ಪಡಿಯಾಣಿ ಸರ್ಕಾರಿ ಶಾಲೆಗೆ ಹಳೆ ವಿದ್ಯಾರ್ಥಿಗಳಿಂದ ಟಿವಿ ಕೊಡುಗೆ

ನಾಪೋಕ್ಲು : ಪಡಿಯಾಣಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಹಳೆ ವಿದ್ಯಾರ್ಥಿಗಳು ಟಿವಿಯನ್ನು ಕೊಡುಗೆಯಾಗಿ ನೀಡಿದ್ದಾರೆ. ಶಾಲೆಯ ಶೈಕ್ಷಣಿಕ ಚಟುವಟಿಕೆಗಳಿಗೆ ನೆರವಾಗುವ ಉದ್ದೇಶದಿಂದ ಹಳೆ ವಿದ್ಯಾರ್ಥಿಗಳು ಸೇರಿ ಹಣ ಕ್ರೋಢೀಕರಿಸಿ ಟಿವಿಯನ್ನು ನೀಡಿದ್ದಾರೆ. ಹಳೆ ವಿದ್ಯಾರ್ಥಿಗಳ ಈ ಕಾರ್ಯಕ್ಕೆ ಶಿಕ್ಷಕರು, ಪೋಷಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಶಾಲೆಯ ಪರವಾಗಿ ಮುಖ್ಯ ಶಿಕ್ಷಕ ಕೆ.ಸಿ. ದಮೇಂದ್ರ ಅವರು ಸ್ವೀಕರಿಸಿದರು. ಈ ಸಂದರ್ಭದಲ್ಲಿ ಸಹ ಶಿಕ್ಷಕಿಯರಾದ ಶ್ರೀಮತಿ ಎಂ.ಬಿ. ಭಾರತಿ, ಕೆ.ಎ. ಹೇಮಾಮಾಲಿನಿ, ಕೆ.ಜೆ. ರಾಧಾ ಹಾಜರಿದ್ದರು.

ಮಾ.23 ರಂದು ಕನ್ನಡ ಭವನ ಮತ್ತು ಕನ್ನಡ ಚುಟುಕು ಸಾಹಿತ್ಯ ಪರಿಷತ್ ಕೊಡಗು ಜಿಲ್ಲಾ ಘಟಕದ ಉದ್ಘಾಟನೆ – 35 ಕವಿಗಳಿಂದ ಕವನ ವಾಚನ..!

ಮಡಿಕೇರಿ  : ಸೀತಮ್ಮ ಪುರುಷ ನಾಯಕ ಸ್ಮಾರಕ ಕನ್ನಡ ಭವನ ಮತ್ತು ಗ್ರಂಥಾಲಯ ಸಮಿತಿ ವತಿಯಿಂದ ಕನ್ನಡ ಭವನದ ಕೊಡಗು ಜಿಲ್ಲಾ ಘಟಕ ಹಾಗೂ ಕನ್ನಡ ಚುಟುಕು ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಉದ್ಘಾಟನಾ ಸಮಾರಂಭ ಮಾ.೨೩ ರಂದು ಮಡಿಕೇರಿಯಲ್ಲಿ ನಡೆಯಲಿದೆ. ನಗರದ ಪತ್ರಿಕಾ ಭವನದಲ್ಲಿ ಮಧ್ಯಾಹ್ನ ೨ ಗಂಟೆಗೆ ನಡೆಯುವ ಕಾರ್ಯಕ್ರಮವನ್ನು ಕನ್ನಡ ಭವನದ ಸ್ಥಾಪಕ ಸಂಚಾಲಕ ಡಾ.ವಾಮನ್ ರಾವ್ ಬೇಕಲ್ ಹಾಗೂ ಸಂಧ್ಯಾರಾಣಿ ಟೀಚರ್ ಉದ್ಘಾಟಿಸಲಿದ್ದು, ಕನ್ನಡ ಭವನದ ಕೊಡಗು ಜಿಲ್ಲಾಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ […]

ಸ್ಮಶಾನದಲ್ಲಿ ಗಾಂಜಾ ಬೆಳೆದ ಚಾಲಾಕಿ ಪೊಲೀಸರ ಬಲೆಗೆ..!

ಕುಶಾಲನಗರ : ಸ್ಮಶಾನ ಜಾಗದಲ್ಲಿ ಗಾಂಜಾ ಗಿಡ ಬೆಳೆಸಿದ್ದ ವ್ಯಕ್ತಿಯೊಬ್ಬನನ್ನು ಕುಶಾಲನಗರ ಪೊಲೀಸರು ಬಂಧಿಸಿದ್ದಾರೆ. ಹೇರೂರು ಗ್ರಾಮದ ಪ್ರಶಾಂತ್(29) ಬಂಧಿತ ಆರೋಪಿ. ಕುಶಾಲನಗರ ಶೈಲಜಾ ಬಡಾವಣೆಯಲ್ಲಿರುವ ಸ್ಮಶಾನ ಜಾಗದಲ್ಲಿ ಈತ ಗಾಂಜಾ ಗಿಡಗಳನ್ನು ಬೆಳೆದಿದ್ದ. ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಈ ವೇಳೆ ಈತನಿಂದ 1 ಕೆ.ಜಿ. 730 ಗ್ರಾಂ ತೂಕದ 19 ಹಸಿ ಗಾಂಜಾ ಗಿಡಗಳನ್ನು ವಶಪಡಿಸಿಕೊಳ್ಳಲಾಗಿದೆ. ಸೋಮವಾರಪೇಟೆ ಪೊಲೀಸ್ ಉಪವಿಭಾಗದ ಡಿವೈಎಸ್ಪಿ ಡಿ.ವಿ. ಗಂಗಾಧರಪ್ಪ, ಕುಶಾಲನಗರ ವೃತ್ತ ನಿರೀಕ್ಪಕ […]

ಕೊಡಗು ವಿಶ್ವವಿದ್ಯಾಲಯ ಉಳಿವಿಗಾಗಿ ಮಾನವ ಹಕ್ಕು ಆಯೋಗಕ್ಕೆ ಮನವಿ ಸಲ್ಲಿಸಿದ ಮುಖಂಡರು..!

ಕುಶಾಲನಗರ : ಕೊಡಗು ವಿಶ್ವವಿದ್ಯಾಲಯವನ್ನು ಸ್ವತಂತ್ರವಾಗಿ ಉಳಿಸಿ ಅಭಿವೃದ್ಧಿಗೊಳಿಸುವಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಸೂಕ್ತ ಸಲಹೆ ಸೂಚನೆ ನೀಡುವ ಸಂಬಂಧ ಕೊಡಗು ಜಿಲ್ಲಾ ಸಂಘ ಸಂಸ್ಥೆಗಳ ಒಕ್ಕೂಟದ ಮೂಲಕ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಸದಸ್ಯರಿಗೆ ಮನವಿ ಪತ್ರ ನೀಡಲಾಯಿತು. ಈ ಸಂದರ್ಭ ಪ್ರತಿಕ್ರಿಯಿಸಿದ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಸದಸ್ಯೆ ಶ್ರೀಮತಿ ವಿಜಯ ಭಾರತಿ ಸಯಾನಿ ಮತ್ತು ಮಾಜಿ ಸದಸ್ಯರಾದ ರಾಜೀವ್ ಜೈನ್ ಸರ್ಕಾರದ ಗಮನ ಸೆಳೆಯುವುದಾಗಿ ಭರವಸೆ ವ್ಯಕ್ತಪಡಿಸಿದರು. ವಿವಿ ಹಿತ ರಕ್ಷಣಾ […]

ವೀರಾಜಪೇಟೆ ನೆಹರು ನಗರ ವ್ಯಾಪ್ತಿಯಲ್ಲಿ ಕಾಳ್ಗಿಚ್ಚು – ಆತಂಕದಲ್ಲಿ ಅಕ್ಕಪಕ್ಕದ ನಿವಾಸಿಗಳು..!

ವೀರಾಜಪೇಟೆ : ಕೊಡಗು ಜಿಲ್ಲೆಯ ಕೆಲವು ಭಾಗದಲ್ಲಿ ಮಳೆಯ ಸಿಂಚನವಾಗುತ್ತಿದೆ. ಆದ್ರೆ ಈ ನಡುವೆ ಅಲ್ಲಲ್ಲಿ ಕಾಳ್ಗಿಚ್ಚು ಕಾಣಿಸಿಕೊಳ್ಳುತ್ತಿದ್ದು, ಬಿಸಿಲಿನ ಬೇಗೆಯ ಮಧ್ಯೆ ಆತಂಕ ಹೆಚ್ಚಿಸುತ್ತಿದೆ. ವಿರಾಜಪೇಟೆಯಲ್ಲಿ ಇಂದು ಮತ್ತೆ ಬೆಂಕಿ ಹೊತ್ತಿಕೊಂಡಿದೆ. ನೆಹರು ನಗರ ಬಳಿಯ ಕಾಡಿನಲ್ಲಿ ಬೆಂಕಿ ಕಾಣಿಸಿದ್ದು, ದಟ್ಟ ಹೊಗೆ ಆವರಿಸಿದೆ. ಅಕ್ಕಪಕ್ಕದಲ್ಲಿ ಮನೆಗಳಿದ್ದು, ಬೆಂಕಿ ವ್ಯಾಪಿಸಿದಲ್ಲಿ ಅನಾಹುತ ಸಂಭವಿಸುವ ಸಾಧ್ಯತೆಯಿದೆ. ಈ ಬಗ್ಗೆ ಮಾಹಿತಿ ಅರಿತ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ನಾಚಪ್ಪ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದ್ದು, ಅಗ್ನಿಶಾಮಕ ದಳಕ್ಕೆ […]

ಕೊಡಗು ಪತ್ರಕರ್ತರ ಸಂಘದ ಕ್ಷೇಮಾಭಿವೃದ್ಧಿ ಸಮಿತಿ ಅಧ್ಯಕ್ಷರಾಗಿ ಜಿ. ವಿ. ರವಿಕುಮಾರ್, ಪ್ರಧಾನ ಕಾರ್ಯದರ್ಶಿಯಾಗಿ ಅರುಣ್ ಆಯ್ಕೆ

ಮಡಿಕೇರಿ : ಕೊಡಗು ಪತ್ರಕರ್ತರ ಸಂಘ(ರಿ)ದ ಕ್ಷೇಮಾಭಿವೃದ್ಧಿ ಸಮಿತಿಯ ೨೦೨೫-೨೭ರ ಸಾಲಿನ ಅಧ್ಯಕ್ಷರಾಗಿ ಜಿ.ವಿ. ರವಿ ಕುಮಾರ್, ಪ್ರಧಾನ ಕಾರ್ಯದರ್ಶಿಯಾಗಿ ಅರುಣ್ ಕೂರ್ಗ್ ಆಯ್ಕೆಯಾಗಿದ್ದಾರೆ. ಸಮಿತಿ ಸದಸ್ಯರಾಗಿ ಸಂಘದ ಅಧ್ಯಕ್ಷರಾದ ಅನಿಲ್ ಹೆಚ್.ಟಿ. ಪ್ರಧಾನ ಕಾರ್ಯದರ್ಶಿ ಸುರೇಶ್ ಬಿಳಿಗೇರಿ, ಖಜಾಂಚಿ ಟಿ.ಕೆ. ಸಂತೋಷ್, ನಿಕಟ ಪೂರ್ವ ಅಧ್ಯಕ್ಷ ಎಸ್.ಎ. ಮುರಳೀಧರ್, ನಿಕಟ ಪೂರ್ವ ಪ್ರಧಾನ ಕಾರ್ಯದರ್ಶಿ ಉಜ್ವಲ್ ರಂಜಿತ್, ಚಮ್ಮಟ್ಟಿರ ಪ್ರವೀಣ್ ಉತ್ತಪ್ಪ, ಪ್ರಸಾದ್ ಸಂಪಿಗೆ ಕಟ್ಟೆ ಹಾಗೂ ಟಿ .ಜೆ. ಪ್ರವೀಣ್ ಕುಮಾರ್, ಸೋಮವಾರಪೇಟೆ ತಾಲ್ಲೂಕು […]

ಆಟವಾಡಲು ಕೆರೆಗೆ ಇಳಿದ ಬಾಲಕಿ ದುರ್ಮರಣ!

Ponnampete

ಆಟವಾಡಲೆಂದು ಕೆರೆಗೆ ಇಳಿದ ಬಾಲಕಿಯೊಬ್ಬಳು ಮೇಲಕ್ಕೆ ಬರಲಾಗದೇ ಸಾವನ್ವಪ್ಪಿರುವ ದಾರುಣ ಘಟನೆ ಕೊಡಗು (Kodagu) ಜಿಲ್ಲೆಯ ಪೊನ್ನಂಪೇಟೆ (Ponnampete) ತಾಲೂಕಿನ ಅತ್ತೂರು ಗ್ರಾಮದ ಚೆನ್ನಂಗೊಲ್ಲಿಯಲ್ಲಿ ನಡೆದಿದೆ. ಚನ್ನಂಗೊಲ್ಲಿ ಸಮೀಪದ ಈಸ್ಟ್ ವೇಸ್ಟ್ ಮಿಲ್ ಸಮೀಪದ ತೋಟದ ಕೆರೆಯಲ್ಲಿ ಈ ದುರ್ಘಟನೆ ಸಂಭವಿಸಿದೆ. ತೋಟದ ಕಾರ್ಮಿಕರಾಗಿರುವ ಭವಾನಿ ಎಂಬುವವರ 9 ವರ್ಷದ ಪುತ್ರಿ ಲಾವಣ್ಯ ಮೃತ ದುರ್ದೈವಿ ತನ್ನ ಸಹಪಾಠಿಗಳೊಂದಿಗೆ ಕೆರೆಯ ಬದಿಯಲ್ಲಿ ಆಟವಾಡುತ್ತಿದ್ದ ಸಂದರ್ಭ ಈಕೆ ಹಾಗೂ ಇನ್ನಿಬ್ಬರು ಮಕ್ಕಳು ಕೆರೆಗೆ ಇಳಿದಿದ್ದರು. ಆದರೆ ಕೆರೆಯಲ್ಲಿ ನೀರು […]

ಮಾನವ-ವನ್ಯಜೀವಿ ಸಂಘರ್ಷ ತಡೆಯಿರಿ: ಶಾಸಕ ಡಾ.ಮಂತರ್ ಗೌಡ

Mantar Gowda

ಮಾನವ-ವನ್ಯಜೀವಿ (wildlife) ಸಂಘರ್ಷ ತಡೆಗಟ್ಟುವ ನಿಟ್ಟಿನಲ್ಲಿ ಒಂದೆಡೆ ರೈತರು, ಮತ್ತೊಂದೆಡೆ ಅರಣ್ಯ ಸಿಬ್ಬಂದಿಗಳು ಸಾವನ್ನಪ್ಪುತ್ತಿದ್ದು ಈ ಸಂಬಂಧ ವೈಜ್ಞಾನಿಕವಾಗಿ ಕ್ರಮ ವಹಿಸುವ ಕೈಗೊಂಡ ಕ್ರಮಗಳನ್ನು ಕುರಿತು ಮಡಿಕೇರಿ ಶಾಸಕ ಡಾ.ಮಂತರ್ ಗೌಡ (Mantar Gowda) ಅವರು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸ ಸಚಿವ ಅವರಿಂದ ಮಾಹಿತಿ ಪಡೆದಿದ್ದಾರೆ. ಇದಕ್ಕೆ ಉತ್ತರಿಸಿದ ಅರಣ್ಯ ಸಚಿವರು ಭೌತಿಕ ಅಡೆತಡೆಗಳ ನಿರ್ಮಾಣ: ಕಾಡಾನೆಗಳು ಅರಣ್ಯ ಪ್ರದೇಶದಿಂದ ಹೊರಗೆ ಬಾರದಂತೆ ತಡೆಗಟ್ಟಲು ಅರಣ್ಯದಂಚಿನಲ್ಲಿ ಸೌರಶಕ್ತಿ ಬೇಲಿ ನಿರ್ಮಾಣ/ನಿರ್ವಹಣೆ, ಆನೆತಡೆ ಕಂದಕ ನಿರ್ಮಾಣ/ನಿರ್ವಹಣೆ ಮಾಡಲಾಗಿದ್ದು […]

ಕಟ್ಟೆಮಾಡು ದೇವಾಲಯದ ವ್ಯಾಪ್ತಿಯಲ್ಲಿ ಮತ್ತೆ ಮುಂದುವರಿದ ನಿಷೇಧಾಜ್ಞೆ!

Kattemadu temple

ಮಡಿಕೇರಿ ತಾಲೂಕು ಕಟ್ಟೆ ಮಾಡು (Kattemadu) ದೇವಾಲಯದಲ್ಲಿ ಈ ಹಿಂದೆ ನಡೆದ ಘಟನೆಯ ಸಂಬಂಧವಾಗಿ ಮೃತ್ಯುಂಜಯ ದೇವಾಲಯದ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ಮಾರ್ಚ್ 14 ರಿಂದ ಏಪ್ರಿಲ್ 11 ರವರೆಗೆ ಐದಕ್ಕಿಂತ ಹೆಚ್ಚು ಜನರು ಗುಂಪು ಸೇರದಂತೆ, ಪ್ರತಿಭಟನೆ ರ್ಯಾಲಿ,ಜಾತ, ಪ್ರಚೋದಾತ್ಮಕ ಘೋಷಣೆಗಳನ್ನು ಕೂಗದಂತೆ ನಿರ್ಬಂಧಿತ ಪ್ರದೇಶವೆಂದು ಘೋಷಿಸಿ ಹಿರಿಯ ಉಪ ವಿಭಾಗಾಧಿಕಾರಿಗಳಾದ ವಿನಾಯಕ ನರ್ವಾಡೆ ರವರು ದಿನಾಂಕ 14.03.2025 ರಂದು ಆದೇಶ ಹೊರಡಿಸಿದ್ದಾರೆ.

Power Cut: ನಾಳೆ ಎಲ್ಲೆಲ್ಲಿ ಕರೆಂಟ್ ಇರಲ್ಲ?

Power Cut

ವಿರಾಜಪೇಟೆ 66/33/11ಕೆ.ವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಕೈಗೊಂಡಿರುವುದರಿಂದ ಮಾರ್ಚ್, 15 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಸಿದ್ದಾಪುರ, ಗುಹ್ಯ, ಮಾಲ್ದಾರೆ, ಕರಡಿಗೋಡು, ಇಂಜಲಗೆರೆ, ಮೇಕೂರು, ಮೂರ್ನಾಡು, ಪಾರಣೆ, ಮರಗೋಡು, ಹಾಕತ್ತೂರು, ಹೊಸ್ಕೇರಿ, ಹೊದ್ದೂರು, ನರಿಯಂದಡ, ನಾಪೋಕ್ಲು, ಕುಂಜಿಲ, ಎಮ್ಮೆಮಾಡು, ಬಲ್ಲಮಾವಟಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ (Power Cut) ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.