ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಭಾಗಮಂಡಲದಲ್ಲಿ ಗಡಿನಾಡ ಉತ್ಸವ

Areabashe

ಅರೆಭಾಷೆ (Areabashe) ಉಳಿದರೆ ಮಾತ್ರ ಅರೆಭಾಷೆ ಸಂಸ್ಕೃತಿ, ಸಮಾಜ ಉಳಿಯಲು ಸಾಧ್ಯ. ಆ ನಿಟ್ಟಿನಲ್ಲಿ ತಮ್ಮದೇ ಆದ ವಿಭಿನ್ನ ಸಂಸ್ಕøತಿ, ಆಚಾರ-ವಿಚಾರ ಕಲೆಗಳನ್ನು ಉಳಿಸಿಕೊಂಡು ಬಂದಿರುವ ಅರೆಭಾಷೆಯನ್ನು ಎಲ್ಲೆಡೆ ಪಸರಿಸುವಂತಾಗಬೇಕು ಎಂದು ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಕರೆ ನೀಡಿದ್ದಾರೆ. ಕರ್ನಾಟಕ ಅರೆಭಾಷೆ ಸಂಸ್ಕೃತಿಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಭಾಗಮಂಡಲ ನಾಡಗೌಡ ಸಮಾಜ, ಕರಿಕೆ, ಚೇರಂಬಾಣೆ ಗೌಡ ಸಮಾಜ, ಭಾಗಮಂಡಲ ನಾಡಗೌಡ ಯುವ ಒಕ್ಕೂಟ ಮತ್ತು ಚೇರಂಬಾಣೆ […]

Power Cut: ನಾಳೆ ಕೊಡಗಿನಲ್ಲಿ ಎಲ್ಲೆಲ್ಲಿ ಕರೆಂಟ್ ಇರಲ್ಲ?

Power Cut

ಮಡಿಕೇರಿ 66/11 ಕೆ.ವಿ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಹೊಮ್ಮುವ 11 ಕೆ.ವಿ ಎಫ್1 ಕೋಟೆ ಮಾರ್ಗದಲ್ಲಿ ಅಭಿವೃದ್ದಿ ಕಾಮಗಾರಿ ಕೈಗೊಂಡಿರುವುದರಿಂದ ಏಪ್ರಿಲ್ 16 (ನಾಳೆ) ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ, ಮಡಿಕೇರಿಯ ಕಾಲೇಜು ರಸ್ತೆ, ಪ್ರಕೃತಿ ಬಡಾವಣೆ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ (Power Cut) ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ತಿಳಿಸಿದ್ದಾರೆ.

FMKMCC ಹಳೆ ವಿದ್ಯಾರ್ಥಿ ಸಂಘದಿಂದ ಗುರು ವಂದನಾ ಕಾರ್ಯಕ್ರಮ: ಆಡಳಿತ ಮಂಡಳಿ ಸಭೆಯಲ್ಲಿ ಚರ್ಚೆ

FMKMCC Alumni Association

ಮಡಿಕೇರಿ : ಫೀಲ್ಡ್ ಮಾರ್ಷಲ್ ಕೆ.ಎಂ ಕಾರ್ಯಪ್ಪ ಕಾಲೇಜು (FMKMCC) ಹಳೆ ವಿದ್ಯಾರ್ಥಿ ಸಂಘದ ಮಾಸಿಕ ಸಭೆ ಕಾಲೇಜಿನ ನ್ಯಾಕ್ ಕೊಠಡಿಯಲ್ಲಿ ನಡೆಯಿತು. ಸಂಘದ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕಾಲೇಜಿನ ಅಭಿವೃದ್ಧಿ ಹಾಗೂ ಮುಂದಿನ ದಿನಗಳಲ್ಲಿ ಕಾಲೇಜಿನಲ್ಲಿ ನಡೆಯಬೇಕಿರುವ ಕಾರ್ಯಕ್ರಮಗಳ ಕುರಿತು ಚರ್ಚಿಸಲಾಯಿತು. ಕಾಲೇಜಿನ ಪ್ರಾಂಶುಪಾಲ ಮೇಜರ್ ಪ್ರೊ. ರಾಘವ.ಬಿ ಅವರು ಮಾತನಾಡಿ, ಕಾಲೇಜು ಈಗಾಗಲೇ 75 ವರ್ಷಗಳನ್ನು ಪೂರೈಸಿದ್ದು, ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದಿಂದ ವಿದ್ಯಾರ್ಥಿಗಳಿಗಾಗಿ ಬಹಳಷ್ಟು ಕಾರ್ಯಕ್ರಮಗಳನ್ನು ಆಯೋಜಿಸಿದ್ದಾರೆ. ಕಾಲೇಜಿನ […]

ಮಡಿಕೇರಿಯ ಜಿ.ಆರ್.‌ ಗಿರೀಶ್‌ಗೆ “ಛಾಯಾ ಶ್ರೀ” ಪ್ರಶಸ್ತಿ

Girish

ಮಡಿಕೇರಿ ಏ.14 : ಬೆಂಗಳೂರಿನ ಕರ್ನಾಟಕ ಛಾಯಾಚಿತ್ರ ಗ್ರಾಹಕರ ಸಂಘ ನೀಡುವ “ಛಾಯಾ ಶ್ರೀ” (Chhaya shri) ಪ್ರಶಸ್ತಿಗೆ ಮಡಿಕೇರಿಯ ಜಿ.ಆರ್. ಗಿರೀಶ್ (G.R Girish) ಭಾಜನರಾಗಿದ್ದಾರೆ. ಗೌಳಿಬೀದಿ ನಿವಾಸಿಯಾಗಿರುವ ಗಿರೀಶ್, ಛಾಯಾಗ್ರಹಣ ಕ್ಷೇತ್ರದಲ್ಲಿ ಹಲವಾರು ವರ್ಷಗಳಿಂದ ಉತ್ತಮ ಸೇವೆ ಸಲ್ಲಿಸಿದ್ದು, ಛಾಯಾಗ್ರಾಹಕರ ಸಂಘಟನೆಯಲ್ಲೂ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಛಾಯಾಚಿತ್ರ ಕ್ಷೇತ್ರದಲ್ಲಿ ಗಿರೀಶ್ ಅವರ ಸೇವೆಯನ್ನು ಪರಿಗಣಿಸಿ ಕರ್ನಾಟಕ ಛಾಯಾ ಗ್ರಾಹಕರ ಸಂಘದ “ಡಿಜಿ ಇಮೇಜ್ 2025″ರ ವಸ್ತು ಪ್ರದರ್ಶನದಲ್ಲಿ” “ಛಾಯಾ ಶ್ರೀ” ಪ್ರಶಸ್ತಿ ನೀಡಿ ಸನ್ಮಾನಿಸಿ, ಗೌರವಿಸಲಾಯಿತು.

ಮಡಿಕೇರಿ ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣಾ ದಿನಾಂಕ ಪ್ರಕಟ

Madikeri

ಮಡಿಕೇರಿ (Madikeri) ನಗರಸಭೆ ಅಧ್ಯಕ್ಷೆ, ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣಾ ದಿನಾಂಕ ಪ್ರಕಟವಾಗಿದ್ದು, ಏಪ್ರಿಲ್ 28 ರಂದು ಸೋಮವಾರದಂದು ಚುನಾವಣೆವಣೆ ನಡೆಯಲಿದೆ. ದಿನಾಂಕ ನಿಗಧಿ ಪಡಿಸಿದ ನಗರದಭೆ ಆಡಳಿತಾಧಿಕಾರಿ ಮತ್ತು ಜಿಲ್ಲಾಧಿಕಾರಿ ವೆಂಕಟ ರಾಜಾ. ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ ಮತ್ತು ಉಪಾಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲು.

ಮಡಿಕೇರಿ ಬ್ರೈನೋಬ್ರೈನ್ ಕೇಂದ್ರದಿಂದ ಅಬಾಕಸ್ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ: ಅಂತಾರಾಷ್ಟ್ರೀಯ ಮಟ್ಟದಲ್ಲಿ ವಿದ್ಯಾರ್ಥಿಗಳ ಸಾಧನೆ

students

ಮಡಿಕೇರಿ : ಮಡಿಕೇರಿಯ ಬ್ರೈನೋಬ್ರೈನ್ ಕೇಂದ್ರದ ವತಿಯಿಂದ ಅಬಾಕಸ್ ವಿದ್ಯಾರ್ಥಿಗಳಿಗೆ ಇತ್ತೀಚೆಗೆ ಪದವಿ ಪ್ರದಾನ ಮಾಡಲಾಯಿತು. ಗರದ ಕ್ರಿಸ್ಟಲ್ ಹಾಲ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬ್ರೈನೋಬ್ರೈನ್ ಕೇಂದ್ರದ 21ನೇ ಬ್ಯಾಚ್ ನ ಒಟ್ಟು 22 ವಿದ್ಯಾರ್ಥಿಗಳು ಪದವಿ ಸ್ವೀಕರಿಸಿದರು. ಎರಡೂವರೆ ವರ್ಷ ೧೦ ಹಂತಗಳಿರುವ ಅಬಾಕಸ್ ಕೋರ್ಸ್ನ್ನು ಈ ವಿದ್ಯಾರ್ಥಿಗಳು (students) ಯಶಸ್ವಿಯಾಗಿ ಪೂರೈಸಿದ್ದಾರೆ. ಅಂತರಾಷ್ಟ್ರೀಯ ಬ್ರೈನೋಬ್ರೈನ್ ಸಂಸ್ಥೆಯ ಕರ್ನಾಟಕ ಬ್ರೈನೋಬ್ರೈನ್ ಕಿಡ್ಸ್ ಅಕಾಡೆಮಿಯ ಪ್ರಾದೇಶಿಕ ವ್ಯವಸ್ಥಾಪಕ ನೀಲ್ ಕಮಾಲ್ ಸ್ವರ್ಣಕರ್ ಅವರು ವಿದ್ಯಾರ್ಥಿಗಳಿಗೆ ಪದವಿ ಪ್ರದಾನ […]

ಅವಧಿಗೂ ಮುನ್ನ ಜನಿಸಿದ 830 ಗ್ರಾಂ ತೂಕದ ಮಗುವನ್ನು ರಕ್ಷಿಸುವಲ್ಲಿ ಯಶಸ್ವಿಯಾದ ವೈದ್ಯರು!

Doctor

ತಾಯಿ ಹೊಟ್ಟೆಯಲ್ಲಿನ ಮಗುವಿನ ಬಗ್ಗೆ ಅದೆಷ್ಟೇ ಕಾಳಜಿ ವಹಿಸಿದರು ಕೆಲವೊಮ್ಮೆ ಇದ್ದಕ್ಕಿದ್ದಂತೆ ಸಮಸ್ಯೆಗಳು ಎದುರಾಗಿ ಬಿಡುತ್ತವೆ. ಅವುಗಳನ್ನ ದಾಟಿ ಮಗುವನ್ನ (Baby) ರಕ್ಷಿಸಿಕೊಳ್ಳುವುದು ಪವಾಡವೇ ಆಗಿರುತ್ತೆ. ಅಂಥಹ ಅಪರೂಪದ ಪ್ರಕರಣದಲ್ಲಿ ಯಶಸ್ವಿಯಾಗಿದ್ದಾರೆ ವಾಸವಿ ಆಸ್ಪತ್ರೆಯ ವೈದ್ಯರು. ಕೇವಲ 28 ವಾರಗಳಿಗೆ ಗರ್ಭಿಣಿಯೊಬ್ಬರು 830ಗ್ರಾಂ ತೂಕದ ಮಗುವಿಗೆ ಜನ್ಮ ನೀಡಿರುವ ಘಟನೆ ಬೆಂಗಳೂರಿನ (Bengaluru) ವಾಸವಿ ಆಸ್ಪತ್ರೆಯಲ್ಲಿ ನಡೆದಿದೆ. ತಾಯಿ ಅಧಿಕ ರಕ್ತದೊತ್ತಡ ಸಮಸ್ಯೆ ಸೇರಿದಂತೆ ಇನ್ನೂ ಹಲವು ಸಮಸ್ಯೆಗಳಿಂದ ಬಳಲುತ್ತಿದ್ದರು. ಹೀಗಾಗಿ ತುರ್ತು ಪರಿಸ್ಥಿತಿ ಎದುರಾದ ಹಿನ್ನೆಲೆ […]

ರೂ.10 ಕೋಟಿ ಮೌಲ್ಯದ ತಿಮಿಂಗಿಲ ವಾಂತಿ ವಶ: 10 ಮಂದಿ ಆರೋಪಿಗಳ ಬಂಧನ

Ambergris

ಕೇರಳದ ತಿರುವನಂತಪುರದಿಂದ ಕೊಡಗಿಗೆ ಅಕ್ರಮವಾಗಿ ಕೋಟ್ಯಾಂತರ ರೂ. ಮೌಲ್ಯದ ತಿಮಿಂಗಿಲ ವಾಂತಿಯನ್ನು (Ambergris) ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಭೇದಿಸಿರುವ ಪೊಲೀಸರು ಮಾಲು ಸಮೇತ 10 ಮಂದಿಯನ್ನು ಬಂಧಿಸುವಲ್ಲಿ ಯಶಸ್ವಿ ಆಗಿದ್ದಾರೆ. ಈ ಘಟನೆಯು ಕೊಡಗು ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಬೇಟೋಳಿ ಗ್ರಾಮದಲ್ಲಿ ನಡೆದಿದೆ. ಕೇರಳದ ತಿರುನಂತಪುರಂನಿಂದ ತಂದು ಆಂಧ್ರಪ್ರದೇಶ ಅಥವಾ ಬೆಂಗಳೂರಿನಲ್ಲಿ (Bengaluru) ಮಾರಾಟ ಮಾಡಲು ಯತ್ನಿಸಿದ್ದ ಆರೋಪಿಗಳನ್ನು ಖಚಿತ ಮಾಹಿತಿ ಮೇರೆಗೆ ಡಿವೈಎಸ್ಪಿ ಮಹೇಶ್ ಕುಮಾರ್ ಹಾಗೂ ವೃತ್ತ ನಿರೀಕ್ಷಕರಾದ ಅನುಪ್ ಮಾದಪ್ಪ ರವರ ನೇತೃತ್ವದ […]

ರಾಷ್ಟ್ರೀಯ ಹೆದ್ದಾರಿಯನ್ನು ನುಂಗುತ್ತಿರುವ ಗಿಡಗಂಟಿಗಳಿಂದ ಕಾದಿದೆ ಅಪಾಯ: ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಇದು ಕಾಣುತ್ತಿಲ್ಲವೇಕೆ?

National highway

ಮಡಿಕೇರಿ : ಮಡಿಕೇರಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ (National highway) ವಾಹನ ಸಂಚಾರಕ್ಕೆ ತೊಡಕಾಗುತ್ತಿದೆ, ಮತ್ತು ಅಪಘಾತಕ್ಕೆ ಕಾರಣವಾಗುತ್ತಿದೆ ಎಂಬ ಕಾರಣದಿಂದ ರಸ್ತೆ ಬದಿಯಲ್ಲಿದ್ದ ಹಣ್ಣಿನ ಅಂಗಡಿಗಳನ್ನು ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಕೆಲವು ದಿನದ ಹಿಂದೆ ತೆರವು ಮಾಡಿದ್ದರು. ಈ ಬಗ್ಗೆ ಸಾರ್ವಜನಿಕ ವಲಯದಲ್ಲೂ ಮೆಚ್ಚುಗೆ ವ್ಯಕ್ತವಾಗಿತ್ತು. ಆದರೆ ಅಸಲಿಯಾಗಿ ವಾಹನಗಳ ಸಂಚಾರಕ್ಕೆ ತೊಡಕಾಗಿರುವ, ಅಪಘಾತಕ್ಕೆ ಕಾರಣವಾಗಿರುವ ಪ್ರಮುಖ ವಿಚಾರದ ಬಗ್ಗೆ ಅಧಿಕಾಗಳು ಗಮನಹರಿಸದಿರುವ ಬಗ್ಗೆ ಜನರಲ್ಲಿ ಅಸಮಾಧಾನ ವ್ಯಕ್ತವಾಗಿದೆ. ರಾಷ್ಟ್ರೀಯ ಹೆದ್ದಾರಿ 275ರಲ್ಲಿ(ಮಡಿಕೇರಿ-ಸಂಪಾಜೆ) ವಿವಿಧೆಡೆ ರಸ್ತೆಯನ್ನ ಕಾಡು […]

ಒಂಟಿ ಮಹಿಳೆಯಿದ್ದ ಮನೆಗೆ ನುಗ್ಗಿ ದರೋಡೆ : ಆರೋಪಿಗೆ 10 ವರ್ಷ ಕಠಿಣ ಶಿಕ್ಷೆ

accused

ಮಡಿಕೇರಿಯಲ್ಲಿ (Madikeri) ಒಂಟಿ ಮಹಿಳೆ ವಾಸವಾಗಿದ್ದ ಮನೆಗೆ ನುಗ್ಗಿ ಹಲ್ಲೆ ಮಾಡಿ ಚಿನ್ನದ ಕರಿಮಣಿ ಸರ ಮತ್ತು ಉಂಗುರ ದರೋಡೆ ಮಾಡಿದ್ದ ಆರೋಪಿಗೆ ಮಡಿಕೇರಿಯ 1ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 10 ವರ್ಷ ಕಠಿಣ ಶಿಕ್ಷೆ, 15 ಸಾವಿರ ದಂಡ ಹಾಗೂ ದಂಡದ ಮೊತ್ತವನ್ನು ಪಾವತಿಸದಿದ್ದಲ್ಲಿ 3 ತಿಂಗಳ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಇಬ್ಬನಿ ರೆಸಾರ್ಟ್ ನಲ್ಲಿ ಕೆಲಸ ಮಾಡಿಕೊಂಡಿದ್ದ ರಾಜಸ್ಥಾನ ಮೂಲದ ವಿಕಾಸ್ ಜೋರ್ಡಿಯಾ (35) ಎಂಬಾತ ಶಿಕ್ಷೆಗೊಳಗಾದವನಾಗಿದ್ದಾನೆ. ಆರೋಪಿ […]