ದತ್ತಿ ಪ್ರಶಸ್ತಿಗೆ ಹಿರಿಯ ಸಾಹಿತಿ ನಾಗೇಶ್ ಕಾಲೂರ್ ಆಯ್ಕೆ

Nagesh kaloor

ಪುರುಷ ಸಾಹಿತಿಗಳಿಗೆ ಮೀಸಲಿಟ್ಟಿರುವ ಪ್ರಪ್ರಥಮ ಹಾಗೂ ಪ್ರತಿಷ್ಠಿತ ದತ್ತಿ “ದಿ. ಬಿ.ಎಸ್ ಗೋಪಾಲಕೃಷ್ಣ ದತ್ತಿ ಪ್ರಶಸ್ತಿ”ಗೆ ಜಿಲ್ಲೆಯ ಹಿರಿಯ ಸಾಹಿತಿ ನಾಗೇಶ್ ಕಾಲೂರು (Nagesh kaloor) ರವರು ರಚಿಸಿದ “ಶ್ರೀ ಕಾವೇರಿ ದರ್ಶನಂ – ಸಮಗ್ರ ಕಾವೇರಿ ಚರಿತೆ” ಕೃತಿಯು ಪುರಸ್ಕೃತ ಗೊಂಡಿದೆ. ಜಿಲ್ಲೆಯ ದೈನಿಕ ಶಕ್ತಿ ಪತ್ರಿಕೆಯ ಸ್ಥಾಪಕ ಸಂಪಾದಕರಾದ ಬಿ.ಎಸ್ ಗೋಪಾಲಕೃಷ್ಣ ರವರ ಹೆಸರಿನಲ್ಲಿ ಅವರ ಪುತ್ರರು ಸ್ಥಾಪಿಸಿರುವ ಈ ದತ್ತಿಯ ಮೊದಲ ಪ್ರಶಸ್ತಿ ಇದಾಗಿದ್ದು, ಈ ದತ್ತಿ ಪ್ರಶಸ್ತಿಯ ಆಯ್ಕೆಗಾಗಿ ಜಿಲ್ಲೆಯ ಬರಹಗಾರರ […]

ಮಾ.4 ರಿಂದ ಸೈಂಟ್ ಆ್ಯನ್ಸ್ ಪದವಿ ಕಾಲೇಜು ಎನ್‌ಎಸ್‌ಎಸ್‌ ಶಿಬಿರ

NSS Camp

ವಿರಾಜಪೇಟೆ: ಮಾರ್ಚ್, 04 ರಿಂದ 10 ರವರೆಗೆ ವಿರಾಜಪೇಟೆಯ ಸೈಂಟ್ ಆ್ಯನ್ಸ್ ಪದವಿ ಕಾಲೇಜು ವತಿಯಿಂದ ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರವು (NSS Camp) ವಿರಾಜಪೇಟೆ ತಾಲ್ಲೂಕು ಹೆಗ್ಗಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿದೆ. ಮಾರ್ಚ್, 04 ರಂದು ಬೆಳಗ್ಗೆ 11 ಗಂಟೆಗೆ ಉದ್ಘಾಟನಾ ಸಮಾರಂಭ ನಡೆಯಲಿದೆ. ಬೇಟೋಳಿ ಗ್ರಾ.ಪಂ. ಅಧ್ಯಕ್ಷರಾದ ಅಚ್ಚಪಂಡ ಎಂ.ಬೋಪಣ್ಣ, ವಿಧಾನ ಪರಿಷತ್ ಸದಸ್ಯರಾದ ಮಂಡೇಪಂಡ ಸುಜಾ ಕುಶಾಲಪ್ಪ, ಹೆಗ್ಗಳ ಸ.ಹಿ.ಪ್ರಾ.ಶಾಲೆಯ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ರಾಜೇಶ್ ಬಿ.ಆರ್. […]

ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ

Illegal Activist

ಮಡಿಕೇರಿ ಗ್ರಾಮಾಂತರ ಪೊಲೀಸ್ (Police) ಠಾಣಾ ವ್ಯಾಪ್ತಿಯ ಗಾಳಿಬೀಡಿನಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ/ಸರಬರಾಜು ಮಾಡುತ್ತಿದ್ದ ಆರೋಪಿ ಓರ್ವನನ್ನು ಪೊಲೀಸರು ಮಾಲು ಸಮೇತ ಬಂಧಿಸಿದ್ದಾರೆ. ಬೆಟ್ಟತ್ತೂರು ನಿವಾಸಿ ಜಿ.ಆರ್. ಕಿರಣ್ ಕುಮಾರ್ (35) ಎಂಬಾತ ಬಂಧಿಸಲ್ಪಟ್ಟಿರುವ ಆರೋಪಿಯಾಗಿದ್ದಾನೆ. ಆರೋಪಿ ದಿನಾಂಕ 28-02-2025 ರಂದು ಗಾಳಿಬೀಡು ಗ್ರಾಮದ ಗಣಪತಿ ದೇವಾಲಯದ ಸಮೀಪದಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಸರಬರಾಜು ಮಾಡಲು ಯತ್ನಿಸುತ್ತಿದ್ದುದರ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಆರೋಪಿಯನ್ನು ಬಂಧಿಸಿ 43 ಗ್ರಾಂ ಗಾಂಜಾವನ್ನು ವಶ ಪಡಿಸಿಕೊಂಡು […]

ಡ್ರಿಂಕ್‌ & ಡ್ರೈವ್‌ ಮತ್ತಿತರ ಟ್ರಾಫಿಕ್ ರೂಲ್ಸ್ ಉಲ್ಲಂಘನೆ: ಚಾಲಕನಿಗೆ 60 ಸಾವಿರ !

Traffic Police

ಮದ್ಯ ಸೇವಿಸಿ ವಾಹನ ಚಲಾಯಿಸಬೇಡಿ, ಚಾಲನೆ ಮಾಡುವಾಗ ಸೀಟ್ ಬೆಲ್ಟ್ ಧರಿಸಿ ಮತ್ತು ಮೊಬೈಲ್ ನಲ್ಲಿ ಮಾತನಾಡಬೇಡಿ ಎಂದು ಪೊಲೀಸ್ ಇಲಾಖೆ ಅರಿವು ಮೂಡಿಸುತ್ತಲೇ ಇರುತ್ತದೆ. ಆದರೆ ಇದಕ್ಕೆ ಸೊಪ್ಪು ಹಾಕದ ಇಲ್ಲೋರ್ವ ಚಾಲಕ ಈ ಎಲ್ಲ ಸಂಚಾರಿ ನಿಯಮಗಳ ಉಲ್ಲಂಘನೆಗಾಗಿ ಬರೋಬ್ಬರಿ 60 ಸಾವಿರ ದಂಡ ವಿಧಿಸಿದ್ದಾರೆ. ಕುಶಾಲನಗರ ಸಂಚಾರಿ ಪೊಲೀಸ್ (Traffic Police) ಠಾಣಾ ಪೊಲೀಸರು ಕೊಪ್ಪ ಗೇಟ್ ಬಳಿ ದಿನಾಂಕ 28/02/2025 ರಂದು ಮದ್ಯಪಾನ ಮಾಡಿ ವಾಹನ ಚಲಾವಣೆ ಮಾಡುತ್ತಿರುವ ಬಗ್ಗೆ ತಪಾಸಣೆ […]

ಕೊಡಗು ವಿವಿ ಮುಚ್ಚುವ ಕ್ರಮ ಖಂಡಿಸಿ ಬಿಜೆಪಿ, ಎಬಿವಿಪಿಯಿಂದ ಪಾದಯಾತ್ರೆ: ಸಂಸದ ಭಾಗಿ

Yaduveer Wadiyar

ಕೊಡಗು ವಿವಿ (Kodagu University) ಮುಚ್ಚಲು ನಿರ್ಧರಿಸಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಆಳುವಾರ ಗ್ರಾಮದಿಂದ ಕುಶಾಲನಗರದ ವರೆಗೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ABVP) ವತಿಯಿಂದ ಹಮ್ಮಿಕೊಂಡಿದ್ದ ಪ್ರತಿಭಟನೆ ಹಾಗೂ ಪಾದಯಾತ್ರೆಯಲ್ಲಿ ಮೈಸೂರು-ಕೊಡಗು ಸಂಸದ ಯದುವೀರ್ ಒಡೆಯರ್ (Yaduveer Wadiyar) ಪಾಲ್ಗೊಂಡರು. ಮಾಜಿ ಶಾಸಕ ಅಪ್ಪಚ್ಚು ರಂಜನ್ ಹಾಗೂ ಎಂಎಲ್ಸಿ ಸುಜಾಕುಶಾಲಪ್ಪ, ಭಾರತೀಶ್ ಮತ್ತಿತರರು ಭಾಗಿ. ನೂರಾರು ವಿದ್ಯಾರ್ಥಿಗಳುˌ ಕಾರ್ಯಕರ್ತರು ಹಾಗೂ ಯುವಜನತೆಯೊಂದಿಗೆ ಹೆಜ್ಜೆ ಹಾಕಿದರು. ಎರಡು ವರ್ಷಗಳ ಹಿಂದೆ ಚಿಕ್ಕ ಅಳುವಾರ ಸ್ನಾತಕೋತ್ತರ ಕೇಂದ್ರದಲ್ಲಿ […]

ಅಪಾಯ ಮಟ್ಟದಲ್ಲಿರುವ ವಿದ್ಯುತ್ ತಂತಿಗಳು, ಕಂಬಗಳು ಕಂಡುಬಂದರೆ ದೂರು ನೀಡಿ

Power lines

ಮಡಿಕೇರಿ:-ಕೊಡಗು ಜಿಲ್ಲೆಯಾದ್ಯಂತ ಚೆಸ್ಕಾಂನ ವಿದ್ಯುತ್ ವಿತರಣಾ ಮಾರ್ಗಗಳು ಬಹುತೇಕ ತೋಟಗಳು, ಅರಣ್ಯ ಪ್ರದೇಶಗಳ ಮಧ್ಯೆ ಹಾಗೂ ಕಡಿದಾದ ಬೆಟ್ಟಗುಡ್ಡಗಳ ಅಂಚಿನಲ್ಲಿ ಹಾದುಹೋಗುತ್ತಿದ್ದು, ಮಳೆಗಾಲದ ಹಾಗೂ ಪ್ರಕೃತಿ ವಿಕೋಪದಂತಹ ಸಂದರ್ಭಗಳಲ್ಲಿ ಮರದ ಕೊಂಬೆಗಳು ಬೀಳುವಂತದ್ದು, ಕಡಿದಾದ ಗುಡ್ಡಗಳ ಜರಿತದಿಂದ ಕಂಬಗಳು ಬಾಗಿ, ತಂತಿಗಳು ತೀರಾ ಅಪಾಯಮಟ್ಟದಲ್ಲಿ ಜಾರುವಂತಹ ಸನ್ನಿವೇಶಗಳು ಎದುರಾಗಬಹುದು. ಇದರಿಂದಾಗಿ ವಿದ್ಯುತ್ ಅಪಘಾತಗಳಾಗುವ ಸಂಭವವಿರುತ್ತದೆ. ಆದ್ದರಿಂದ, ಅಪಾಯ ಮಟ್ಟದಲ್ಲಿರುವ ವಿದ್ಯುತ್ ತಂತಿಗಳು (Power lines) ಶಿಥಿಲಗೊಂಡಿರುವ ಕಂಬಗಳು ಕಂಡುಬಂದರೆ ಈ ವ್ಯಾಪ್ತಿಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ಅಥವಾ 24*7 […]

Virajpet MLA Ponnanna: ಕೊಡಗು ವಿಶ್ವವಿದ್ಯಾಲಯದ ಕ್ಲೋಸ್‌ಗೆ ವಿರಾಜಪೇಟೆ ಶಾಸಕ ಪೊನ್ನಣ್ಣ ಅವರ ನಿಲುವೇನು?

Virajpet MLA Ponnanna

ಮಡಿಕೇರಿ: ಕೊಡಗು ವಿಶ್ವವಿದ್ಯಾಲಯವನ್ನು (Kodagu University) ಮುಚ್ಚುವ ಕಾಂಗ್ರೆಸ್ ಸರ್ಕಾರದ ಪ್ರಸ್ತಾವನೆಯ ವಿರುದ್ಧ ಮಡಿಕೇರಿ ಶಾಸಕ ಮಂತರ್ ಗೌಡ ಅವರ ದಿಟ್ಟ ನಿಲುವನ್ನು ಶ್ಲಾಘಿಸಬೇಕಿದೆ. ಮೇಲ್ನೋಟಕ್ಕೆ, ಹಿಂದಿನ ಬಿಜೆಪಿ ಸರ್ಕಾರವು ಪ್ರಾರಂಭಿಸಿದ ವಿಶ್ವವಿದ್ಯಾಲಯಗಳನ್ನು ರಾಜಕೀಯ ಕಾರಣಗಳಿಗಾಗಿ ಮುಚ್ಚಲು ಸಿದ್ದರಾಮಯ್ಯ ಸರ್ಕಾರ ಬಯಸುತ್ತಿರುವಂತೆ ಕಾಣುತ್ತದೆ ಎಂದಿದ್ದಾರೆ.   ಕಾಡಂಚಿನ ಪ್ರದೇಶದಲ್ಲಿ ರೈಲ್ವೆ ಬ್ಯಾರಿಕೇಡ್ ನಿರ್ಮಾಣಕ್ಕೆ ಎ.ಎಸ್.ಪೊನ್ನಣ್ಣ ಚಾಲನೆ ಪ್ರಸ್ತುತ ಕಾಂಗ್ರೆಸ್ ಆಡಳಿತವು ನೀಡಿರುವ ನೆಪವೆಂದರೆ ವಿಶ್ವವಿದ್ಯಾಲಯಗಳು ಅಸಮರ್ಪಕ ಮೂಲಸೌಕರ್ಯ ಮತ್ತು ಆರ್ಥಿಕ ಸಮಸ್ಯೆಗಳಿಂದಾಗಿ ಕಾರ್ಯಸಾಧ್ಯವಲ್ಲ ಅನ್ನೋದು. ಕಾಂಗ್ರೆಸ್ ಪಕ್ಷದವರೇ […]

Requirement: ಕೊಡಗು ಜಿಲ್ಲಾ ಟೆಕ್ನಿಕಲ್ ಪ್ರೋಗ್ರಾಮರ್ ಹುದ್ದೆಗೆ ಅರ್ಜಿ ಆಹ್ವಾನ

Jobs

ಕೊಡಗು (Kodagu) ಜಿಲ್ಲಾಧಿಕಾರಿ ಕಚೇರಿಯ ಚುನಾವಣಾ ಶಾಖೆಯಲ್ಲಿ ಜಿಲ್ಲಾ ಟೆಕ್ನಿಕಲ್ ಪ್ರೋಗ್ರಾಮರ್ ಹುದ್ದೆಯು (Requirement) ಖಾಲಿ ಇದ್ದು, ಈ ಹುದ್ದೆಗೆ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳುವ ಸಂಬಂಧ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿದಾರರು ನಿಗಧಿತ ಅರ್ಜಿ ನಮೂನೆಯನ್ನು ಜಿಲ್ಲೆಯ ಅಧಿಕೃತ ವೆಬ್‍ಸೈಟ್ https://kodagu.nic.nic.in ರಲ್ಲಿ ಪಡೆದು ಭರ್ತಿ ಮಾಡಿ ಎಲ್ಲಾ ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸಬೇಕು. ಕಚೇರಿ ವಿಳಾಸ ಜಿಲ್ಲಾಧಿಕಾರಿಗಳ ಕಚೇರಿ, ಕೊಡಗು ಜಿಲ್ಲೆ, ಮಡಿಕೇರಿ, ಜಿಲ್ಲಾ ಟೆಕ್ನಿಕಲ್ ಪ್ರೋಗ್ರಾಮರ್ ಹುದ್ದೆ, ಹುದ್ದೆಯ ಸಂಖ್ಯೆ 01, […]

ಕಾವೇರಿ ಪದವಿ ಕಾಲೇಜು ಎನ್‌ಎಸ್‌ಎಸ್‌ ವಾರ್ಷಿಕ ವಿಶೇಷ ಶಿಬಿರ

Cauvery College Virajpet NSS Camp

ಮನುಷ್ಯ ಕೋಟಿ ಕೋಟಿ ಸಂಪಾದಿಸುವುದು ಸಾಧನೆ ಈ ರೀತಿಯ ಸಂಪಾದನೆ ಆತನಿಗೆ ಸಂತೋಷವನ್ನು ನೀಡುತ್ತದೆ . ಆದರೆ ತೃಪ್ತಿ ಬೇಕಾದರೆ ತಾನು ಸಂಪಾದಿಸಿದ್ದನ್ನು ಇತರ ಸಹಾಯಕ್ಕೆ ದಾನ ನೀಡಿ ಸಮಾಜ ಸೇವೆ ಮಾಡಬೇಕು ಎಂದು ವಿರಾಜಪೇಟೆ ರೋಟರಿ ಕ್ಲಬ್ ನ ಅಧ್ಯಕ್ಷರಾದ ಪ್ರಣವ್ ಎಂ ಚಿತ್ರ ಬಾನು ಅಭಿಪ್ರಾಯ ವ್ಯಕ್ತಪಡಿಸಿದರು . ಬಿ. ಶೆಟ್ಟಿಗೇರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಾವೇರಿ ಪದವಿ ಕಾಲೇಜಿನ ವತಿಯಿಂದ ನಡೆದ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಭಾಷಣಕಾರರಾಗಿ […]

ಕಾಡಂಚಿನ ಪ್ರದೇಶದಲ್ಲಿ ರೈಲ್ವೆ ಬ್ಯಾರಿಕೇಡ್ ನಿರ್ಮಾಣಕ್ಕೆ ಎ.ಎಸ್.ಪೊನ್ನಣ್ಣ ಚಾಲನೆ

Railway Barricade In Virajpet

ವಿರಾಜಪೇಟೆಯ ಕಾಡಂಚಿನ ಪ್ರದೇಶಗಳಲ್ಲಿ ಕಾಡಾನೆ ಹಾವಳಿಯನ್ನು ನಿಯಂತ್ರಿಸಲು ಸರ್ಕಾರ 22 ಕೋಟಿ ರೂ, ಬಿಡುಗಡೆಗೆ ಮಂಜೂರಾತಿ ನೀಡಿದ್ದು, ಆ ನಿಟ್ಟಿನಲ್ಲಿ ವಿವಿಧ ಪ್ರದೇಶದ 15 ಕಿ.ಮೀ. ವ್ಯಾಪ್ತಿಯಲ್ಲಿ ರೈಲ್ವೆ ಬ್ಯಾರಿಕೇಡ್ ನಿರ್ಮಾಣದ ಪ್ರಕ್ರಿಯೆಗೆ ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಮಂಗಳವಾರ ಚಾಲನೆ ನೀಡಿದರು. ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಬಿ.ಶೆಟ್ಟಿಗೇರಿ ಗ್ರಾ.ಪಂ.ವ್ಯಾಪ್ತಿಯ ಕುಟ್ಟಂದಿಯಲ್ಲಿ 3 ಕಿ.ಮೀ.ಉದ್ದ ಹಾಗೂ ನಾಗರಹೊಳೆ ಆಭಯಾರಣ್ಯ ವ್ಯಾಪ್ತಿಯ 11 ಕಿ.ಮೀ.ಉದ್ದದ ರೈಲ್ವೆ ಬ್ಯಾರಿಕೇಡ್ ನಿರ್ಮಾಣದ […]