ನವೆಂಬರ್ 12ರಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ…!

ಮಡಿಕೇರಿ : ೬೬/೧೧ ಕೆ.ವಿ ಮಡಿಕೇರಿ ವಿದ್ಯುತ್ ವಿತರಣಾ ಉಪಕೇಂದ್ರದಿಂದ ಹೊರಹೊಮ್ಮುವ ರಾಜಾಸೀಟ್, ಗದ್ದಿಗೆ, ಮೇಕೇರಿ, ಕೋಟೆ, ಭಾಗಮಂಡಲ, ಬೋಯಿಕೇರಿ, ಸಂಪಾಜೆ, ಕುಂಡಾಮೇಸ್ತ್ರಿ, ಗಾಳಿಬೀಡು, ಓಂಕಾರೇಶ್ವರ, ಜಿ.ಟಿ ರಸ್ತೆ, ಮಕ್ಕಂದೂರು, ಕೆ.ಎಸ್.ಆರ್.ಟಿ.ಸಿ ಫೀಡರ್‌ಗಳಲ್ಲಿ ನವೆಂಬರ್, ೧೨ ರಂದು ಬೆಳಗ್ಗೆ ೧೦ ರಿಂದ ಸಂಜೆ ೫ ಗಂಟೆಯವರೆಗೆ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ನಿರ್ವಹಿಸಬೇಕಾಗಿರುವುದರಿಂದ ಈ ಮಾರ್ಗದಿಂದ ವಿದ್ಯುತ್ ಸರಬರಾಜಾಗುವ ಮಡಿಕೇರಿ ನಗರ, ಮೇಕೇರಿ, ಭಾಗಮಂಡಲ, ಸಂಪಾಜೆ, ಹೆಬ್ಬೆಟ್ಟಗೇರಿ, ಕೆ.ಬಾಡಗ, ತಾಳತ್ತಮನೆ, ಬೆಟ್ಟಗೇರಿ, ಗಾಳಿಬೀಡು, ಚೆಟ್ಟಿಮಾನಿ, ಚೇರಂಬಾಣೆ, ಮಕ್ಕಂದೂರು, ಬೋಯಿಕೇರಿ […]
ಎನ್‌ಸಿಸಿಯಲ್ಲಿ C ಪ್ರಮಾಣ ಪತ್ರ ಪಡೆದಿರುವ ಯುವತಿಯರಿಗೆ ʼಅಕ್ಕ ಪಡೆʼ ಸೇರಲು ಅವಕಾಶ..!

ಮಡಿಕೇರಿ : ಜಿಲ್ಲೆಯಲ್ಲಿ ೨೦೨೫-೨೬ ನೇ ಸಾಲಿನ “ಅಕ್ಕ ಪಡೆ” ಯೋಜನೆ ಅನುಷ್ಠಾನಗೊಳಿಸಲು ಎನ್‌ಸಿಸಿಯಲ್ಲಿ ಪ್ರಮಾಣ ಪತ್ರ ಪಡೆದಿರುವ ಮಹಿಳಾ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ನಿಯಮಗಳು ಹಾಗೂ ಆಯ್ಕೆಯ ಮಾನದಂಡಗಳಿಗೆ ಒಳಪಟ್ಟು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಜಿಲ್ಲೆಯಲ್ಲಿ ಅಪಾಯದಲ್ಲಿರುವ ಅಥವಾ ಸಂಕಷ್ಟದಲ್ಲಿರುವ ಮಹಿಳೆಯರು ಮತ್ತು ಮಕ್ಕಳಿಗೆ ತಕ್ಷಣ ರಕ್ಷಣೆ ನೀಡುವ ಪ್ರಾಥಮಿಕ ಉದ್ದೇಶದಿಂದ ಅನುಷ್ಠಾನಗೊಳ್ಳುತ್ತಿರುವ “ಅಕ್ಕ ಪಡೆ” ಯೋಜನೆಯಡಿ ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸಲು ಎನ್ಸಿಸಿಯಲ್ಲಿ ಸಿ ಪ್ರಮಾಣಪತ್ರ ಪಡೆದಿರುವ ದೈಹಿಕ ಸದೃಢತೆ ಹೊಂದಿರುವ, ಉತ್ತಮ […]
ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ ವತಿಯಿಂದ ಜಿಲ್ಲಾಮಟ್ಟದ ಪ್ರಬಂಧ ಸ್ಪರ್ಧೆ

ಮಡಿಕೇರಿ : ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ ಕೊಡಗು ಜಿಲ್ಲಾ ಘಟಕದ ವತಿಯಿಂದ ‘ನನ್ನ ಕಲ್ಪನೆಯ ಸ್ವಚ್ಚ ಕೊಡಗು’ ಎಂಬ ವಿಷಯದಲ್ಲಿ ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆಯನ್ನು ಶಾಲಾ ಮಕ್ಕಳಿಗೆ ಆಯೋಜಿಸಲಾಗಿದೆ. ಸ್ಪರ್ಧೆಯಲ್ಲಿ ಭಾಗವಹಿಸುವ ವಿದ್ಯಾರ್ಥಿಗಳು ಐದರಿಂದ ಹತ್ತನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರಬೇಕು. ಪ್ರಬಂಧ ಪ್ರತಿಯನ್ನು ಕೈ ಬರಹ ಅಥವಾ ಡಿಟಿಪಿ ಮಾಡಿ ಕಳುಹಿಸಬೇಕು. ಕಡ್ಡಾಯವಾಗಿ ಕನ್ನಡದಲ್ಲಿಯೇ ಬರೆಯಬೇಕು. ಪ್ರಬಂಧವು 200 ವಾಕ್ಯ ಮೀರಬಾರದು. ಯಾವುದೇ ರೀತಿಯ ಕೃತಕ ಬುದ್ಧಿ ಮತ್ತೆಯನ್ನು(ಎಐ) ಉಪಯೋಗಿಸುವಂತಿಲ್ಲ. ಪ್ರಬಂಧವನ್ನು ಚಾಮೆರ […]
ಮಹಿಳೆಯರಿಗೆ ಸುವರ್ಣಾವಕಾಶ: ಅಕ್ಕ ಪಡೆ ತಂಡ ರಚನೆಗೆ ಅರ್ಜಿ ಆಹ್ವಾನ

ಮಡಿಕೇರಿ: ಜಿಲ್ಲೆಯಲ್ಲಿ 2025-26 ನೇ ಸಾಲಿನ “ಅಕ್ಕ ಪಡೆ” ಯೋಜನೆಯನ್ನು ಅನುಷ್ಠಾನಗೊಳಿಸಲು ಎನ್‍ಸಿಸಿ ಯಲ್ಲಿ ಪ್ರಮಾಣ ಪತ್ರ ಪಡೆದಿರುವ ಮಹಿಳಾ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ನಿಯಮಗಳು ಹಾಗೂ ಆಯ್ಕೆಯ ಮಾನದಂಡಗಳಿಗೆ ಒಳಪಟ್ಟು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಜಿಲ್ಲೆಯಲ್ಲಿ ಅಪಾಯದಲ್ಲಿರುವ ಅಥವಾ ಸಂಕಷ್ಟದಲ್ಲಿರುವ ಮಹಿಳೆಯರು ಮತ್ತು ಮಕ್ಕಳಿಗೆ ತಕ್ಷಣ ರಕ್ಷಣೆ ನೀಡುವ ಪ್ರಾಥಮಿಕ ಉದ್ದೇಶದಿಂದ ಅನುಷ್ಠಾನಗೊಳ್ಳುತ್ತಿರುವ “ಅಕ್ಕ ಪಡೆ” ಯೋಜನೆಯಡಿ ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸಲು ಎನ್ಸಿಸಿಯಲ್ಲಿ ಸಿ ಪ್ರಮಾಣಪತ್ರ ಪಡೆದಿರುವ ದೈಹಿಕ ಸದೃಢತೆ ಹೊಂದಿರುವ, ಉತ್ತಮ […]
ಕೊಡಗಿನಲ್ಲಿ ಮೂರು ದಿನ ಪವರ್ ಕಟ್: ಯಾವ ಪ್ರದೇಶಗಳಲ್ಲಿ, ಸಮಯ ವಿವರ

ನವೆಂಬರ್, 11, 12 ಮತ್ತು 13 ರಂದು ರಾತ್ರಿ 10 ರಿಂದ ಬೆಳಗ್ಗೆ 5 ಗಂಟೆಯವರೆಗೆ ಕೊಡಗು ವಿದ್ಯುತ್ ಜಾಲದ ಬಲವರ್ಧನೆ ಕಾಮಗಾರಿ ಕೈಗೆತ್ತಿಕೊಳ್ಳುತ್ತಿರುವುದರಿಂದ, ಹೊದ್ದೂರು, ಕಬಡಗೇರಿ, ಕಕ್ಕಬ್ಬೆ, ಕೊಳಕೇರಿ, ಕುಂಜಿಲ, ಎಮ್ಮೆಮಾಡು, ನೆಲಜಿ, ಬಲ್ಲಮಾವಟಿ, ಪೆರೂರು, ನಾಪೋಕ್ಲು ಟೌನ್, ಕೊಟ್ಟಮುಡಿ, ಪಾಲೂರು, ಚೆರಿಯಪರಂಬು, ಹಳೆ ತಾಲ್ಲೂಕು ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.
ಕ್ಲೋಸ್‌ಬರ್ನ್ : ವರ್ಗಾವಣೆಯಾದ ಶಿಕ್ಷಕಿ ಸುಜಾತ ಅವರಿಗೆ ಆತ್ಮೀಯ ಬೀಳ್ಕೊಡುಗೆ

ಮಡಿಕೇರಿ : ಕ್ಲೋಸ್‌ಬರ್ನ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಿಂದ ವರ್ಗಾವಣೆಯಾದ ಮುಖ್ಯಶಿಕ್ಷಕಿ ಡಿ.ಎಂ. ಸುಜಾತ ಅವರಿಗೆ ಬೀಳ್ಕೊಡುಗೆ ಸಮಾರಂಭ ಶುಕ್ರವಾರ ನಡೆಯಿತು. ಶಾಲಾಭಿವೃದ್ಧಿ ಸಮಿತಿ ಹಾಗೂ ಪೋಷಕರ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಸುಜಾತ ಅವರ ಸೇವೆಯನ್ನು ಗೌರವಿಸಿ ಆತ್ಮೀಯವಾಗಿ ಬೀಳ್ಕೊಡಲಾಯಿತು. ಶಾಲೆಯಲ್ಲಿ 11 ವರ್ಷ ಕಾಲ ಮುಖ್ಯಶಿಕ್ಷಕಿಯಾಗಿ ಕಾರ್ಯನಿರ್ವಹಿಸಿದ ಸುಜಾತ ಅವರು ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ತಮ್ಮನ್ನು ಸಮರ್ಪಿಸಿಕೊಂಡಿದ್ದರು. ಜೊತೆಗೆ ಶಾಲೆಯ ಅಭಿವೃದ್ಧಿ ವಿಚಾರದಲ್ಲೂ ಯಾವುದೇ ರೀತಿಯಲ್ಲಿ ರಾಜೀಯಾಗದೆ ಶ್ರಮಿಸಿದರು ಎಂದು ಪೋಷಕರು ನೆನಪಿಸಿಕೊಂಡರು. ಗೌರವ ಸ್ವೀಕರಿಸಿ […]
ಕಾಂತೂರು ಮೂರ್ನಾಡು – ಜಲ ಜೀವನ್ ಮಿಷನ್ ಯೋಜನೆ ಯಶಸ್ವಿ ಅನುಷ್ಠಾನ

ಮಡಿಕೇರಿ : ಕಾಂತೂರು ಮತ್ತು ಕಿಗ್ಗಾಲು ಗ್ರಾಮದಲ್ಲಿ ಜಲ ಜೀವನ್ ಮಿಷನ್ ಯೋಜನೆ ಯಶಸ್ವಿಯಾಗಿದ್ದು, ಎಲ್ಲಾ ಮನೆಗಳಿಗೆ ಶುದ್ದ ಕುಡಿಯುವ ನೀರು ಪೂರೈಕೆಯಾಗುತ್ತಿದೆ ಎಂದು ಕಾಂತೂರು ಮೂರ್ನಾಡು ಗ್ರಾ.ಪಂ ಅಧ್ಯಕ್ಷ ಕುಶನ್ ರೈ ತಿಳಿಸಿದರು. ಮಡಿಕೇರಿ ತಾಲ್ಲೂಕಿನ ಕಾಂತೂರು ಮೂರ್ನಾಡು ಗ್ರಾ.ಪಂ ವ್ಯಾಪ್ತಿಯಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಅನುಷ್ಠಾನಗೊಳಿಸಿರುವ ಜಲ ಜೀವನ್ ಮಿಷನ್ ಯೋಜನೆಯಡಿ ಕುಡಿಯುವ ನೀರು ಸರಬರಾಜು ಕಾಮಗಾರಿ ಪೂರ್ಣಗೊಂಡಿದೆ. ಸಂಸದ ಯದುವೀರ್ ಒಡೆಯರ್ ಮತ್ತು ಶಾಸಕ ಡಾ. ಮಂತರ್ ಗೌಡ […]
ಜಿಲ್ಲೆಯ ಶಾಸಕರಿಗೆ ಸಚಿವ ಸ್ಥಾನ ಸಿಗಲಿ – ಸರ್ಕಾರಕ್ಕೆ ಕೊಡಗು ಗೌಡ ಹಿತರಕ್ಷಣಾ ಸಮಿತಿ ಆಗ್ರಹ

ಮಡಿಕೇರಿ : ವೀರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ ಅವರಿಗೆ ಕೊಡಗಿನ ಸಮಸ್ಯೆಗಳ ಬಗ್ಗೆ ಸಂಪೂರ್ಣ ಅರಿವಿದ್ದು, ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಕೊಡಗು ಗೌಡ ಹಿತರಕ್ಷಣಾ ಸಮಿತಿ ಆಗ್ರಹಿಸಿದೆ. ಎಸ್.ಎಂ ಕೃಷ್ಣ ಸರ್ಕಾರದ ಅವಧಿಯಲ್ಲಿ ಜಿಲ್ಲೆಯ ಮೂವರು ಸಚಿವ ಸಂಪುಟ ಸೇರ್ಪಡೆಯಾಗಿದ್ದರು. ನಂತರ ಯಡಿಯೂರಪ್ಪ ಸಿಎಂ ಆಗಿದ್ದಾಗ ಅಪ್ಪಚ್ಚು ರಂಜನ್ ಅವರಿಗೆ ಅಲ್ಪಾವಧಿಗೆ ಸಚಿವ ಸ್ಥಾನ ನೀಡಿದ್ದರು. ನಂತರದಲ್ಲಿ ಬಂದ ಸರ್ಕಾರಗಳು ಕೊಡಗಿನ ಬಗ್ಗೆ ಅಸಡ್ಡೆ ತೋರಿದೆ. ಜಿಲ್ಲೆಯ ಶಾಸಕರನ್ನು ಸಚಿವ ಸಂಪುಟಕ್ಕೆ ಸೇರ್ಪಡೆಗೊಳಿಸದೇ ಇರುವುದು […]
Power Cut: ನಾಳೆ ಕೊಡಗಿನ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ!

ವಿರಾಜಪೇಟೆ 66/11 ಕೆ.ವಿ ವಿದ್ಯುತ್ ವಿತರಣಾ ಉಪಕೇಂದ್ರದ ವಿರಾಜಪೇಟೆ ಶಾಖಾ ವ್ಯಾಪ್ತಿಯ ಪಂಜರಪೇಟೆ ಹಾಗೂ ಹೆಗ್ಗಳ ಫೀಡರ್‍ಗಳಲ್ಲಿ ನವೆಂಬರ್, 06 ರಂದು ಬೆಳಗ್ಗೆ 9 ರಿಂದ ಸಂಜೆ 6 ಗಂಟೆಯವರೆಗೆ, ವಿರಾಜಪೇಟೆ ಪಟ್ಟಣದ ತೆಲುಗರ ಬೀದಿ, ನೆಹರು ನಗರ, ಗೋಣಿಕೊಪ್ಪ ರಸ್ತೆ, ಶಾಂತಿ ನಗರ, ವಿದ್ಯಾನಗರ, ನಿಸರ್ಗ ಬಡಾವಣೆ, ಮೀನುಪೇಟೆ, ಖಾಸಗಿ ಬಸ್ ನಿಲ್ದಾಣ, ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣ, ಆರ್ಜಿ, ಬೇಟೋಳಿ, ಕಲ್ಲುಬಾಣೆ, ಹೆಗ್ಗಳ, ರಾಮನಗರ, ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸೋಮವಾರಪೇಟೆ 66/11 […]
ಸಿ&ಡಿ ಜಾಗದ ಸಮಸ್ಯೆ ಪರಿಹಾರಕ್ಕೆ ಸಮಿತಿ ರಚನೆ – ಕಂದಾಯ ಸಚಿವ ಕೃಷ್ಣಬೈರೇಗೌಡ ಭರವಸೆ

ಬೆಂಗಳೂರು : ಸಿ ಅಂಡ್ ಡಿ ಜಾಗದ ಸಮಸ್ಯೆ ಪರಿಹಾರಕ್ಕೆ ಸಮಿತಿ ರಚಿಸಲಾಗುವುದೆಂದು ಕಂದಾಯ ಸಚಿವ ಕೃಷ್ಣಬೈರೇಗೌಡ ತಿಳಿಸಿದ್ದಾರೆ. ಈ ಬಗ್ಗೆ ಇಂದು ತಮ್ಮನ್ನು ಭೇಟಿಯಾದ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್. ಬೋಸರಾಜು, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ, ವೀರಾಜಪೇಟೆ ಕ್ಷೇತ್ರದ ಶಾಸಕ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ, ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರನ್ನೊಳಗೊಂಡ ನಿಯೋಗದ ಜೊತೆ ಚರ್ಚಿಸಿದ ಬಳಿಕ ಅವರು ಪ್ರತಿಕ್ರಿಯಿಸಿದರು. ಸಿ ಅಂಡ್ ಡಿ ಜಾಗದ ವಿಚಾರವಾಗಿ ಜಿಲ್ಲೆಯ ರೈತರಿಗೆ ಆಗುತ್ತಿರುವ ತೊಂದರೆ ಬಗ್ಗೆ […]