ಸೋಮವಾರಪೇಟೆ : ಯುವ ಸಾಹಿತಿ ಹೇಮಂತ್ ಪಾರೇರ ಬರೆದಿರುವ ʼಬೆಳ್ಳಿ ಗೆಜ್ಜೆʼ ಕವನ ಸಂಕಲನ ಬಿಡುಗಡೆ ಕಾರ್ಯಕ್ರಮ ಜು.15ರಂದು ನಡೆಯಲಿದೆ.
ಕನ್ನಡಸಿರಿ ಸ್ನೇಹ ಬಳಗ ವತಿಯಿಂದ ಅಂದು ಸಂಜೆ 04 ಗಂಟೆಗೆ ಸೋಮವಾರಪೇಟೆ ಪತ್ರಿಕಾ ಭವನ ಸಭಾಂಗಣದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕನ್ನಡ ಸಿರಿ ಸ್ನೇಹ ಬಳಗದ ಅಧ್ಯಕ್ಷ ಬಿ.ಎಸ್. ಲೋಕೇಶ್ ಸಾಗರ್ ಅಧ್ಯಕ್ಷತೆಯಲ್ಲಿ ಜರುಗುವ ಕಾರ್ಯಕ್ರಮವನ್ನು ಸಿದ್ದಲಿಂಗಪುರ ಅರಿಸಿನಗುಪ್ಪೆ ಮಂಜುನಾಥ ದೇವಾಲಯದ ರಾಜೇಶನಾಥ ಗುರೂಜಿ ಉದ್ಘಾಟಿಸಲಿದ್ದಾರೆ. ಕೃತಿ ಪರಿಚಯವನ್ನು ಲೇಖಕಿ, ಮೀನುಗಾರಿಕೆ ಇಲಾಖೆ ಸಹಾಯಕ ನಿರ್ದೇಶಕಿ ಮಿಲನಾ ಭರತ್ ಮಾಡಲಿದ್ದಾರೆ. ಕೃತಿ ಬಿಡುಗಡೆಯನ್ನು ಹಿರಿಯ ಸಾಹಿತಿ ಭಾರದ್ವಾಜ್ ಕೆ. ಆನಂದತೀರ್ಥ ಅವರು ನಡೆಸಿಕೊಡಲಿದ್ದಾರೆ
ಮುಖ್ಯ ಅತಿಥಿಗಳಾಗಿ ಬರಹಗಾರ್ತಿ ಪವಿತ್ರಾ ಹೆತ್ತೂರು, ಸಮಾಜ ಸೇವಕ ಸುಗುರಾಜ್ ಕುಟ್ಟಪ್ಪ ಪಾಲ್ಗೊಳ್ಳಲಿದ್ದಾರೆ.
