ಉದ್ದೇಶಿತ ಬಂಟರ ಭವನ ನಿರ್ಮಾಣ ಜಾಗದಲ್ಲಿ ಯುವ ಬಂಟ್ಸ್ ಅಸೋಸಿಯೇಷನ್ ವತಿಯಿಂದ ಶ್ರಮದಾನ

ಮಡಿಕೇರಿ : ಕೊಡಗು ಜಿಲ್ಲಾ ಬಂಟರ ಸಂಘಕ್ಕೆ ಸೇರಿದ ಜಾಗದಲ್ಲಿ ಯುವ ಬಂಟ್ಸ್ ಅಸೋಸಿಯೇಷನ್ ವತಿಯಿಂದ ಶ್ರಮದಾನ ಮಾಡಲಾಯಿತು. ಹೆಸರಾಂತ ಉದ್ಯಮಿ ಡಾ ಪ್ರೇಮನಾಥ್ ಪೂಂಜಾ ಅವರು ಮಡಿಕೇರಿ ಹೊರವಲಯದ ಅಬ್ಬಿಫಾಲ್ಸ್ ಮಾರ್ಗದಲ್ಲಿರುವ ತಮ್ಮ ಜಮೀನಿನಲ್ಲಿ ಅರ್ಧ ಎಕ್ರೆ ಜಾಗವನ್ನು ಬಂಟರ ಭವನ ನಿರ್ಮಾಣಕ್ಕಾಗಿ ನೀಡಿದ್ದರು. ಹಲವು ವರ್ಷಗಳಿಂದ ಅದು ಪಾಳು ಬಿದ್ದಿತ್ತು. ಇದೀಗ ಜಿಲ್ಲಾ ಬಂಟರ ಸಂಘದ ವತಿಯಿಂದ ಬಂಟರ ಭವನ ಟ್ರಸ್ಟ್ ಸಹಯೋಗದಲ್ಲಿ ಅಲ್ಲಿ ಭವನ ನಿರ್ಮಾಣಕ್ಕೆ ಯೋಜನೆ ಹಾಕಿಕೊಳ್ಳಲಾಗಿದೆ. ಹೀಗಾಗಿ ಆ ಜಾಗದಲ್ಲಿ […]
ಮಿಷನ್ ವಾತ್ಸಲ್ಯ ಯೋಜನೆ ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ವೆಂಕಟ್ ರಾಜಾ ಸೂಚನೆ

ಮಿಷನ್ ವಾತ್ಸಲ್ಯ ಯೋಜನೆಯನ್ನು ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಸಂಬಂಧ ಜಿಲ್ಲಾ ಮಟ್ಟದ ಜಿಲ್ಲಾ ಮಕ್ಕಳ ಕಲ್ಯಾಣ ಹಾಗೂ ರಕ್ಷಣಾ ಸಮಿತಿಯ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಮಗಳವಾರ ನಡೆದ ಸಭೆಯಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದಿಂದ ಅನುಷ್ಠಾನಗೊಳ್ಳುತ್ತಿರುವ ವಿವಿಧ ಯೋಜನೆಗಳಾದ ವಿಶೇಷ ಪಾಲನಾ ಯೋಜನೆ, ಪ್ರಾಯೋಜಕತ್ವ ಕಾರ್ಯಕ್ರಮ, ದತ್ತು ಕಾರ್ಯಕ್ರಮ, ಉಪಕಾರ ಯೋಜನೆ, ಮುಖ್ಯಮಂತ್ರಿ ಬಾಲಸೇವಾ ಯೋಜನೆ, ಮತ್ತಿತರ ಯೋಜನೆಗಳ ಪ್ರಗತಿಯ […]
ಕಾಂಗ್ರೆಸ್ ಹಿರಿಯ ಶಾಸಕ, ಮಾಜಿ ಸಚಿವ ಎಚ್.ವೈ ಮೇಟಿ ನಿಧನ

ಬೆಂಗಳೂರು : ಬಾಗಲಕೋಟೆ ಜಿಲ್ಲೆಯ ಕಾಂಗ್ರೆಸ್ ಹಿರಿಯ ಶಾಸಕ, ಮಾಜಿ ಸಚಿವ ಹುಲ್ಲಪ್ಪ ಯಮನಪ್ಪ ಮೇಟಿ@H.Y. ಮೇಟಿ(79) ಇಂದು ಕೊನೆಯುಸಿರೆಳೆದಿದ್ದಾರೆ. ಅನಾರೋಗ್ಯದಿಂದಾಗಿ ಕೆಲವು ದಿನದ ಹಿಂದೆ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆಗೆ ಸ್ಪಂದಿಸದೆ ಇಂದು ನಿಧನರಾಗಿದ್ದಾರೆ. ಎರಡು ದಿನದ ಹಿಂದೆ ಸಿಎಂ ಸಿದ್ದರಾಮಯ್ಯ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದರು.
Crime News : ಪತ್ನಿಯನ್ನು ಹೊಡೆದು ಕೊಂದ ಕ್ರೂರಿ ಪತಿ..!

ಸುಂಟಿಕೊಪ್ಪ : ಪತ್ನಿಯನ್ನು ಪತಿ ಹೊಡೆದು ಹತ್ಯೆಗೈದಿರುವ ಘಟನೆ ಕೊಡಗರಹಳ್ಳಿ ಬಳಿಯ ಅಂದಗೋವೆಯಲ್ಲಿ ನಡೆದಿದೆ. ಲತಾ(45) ಪತಿಯಿಂದ ಹತ್ಯೆಯಾದ ಮಹಿಳೆ. ಅಂದಗೋವೆಯ ಎಸ್ಟೇಟ್ ಒಂದರ ಲೈನ್‌ಮನೆಯಲ್ಲಿ ಭಾನುವಾರ ರಾತ್ರಿ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಆರೋಪಿ ಮುತ್ತ(50) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಭಾನುವಾರ ರಾತ್ರಿ ಗಂಡ ಹಂಡತಿ ನಡುವೆ ಗಲಾಟೆ ನಡೆದಿದ್ದು, ಈ ವೇಳೆ ಪತ್ನಿ ಲತಾ ಮೇಲೆ ಮುತ್ತ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾನೆ. ಗಂಭೀರ ಗಾಯಗೊಂಡಿದ್ದ ಮಹಿಳೆ ಮೃತಪಟ್ಟಿದ್ದಾರೆ. ಘಟನೆ ವಿಚಾರ ತಿಳಿದು ಹೆಚ್ಚುವರಿ […]
ಕೊಡವ ಮುಸ್ಲಿಂ ಸ್ಪೋರ್ಟ್ಸ್ ಅಕಾಡೆಮಿ ನಿಯೋಗದಿಂದ ಸಿ.ಎಸ್. ಅರುಣ್ ಮಾಚಯ್ಯ ಭೇಟಿ

ಪೊನ್ನಂಪೇಟೆ : ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಕೊಡವ ಮುಸ್ಲಿಂ ಸ್ಪೋರ್ಟ್ಸ್ ಅಕಾಡೆಮಿ (ಕೆ.ಎಂ.ಎಸ್.ಎ.) ವತಿಯಿಂದ ಕರ್ನಾಟಕ ರಾಜ್ಯ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷ ಸಿ.ಎಸ್. ಅರುಣ್ ಮಾಚಯ್ಯ ಅವರನ್ನು ಭೇಟಿ ಮಾಡಲಾಯಿತು. ಅಧ್ಯಕ್ಷ ಆಲೀರ ರಶೀದ್ ನೇತೃತ್ವದ ನಿಯೋಗ ಗೋಣಿಕೊಪ್ಪಲಿನ ಕಿತ್ತಳೆ ಬೆಳೆಗಾರರ ಸಹಕಾರ ಸಂಘದ ಸಭಾಂಗಣದಲ್ಲಿ ಅರುಣ್ ಮಾಚಯ್ಯ ಅವರನ್ನು ಭೇಟಿ ಮಾಡಿ ಅಭಿನಂದಿಸಿ ಮನವಿ ಸಲ್ಲಿಸಿತು. ಜೊತೆಗೆ ಸಂಸ್ಥೆಯ ಕ್ರೀಡಾ ಚಟುವಟಿಕೆಗಳ ಬಗ್ಗೆ ಮಾರ್ಗದರ್ಶನ ಪಡೆಯಿತು. ಕೆ.ಎಂ.ಎಸ್.ಎ. ಅಧ್ಯಕ್ಷ ರಶೀದ್ ಮಾತನಾಡಿ, ಸಂಸ್ಥೆ ಕ್ರೀಡಾ ಚಟುವಟಿಕೆಗಳ […]
ಕೊಡವರು ಎಂದರೆ ಹಾಕಿ, ಹಾಕಿ ಅಂದ್ರೆ ಕೊಡವರು – ಸಿಎಂ ಸಿದ್ದರಾಮಯ್ಯ ಬಣ್ಣನೆ

ಬೆಂಗಳೂರು : ಏ.5ರಿಂದ ಮೇ.2ರವರೆಗೆ ನಾಪೋಕ್ಲುವಿನ ಜ.ತಿಮ್ಮಯ್ಯ ಮೈದಾನದಲ್ಲಿ ನಡೆಯಲಿರುವ ಕೊಡವ ಕೌಟುಂಬಿಕ ‘ಚೇನಂಡ ಕಪ್ ಹಾಕಿ’ ಉತ್ಸವದ ಲಾಂಛನವನ್ನು ಬೆಂಗಳೂರಿನ ಗೃಹ ಕಚೇರಿ ಕೃಷ್ಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅನಾವರಣಗೊಳಿಸಿದರು. ಈ ವೇಳೆ ಮಾತನಾಡಿದ ಅವರು, ಕೊಡವರು ಅಂದ್ರೆ ಹಾಕಿ. ಹಾಕಿ ಅಂದ್ರೆ ಕೊಡವರು. ಅಂತಾರಾಷ್ಟ್ರೀಯ ಮಟ್ಟದಲ್ಲಿ ಕೊಡಗಿನ ಹಾಕಿ ಪಟುಗಳು ಮಿಂಚಿದ್ದಾರೆ. ದೇಶಕ್ಕೆ ಕೀರ್ತಿ ತಂದಿದ್ದಾರೆ. ಏಷ್ಯನ್ ಗೇಮ್ಸ್ ಸೇರಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ದೇಶಕ್ಕೆ ಹೆಮ್ಮೆ ಮತ್ತು ಘನತೆ ತಂದುಕೊಟ್ಟಿದ್ದಾರೆ ಎಂದರು. ಚೇನಂಡ ಹಾಕಿ ಪಂದ್ಯಾವಳಿಗೆ […]
ಸಂಪುಟ ಪುನಾರಚನೆ ವಿಚಾರ – ಸಚಿವ ಸ್ಥಾನ ತ್ಯಜಿಸಲು ಸಿದ್ಧ ಎಂದ ಬೋಸರಾಜ್..!

ಮಡಿಕೇರಿ : ಸಚಿವ ಸಂಪುಟ ಪುನಾರಚನೆಯಲ್ಲಿ ಹೈಕಮಾಂಡ್ ತೀರ್ಮಾನವೇ ಅಂತಿಮವಾಗಿದ್ದು, ಅಗತ್ಯ ಬಿದ್ದಲ್ಲಿ ಸಚಿವ ಸ್ಥಾನ ಬಿಡಲು ಎಲ್ಲರೂ ಸಿದ್ದರಿದ್ದೇವೆ ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಬೋಸರಾಜ್ ಹೇಳಿದರು. ಮಡಿಕೇರಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಪ್ರಬುದ್ಧರಿದ್ದಾರೆ. ಕರ್ನಾಟಕಕ್ಕೆ ಹಾಗೂ ಕಾಂಗ್ರೆಸ್‌ಗೆ ಇಬ್ಬರ ಅಗತ್ಯತೆ ಇದೆ. ಸಂಪುಟ ಪುನಾರಚನೆ ವಿಚಾರದಲ್ಲಿ ಹೈಕಮಾಂಡ್ ಏನು ಹೇಳುತ್ತದೆಯೋ ಹಾಗೆ ನಡೆದುಕೊಳ್ಳುತ್ತೇವೆಂದರು. 140 ವರ್ಷಗಳ ಇತಿಹಾಸವಿರುವ ಕಾಂಗ್ರೆಸ್‌ನಲ್ಲಿ ಎಲ್ಲಾ ಮುಖ್ಯ ತೀರ್ಮಾನಗಳನ್ನು ಹೈಕಮಾಂಡ್ ತೆಗೆದುಕೊಳ್ಳುತ್ತದೆ. ಹಿಂದಿನಿಂದಲೂ ಬಂದ ಸಂಪ್ರದಾಯ. […]
ರಾಜ್ಯ ಪತ್ರಕರ್ತರ ಸಂಘದ ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆ – ಅಜ್ಜಮಾಡ ರಮೇಶ್ ಕುಟ್ಟಪ್ಪರಿಗೆ Coorg Buzz ಬಳಗದಿಂದ ಸನ್ಮಾನ

ಮಡಿಕೇರಿ : ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗಿರುವ ಕೊಡಗಿನ ಹಿರಿಯ ಪತ್ರಕರ್ತ, ಪ್ರತಿನಿಧಿ ಪತ್ರಿಕೆಯ ಸ್ಥಾನಿಕ ಸಂಪಾದಕ ಅಜ್ಜಮಾಡ ರಮೇಶ್ ಕುಟ್ಟಪ್ಪ ಅವರಿಗೆ Coorg Buzz ಬಳಗದಿಂದ ಸನ್ಮಾನಿಸಿ ಅಭಿನಂದಿಸಲಾಯಿತು. ಕೂರ್ಗ್ ಬಝ್ ಸ್ಟುಡಿಯೋದಲ್ಲಿ ಸರಳವಾಗಿ ನಡೆದ ಕಾರ್ಯಕ್ರಮದಲ್ಲಿ ಬಳಗದ ಸದಸ್ಯರು ಫಲ ತಾಂಬೂಲ ನೀಡಿ, ಶಾಲು ಹೊದಿಸಿ ಅಭಿನಂದಿಸಿದರು. ರಮೇಶ್ ಕುಟ್ಟಪ್ಪ ಕಳೆದ ಅವಧಿಯಲ್ಲೂ ರಾಜ್ಯ ಸಂಘದ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ಇದೀಗ ಎರಡನೇ ಅವಧಿಗೆ ಸ್ಪರ್ಧೆ ಬಯಸಿ ಸ್ಪರ್ಧಿಸಿದ್ದು, ಪ್ರತಿಸ್ಪರ್ಧಿಗಳು ಇಲ್ಲದ […]
ದೇಶದ ಏಕತೆ ಮತ್ತು ಅಖಂಡತೆಯನ್ನು ಕಾಪಾಡುವಲ್ಲಿ ಸರ್ದಾರ್ ವಲ್ಲಭಭಾಯ್ ಪಟೇಲರ ಪಾತ್ರ ಮಹತ್ವದ್ದು – ಬೆನೆಡಿಕ್ಟ್ ಆರ್ ಸಲ್ದಾನ

ಮಡಿಕೇರಿ : ವಿವಿಧ ಪ್ರಾಂತ್ಯವಾಗಿ ಹರಿದು ಹಂಚಿ ಹೋಗಿದ್ದ ದೇಶವನ್ನು ಒಗ್ಗೂಡಿಸಿ ಏಕತೆಯ ಮೂಲಕ ಬಲಿಷ್ಠ ಭಾರತ ದೇಶವನ್ನು ಕಟ್ಟುವಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ಬಹಳ ಮಹತ್ವದ ಪಾತ್ರವನ್ನು ವಹಿಸಿದ್ದರು ಎಂದು ವಿರಾಜಪೇಟೆ ಕಾವೇರಿ ಕಾಲೇಜಿನ ಪ್ರಾಂಶುಪಾಲ ಬೆನೆಡಿಕ್ಟ್ ಆರ್ ಸಲ್ದಾನ ಅಭಿಪ್ರಾಯಪಟ್ಟರು. ಕಾಲೇಜಿನಲ್ಲಿ ನಡೆದ ಏಕತಾ ದಿನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಭಾರತದ ಉಕ್ಕಿನ ಮನುಷ್ಯ ಪಟೇಲರು ದೇಶವನ್ನು ಒಗ್ಗೂಡಿಸಲು ಪಟ್ಟ ಶ್ರಮದ ಪ್ರತಿಫಲವಾಗಿ ನಾವಿಂದು ಒಗ್ಗೂಡಿದ ಭಾರತವನ್ನು ಕಾಣುತ್ತಿದ್ದೇವೆ. ಅವರು ಪಟ್ಟ ಶ್ರಮಕ್ಕೆ ದೇಶವಿಂದು […]
ರಾಜ್ಯದಲ್ಲಿ ನವೆಂಬರ್ ಕ್ರಾಂತಿ – ಸಿಎಂ ಬದಲಾವಣೆ..? – ಎ.ಎಸ್. ಪೊನ್ನಣ್ಣ ಹೇಳಿದ್ದೇನು..?

ಮಡಿಕೇರಿ : ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ ದೊಡ್ಡಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ, ಸಿಎಂ ಬದಲಾವಣೆಯ ಚರ್ಚೆಯೇ ಅಪ್ರಸ್ತುತ ಎಂದು ಹೇಳಿದ್ದಾರೆ. ನವೆಂಬರ್ ಕ್ರಾಂತಿ ಬಗ್ಗೆ ರಾಜಕೀಯ ವಲಯದಲ್ಲಿ ಚರ್ಚೆಯಾಗುತ್ತಿರುವ ಬಗ್ಗೆ ಮಡಿಕೇರಿಯಲ್ಲಿ ಪ್ರತಿಕ್ರಿಯಿಸಿದ ಅವರು, ಸಂಪುಟ ಪುನಾರಚನೆಯನ್ನೇ ‘ಕ್ರಾಂತಿ’ ಅಂತ ಹೇಳುತ್ತಿದ್ದಾರೆ. ಮುಖ್ಯಮಂತ್ರಿ ಬದಲಾವಣೆ ಚರ್ಚೆ ಅಪ್ರಸ್ತುತ, ಅನಗತ್ಯ ಎನ್ನುವ ಮೂಲಕ ಸಿದ್ದರಾಮಯ್ಯ ಪರ ಬ್ಯಾಟ್ ಬೀಸಿದ್ದಾರೆ. ಶಾಸಕಾಂಗ ಪಕ್ಷದ ಸಭೆ ನಡೆದಿಲ್ಲ. ವರಿಷ್ಠರು ಶಾಸಕರ […]