ಮಡಿಕೇರಿ : ಮಡಿಕೇರಿಯ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಭೂಗೋಳಶಾಸ್ತ್ರ ವಿಭಾಗದ ಉಪನ್ಯಾಸಕಿ ಭೈರವಿ ವಿ.ಬಿ. ಅವರು ಮೈಸೂರು ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿ ಪಡೆದಿದ್ದಾರೆ.
ಮೂಲತಃ ಪೊನ್ನಂಪೇಟೆ ತಾಲ್ಲೂಕಿನ ಕೋತೂರು ಗ್ರಾಮದ ವಿಶಾಲಾಕ್ಷಿ ಮತ್ತು ಬೀರಪ್ಪ ದಂಪತಿಯ ಹಿರಿಯ ಮಗಳಾಗಿರುವ ಭೈರವಿ ವಿ.ಬಿ. ಅವರು ಮೈಸೂರು ವಿಶ್ವವಿದ್ಯಾ ನಿಲಯದ ಭೂಗೋಳಶಾಸ್ತ್ರ ವಿಭಾಗದ ಪ್ರಾಧ್ಯಾಪಕರಾಗಿರುವ ಹೆಚ್. ಕಮಲ ಅವರ ಮಾರ್ಗದರ್ಶನದಲ್ಲಿ ಸಂಶೋಧನೆ ನಡೆಸಿ “Geographical Analysis of Levels of Development in Kodagu District – A Planning Approach” ಎಂಬ ಮಹಾಪ್ರಬಂಧವನ್ನು ಆಂಗ್ಲ ಭಾಷೆಯಲ್ಲಿ ಭೂಗೋಳಶಾಸ್ತ್ರ ವಿಷಯದಲ್ಲಿ ಪಿಹೆಚ್.ಡಿ ಪದವಿಗಾಗಿ ಸಲ್ಲಿಸಿದ ನಿಟ್ಟಿನಲ್ಲಿ, ೨೦೧೭ರ ಮೈಸೂರು ವಿಶ್ವವಿದ್ಯಾನಿಲಯದ ಪಿಹೆಚ್.ಡಿ ನಿಯಮಾವಳಿಯಡಿಯಲ್ಲಿ ಅಂಗೀಕರಿಸಲಾಗಿದೆ.



