೆ ಮಾಡಿ ನೀವಿಬ್ಬರೂ ಭೇಟಿ ಮಾಡಿ ತಿಳಿಸಿರುತ್ತಾರೆ. ಹಾಗಾಗಿ ಅವರನ್ನು ನಾನು ಉಪಹಾರಕ್ಕಾಗಿ ಕರೆದಿದ್ದೇನೆ. ಹಾಗಾಗಿ ಅಲ್ಲಿ ಚರ್ಚೆ ಮಾಡುತ್ತೇವೆ. ಡಿ.ಕೆ ಶಿವಕುಮಾರ್ ಅವರು ಹೈಕಮಾಂಡ್ […]

ಕೊಡಗು ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ

ಮಡಿಕೇರಿ:- ಕೊಡಗು ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟಕ್ಕೆ ಜಿ.ಪಂ.ಸಿಇಒ ಆನಂದ ಪ್ರಕಾಶ್ ಮೀನಾ ಅವರು ನಗರದ ಡಿ.ಎ.ಆರ್.ಕವಾಯತು ಮೈದಾನದಲ್ಲಿ ಗುರುವಾರ ಚಾಲನೆ ನೀಡಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಬಿ.ಪಿ.ದಿನೇಶ್ ಕುಮಾರ್ ಇತರರು ಇದ್ದರು. ನವೆಂಬರ್, 29 ರಂದು ಸಂಜೆ 4 ಗಂಟೆಗೆ ನಗರದ ಡಿಎಆರ್ ಕವಾಯತು ಮೈದಾನದಲ್ಲಿ ಸಮಾರೋಪ ಸಮಾರಂಭ ನಡೆಯಲಿದೆ. ಮೈಸೂರು ದಕ್ಷಿಣ ವಲಯದ ಪೊಲೀಸ್ ಉಪ ಮಹಾ ನಿರೀಕ್ಷಕರಾದ ಡಾ.ಎಂ.ಬಿ.ಬೋರಲಿಂಗಯ್ಯ ಇತರರು ಪಾಲ್ಗೊಳ್ಳಲಿದ್ದಾರೆ.