ಭಾಗಮಂಡಲ(Bhagamandala) : ಇಲ್ಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 2007ನೇ ಸಾಲಿನ ವಿದ್ಯಾರ್ಥಿಗಳು ಹಾಗೂ ಶಿಕ್ಷಕರ ಪುನರ್ಮಿಲನ ಕಾರ್ಯಕ್ರಮ ನಡೆಯಿತು.
ಭಾನುವಾರ ನಡೆದ ಕಾರ್ಯಕ್ರಮದಲ್ಲಿ ಹಳೆಯ ವಿದ್ಯಾರ್ಥಿಗಳೆಲ್ಲ ಸೇರಿ ಶಿಕ್ಷಕರನ್ನು ಸನ್ಮಾನಿಸಿ ಗೌರವಿಸಿದರು. ಇದೇ ವೇಳೆ ವಿದ್ಯಾರ್ಥಿಗಳು ತಮ್ಮ ಬಾಲ್ಯದ ನೆನಪುಗಳನ್ನು ಹಂಚಿಕೊಂಡರು. ಶಾಲೆಯ ಅಭಿವೃದ್ಧಿಗೆ ತಾವು ಸಹಕರಿಸುತ್ತೇವೆ ಎಂಬ ಭರವಸೆ ನೀಡಿದರು.
2007ನೇ ಸಾಲಿನ ಹಳೆಯ ವಿದ್ಯಾರ್ಥಿಗಳಿಂದ ಶಾಲೆಗೆ ಪ್ರೊಜೆಕ್ಟರ್ ಹಾಗೂ ತಟ್ಟೆಗಳನ್ನು ಕೊಡುಗೆಯಾಗಿ ನೀಡಲಾಯಿತು.
ಹಳೆಯ ವಿದ್ಯಾರ್ಥಿಗಳು, ಶಿಕ್ಷಕರು, ಎಸ್.ಡಿ.ಎಂ.ಸಿ. ಅಧ್ಯಕ್ಷರು ಸೇರಿದಂತೆ ಅನೇಕರು ಉಪಸ್ಥಿತರಿದ್ದರು.



