ಬೆಂಬಲ ಬೆಲೆಯಡಿ ಭತ್ತ ಖರೀದಿ ಜಿಲ್ಲೆಯಲ್ಲಿ ಆರಂಭ – ರೈತರ ಹೆಸರು ನೋಂದಣಿಗೆ ಜಿಲ್ಲಾಧಿಕಾರಿ ಮನವಿ

ಮಡಿಕೇರಿ : ‘ಸರ್ಕಾರದ ಬೆಂಬಲ ಬೆಲೆಯಡಿ ಜಿಲ್ಲೆಯಲ್ಲಿ ಭತ್ತ ಹಾಗೂ ರಾಗಿಯನ್ನು ಖರೀದಿ ಮಾಡಲಾಗುತ್ತಿದ್ದು, ಈ ಸಂಬಂಧ ರೈತರ ಹೆಸರು ನೋಂದಣಿ ಕಾರ್ಯ ಈಗಾಗಲೇ ಆರಂಭವಾಗಿದ್ದು, ಜಿಲ್ಲೆಯ ರೈತರು ಈ ಯೋಜನೆಯ ಸದ್ಬಳಕೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಕೋರಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ೨೦೨೫-೨೬ ನೇ ಸಾಲಿನ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಬುಧವಾರ ನಡೆದ ಟಾಸ್ಕ್ ಪೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕೇಂದ್ರ ಸರ್ಕಾರದ ಆದೇಶದಂತೆ ೨೦೨೫-೨೬ ನೇ ಸಾಲಿಗೆ […]

ಕೊಡಗು ಜಿಲ್ಲೆಯಲ್ಲಿ ತಾಯಿ ಮರಣ ಪ್ರಮಾಣ ಇಳಿಕೆ – ಡಿಎಚ್‌ಒ ಡಾ. ಸತೀಶ್‌ ಕುಮಾರ್‌

ಮಡಿಕೇರಿ : ಸ್ವಾಮಿ ವಿವೇಕಾನಂದ ಯೂತ್ ಮೂವ್‌ಮೆಂಟ್ ಕೊಡಗು ಶಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಮಡಿಕೇರಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಕೊಡಗು, ರೋಟರಿ ಮಿಸ್ಟಿ ಹಿಲ್ಸ್ ಮಡಿಕೇರಿ, ಫೀ.ಮಾ.ಕೆ.ಎಂ ಕಾರ್ಯಪ್ಪ ಕಾಲೇಜು ಹಾಗೂ ಸಮುದಾಯದ ಸಹಭಾಗಿತ್ವದಲ್ಲಿ ವಿಶ್ವ ಉಪಶಮನ ಆರೈಕೆ ದಿನಾಚರಣೆ ನಡೆಯಿತು. ಮಡಿಕೇರಿಯ ಬಾಲಭವನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ಡಿಎಚ್‌ಒ ಡಾ. ಸತೀಶ್‌ ಕುಮಾರ್‌ ಉದ್ಘಾಟಿಸಿದರು. ರಾಜ್ಯದ […]

ಕೊಡವ ಮುಸ್ಲಿಂ ಸ್ಪೋರ್ಟ್ಸ್ ಅಕಾಡೆಮಿ ಅಸ್ತಿತ್ವಕ್ಕೆ – ನೂತನ ಅಧ್ಯಕ್ಷರಾಗಿ ಆಲೀರ ರಶೀದ್ ಆಯ್ಕೆ

ಗೋಣಿಕೊಪ್ಪ : ಕ್ರೀಡಾ ಚಟುವಟಿಕೆಗಳ ಆಯೋಜನೆ ಮತ್ತು ಕ್ರೀಡಾ ಪ್ರತಿಭೆಗಳ ಉತ್ತೇಜನಕ್ಕೆ ಸಂಬಂಧಿಸಿದಂತೆ ಮಾತ್ರ ಸೀಮಿತವಾಗಿ ಕೊಡವ ಮುಸ್ಲಿಂ ಸ್ಪೋರ್ಟ್ಸ್ ಅಕಾಡೆಮಿಯನ್ನು (ಕೆ.ಎಂ.ಎಸ್. ಎ.) ನೂತನವಾಗಿ ಅಸ್ತಿತ್ವಕ್ಕೆ ತರಲಾಗಿದೆ. ಪೊನ್ನಂಪೇಟೆ ಪಟ್ಟಣ ಪಂಚಾಯಿತಿಯ ಉಪಾಧ್ಯಕ್ಷ ಆಲೀರ ರಶೀದ್ ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ. ಕೊಡವ ಮುಸ್ಲಿಂ ಸ್ಪೋರ್ಟ್ಸ್ ಅಕಾಡೆಮಿ ಸ್ಥಾಪನೆ ಕುರಿತು ವಿರಾಜಪೇಟೆಯಲ್ಲಿ ನಡೆದ ರಚನಾ ಸಭೆಯಲ್ಲಿ ಈ ಅಂತಿಮ ತೀರ್ಮಾನ ಕೈಗೊಳ್ಳಲಾಗಿದೆ. ಅಕಾಡೆಮಿಯ ಪ್ರಧಾನ ಕಾರ್ಯದರ್ಶಿಗಳಾಗಿ, ಹಿರಿಯ ಕ್ರೀಡಾಪಟು ಕೊಟ್ಟೋಳಿ ಗ್ರಾಮದ ಮೀತಲತಂಡ ಎಂ. ಇಸ್ಮಾಯಿಲ್ […]

ಸುಬೇದಾರ್ ಗುಡ್ಡೆಮನೆ ಅಪ್ಪಯ್ಯ ಗೌಡರ ಸಂಸ್ಮರಣಾ ದಿನಾಚರಣೆ ಅ.31ಕ್ಕೆ

ಮಡಿಕೇರಿ : ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಇವರ ಆಶ್ರಯದೊಂದಿಗೆ ಸ್ವಾತಂತ್ರ್ಯ ಹೋರಾಟಗಾರ ಗುಡ್ಡೆಮನೆ ಅಪ್ಪಯ್ಯಗೌಡ ಸಂಸ್ಮರಣಾ ಕಾರ್ಯಕ್ರಮ ಅಕ್ಟೋಬರ್ 31 ರಂದು ನಡೆಯಲಿದೆ. ಬೆಳಗ್ಗೆ 9.30ಕ್ಕೆ ಗುಡ್ಡೆಮನೆ ಅಪ್ಪಯ್ಯ ಗೌಡರ ಸ್ಮಾರಕ ಬಳಿ ಗೌರವ ನಮನ ಹಾಗೂ ಕೋಟೆ ಆವರಣದಲ್ಲಿ ಸಭಾ ಕಾರ್ಯಕ್ರಮ ನಡೆಯಲಿದೆ. ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್ ಬೋಸರಾಜು, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಸದಾನಂದ ಮಾವಜಿ, ಇತಿಹಾಸ […]

ಗ್ಯಾರಂಟಿ ಯೋಜನೆ ಸಂಬಂಧ ಜಿಲ್ಲಾಮಟ್ಟದಲ್ಲಿ ಸಮ್ಮೇಳನ – ಧರ್ಮಜ ಉತ್ತಪ್ಪ

ಮಡಿಕೇರಿ : ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯಿಂದ ಪಡಿತರ ಕಾರ್ಡುಗಳ ಪರಿಷ್ಕರಣಾ ಕಾರ್ಯ ನಡೆಯುತ್ತಿದ್ದು, ಈ ಅವಕಾಶವನ್ನು ಅರ್ಹರು ಬಳಸಿಕೊಳ್ಳುವಂತಾಗಬೇಕು ಎಂದು ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿ ಜಿಲ್ಲಾ ಘಟಕದ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ ತಿಳಿಸಿದ್ದಾರೆ. ನಗರದ ಜಿಲ್ಲಾ ಪಂಚಾಯತ್ ಕೆಡಿಪಿ ಸಭಾಂಗಣದಲ್ಲಿ ಮಂಗಳವಾರ ನಡೆದ ಗ್ಯಾರಂಟಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನ ಮತ್ತು ಮೇಲ್ವಿಚಾರಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯ ಅರ್ಹರಿಗೆ ಬಿಪಿಎಲ್‌ನಿಂದ ಎಪಿಎಲ್‌ಗೆ ಪಡಿತರ ಚೀಟಿ ವರ್ಗಾವಣೆ ಆಗಿದ್ದಲ್ಲಿ, ಆಹಾರ […]

ಮಕ್ಕಂದೂರು, ಮುಕ್ಕೋಡ್ಲು ಗೌಡ ಮಹಿಳಾ ಒಕ್ಕೂಟ ರಚನೆ – ಅಧ್ಯಕ್ಷರಾಗಿ ತೋಟೆರ ನವೀನ ಕುಮಾರಿ ಆಯ್ಕೆ

ಮಡಿಕೇರಿ : ಮಕ್ಕಂದೂರು ಮತ್ತು ಮುಕ್ಕೋಡ್ಲು ಗೌಡ ಮಹಿಳಾ ಒಕ್ಕೂಟ ನೂತನವಾಗಿ ರಚನೆಗೊಂಡಿದ್ದು, ಅಧ್ಯಕ್ಷರಾಗಿ ತೋಟೆರ ನವೀನ ಕುಮಾರಿ ಜಯಪ್ರಕಾಶ್ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ತೇಲಬೈಲು ಅಸಿಕಾ ದಿನೇಶ ಆಯ್ಕೆಯಾಗಿದ್ದಾರೆ. ಖಜಾಂಚಿಯಾಗಿ ಕೊಟ್ಟಗೇರಿಯನ ಕಲ್ಪನಾ ಪ್ರದೀಪ್, ಉಪಾಧ್ಯಕ್ಷರಾಗಿ ಕುಂಬುಗೌಡನ ಕವಿತಾ ಸುನಿಲ್, ಸಹಕಾರ್ಯದರ್ಶಿಯಾಗಿ ಮಳ್ಳನ ಅನಿತಾ ವಿಜಯಕುಮಾರ್, ಸಂಘಟನಾ ಕಾರ್ಯದರ್ಶಿಯಾಗಿ ಕುಡೆಕಲ್ಲು ಸವಿತಾ ಸಂತೋಷ್ ಹಾಗೂ ಕುಂಬುಗೌಡನ ನಿಶ್ಚಲ್ ಜಗದೀಶ್ ನೇಮಕಗೊಂಡರು. ಸದಸ್ಯರಾಗಿ ಲಕ್ಕಪನ ಸೌಮ್ಯ ವಿಜೇತ, ಹಿರೇಗೌಡನ ಚಲನ ತೀರ್ಥಕುಮಾರ್, ಕೋಳಿಬೈಲು ಅನಿತಾ ರಂಜು, ಮಳ್ಳನ […]

ಮನುಕುಲದ ಒಳಿತಿಗೆ ಪ್ರಕೃತಿ ಸಂರಕ್ಷಿಸಿ – ಭಾರತೀಯ ಶಿಕ್ಷಣ ಮಂಡಲ ಅಧ್ಯಕ್ಷ ಬಿ.ಆರ್. ಶಂಕರಾನಂದ್ ಕರೆ

ಕುಶಾಲನಗರ : ಪ್ರಕೃತಿಯನ್ನು ತಾಯಿಯಂತೆ ಪೂಜಿಸಿ ಆರಾಧಿಸಿದಲ್ಲಿ ಮಾತ್ರ ಜೀವ ವೈವಿಧ್ಯತೆ ಸಂರಕ್ಷಿಸಲು ಸಾಧ್ಯ ಎಂದು ಭಾರತೀಯ ಶಿಕ್ಷಣ ಮಂಡಲ ಅಧ್ಯಕ್ಷ ಬಿ.ಆರ್. ಶಂಕರಾನಂದ ಆಶಿಸಿದರು. ಕೊಡಗು ವಿಶ್ವವಿದ್ಯಾಲಯದ ಹಾರಂಗಿ ಸಭಾಂಗಣದಲ್ಲಿ ಸೋಮವಾರ “ಹಸಿರು ಸಂರಕ್ಷಣೆಯಲ್ಲಿ ಕೊಡಗಿನ ಜೀವವೈವಿಧ್ಯ” ಎಂಬ ವಿಷಯದ ಕುರಿತು ಹಮ್ಮಿಕೊಂಡಿದ್ದ ರಾಷ್ಟ್ರೀಯ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದ ಅವರು, ಮನುಷ್ಯನ ಸ್ವಾರ್ಥದಿಂದಾಗಿ ಪ್ರಕೃತಿ ಇಂದು ವಿನಾಶದ ಅಂಚಿನಲ್ಲಿದೆ. ಅಭಿವೃದ್ಧಿಯ ಹೆಸರಿನಲ್ಲಿ ಪರಿಸರದ ಮೇಲಾಗುತ್ತಿರುವ ಅತ್ಯಾಚಾರದಿಂದಾಗಿ ಪ್ರಕೃತಿ ಮುನಿಯತೊಡಗಿದ್ದು, ಭೂಕಂಪ, ಪ್ರವಾಹಗಳು ಮನುಷ್ಯನ ನೆಮ್ಮದಿ […]

ಯೋಗಾಸನದಲ್ಲಿ ಹೊಸದಾಗಿ ಮೂರು ವಿಶ್ವ ದಾಖಲೆ ಮಾಡಿದ ಮದೆನಾಡಿನ ಬಿ.ಕೆ. ಸಿಂಚನಾ

ಮಡಿಕೇರಿ : ಯೋಗಾಸನದಲ್ಲಿ ಕೊಡಗಿನ ಸಿಂಚನಾ ಹೊಸದಾಗಿ ಮೂರು ವಿಶ್ವ ದಾಖಲೆ ಮಾಡಿದ್ದಾಳೆ. ಮದೆನಾಡಿನ ಬಿಜಿಎಸ್‌ ಶಾಲೆಯ ಆವರಣ ನೂತನ ದಾಖಲೆಗೆ ಸಾಕ್ಷಿಯಾಯಿತು. ಯೋಗಾಸನದಲ್ಲಿ ಈಗಾಗಲೆ 07 ವಿಶ್ವ ದಾಖಲೆ ಮಾಡಿದ್ದ ಸಿಂಚನಾ, ಮಂಗಳವಾರ ಮೂರು ಹೊಸ ದಾಖಲೆ ಸೃಷ್ಟಿಸುವ ಮೂಲಕ 10 ಜಾಗತಿಕ ದಾಖಲೆಯಲ್ಲಿ ತನ್ನ ಹೆಸರು ನಮೂದಿಸಿದ್ದಾರೆ. ಗೋಲ್ಡನ್‌ ಬುಕ್‌ ಆಫ್‌ ವರ್ಲ್ಡ್‌ ರೆಕಾರ್ಡ್‌ಗಾಗಿ ಶಾಲೆಯಲ್ಲಿ ವೇದಿಕೆ ಸಿದ್ಧವಾಗಿತ್ತು. ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ನಿರ್ಮಲಾನಂದ ಸ್ವಾಮೀಜಿ ಸಮ್ಮುಖದಲ್ಲಿ, ಹಲವು ಗಣ್ಯರ ಉಪಸ್ಥಿತಿಯಲ್ಲಿ ಸಿಂಚನಾ ಹೊಸ […]

ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ : ಸಿದ್ದರಾಮಯ್ಯ ಅಚ್ಚರಿಯ ಹೇಳಿಕೆ..!

ಮಂಗಳೂರು : ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರ ಮತ್ತೆ ಚರ್ಚೆಯಲ್ಲಿದೆ. ಸರ್ಕಾರದ ಎರಡೂವರೆ ವರ್ಷ ಅವಧಿ ಪೂರ್ಣಗೊಂಡ ಬಳಿಕ ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿಯಾಗುತ್ತಾರೆಂಬ ಚರ್ಚೆ ರಾಜಕೀಯ ವಲಯದಲ್ಲಿ ಜೋರಾಗಿ ನಡೆಯುತ್ತಿದೆ. ಈ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಮುಂದಿನ 05 ವರ್ಷ ನಾನೇ ಮುಖ್ಯಮಂತ್ರಿ ಅಂತ ಎಲ್ಲಾ ಕಡೆ ಹೇಳುತ್ತಾ ಬರುತ್ತಿದ್ದರು ಸಿದ್ದರಾಮಯ್ಯ. ಆದರೆ ಇವತ್ತು ಮಂಗಳೂರಿನಲ್ಲಿ ಅವರಿಂದ ಬಂದ ಪ್ರತಿಕ್ರಿಯೆ ಅಚ್ಚರಿ ಹುಟ್ಟಿಸಿದೆ. ಮುಂದೆ ನೀವೇ ಮುಖ್ಯಮಂತ್ರಿಯಾಗಿರುತ್ತೀರಾ ಅಂತ ಪತ್ರಕರ್ತರೊಬ್ಬರು ಕೇಳಿದ ಪ್ರಶ್ನೆಗೆ […]

ಸಮಾಜದಲ್ಲಿ ದ್ವೇಷಪೂರಿತ ಭಾಷಣ ಮಾಡುವವರ ವಿರುದ್ಧFIR – ಮುಖ್ಯಮಂತ್ರಿ ಸಿದ್ದರಾಮಯ್ಯ

ಮಂಗಳೂರು : ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ ದಾಖಲಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮಂಗಳೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿ, ದ್ವೇಷಪೂರಿತ ಭಾಷಣ ಮಾಡುವವರ ಮೇಲೆ ಎಫ್ ಐ ಆರ್ ದಾಖಲಾಗುತ್ತದೆ. ಅವರು ಮಹಿಳೆಯರಿಗೆ ಅಗೌರವವಾಗಿ ಭಾಷಣದಲ್ಲಿ ಮಾತನಾಡಿದ್ದಾರೆ ಎಂದರು. *ಎಸ್ ಐ ಟಿ ವರದಿ* […]