ರಾಮನಗರ : ಚನ್ನಪಟ್ಟಣದಲ್ಲಿ ಸಂಭವಿಸಿದ ಕಾರು ಅಪಘಾತದಲ್ಲಿ ಕೊಡಗಿನ ದಂಪತಿ ದುರ್ಮರಣಕ್ಕೀಡಾಗಿದ್ದಾರೆ.
ಪೊನ್ನಂಪೇಟೆ ತಾಲೂಕಿನ ಪೂಕೋಳ ಗ್ರಾಮದ ಕಾಳಿಮಾಡ ಸೋಮಯ್ಯ ಹಾಗೂ ಸರಸು ಎಂಬವರೇ ಮೃತ ದಂಪತಿ. ಚನ್ನಪಟ್ಟಣ ತಾಲೂಕಿನ ದೇವರ ಹೊಸಹಳ್ಳಿ ಬಳಿ ಕಾರು ಅಪಘಾತಕ್ಕೀಡಾಗಿದೆ. ಜೊತೆಯಲ್ಲಿದ್ದ ಪುತ್ರ ಸಜನ್ ಅಪಾಯದಿಂದ ಪಾರಾಗಿದ್ದಾರೆಂದು ತಿಳಿದುಬಂದಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಸಿಗಬೇಕಿದೆ.



