ಮಡಿಕೇರಿ ನಗರ ಸಭೆ ಸ್ಥಾಯಿ ಸಮಿತಿ ಚುನಾವಣೆ – ಬಿಜೆಪಿಯ ನಾಲ್ವರು ಅವಿರೋಧ ಆಯ್ಕೆ

ಮಡಿಕೇರಿ : ಮಡಿಕೇರಿ ನಗರಸಭೆ ಸ್ಥಾಯಿ ಸಮಿತಿಗೆ ಬಿಜೆಪಿಯ ನಾಲ್ವರು ಸದಸ್ಯರು ಅವಿರೋಧ ಆಯ್ಕೆಯಾಗಿದ್ದಾರೆ. ಎಸ್.ಸಿ ಸತೀಶ್, ಅರುಣ್ ಶೆಟ್ಟಿ, ಕೆ.ಎಂ ಅಪ್ಪಣ್ಣ, ಶಾರದಾ ನಾಗರಾಜ್ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಆಯ್ಕೆಯಾದವರು. ನಗರಸಭೆ ಅಧ್ಯಕ್ಷೆ ಕಲಾವತಿ ಅಧ್ಯಕ್ಷತೆಯಲ್ಲಿ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ಈ ಆಯ್ಕೆ ಮಾಡಲಾಯಿತು. ತೆರಿಗೆ ನಿರ್ಧಾರ ಮತ್ತು ಹಣಕಾಸು ಸಮಿತಿಗೆ ಅರುಣ್ ಶೆಟ್ಟಿ, ಸಾರ್ವಜನಿಕ ಅರೋಗ್ಯ & ಶಿಕ್ಷಣ ಸಮಿತಿಗೆ ಎಸ್.ಸಿ. ಸತೀಶ್, ಪಟ್ಟಣ ಯೋಜನೆ ನಗರ ಅಭಿವೃದ್ಧಿ ಸಮಿತಿಗೆ ಅಪ್ಪಣ್ಣ, ಲೆಕ್ಕಪತ್ರ ಸಮಿತಿಗೆ […]
ಕೊಯನಾಡು ಗ್ರಾಮದಲ್ಲಿ ಜೇನು ಪೆಟ್ಟಿಗೆ ಹಾಗೂ ಹೊಲಿಗೆ ಯಂತ್ರ ಸೇರಿದಂತೆ ವಿವಿಧ ಸೌಲಭ್ಯ ವಿತರಿಸಿದ ಎ.ಎಸ್.ಪೊನ್ನಣ್ಣ

ತಾಲ್ಲೂಕಿನ ಕೊಯನಾಡು ವಲಯ ಅರಣ್ಯ ಕಚೇರಿ ಬಳಿ ನೂತನವಾಗಿ ನಿರ್ಮಿಸಿರುವ ಅಧಿಕಾರಿಗಳ ವಸತಿ ಗೃಹವನ್ನು ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಸೋಮವಾರ ಉದ್ಘಾಟಿಸಿದರು. ಕೊಯನಾಡು ಬಳಿಯ ವಲಯ ಅರಣ್ಯಾಧಿಕಾರಿ ಕಚೇರಿ ಆವರಣದಲ್ಲಿ ಏರ್ಪಡಿಸಲಾಗಿದ್ದ ಸರಳ ಸಮಾರಂಭದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ವಸತಿ ಗೃಹ ಉದ್ಘಾಟಿಸಿ ಶಾಸಕರು ಮಾತನಾಡಿದರು. 30 ಜನ ಕೃಷಿಕರಿಗೆ ತಲಾ 2 ಜೇನು ಪೆಟ್ಟಿಗೆ, ಹಾಗೂ 6 ಜನ ಮಹಿಳೆಯರಿಗೆ ಹೊಲಿಗೆಯಂತ್ರ ಹಸ್ತಾಂತರಿಸಿದರು. ಜೊತೆಗೆ […]
ನಾಲ್ವರ ಹ*ತ್ಯೆಗೈದ ಅಪರಾಧಿಗೆ ಗಲ್ಲು ಶಿಕ್ಷೆ – ತನಿಖೆಯಲ್ಲಿ ಪಾಲ್ಗೊಂಡ ಅಧಿಕಾರಿ, ಸಿಬ್ಬಂದಿಗೆ ಬೆಳ್ಳಿ ಪದಕದ ಗೌರವ..!

ಮಡಿಕೇರಿ : ಮಾರ್ಚ್‌ನಲ್ಲಿ ಪೊನ್ನಂಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ನಾಲ್ವರ ಹ*ತ್ಯೆ ಪ್ರಕರಣ ಸಂಬಂಧ ಅಪರಾಧಿಗೆ ಗಲ್ಲು ಶಿಕ್ಷೆ ವಿಧಿಸಿ ನ್ಯಾಯಾಲಯ ತೀರ್ಪು ಪ್ರಕಟಿಸಿತ್ತು. ಈ ಪ್ರಕರಣದ ತನಿಖೆಯಲ್ಲಿ ಅತ್ಯುತ್ತಮ ಕಾರ್ಯನಿರ್ವಹಣೆ ತೋರಿದ ಅಧಿಕಾರಿ ಮತ್ತು ಸಿಬ್ಬಂದಿಗೆ ಬೆಳ್ಳಿ ಪದಕ ನೀಡಿ ಗೌರವಿಸಲಾಗಿದೆ. ಪೊಲೀಸ್ ಪರೇಡ್ ಮೈದಾನದಲ್ಲಿ ನಡೆದ ಕವಾಯತು ಕಾರ್ಯಕ್ರಮದಲ್ಲಿ ಜಿಲ್ಲಾ ಎಸ್ಪಿ ಕೆ. ರಾಮರಾಜನ್ ಅವರು ಬೆಳ್ಳಿ ಪದಕವಿರುವ ಪ್ರಶಂಸನಾ ಪತ್ರವನ್ನು ನೀಡಿ ಅಭಿನಂದಿಸಿದರು.
ನನ್ನ ಕಲ್ಪನೆಯ ಸ್ವಚ್ಚ ಕೊಡಗು ಪ್ರಬಂಧ ಸ್ಪರ್ಧೆ – ರುಶೀಲ್ ಎಂ. ಪ್ರಥಮ, ಎಂ.ಎಸ್. ಸಮನ್ವಿ ರಾವ್ ದ್ವಿತೀಯ, ಸನ್ನಿಧಿ ಆರ್. ತೃತೀಯ

ಮಡಿಕೇರಿ : ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್, ಕೊಡಗು ಜಿಲ್ಲಾ ಘಟಕವತಿಯಿಂದ ನಡೆದ ನನ್ನ ಕಲ್ಪನೆಯ ಸ್ವಚ್ಚ ಕೊಡಗು ವಿಷಯದಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಮಡಿಕೇರಿ ಕೊಡಗು ವಿದ್ಯಾಲಯದ ರುಶೀಲ್ ಎಂ. ಪ್ರಥಮ, ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯ ಎಂ.ಎಸ್. ಸಮನ್ವಿ ರಾವ್ ದ್ವಿತೀಯ, ವೀರಾಜಪೇಟೆ ತ್ರಿವೇಣಿ ಶಾಲೆಯ ಸನ್ನಿಧಿ ಆರ್. ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ ಎಂದು ಪರಿಷತ್ ಜಿಲ್ಲಾಧ್ಯಕ್ಷ ಚಾಮೆರ ದಿನೇಶ್ ಬೆಳ್ಯಪ್ಪ ತಿಳಿಸಿದ್ದಾರೆ. ಸ್ಪರ್ಧೆಯಲ್ಲಿ ರುಶೀಲ್ ಎಂ. ಕೊಡಗು ವಿದ್ಯಾಲಯ […]
ಬನ್ನಿ ರಥ ಎಳೆಯೋಣ… ಆದಿಯೋಗಿ ಶಿವಾಂಗ ರಥಯಾತ್ರೆ ಡಿಸೆಂಬರ್ 22ಕ್ಕೆ ಮಡಿಕೇರಿ ಪ್ರವೇಶ

ಮಡಿಕೇರಿ : ಕೊಯಮತ್ತೂರಿನ ಈಶ ಫೌಂಡೇಷನ್ ವತಿಯಿಂದ ಹಮ್ಮಿಕೊಂಡಿರುವ ಆದಿಯೋಗಿ ಶಿವಾಂಗ ರಥಯಾತ್ರೆ ಡಿಸೆಂಬರ್ 22ರಂದು ಮಡಕೇರಿ ಪ್ರವೇಶಿಸಲಾಗಿದೆ. ಉಡುಪಿಯಿಂದ ಆರಂಭವಾಗಿರುವ ರಥಯಾತ್ರೆ ಡಿ.21ರಂದು ಸಂಪಾಜೆ ಮೂಲಕ ಕೊಡಗು ಪ್ರವೇಶಿಸಲಿದ್ದು, ಅಂದು ಮದೆನಾಡಿನಲ್ಲಿ ತಂಗಲಿದೆ. ಮಾರನೇ ದಿನ ಅಲ್ಲಿಂದ ಹೊರಟು ಸಂಜೆ ವೇಳೆಗೆ ಮಡಿಕೇರಿ ನಗರಕ್ಕೆ ಬರಲಿದೆ. ವಿಶೇಷ ವಿನ್ಯಾಸದ ಈ ರಥವನ್ನು ಭಕ್ತರು ನೆರವಿನಿಂದ ಎಳೆಯುತ್ತಾ ಸಾಗುವುದು ವಿಶೇಷ. ಮಡಿಕೇರಿಗೆ ಬರುವ ರಥ ಜನರಲ್ ತಿಮ್ಮಯ್ಯ ವೃತ್ತ, ಮಂಗೇರಿರ ಮುತ್ತಣ್ಣ ವೃತ್ತ, ಹಳೆ ಖಾಸಗಿ ಬಸ್ […]
ಬೇಟಿ ಬಚಾವೋ ಬೇಟಿ ಪಡಾವೋ: ಬಾಲ್ಯ ವಿವಾಹ ನಿಷೇಧದ ಕುರಿತು ಮಾಹಿತಿ ಕಾರ್ಯಗಾರ

ಮಡಿಕೇರಿ:- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವಾ ಪ್ರಧಿಕಾರ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕಾರ್ಮಿಕ ಇಲಾಖೆ, ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಇವರ ಸಹಯೋಗದೊಂದಿಗೆ 2025-26 ನೇ ಸಾಲಿನ ಬೇಟಿ ಬಚಾವೋ ಬೇಟಿ ಪಡಾವೋ ಕಾಯಕ್ರಮದಡಿಯಲ್ಲಿ ಬಾಲ್ಯ ವಿವಾಹ ನಿಷೇಧದ ಕುರಿತು ಆದಿಚುಂಚನಗಿರಿ ಶಿಕ್ಷಣ ಸಂಸ್ಥೆಯ ಶಾಲಾ ಮಕ್ಕಳಿಗೆ ಮಾಹಿತಿ ಕಾರ್ಯಗಾರವನ್ನು ಏರ್ಪಡಿಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಜಿಲ್ಲಾ ಮಹಿಳಾ ಸಬಲೀಕರಣ ಘಟಕದ […]
ನಾಳೆ ಕೊಡಗಿನ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

ಸೋಮವಾರಪೇಟೆ ವಿದ್ಯುತ್ ವಿತರಣಾ ಉಪ ಕೇಂದ್ರದಿಂದ ಡಿಸೆಂಬರ್, 18 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಫೀಡರ್ ನಿರ್ವಾಹಣೆ ಕಾಮಗಾರಿಯನ್ನು ಕೈಗೆತ್ತಿಕೊಂಡಿರುವುದರಿಂದ, ಬಿಳಿರೆಕೊಪ್ಪ, ಮಟ್ನಳ್ಳಿ, ಕಿಬ್ಬೆಟ್ಟ, ಅಯ್ಯಪ್ಪ ಕಾಲೋನಿ, ದೊಡ್ಡಹನಕೋಡು, ಗೆಜ್ಜೆಹನಕೋಡು, ಕಾಡುಮನೆ, ಚಿಕ್ಕತೊಳೂರು, ಕಾಗಡೀಕಟ್ಟೆ, ದೊಡ್ಡಮಳ್ತೆ, ಒಳಗುಂದ, ಸುಳಿಮಳ್ತೆ, ಹೊನ್ನಾವಳ್ಳಿ, ಕೂಗೆಕೋಡಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.
ಕಂಡಂಗಾಲದಲ್ಲಿ ಕೊಡವ ಮುಸ್ಲಿಮರ ಶೂಟಿಂಗ್ ಸ್ಪರ್ಧೆ

ಪೊನ್ನಂಪೇಟೆ: ಒಂದು ಕಾಲದಲ್ಲಿ ರಾಜ ಮನೆತನದವರ ಐಷಾರಾಮಿ ಕ್ರೀಡೆಯಾಗಿದ್ದ ಶೂಟಿಂಗ್ ಇಂದು ಜನಸಾಮಾನ್ಯರ ಕ್ರೀಡೆಯಾಗಿ ಮಾರ್ಪಟ್ಟಿದೆ. ಅದರಲ್ಲೂ ಕೊಡಗು ಜಿಲ್ಲೆಯಲ್ಲಿ ಇತ್ತೀಚಿಗೆ ಶೂಟಿಂಗ್ಸ್ ಸ್ಪರ್ಧೆಗಳು ಇತ್ತೀಚಿಗೆ ವ್ಯಾಪಕವಾಗಿ ನಡೆಯುತ್ತಿರುವುದು ಆಶಾದಾಯಕ ಬೆಳವಣಿಗೆಯಾಗಿದ್ದು, ಈ ಕಾರಣದಿಂದ ಕೊಡಗಿನಿಂದ ಮತ್ತಷ್ಟು ಶೂಟರ್ಸ್ ಗಳು ಉದಯಿಸುವ ಭರವಸೆಯಿದೆ ಎಂದು ಕೊಡವ ಮುಸ್ಲಿಂ ಅಸೋಸಿಯೇಷನ್ (ಕೆಎಂಎ) ಅಧ್ಯಕ್ಷರಾದ ದುದ್ದಿಯಂಡ ಹೆಚ್. ಸೂಫಿ ಹಾಜಿ ಹೇಳಿದರು. ಕೊಡವ ಮುಸ್ಲಿಂ ಸ್ಪೋರ್ಟ್ಸ್ ಅಕಾಡೆಮಿ (ಕೆ.ಎಂ.ಎಸ್.ಎ.) ವತಿಯಿಂದ ಬಿಟ್ಟಂಗಾಲ ಸಮೀಪದ ಕಂಡಂಗಾಲದ ಜಿಎಂಪಿ ಶಾಲಾ ಮೈದಾನದಲ್ಲಿ […]
ಕೊಡವ ಮುಸ್ಲಿಂ ಸ್ಪೋರ್ಟ್ಸ್ ಅಕಾಡೆಮಿ ಲೋಕಾರ್ಪಣೆ

ಪೊನ್ನಂಪೇಟೆ: ಗ್ರಾಮೀಣ ಪ್ರದೇಶಗಳಲ್ಲಿ ಸಾಕಷ್ಟು ಪ್ರತಿಭಾನ್ವಿತ ಕ್ರೀಡಾಪಟುಗಳಿದ್ದಾರೆ. ಆದರೆ ಅವರಿಗೆ ಪೂರಕ ವ್ಯವಸ್ಥೆ ಇಲ್ಲದಿರುವ ಕಾರಣ ಯಶಸ್ಸು ಸಾಧಿಸಲಾಗುತ್ತಿಲ್ಲ. ಆದ್ದರಿಂದ ಅರ್ಹ ಕ್ರೀಡಾ ಪ್ರತಿಭಗಳಿಗೆ ಸರಕಾರೇತರ ಸಂಘ ಸಂಸ್ಥೆಗಳ ಪ್ರೋತ್ಸಾಹ ತೀರಾ ಅಗತ್ಯ ಎಂದು ಕೊಡಗು ಜಿಲ್ಲಾ ಕೆಡಿಪಿ ಸದಸ್ಯರಾದ ಬಾಚಮಂಡ ಲವ ಚಿಣ್ಣಪ್ಪ ಹೇಳಿದರು. ಕಕ್ಕಬ್ಬೆಯ ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಯ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಲ್ಲಿನ ಮಕ್ಕಳಿಗೆ ವಿವಿಧ ಕ್ರೀಡಾ ಪರಿಕರಗಳನ್ನು ವಿತರಿಸುವುದರ ಮೂಲಕ ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಕೊಡವ ಮುಸ್ಲಿಂ ಸ್ಪೋರ್ಟ್ಸ್ […]
ಪ್ರಧಾನಿ ಮೋದಿ ಬಗ್ಗೆ ಯುವಕರಿಂದ ಅವಹೇಳನ – ಬಿಜೆಪಿಗರು ಬಹಿರಂಗವಾಗಿ ಕ್ಷಮೆ ಯಾಚಿಸಲಿ – ತೆನ್ನೀರ ಮೈನಾ ಆಗ್ರಹ

ಮಡಿಕೇರಿ : ಪ್ರಧಾನಿ ನರೇಂದ್ರ ಮೋದಿಯವರ ಬಗ್ಗೆ ಅವಹೇಳನ ಮಾಡಿ ಬಂಧಿತರಾಗಿರುವ ಕಿಡಿಗೇಡಿಗಳು ಮಡಿಕೇರಿ ನಗರ ಬಿಜೆಪಿ ಮುಖಂಡರ ಚೇಲಾಗಳು ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ತೆನ್ನಿರ ಮೈನಾ ಗಂಭೀರ ಆರೋಪ ಮಾಡಿದ್ದಾರೆ. ಮಡಿಕೇರಿಯ ರಾಷ್ಟ್ರೀಯ ಹೆದ್ದಾರಿ ಸಮೀಪದಲ್ಲಿ ಅನಧಿಕೃತ ಮಳಿಗೆಗಳನ್ನು ಮಡಿಕೇರಿ ಬಿಜೆಪಿ ಮುಖಂಡರ ಬಹಿರಂಗ ಕುಮ್ಮಕ್ಕಿನಿಂದ ನಡೆಸುತ್ತಿರುವ ವ್ಯಕ್ತಿಯ ಸಿಬ್ಬಂದಿ ಅತ್ಯಂತ ಕೀಳಾಗಿ ನಿಂದಿಸಿ ವಿಡಿಯೋ ಹರಿಯಬಿಟ್ಟಿದ್ದರು. ಈ ಹಿನ್ನೆಲೆಯಲ್ಲಿ ಮಡಿಕೇರಿ ನಗರ ಪೋಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು ಕ್ಷಿಪ್ರಗತಿಯಲ್ಲಿ ಆರೋಪಿಗಳನ್ನು ಬಂಧಿಸಿದ್ದಾರೆ. […]