ಸಿನೆಮಾ ರಂಗದ ಹಿರಿಯ ನಟ ದೊಡ್ಡಣ್ಣ ಅವರ ಅರೋಗ್ಯ ವಿಚಾರಿಸಿದ ಶಾಸಕ ಪೊನ್ನಣ್ಣ

ಸಿನಿರಂಗದ ಹಿರಿಯ ಕಲಾವಿದರಾದ ದೊಡ್ಡಣ್ಣರವರನ್ನು ಬೆಂಗಳೂರಿನಲ್ಲಿ ವಿರಾಜಪೇಟೆ ಕ್ಷೇತ್ರ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ಭೇಟಿ ಮಾಡಿ ಅವರ ಅರೋಗ್ಯ-ಕ್ಷೇಮ ವಿಚಾರಿಸಿದರು. ಈ ಸಂದರ್ಭದಲ್ಲಿ ಸಿನಿರಂಗದ ಇತರ ಹಿರಿಯ ಕಲಾವಿದರು ಉಪಸ್ಥಿತರಿದ್ದರು.
ಮೀನು ಕೃಷಿಕರಿಗೆ ಉಚಿತ ಮೀನು ಮರಿ ನೀಡಲು ಅರ್ಜಿ ಆಹ್ವಾನ

ಮೀನುಗಾರಿಕೆ ಇಲಾಖೆ ವತಿಯಿಂದ ಮಡಿಕೇರಿ ತಾಲ್ಲೂಕಿನ ಕೃಷಿಕರಿಗೆ ಮೀನು ಕೃಷಿ ಕೊಳ, ಬಾವಿ ಮತ್ತು ಕೃಷಿ ಹೊಂಡಗಳಲ್ಲಿ ಮೀನು ಸಾಕಾಣೆಕೆ ಮಾಡಲು ಉಚಿತವಾಗಿ 500 ಸಾಮಾನ್ಯ ಗೆಂಡೆ ಮೀನು ಮರಿಗಳನ್ನು ಮತ್ತು ಗರಿಷ್ಠ 250 ಗಿಫ್ಟ್ ತಿಲಾಪಿಯ ಮೀನು ಮರಿಗಳನ್ನು ವಿತ್ತರಿಸಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ, ಆರ್‍ಟಿಸಿ, ಆಧಾರ್ ಕಾರ್ಡ್ ದಾಖಲಾತಿಗಳನ್ನು ನವೆಂಬರ್, 27 ರ ಸಂಜೆ 5.30 ಗಂಟೆಯೊಳಗೆ ಮೀನುಗಾರಿಕೆ ಸಹಾಯಕ ನಿರ್ದೇಶಕರು, ಮಡಿಕೇರಿ ಐ.ಟಿ.ಐ ಜಂಕ್ಷನ್, ಕಾಲೇಜು ರಸ್ತೆ, ಮಡಿಕೇರಿ ಕಚೇರಿಗೆ ಸಲ್ಲಿಸಬಹುದು ಎಂದು […]
ಮಡಿಕೇರಿ: ವಿಶ್ವ ಪರಂಪರಾ ಸಪ್ತಾಹಕ್ಕೆ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಚಾಲನೆ

ಮಡಿಕೇರಿ: ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ ಹಾಗೂ ಪುರಾತತ್ವ, ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ವತಿಯಿಂದ ನವೆಂಬರ್, 25 ರವರೆಗೆ ನಡೆಯುವ ವಿಶ್ವ ಪಾರಂಪರ ಸಪ್ತಾಹ ಹಾಗೂ ಶಾಶ್ವತ ಛಾಯಾಚಿತ್ರ ಪ್ರದರ್ಶನ, ಗ್ಯಾಲರಿ ಸಹಿತ ವ್ಯಾಖ್ಯಾನ ಕೇಂದ್ರವನ್ನು ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಬುಧವಾರ ಚಾಲನೆ ನೀಡಿದರು. ಬಳಿಕ ಮಾತನಾಡಿದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಕೊಡಗು ಜಿಲ್ಲೆಗೆ ತನ್ನದೇ ಆದ ಇತಿಹಾಸವಿದ್ದು, 1600 ವರ್ಷಗಳ ಹಿಂದೆಯೇ ಕೊಡಗನ್ನು ಹಲವರು ಆಡಳಿತ ಮಾಡಿದ್ದು, […]
ಕನ್ನಡ ಭಾಷೆಯ ಶ್ರೇಷ್ಠತೆ, ಪ್ರತಿಷ್ಠೆಯನ್ನು ಪ್ರತಿಯೊಬ್ಬ ಕನ್ನಡಿಗ ಅರಿತು ಬಾಳಬೇಕು – ಡಾ. ಹೇಮಂತ್ ಕುಮಾರ್

ವೀರಾಜಪೇಟೆ : ಪರಭಾಷೆಗಳ ವ್ಯಾಮೋಹದಿಂದ ಕನ್ನಡ ಭಾಷೆ ಶೋಚನೀಯ ಸ್ಥಿತಿಯನ್ನು ತಲುಪುತ್ತಿದೆ. ಕನ್ನಡಿಗರಿಗೆ ಭಾಷೆಯ ಶ್ರೇಷ್ಠತೆ, ಅನನ್ಯತೆ ಅರಿವಿಲ್ಲದಿರುವುದರಿಂದ ಈ ಪರಿಸ್ಥಿತಿ ಎದುರಾಗಿದೆ ಎಂದು ಸಂತ ಅನ್ನಮ್ಮ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕ ಡಾ. ಹೇಮಂತ್ ಕುಮಾರ್ ಅಭಿಪ್ರಾಯಪಟ್ಟರು. ವೀರಾಜಪೇಟೆ ಕಾವೇರಿ ಕಾಲೇಜಿನಲ್ಲಿ ಮಂಗಳವಾರ ಆಯೋಜಿಸಲಾಗಿದ್ದ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಕನ್ನಡ ನಾಡು ವಿವಿಧ ಪ್ರಾಂತ್ಯಗಳಲ್ಲಿ ಹರಿದು ಹಂಚಿ ಹೋಗಿತ್ತು. ಅದನ್ನು ಏಕೀಕರಣಗೊಳಿಸಿದ ನೆನಪಿಗಾಗಿ ಹಾಗೂ ಮೈಸೂರು ರಾಜ್ಯವೆಂದಿದ್ದ ಹೆಸರನ್ನು ಕರ್ನಾಟಕವೆಂದು ಮರು […]
ಕೊಡಗಿನ ಪುತ್ತರಿ ಹಬ್ಬ ಡಿಸೆಂಬರ್ 04ಕ್ಕೆ – ಇಲ್ಲಿದೆ ನೋಡಿ ಸಮಯ ಪಟ್ಟಿ..!

ನಾಪೋಕ್ಲು : ಕೊಡಗಿನ ಪ್ರಮುಖ ಹಬ್ಬಗಳಲ್ಲಿ ಒಂದಾದ ಪುತ್ತರಿ ಹಬ್ಬ ಈ ಬಾರಿ ಡಿ.04ಕ್ಕೆ ನಿಗದಿಯಾಗಿದೆ. ಮಳೆ ದೇವರು ಪಾಡಿ ಶ್ರೀ ಇಗ್ಗುತ್ತಪ್ಪ ಸನ್ನಿಧಿಯಲ್ಲಿ ದಿನಾಂಕ ನಿಗದಿಯ ಧಾರ್ಮಿಕ ಕಾರ್ಯ ಇಂದು ನಡೆಯಿತು. ಸಾರ್ವತ್ರಿಕವಾಗಿ ಡಿಸೆಂಬರ್ 04 ರಂದು ರೋಹಿಣಿ ನಕ್ಷತ್ರದಲ್ಲಿ ಹಬ್ಬಾಚರಣೆ ನಡೆಯಲಿದೆ. ಪಾಡಿ ಶ್ರೀ ಇಗ್ಗುತ್ತಪ್ಪ ಸನ್ನಿಧಿಯಲ್ಲಿ ರಾತ್ರಿ 8.10 ಗಂಟೆಗೆ ನೆರೆ ಕಟ್ಟುವುದು. ರಾತ್ರಿ 9.10 ಗಂಟೆಗೆ ಕದಿರು ತೆಗೆಯುವುದು. ಭೋಜನಕ್ಕೆ 10.10 ಗಂಟೆಗೆ ಮುಹೂರ್ತ ನಿಗದಿಯಾಗಿದೆ. ಸಾರ್ವತ್ರಿಕವಾಗಿ ರಾತ್ರಿ 8.40 ಗಂಟೆಗೆ […]
ಕೊಡಗಿನಲ್ಲಿ ಒಂದು ವರ್ಷದಲ್ಲಿ ಬೀದಿ ಶ್ವಾನ ದಾಳಿಗೆ ಒಳಗಾದವರ ಸಂಖ್ಯೆ ಎಷ್ಟು ಗೊತ್ತಾ..!?

ಮಡಿಕೇರಿ : ದಿನದಿಂದ ದಿನಕ್ಕೆ ಬೀದಿ ಶ್ವಾನಗಳ ಹಾವಳಿ ಹೆಚ್ಚಾಗುತ್ತಿದ್ದು, ಶ್ವಾನ ಕಡಿತಕ್ಕೆ ಒಳಗಾಗುವವರ ಸಂಖ್ಯೆ ಅಧಿಕವಾಗಿದೆ. ಆದ್ದರಿಂದ ಸುಪ್ರಿಂಕೋರ್ಟ್ ನಿರ್ದೇಶನದಂತೆ ಬೀದಿನಾಯಿಗಳ ಹಾವಳಿಯನ್ನು ನಿಯಂತ್ರಿಸಲು ಅಗತ್ಯ ಕ್ರಮ ವಹಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಬೀದಿ ಶ್ವಾನ ಹಾವಳಿ ನಿಯಂತ್ರಣ ಬಗ್ಗೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಅವರು ಮಾತನಾಡಿದರು. ಬೀದಿ ಶ್ವಾನಗಳನ್ನು ಸ್ಥಳಾಂತರಿಸಲು ಸ್ಥಳೀಯ ಸಂಸ್ಥೆ ವ್ಯಾಪ್ತಿಯಲ್ಲಿ (ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ, ಗ್ರಾಮ ಪಂಚಾಯಿತಿ) […]
ವೀರಾಜಪೇಟೆಯಲ್ಲಿ ಗೋಮಾಂಸ ಮಾರಾಟ – ಇಬ್ಬರನ್ನು ವಶಕ್ಕೆ ಪಡೆದ ಪೊಲೀಸರು..!

ವೀರಾಜಪೇಟೆ : ಗೋಮಾಂಸ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಿರಾಜಪೇಟೆ ವಿಜಯ ನಗರ ನಿವಾಸಿಗಳಾದ ಮೊಹಮ್ಮದ್ ಎಂಬವರ ಪುತ್ರ ಎಂ.ಎಂ. ಮುಸ್ತಾಫ(42), ಮೊಹಮ್ಮದ್ ಹುಸೈನ್ ಎಂಬವರ ಪುತ್ರ ಎಂ.ಎಸ್. ತನ್ವಿರ್(41) ಗೋಮಾಂಸ ಮಾರಾಟಕ್ಕೆ ಮುಂದಾಗಿ ಪೊಲೀಸರ ವಶಕ್ಕೆ ಸಿಕ್ಕವರು. ಇಬ್ಬರು ಸೇರಿಕೊಂಡು ವೀರಾಜಪೇಟೆಯ ವಿವಿಧೆಡೆ ಗೋಮಾಂಸ ಮಾರಾಟಕ್ಕೆ ಮುಂದಾಗಿದ್ದರು ಎಂದು ತಿಳಿದುಬಂದಿದೆ. ಈ ಬಗ್ಗೆ ನಿಖರ ಮಾಹಿತಿ ಪಡೆದ ಪೊಲೀಸರು ದಾಳಿ ಮಾಡಿ ಇಬ್ಬರನ್ನು ವಶಕ್ಕೆ ಪಡೆದು ಕಾನೂನು ಕ್ರಮ ಕೈಗೊಂಡಿದ್ದಾರೆ.
ಮದುವೆ ಕಾರ್ಯಕ್ರಮದಲ್ಲಿ ಜೂಜಾಟ – ಪೊಲೀಸರ ದಾಳಿ – ವಶಪಡಿಸಿಕೊಂಡ ಹಣ ಎಷ್ಟು ಗೊತ್ತಾ..!?

ವೀರಾಜಪೇಟೆ : ವಿವಾಹ ಸಮಾರಂಭದಲ್ಲಿ ಜೂಜಾಟದಲ್ಲಿ ತೊಡಗಿದ್ದ ಸಂದರ್ಭ ಪೊಲೀಸರು ದಾಳಿ ನಡೆಸಿ ಜೂಜಿಗೆ ಬಳಸಿದ್ದ ಹಣವನ್ನು ವಶಪಡಿಸಿಕೊಂಡಿದ್ದಾರೆ. ಮೊಗರಗಲ್ಲಿರುವ ಕಲ್ಯಾಣ ಮಂಟಪದಲ್ಲಿ ಮದುವೆ ಕಾರ್ಯವಿತ್ತು. ಮಂಟಪದಲ್ಲಿನ ಕೊಠಡಿಯೊಂದರಲ್ಲಿ ಮದುವೆಗೆ ಬಂದಿದ್ದ ಕೆಲವರು ಹಣ ಪಣಕ್ಕಿಟ್ಟು ಜೂಜಾಟದಲ್ಲಿ ತೊಡಗಿದ್ದರು. ಮಾಹಿತಿ ಅರಿತ ಪೊಲೀಸರು ಕಲ್ಯಾಣ ಮಂಟಪದ ಕೊಠಡಿಯ ಮೇಲೆ ದಾಳಿ ನಡೆಸಿ, ಜೂಜಾಟದಲ್ಲಿ ತೊಡಗಿದ್ದ ವ್ಯಕ್ತಿಗಳಿಂದ ಒಟ್ಟು 4,25,545/ ರೂ. ವಶಕ್ಕೆ ಪಡೆದಿದ್ದಾರೆ. ಜೂಜಾಟದಲ್ಲಿ ತೊಡಗಿದ್ದ 8 ಮಂದಿಯ ಮೇಲೆ ವಿರಾಜಪೇಟೆ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು […]
ವಾಲಿಬಾಲ್‌ನಲ್ಲಿ ಕೊಡಗಿನ ಹಾಡಿ ಹೈದನ ಸಾಧನೆ – ಸರ್ಕಾರದಿಂದ ಸನ್ಮಾನ…

ಪೊನ್ನಂಪೇಟೆ : ಕ್ರೀಡಾ ಕ್ಷೇತ್ರದ ಸಾಧನೆಗಾಗಿ ತಿತಿಮತಿ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿ ಜೆ.ಎಂ. ಮನೋಜ್ ಅವರನ್ನು ಸರ್ಕಾರದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. 14 ವರ್ಷದೊಳಗಿನ ಬಾಲಕರ ವಾಲಿಬಾಲ್ ಪಂದ್ಯಾವಳಿಯಲ್ಲಿ ರಾಷ್ಟ್ರಮಟ್ಟದಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿದ್ದರು. ಹೀಗಾಗಿ ಬಿರ್ಸಾ ಮುಂಡರವರ 150 ನೇ ಜನ್ಮ ದಿನಾಚರಣೆಯ ಅಂಗವಾಗಿ ಮೈಸೂರಿನ ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು. ಗಿರಿಜನ ಹಾಡಿಯಲ್ಲಿ ಹುಟ್ಟಿ ಬೆಳೆದು, ಪ್ರಸ್ತುತ ತಿತಿಮತಿಯ ಸರ್ಕಾರಿ ಪ್ರೌಢಶಾಲೆಯಲ್ಲಿ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ.
FMKMC ಕಾಲೇಜಿಗೆ ಹೊಸ ಚೈತನ್ಯ ತುಂಬಲು ಹಳೆ ವಿದ್ಯಾರ್ಥಿಗಳು ಕೈಜೋಡಿಸಿ – ಪ್ರೊ. ಪಿ.ಎಲ್. ಧರ್ಮ ಕರೆ

ಮಡಿಕೇರಿ : ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜು ಹಲವು ಸಾಧಕರಿಗೆ ಶಿಕ್ಷಣ ಕೊಟ್ಟ ಸಂಸ್ಥೆ. ಈ ಕಾಲೇಜಿನ ಈಗಿನ ಪರಿಸ್ಥಿತಿ ನೋಡಿದಾಗ ಬಹಳ ಬೇಸರವಾಗುತ್ತದೆ ಎಂದು ಮಂಗಳೂರು ವಿಶ್ವವಿದ್ಯಾಲಯ ಕುಲಪತಿ ಪ್ರೊ.ಪಿ.ಎಲ್. ಧರ್ಮ ಹೇಳಿದರು. ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ವಾರ್ಷಿಕ ಮಹಾಸಭೆ ಹಾಗೂ ಸಂತೋಷ ಕೂಟದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದರು. ನಾನು ಕೂಡಾ ಈ ಕಾಲೇಜಿನ ಹಳೆ ವಿದ್ಯಾರ್ಥಿ. ದಶಕದ ಹಿಂದೆ ಇದ್ದ ಚಿತ್ರಣ ಈಗ ಇಲ್ಲ. ಹಲವು ರೀತಿಯಲ್ಲಿ ಬದಲಾಗಿದೆ. ಕಾಲೇಜಿನ […]