ವಿರಾಜಪೇಟೆ : ರಾಜ್ಯ ಸರ್ಕಾರವು ರಾಜ್ಯಾದ್ಯಂತ ಸಾಮಾಜಿಕ ಹಾಗೂ ಶೈಕ್ಷಣಿಕ ಗಣತಿಯನ್ನು ಮಾಡುತ್ತಿದ್ದು, ವಿರಾಜಪೇಟೆಯ ಸೆಂಟ್ ಆನ್ಸ್ ಪದವಿ ಕಾಲೇಜಿನ ಎನ್ ಎಸ್ ಎಸ್ ಘಟಕದ ಸ್ವಯಂ ಸೇವಕರು ಗಣತಿಯ ಕುರಿತು ಸಾರ್ವಜನಿಕರಲ್ಲಿ ಜಾಗೃತಿಯನ್ನು ಮೂಡಿಸಿದರು. ವಿರಾಜಪೇಟೆಯ ಪುರಸಭಾ ವ್ಯಾಪ್ತಿಯ ಚರ್ಚ್ ಸ್ಟ್ರೀಟ್, ಜನರಲ್ ತಿಮ್ಮಯ್ಯ ಬಡಾವಣೆ, ಹಾಗೂ ಅಪ್ಪಯ್ಯ ಸ್ವಾಮಿ ರಸ್ತೆಯ ಮನೆಗಳಿಗೆ ತೆರಳಿ ವಿದ್ಯಾರ್ಥಿಗಳು ಸಾರ್ವಜನಿಕರಲ್ಲಿ ಗಣತಿಯ ಕುರಿತು ಜಾಗೃತಿಯನ್ನು ಮೂಡಿಸಿದರು. ಎನ್ಎಸ್ಎಸ್ ಸ್ವಯಂಸೇವಕರು ವಿವಿಧ ಗುಂಪುಗಳಾಗಿ ವಿಂಗಡಿಸಿ ಪ್ರತ್ಯೇಕವಾಗಿ ಮನೆಮನೆಗಳಿಗೆ ತೆರಳಿ ಜಾಗೃತಿಯನ್ನು ಮೂಡಿಸುವ ಪ್ರಯತ್ನವನ್ನು ಮಾಡಿದರು. ಹಾಗೂ ಅಧಿಕಾರಿಗಳು ಗಣತಿಗೆ ಬರುವಂತಹ ಸಂದರ್ಭದಲ್ಲಿ ಇರಬೇಕಾದಂತಹ ದಾಖಲೆಗಳು, ಕೇಳುವಂತಹ ಮಾಹಿತಿ ಇವುಗಳ ಕುರಿತು ವಿವರಿಸಿದರು. ಈ ಸಂದರ್ಭದಲ್ಲಿ ಕಾಲೇಜಿನ ಎನ್ಎಸ್ಎಸ್ ಘಟಕದ ನಾಯಕರುಗಳು ಹಾಗೂ ಸ್ವಯಂ ಸೇವಕರು ಉಪಸ್ಥಿತರಿದ್ದರು.



