‌Big Breaking : ಅಹಮದಾಬಾದ್‌ನಲ್ಲಿ ವಿಮಾನ ಪತನ – ಟೇಕಾಫ್‌ ಆದ ಕೆಲವೇ ಕ್ಷಣದಲ್ಲಿ ನೆಲಕ್ಕಪ್ಪಳಿಸಿದ ಏರ್‌ ಇಂಡಿಯಾ ಫ್ಲೈಟ್..!

Share this post :

ಬೆಂಗಳೂರು : ಗುಜರಾತ್‌ನ ಅಹಮದಾಬಾದ್‌ನಲ್ಲಿ ವಿಮಾನ ಅಪಘಾತ ಸಂಭವಿಸಿದೆ.  ಏರ್ ಇಂಡಿಯಾ ವಿಮಾನ ಅಪಘಾತಕ್ಕೀಡಾಗಿದ್ದು, ವಿಮಾನದಲ್ಲಿ ಪ್ರಯಾಣಿಕರು ಹಾಗೂ ಸಿಬ್ಬಂದಿ ಸೇರಿ 240ಕ್ಕೂ ಹೆಚ್ಚು ಮಂದಿ ಇದ್ದರು ಎನ್ನಲಾಗಿದೆ.

ಅಹಮದಾಬಾದ್‌ನಿಂದ ಲಂಡನ್‌ಗೆ ತೆರಳುತ್ತಿದ್ದ ವಿಮಾನ ಇದಾಗಿದ್ದು, ವಿಮಾನ ಟೇಕ್ ಆಫ್ ಆದ ಕೆಲವೇ ಹೊತ್ತಿನಲ್ಲಿ ಅಪಘಾತಕ್ಕೀಡಾಗಿದೆ. ಏರ್‌ಪೋರ್ಟ್‌ನ ಕೆಲವೇ ಅಂತರದಲ್ಲಿ ದುರಂತ ಸಂಭವಿಸಿದ್ದು, ವಿಮಾನದಲ್ಲಿ ಭಾರಿ ಪ್ರಮಾಣದಲ್ಲಿ ಬೆಂಕಿ ಹೊತ್ತಿಕೊಂಡಿದೆ. ಘಟನಾ ಸ್ಥಳಕ್ಕೆ ರಕ್ಷಣಾ ತಂಡಗಳು ದೌಡಾಯಿಸಿದ್ದು,  ಬೆಂಕಿ ನಂದಿಸಿ ರಕ್ಷಣಾ ಕಾರ್ಯಾಚರಣೆ ಕೈಗೊಂಡಿದ್ದಾರೆ.

ಗುಜರಾತ್‌ನ ಮಾಜಿ ಸಿಎಂ ವಿಜಯ್‌ ರೂಪಾನಿ ಕೂಡಾ ಈ ವಿಮಾನದಲ್ಲಿ ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ.