ಮಡಿಕೇರಿ : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಮುಖ್ಯ ಆಯುಕ್ತ ಪಿ.ಜಿ.ಆರ್. ಸಿಂಧ್ಯ ಜುಲೈ ೦೩ ರಂದು ಕೊಡಗು ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಅಂದು ಮಧ್ಯಾಹ್ನ ೧೨ ಗಂಟೆಗೆ ಮಡಿಕೇರಿಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಪೊನ್ನಮ್ಮ ಕುಶಾಲಪ್ಪ ಭವನದಲ್ಲಿ ಪದಾಧಿಕಾರಿಗಳೊಂದಿಗೆ ಸಮಾಲೋಚನಾ ಸಭೆ ನಡೆಸಲಿದ್ದಾರೆ. ಶಾಸಕರಾದ ಡಾ.ಮಂತರ್‌ಗೌಡ ಇತರರು ಪಾಲ್ಗೊಳ್ಳಲಿದ್ದಾರೆ ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ನ ಜಿಲ್ಲಾ ಪ್ರಮುಖರು ತಿಳಿಸಿದ್ದಾರೆ.
