ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆ – ಉಪಾಧ್ಯಕ್ಷ ಸ್ಥಾನ ಆಕಾಂಕ್ಷಿ ರಮೇಶ್‌ ಕುಟ್ಟಪ್ಪ ನಾಮಪತ್ರ ಸಲ್ಲಿಕೆ

ಬೆಂಗಳೂರು : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆ ಪ್ರಕ್ರಿಯೆ ಆರಂಭವಾಗಿದೆ. ರಾಜ್ಯ ಉಪಾಧ್ಯಕ್ಷ ಸ್ಥಾನದ ಆಕಾಂಕ್ಷಿ ಅಜ್ಜಮಾಡ ರಮೇಶ್‌ ಕುಟ್ಟಪ್ಪ ನಾಮಪತ್ರ ಸಲ್ಲಿಸಿದ್ದಾರೆ. 2022- 25ನೇ ಸಾಲಿನಲ್ಲಿ ಉಪಾಧ್ಯಕ್ಷರಾಗಿ ಜವಾಬ್ದಾರಿ ನಿರ್ವಹಿಸಿದ್ದ ಇವರು ಇದೀಗ ಎರಡನೇ ಅವಧಿಗೆ ಆಕಾಂಕ್ಷಿಯಾಗಿ ಸ್ಪರ್ಧಿಸಿದ್ದಾರೆ. 25 ವರ್ಷದಿಂದ ಪತ್ರಕರ್ತ ವೃತ್ತಿಯಲ್ಲಿರುವ ಇವರು ವಿವಿಧ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹಿರಿಯ ವರದಿಗಾರನಾಗಿ ಕರ್ತವ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. ಸಂಘಟನಾತ್ಮಕವಾಗಿಯೂ ಸಕ್ರಿಯರಾಗಿರುವ ಇವರು ಎರಡು ಅವಧಿಗೆ ಕೊಡಗು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ, ಎರಡು […]

ಬೀದಿ ಶ್ವಾನಗಳ ಹಾವಳಿ – ಎಲ್ಲಾ ರಾಜ್ಯ ಸರ್ಕಾರಗಳಿಗೆ ಸುಪ್ರೀಂ ಕೋರ್ಟ್‌ ನೋಟಿಸ್..‌!

ನವದೆಹಲಿ : ಇತ್ತೀಚಿನ ದಿನದಲ್ಲಿ ಬೀದಿ ಶ್ವಾನಗಳ ಹಾವಳಿ ಮಿತಿ ಮೀರಿದೆ. ಈ ಸಮಸ್ಯೆ ಇಂಥದ್ದೇ ಪ್ರದೇಶಕ್ಕೆ ಸೀಮಿತ ಅಂತ ಹೇಳುವುದಕ್ಕಾಗಲ್ಲ. ದೇಶದ ಉದ್ದಗಲಕ್ಕೂ ಇದು ಗಂಭೀರ ಸಮಸ್ಯೆಯಾಗಿ ಪರಿಣಮಿಸಿದೆ. ಈ ವಿಚಾರವನ್ನು ಸುಪ್ರೀಂ ಕೋರ್ಟ್‌ ಗಂಭೀರವಾಗಿ ಪರಿಗಣಿಸಿದ್ದು, ಎಲ್ಲಾ ರಾಜ್ಯ ಸರ್ಕಾರಗಳಿಗೆ ನೋಟಿಸ್‌ ಜಾರಿ ಮಾಡಿದೆ. ಬೀದಿ ಶ್ವಾನಗಳ ಹಾವಳಿ ಹೆಚ್ಚಾದ ಸಂಬಂಧ ಪ್ರಕರಣದ ವಿಚಾರಣೆ ನಡೆಸಿದ ಸರ್ವೋಚ್ಛ ನ್ಯಾಯಾಲಯ, ಎಲ್ಲಾ ರಾಜ್ಯಗಳಿಂದಲೂ ಬೀದಿ ಶ್ವಾನಗಳ ದಾಳಿ ಬಗ್ಗೆ ವರದಿಗಳು, ದೂರುಗಳು ಬರುತ್ತಿವೆ ಎಂದು ಆತಂಕ […]

ಕರ್ನಾಟಕದ ಕಾಫಿಗೆ ಪ್ರಧಾನಿ ಮೆಚ್ಚುಗೆ – ಮನ್‌ ಕೀ ಬಾತ್‌ನಲ್ಲಿ ಕೊಡಗಿನ ಕಾಫಿಯನ್ನು ಉಲ್ಲೇಖಿಸಿ ಮೋದಿ

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿಯವರ ತಿಂಗಳ ʼಮನದ ಮಾತುʼ ಕಾರ್ಯಕ್ರಮದಲ್ಲಿ ದೇಶದ ವೈಶಿಷ್ಟ್ಯತೆಯನ್ನು ಉಲ್ಲೇಖಿಸುತ್ತಾ ಇರುತ್ತಾರೆ. ಈ ಬಾರಿ ಕಾಫಿ ಬಗ್ಗೆ ಪ್ರಸ್ತಾಪಿಸುತ್ತಾ ಕೊಡಗು ಜಿಲ್ಲೆಯ ಕೊಡುಗೆಯನ್ನು ಕೊಂಡಾಡಿದ್ದಾರೆ. ಅ.26ರಂದು ಪ್ರಸಾರವಾದ ಮನ್‌ ಕೀ ಬಾತ್‌ 127ನೇ ಸಂಚಿಕೆಯಲ್ಲಿ, ದಕ್ಷಿಣ ಭಾರತದಲ್ಲಿ ಬೆಳೆಯುವ ಕಾಫಿಯ ವಿಶೇಷತೆ ಬಗ್ಗೆ ಮಾತನಾಡಿದರು. ದೇಶದ ಒಟ್ಟು ಕಾಫಿ ಉತ್ಪನ್ನದ ಪೈಕಿ ಶೇ 70ರಷ್ಟನ್ನು ಕರ್ನಾಟಕದಲ್ಲೇ ಬೆಳೆಯಲಾಗುತ್ತಿದೆ. ನಂತರದ ಸ್ಥಾನದಲ್ಲಿ ಕೇರಳ, ತಮಿಳುನಾಡು, ಆಂಧ್ರ ಪ್ರದೇಶ ಮತ್ತು ಒಡಿಶಾ ಇದೆ. ದೇಶದಲ್ಲಿ […]

ಕೊಡಗಿನಲ್ಲಿ ಮಿನಿ ವಿಮಾನ ನಿಲ್ದಾಣ – ಮಡಿಕೇರಿ ವ್ಯಾಪ್ತಿಯಲ್ಲಿ 120 ಎಕ್ರೆ ಜಾಗ ಖರೀದಿಗೆ ಸರ್ಕಾರದ ಒಪ್ಪಿಗೆ : ಶಾಸಕ ಮಂತರ್‌ ಗೌಡ ಮಾಹಿತಿ

ಮಡಿಕೇರಿ : ಜಿಲ್ಲೆಯಲ್ಲಿ ಮಿನಿ ವಿಮಾನ ನಿಲ್ದಾಣ ಸ್ಥಾಪನೆಗೆ ರಾಜ್ಯ ಸರಕಾರ ತಯಾರಿದ್ದು, ಮಡಿಕೇರಿ ಸಮೀಪ ಖಾಸಗಿ ವ್ಯಕ್ತಿಗಳಿಂದ ಕನಿಷ್ಠ ೧೨೦ ಎಕರೆ ಸಮತಟ್ಟು ಜಾಗ ಲಭ್ಯವಿದ್ದಲ್ಲಿ ಅದನ್ನು ಮಾರುಕಟ್ಟೆ ದರದಲ್ಲಿ ಖರೀದಿಸಲು ಸರಕಾರ ಒಪ್ಪಿಗೆ ನೀಡಿದೆ ಎಂದು ಮಡಿಕೇರಿ ಕ್ಷೇತ್ರದ ಶಾಸಕ ಡಾಕ್ಟರ್ ಮಂತರ್ ಗೌಡ ಹೇಳಿದರು. ಮಡಿಕೇರಿ ಹೊರವಲಯದ ಮಹಿಂದ್ರ ರೆಸಾರ್ಟ್‌ನಲ್ಲಿ ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ವಾಣಿಜ್ಯ ಮಹಾ ಸಂಸ್ಥೆ ವತಿಯಿಂದ ಸಂವಾದ ಕಾರ್ಯಕ್ರಮ ಹಾಗೂ ಕೊಡಗು ಜಿಲ್ಲೆಯ ಪ್ರವಾಸೋದ್ಯಮ ಹಾಗೂ ಇತರ […]

ಬರವಣಿಗೆ ನೀಡುವ ಅಮೂಲ್ಯ ಸಾರವನ್ನು AI, ಗೂಗಲ್‌ ನೀಡಲಾರದು – ಮಾಳೇಟಿರ ಸೀತಮ್ಮ ವಿವೇಕ್‌ ಅಭಿಪ್ರಾಯ

ಮಡಿಕೇರಿ : ಸಾಮಾಜಿಕ ಜಾಲತಾಣಗಳ ಪ್ರಭಾವದಿಂದಾಗಿ ಇಂದು ಪುಸ್ತಕ ಓದುವವರ ಸಂಖ್ಯೆ ಬಹಳ ವಿರಳವಾಗಿದೆ. ಆದರೆ ಬರವಣಿಗೆ ನೀಡುವ ಅಮೂಲ್ಯ ಸಾರವನ್ನು ಎಐ ಅಥವಾ ಗೂಗಲ್ ತಂತ್ರಜ್ಞಾನ ನೀಡಲು ಸಾಧ್ಯವಿಲ್ಲವೆಂದು ಸಾಹಿತಿ ಹಾಗೂ ಸಮಾಜ ಸೇವಕಿ ಮಾಳೇಟಿರ ಸೀತಮ್ಮ ವಿವೇಕ್ ಹೇಳಿದರು. ಪತ್ರಿಕಾ ಭವನದಲ್ಲಿ ನಡೆದ ಕೊಟ್ಟಂಗಡ ಕವಿತಾ ವಾಸುದೇವ ರಚಿತ, ಕೊಡವ ಮಕ್ಕಡ ಕೂಟದ 119ನೇ ಪುಸ್ತಕ ‘ಬಯಂದ ಬಾಳ್’ ಕೊಡವ ಕೃತಿಯ ಬಿಡುಗಡೆ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು. ಯಾವುದೇ ನಿರೀಕ್ಷೆಗಳಿಲ್ಲದೆ ಸಾಹಿತ್ಯವನ್ನು ಸಮಾಜಕ್ಕೆ ನೀಡಬೇಕು. […]

ಅಮೃತ್-2 ಯೋಜನೆ ಅನುಷ್ಠಾನದಿಂದ ನಗರದಲ್ಲಿ ಭೂಕುಸಿತ ಭೀತಿ – ಕೆ.ಎಂ. ಗಣೇಶ್‌ ಆತಂಕ

ಮಡಿಕೇರಿ : ನಗರದಲ್ಲಿ ಅಮೃತ್-2 ಯೋಜನೆಯ ಕಾಮಗಾರಿ ಅವೈಜ್ಞಾನಿಕವಾಗಿ ನಡೆಯುತ್ತಿದೆ ಎಂದು ನಗರಸಭೆ ಮಾಜಿ ಸದಸ್ಯ ಕೆ.ಎಂ. ಗಣೇಶ್‌ ಆರೋಪಿಸಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರ ನಗರ ಪುನರುಜ್ಜೀವನ ಮತ್ತು ಜಲ ಸಂರಕ್ಷಣೆಗಾಗಿ ಅಮೃತ್ 2 ಯೋಜನೆ ಜಾರಿಗೆ ತಂದಿದೆ. ನಗರದ ಜನತೆಗೆ ಈ ಯೋಜನೆಯಿಂದ ಮೂರು ಕಾಸಿನ ಪ್ರಯೋಜನವಿಲ್ಲ. ರಸ್ತೆಗಳನ್ನು ಅಗೆದು ಹಾಳು ಮಾಡಲಾಗುತ್ತಿದೆ. ಬಯಲು ಸೀಮೆಯಾದರೆ ಸಮತಟ್ಟು ಪ್ರದೇಶವಾಗಿರುವುದರಿಂದ ಸಮಸ್ಯೆ ಉಂಟಾಗುವುದಿಲ್ಲ. ಆದರೆ ಮಡಿಕೇರಿ ಗುಡ್ಡಗಾಡು ಪ್ರದೇಶ. ಇಲ್ಲಿ ಕಾಮಗಾರಿಯಿಂದ ಭೂಕುಸಿತ ಸಂಭವವೂ ಹೆಚ್ಚಿದೆ […]

ಕೊಡಗು ಜಿಲ್ಲೆಯಲ್ಲಿ ನಿನ್ನೆ ದಾಖಲಾದ ಮಳೆಯ ವಿವರ ಇಲ್ಲಿದೆ ನೋಡಿ…

ಮಡಿಕೇರಿ : ಜಿಲ್ಲೆಯಲ್ಲಿ ಗುರುವಾರ ಬೆಳಗ್ಗೆ ೮.೩೦ಕ್ಕೆ ಕೊನೆಗೊಂಡಂತೆ ಕಳೆದ ೨೪ ಗಂಟೆ ಅವಧಿಯಲ್ಲಿ ಸರಾಸರಿ ೫೩.೬೯ ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ ೪.೪೧ ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ ೨೯೯೮.೫೯ ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ ೨೯೫೩.೯೨ ಮಿ.ಮೀ ಮಳೆಯಾಗಿತ್ತು. ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ ೩೮.೨೮ ಮಿ.ಮೀ. ಕಳೆದ ವರ್ಷ ಇದೇ ದಿನ ೯.೫೦ ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ ೪೪೪೬.೫೧ ಮಿ.ಮೀ, ಕಳೆದ ವರ್ಷ ಇದೇ […]

ರಕ್ಷಿತಾ ಶೆಟ್ಟಿಯನ್ನು ನಿಂದಿಸಿದ ಅಶ್ವಿನಿ ಗೌಡ ವಿರುದ್ಧ ದಾಖಲಾಯ್ತು ಕೇಸ್..!‌ – ಇಲ್ಲಿದೆ ಮಾಹಿತಿ

ಬೆಂಗಳೂರು : ಬಿಗ್‌ಬಾಸ್‌ ಕನ್ನಡ ಸೀಸನ್‌ 12 ವಿವಿಧ ಕಾರಣಗಳಿಂದ ಸುದ್ದಿಯಾಗುತ್ತಲೇ ಇದೆ. ವಾರದ ಹಿಂದಷ್ಟೇ ಜಾಹ್ನವಿ, ಅಶ್ವಿನಿ ಗೌಡ, ರಕ್ಷಿತಾ ಶೆಟ್ಟಿ ನಡುವಿನ ಗಲಾಟೆಯ ವಿಚಾರಕ್ಕೆ ಸಿಕ್ಕಾಪಟ್ಟೆ ಸುದ್ದಿಯಾಗಿತ್ತು. ರಾಜ್ಯಾದ್ಯಂತ ಬಿಗ್‌ಬಾಸ್‌ ವೀಕ್ಷಕರು ರಕ್ಷಿತಾ ವಿರುದ್ಧ ಮುಗಿಬಿದ್ದ ಜಾಹ್ನವಿ ಹಾಗೂ ಅಶ್ವಿನಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಇದಾದ ನಂತರ ಕಿಚ್ಚನ ಪಂಚಾಯಿತಿಯಲ್ಲಿ ಸುದೀಪ್‌ ಕೂಡಾ ಆ ಇಬ್ಬರನ್ನು ತರಾಟೆಗೆ ತೆಗೆದುಕೊಂಡಿದ್ದರು. ಬಳಿಕ ರಕ್ಷಿತಾ ಬಳಿ ಅಶ್ವಿನಿ ಕ್ಷಮೆಯನ್ನೂ ಕೇಳಿದ್ದರು. ಇದೀಗ ಹೊಸ ವಿಷಯ ಏನೆಂದರೆ ರಕ್ಷಿತಾಳನ್ನು […]

ಕೆ.ಎಂ.ಎ. ವತಿಯಿಂದ ಮುಸ್ಕಾನ್ ಸೂಫಿಗೆ ಸನ್ಮಾನ

ಪೊನ್ನಂಪೇಟೆ: ಚೊಚ್ಚಲ ಕೃತಿಯ ಮೂಲಕ ಅಂತರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದು ಸಾಧನೆಗೈದ ದುದ್ದಿಯಂಡ ಮುಸ್ಕಾನ್ ಸೂಫಿ ಅವರನ್ನು ಕೊಡವ ಮುಸ್ಲಿಂ ಅಸೋಸಿಯೇಷನ್ (ಕೆ.ಎಂ.ಎ.) ವತಿಯಿಂದ ಸನ್ಮಾನಿಸಲಾಯಿತು. ಕೊಡವ ಮುಸ್ಲಿಂ ಅಸೋಸಿಯೇಷನ್ ವತಿಯಿಂದ ಕೊಡವ ಮುಸ್ಲಿಂ ಶಿಕ್ಷಣ ನಿಧಿಯ ಸಹಯೋಗದಲ್ಲಿ ವಿರಾಜಪೇಟೆಯ ಸಂತ ಅನ್ನಮ್ಮ ಪ್ಯಾರಿಶ್ ಸಭಾಂಗಣದಲ್ಲಿ ಇತ್ತೀಚಿಗೆ ನಡೆದ ಕೆಎಂಎ ಪ್ರತಿಭಾ ಪುರಸ್ಕಾರ-2025 ವಿತರಣೆ ಮತ್ತು ಸನ್ಮಾನ ಸಮಾರಂಭದಲ್ಲಿ ಮುಸ್ಕಾನ್ ಸೂಫಿ ಅವರನ್ನು ಸಂಸ್ಥೆಯ ಪರವಾಗಿ ಸಾಂಪ್ರದಾಯಿಕ ಶೈಲಿಯಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ಆರಂಭದಿಂದಲೇ ಇಂಗ್ಲೀಷ್ ಸಾಹಿತ್ಯದಲ್ಲಿ ಆಸಕ್ತಿ […]

ಹುಲಿತಾಳ : ಧಾರಾಕಾರ ಮಳೆಗೆ ಮನೆಯ ಗೋಡೆ ಕುಸಿದು ಹಾನಿ

ಮಡಿಕೇರಿ : ಕೊಡಗು ಜಿಲ್ಲೆಯ ವಿವಿಧೆಡೆ ನಿನ್ನೆ ಸಂಜೆ ಧಾರಾಕಾರ ಮಳೆಯಾಗಿದ್ದು, ಹಲವೆಡೆ ಸಣ್ಣ ಪುಟ್ಟ ಅನಾಹುತ ಸಂಭವಿಸಿದ ವರದಿಯಾಗಿದೆ. ಮಡಿಕೇರಿ ತಾಲೂಕಿನ ಹುಲಿತಾಳ ಗ್ರಾಮದಲ್ಲಿ ಮನೆಯೊಂದರ ಗೋಡೆ ಕುಸಿದ ಭಾಗಶಃ ಹಾನಿಯಾಗಿದೆ. ಇಲ್ಲಿನ ಎಚ್‌.ಟಿ. ಜಾನಕಿ ಎಂಬವರ ಮನೆಯ ಮುಂಭಾಗದ ಕೋಣೆಯ ಗೋಡೆ ರಾತ್ರಿ 8.30ರ ವೇಳೆಗೆ ಕುಸಿದಿದೆ. ಮನೆಯಲ್ಲಿ ಜನ ಇದ್ದರಾದರೂ, ಒಳ ಭಾಗದಲ್ಲಿದ್ದ ಕಾರಣ ಯಾರಿಗೂ ಸಮಸ್ಯೆಯಾಗಿಲ್ಲ. ಆದರೆ ಮನೆಯೊಳಗಿದ್ದ ವಸ್ತುಗಳು ಜಖಂಗೊಂಡಿದ್ದು, ಉಳಿದ ಕೋಣೆಗಳ ಗೋಡೆ ಬಿರುಕು ಬಿಟ್ಟಿದೆ. ಸ್ಥಳೀಯ ಪಂಚಾಯಿತಿಯವರು […]