ಕಾಂತೂರು ಮೂರ್ನಾಡು : ಜಲ್‌ ಜೀವನ್‌ ಮಿಷನ್‌ ಉದ್ಘಾಟನಾ ಕಾರ್ಯಕ್ರಮ ಮುಂದೂಡಿಕೆ

ಮಡಿಕೇರಿ : ಕಾಂತೂರು ಮೂರ್ನಾಡು ಗ್ರಾಮ ಪಂಚಾಯಿತಿ ವತಿಯಿಂದ ಅ.24ರಂದು ನಡೆಯಬೇಕಿದ್ದ ಜಲ್‌ಜೀವನ್‌ ಮಿಷನ್‌ ಉದ್ಘಾಟನಾ ಕಾರ್ಯಕ್ರಮವನ್ನು ಮುಂದೂಡಲಾಗಿದೆ. 24ರಂದು ಕಿಗ್ಗಾಲು ಗ್ರಾಮದಲ್ಲಿ ಕಾರ್ಯಕ್ರಮ ನಡೆಯಬೇಕಿತ್ತು. ಆದರೆ ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆಯ ಕಾರಣದಿಂದಾಗಿ ಕಾರ್ಯಕ್ರಮ ಮುಂದೂಡಲಾಗಿದ್ದು, ಮಳೆ ಕಡಿಮೆಯಾದ ಸಂದರ್ಭದಲ್ಲಿ ಕಾರ್ಯಕ್ರಮ ನಡೆಸಲಾಗುವುದು. ಆ ದಿನಾಂಕವನ್ನು ಮುಂದಿನ ದಿನದಲ್ಲಿ ತಿಳಿಸಲಾಗುವುದೆಂದು ಪಂಚಾಯಿತಿ ಪ್ರಕಟಣೆ ತಿಳಿಸಿದೆ.

ವಿಜಯ ವಿನಾಯಕ ದೇವಾಲಯ ವಾರ್ಷಿಕೋತ್ಸವ ಅ.23, 24ಕ್ಕೆ

ಮಡಿಕೇರಿ  : ನಗರದ ಶ್ರೀ ವಿಜಯ ವಿನಾಯಕ ದೇವಾಲಯದ ೨೭ನೇ ವಾರ್ಷಿಕೋತ್ಸವ ಕಾರ್ಯಕ್ರಮ ಅಕ್ಟೋಬರ್ ೨೩ ಮತ್ತು ೨೪ ರಂದು ನಡೆಯಲಿದೆ. ೨೩ ರಂದು ಸಂಜೆಯಿಂದ ದೈವತಾ ಕಾರ್ಯಗಳು, ಅಕ್ಟೋಬರ್ ೨೪ ರಂದು ಮಧ್ಯಾಹ್ನ ೧೨ ಗಂಟೆಗೆ ಮಹಾಮಂಗಳಾರತಿ ನಂತರ ಅನ್ನದಾನ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

ಕಾರ್ತಿಕ ಮಾಸ ಪ್ರಯುಕ್ತ ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ

ಮಡಿಕೇರಿ : ನಗರದ ಶ್ರೀ ಓಂಕಾರೇಶ್ವರ ದೇವಾಲಯ ವತಿಯಿಂದ ಕಾರ್ತಿಕ ಮಾಸದಲ್ಲಿ ವಿವಿಧ ಪೂಜಾ ಕೈಂಕರ್ಯಗಳು ಹಾಗೂ ಉತ್ಸವಾದಿಗಳು ಶಾಸ್ತ್ರೋಕ್ತವಾಗಿ ನಡೆಯಲಿದೆ ಎಂದು ದೇವಾಲಯದ ಅಧ್ಯಕ್ಷ ಚುಮ್ಮಿ ದೇವಯ್ಯ ತಿಳಿಸಿದ್ದಾರೆ. ಅಕ್ಟೋಬರ್ ೨೨ ರಂದು ಸಂಜೆ ೬ ಗಂಟೆಗೆ ಗೋಪೂಜೆ ನಡೆಯಲಿದೆ. ಅಕ್ಟೋಬರ್ ೨೨ ರಿಂದ ನವೆಂಬರ್ ೨ ರವರೆಗೆ ೧೨ ದಿನಗಳ ಕಾಲ ಸಂಜೆ ೬.೩೦ ಗಂಟೆಯಿಂದ ತುಳಸಿ ಪೂಜೆ ನಡೆಯಲಿದ್ದು, ತುಳಸಿ ಪೂಜೆ ಮಾಡಿಸ ಬಯಸುವ ಭಕ್ತಾದಿಗಳು ೧೦೦ ಸೇವಾ ದರ ಪಾವತಿಸಿ, ಪ್ರಸಾದ […]

ಮಡಿಕೇರಿಯಲ್ಲಿ ‘ಪೊಲೀಸ್ ಸಂಸ್ಮರಣಾ ದಿನಾಚರಣೆ’ – ಹುತಾತ್ಮ ಪೊಲೀಸರಿಗೆ ಗಣ್ಯರ ಗೌರವ ನಮನ

ಮಡಿಕೇರಿ : ಜಿಲ್ಲಾ ಪೊಲೀಸ್ ಘಟಕ ವತಿಯಿಂದ ‘ಪೊಲೀಸ್ ಸಂಸ್ಮರಣಾ ದಿನಾಚರಣೆ’ಯು ನಗರದ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಮಂಗಳವಾರ ನಡೆಯಿತು. ಪೊಲೀಸ್ ಹುತಾತ್ಮರ ಸ್ಮಾರಕಕ್ಕೆ ಹೂಗುಚ್ಚ ಸಮರ್ಪಿಸಿ ಗಣ್ಯರು ಹಾಗೂ ಅತಿಥಿಗಳು ಗೌರವ ನಮನ ಸಲ್ಲಿಸಿದರು. ಪೊಲೀಸ್ ಹುತಾತ್ಮರ ದಿನದ ಕಾರ್ಯಕ್ರಮದಲ್ಲಿ ಪೆರೆಡ್ ಕಮಾಂಡರ್ ಆರ್.ಪಿ.ಗಣೇಶ್ ಅವರು ಗೌರವ ವಂದನೆ ಸಲ್ಲಿಸಿ, ಮುಖ್ಯ ಅತಿಥಿಗಳಿಂದ ಅನುಮತಿ ಪಡೆದರು. ಬಳಿಕ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಹೆಚ್ಚುವರಿ […]

ರಾಜ್ಯದಲ್ಲಿ ಅನೈತಿಕ ಪೊಲೀಸ್‌ಗಿರಿಗೆ ಕಡಿವಾಣ ಬಿದ್ದಿದೆ : ಇದರ ಶ್ರೇಯಸ್ಸು ಪೊಲೀಸ್ ಇಲಾಖೆಗೆ ಸಲ್ಲಬೇಕು : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ರಾಜ್ಯದ ಘನತೆ, ಅಭಿವೃದ್ಧಿ ಮತ್ತು ಪ್ರಗತಿಗೆ ಕಂಟಕವಾಗಿದ್ದ ಸಂವಿಧಾನ ವಿರೋಧಿ ಅನೈತಿಕ ಪೊಲೀಸ್‌ಗಿರಿಗೆ ರಾಜ್ಯದಲ್ಲಿ ಕಡಿವಾಣ ಬಿದ್ದಿದೆ.‌ ಇದರ ಶ್ರೇಯಸ್ಸು ಪೊಲೀಸ್ ಇಲಾಖೆಗೆ ಸಲ್ಲಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮೆಚ್ಚುಗೆ ವ್ಯಕ್ತಪಡಿಸಿದರು. ಪೊಲೀಸ್ ಸಂಸ್ಮರಣಾ ದಿನಾಚರಣೆಯಲ್ಲಿ ಹುತಾತ್ಮ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ಸಂತಾಪ ಸಲ್ಲಿಸಿ ಮಾತನಾಡಿದರು. ಪೊಲೀಸ್ ಇಲಾಖೆ ಶಾಂತಿ-ಸುವ್ಯವಸ್ಥೆ ಕಾಪಾಡಿದರೆ ರಾಜ್ಯದ ಅಭಿವೃದ್ಧಿ ಸಾಧ್ಯವಾಗುತ್ತದೆ. ಹೀಗಾಗಿ ಅನೈತಿಕ ಪೊಲೀಸ್‌ಗಿರಿಗೆ ಕಡಿವಾಣ ಬಿದ್ದಿರುವುದು ಉತ್ತಮ‌ ಕೆಲಸ. ಹಾಗೆಯೇ ಮಾದಕ ವಸ್ತು ಹಾವಳಿಗೂ ಬ್ರೇಕ್ […]

ಸ್ವಚ್ಛತೆಗಾಗಿ ಸಾಮಾಜಿಕ ಜಾಲತಾಣದ ಬಳಕೆ – ವೀರಾಜಪೇಟೆ ಪುರಸಭೆ ಮಾದರಿ ನಡೆ

ವೀರಾಜಪೇಟೆ : ಕೊಡಗನ್ನು ಸ್ವಚ್ಛಗೊಳಿಸುವ ನಿಟ್ಟಿನಲ್ಲಿ ಕೂರ್ಗ್‌ ಹೋಟೇಲ್‌, ರೆಸಾರ್ಟ್‌ ಅಸೋಸಿಯೇಷನ್‌ ಮುಂದಾಳತ್ವದಲ್ಲಿ ಇತ್ತೀಚೆಗೆ ಬೃಹತ್‌ ಸ್ವಚ್ಛತಾ ಅಭಿಯಾನ ನಡೆಸಲಾಗಿದೆ. ಇದಾದ ನಂತರ ಸಾರ್ವಜನಿಕರು, ಆಡಳಿತ ವ್ಯವಸ್ಥೆ ಎಚ್ಚೆತ್ತುಕೊಂಡಿದೆ. ʼಸುಂದರ ವಿರಾಜಪೇಟೆ-ಸ್ವಚ್ಛ ಪಟ್ಟಣʼ ಎಂಬ ಧ್ಯೇಯದೊಂದಿಗೆ ವೀರಾಜಪೇಟೆ ಪುರಸಭೆ ಕಂಡಕಂಡಲ್ಲಿ ಕಸ ಎಸೆಯುವವರ ವಿರುದ್ಧ ಕ್ರಮಕ್ಕೆ ಮುಂದಾಗಿದೆ. ಈ ನಿಟ್ಟಿನಲ್ಲಿ ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ʼಕ್ಲೀನ್ ವಿರಾಜಪೇಟೆʼ ಎಂಬ ಖಾತೆ ತೆರೆಯಲಾಗಿದೆ. ಈ ಅಧಿಕೃತ ಖಾತೆಯನ್ನು ಶಾಸಕ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ ಇಂದು ಲೋಕಾರ್ಪಣೆ ಮಾಡಿದರು. ಯಾರಾದರು ಕಸ […]

ಸಂಘಸಂಸ್ಥೆಗಳ ಚಟುವಟಿಕೆಗಳಿಗೆ ಅನುಮತಿ ನೀಡುವ ಆದೇಶ –ಯಾವುದೇ ಸಂಘಸಂಸ್ಥೆಗಳನ್ನು ಗುರಿಯಾಗಿಸಿಲ್ಲ- ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು : ಯಾವುದೇ ಸಂಘಸಂಸ್ಥೆಗಳ ಚಟುವಟಿಕೆಗಳನ್ನು ಜನರಿಗೆ ತೊಂದರೆಯಾಗುವಂತೆ ಸಾರ್ವಜನಿಕ ಸ್ಥಳಗಳಲ್ಲಿ ನಡೆಸಲು ಅನುಮತಿ ಪಡೆಯುವಂತೆ ಆದೇಶ ನೀಡಲಾಗಿದ್ದು, ಇದರಲ್ಲಿ ಯಾವುದೇ ಸಂಘಸಂಸ್ಥೆಗಳನ್ನು ಗುರಿಯಾಗಿಸಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರಿನ ತಮ್ಮ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಕುಂದಾಪುರದಲ್ಲಿ ಆರ್ ಎಸ್ ಎಸ್ ಪಥಸಂಚಲನದ ಬಗ್ಗೆ ಗೊಂದಲ ಎದ್ದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಈ ಬಗ್ಗೆ ಹಿಂದೆ ಬಿಜೆಪಿಯ ಜಗದೀಶ್ ಶೆಟ್ಟರ್ ಅವರ ನೇತೃತ್ವದ ಸರ್ಕಾರ ಆದೇಶ ಹೊರಡಿಸಿದಂತೆ , ನಮ್ಮ ಸರ್ಕಾರವೂ ಆದೇಶವನ್ನು […]

ಕಾವೇರಿ ತೀರ್ಥೋದ್ಭವದಲ್ಲಿ ಪಾಲ್ಗೊಂಡಿದ್ದು ಧನ್ಯತಾ ಭಾವ ಮೂಡಿಸಿದೆ – ಯದುವೀರ್‌ ಒಡೆಯರ್‌

ಮಡಿಕೇರಿ : ಜೀವನದಿ ಕಾವೇರಿ ತೀರ್ಥೋದ್ಭವ ಸಂಭ್ರಮದಲ್ಲಿ ಕೊಡಗು-ಮೈಸೂರು ಸಂಸದ ಯದುವೀರ್‌ ಪಾಲ್ಗೊಂಡಿದ್ದು. ಅಪರೂಪದ ಕ್ಷಣದಲ್ಲಿ ತಾನು ಭಾಗಿಯಾಗಿದ್ದರ ಬಗ್ಗೆ ಅವರು ಸಂತಸ ವ್ಯಕ್ತಪಡಿಸಿದ್ದಾರೆ. ನಮ್ಮ ನಾಡಿನ ಜೀವನದಿ, ಸಕಲ ಜೀವರಾಶಿಗಳಿಗೂ “ತಾಯಿ” ಸ್ವರೂಪಳಾದ ಕಾವೇರಿ ಮಾತೆಯ ತೀರ್ಥೋದ್ಭವದಲ್ಲಿ ಪಾಲ್ಗೊಂಡಿದ್ದು ನಿಜಕ್ಕೂ ಧನ್ಯತಾ ಭಾವ ಮೂಡಿಸಿದೆ ಎಂದು ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಪ್ರತಿಕ್ರಿಯಿಸಿದ್ದಾರೆ. ಇದೊಂದು ಅಪೂರ್ವ ಕ್ಷಣ. ಕಾವೇರಿ ಮಾತೆ ತೀರ್ಥರೂಪಿಣಿಯಾಗಿ ಬರುತ್ತಿದ್ದಂತೆ ಧಾರ್ಮಿಕ ಭಾವನೆಗಳೂ ಉಕ್ಕುತ್ತವೆ ಎಂದಿದ್ದಾರೆ. ತೀರ್ಥೋದ್ಭವಕ್ಕೂ ಮುನ್ನ ಭಾಗಮಂಡಲದಿಂದ ತಲಕಾವೇರಿವರೆಗೆ ಪಾದಯಾತ್ರೆಯಲ್ಲಿ […]

ಸ್ವಚ್ಚ ಕೊಡಗು – ಸುಂದರ ಕೊಡಗು ಅಭಿಯಾನದಲ್ಲಿ ಸಂಗ್ರಹಿಸಲಾದ ತ್ಯಾಜ್ಯ ಎಷ್ಟು ಗೊತ್ತಾ..? ಇಲ್ಲಿದೆ ನೋಡಿ ಡಿಟೇಲ್ಸ್…‌

ಮಡಿಕೇರಿ : ಕೂರ್ಗ್ ಹೋಟೇಲ್, ರೆಸಾಟ್೯ ಅಸೋಸಿಯೇಷನ್ ವತಿಯಿಂದ ಬುಧವಾರ ಕೈಗೊಳ್ಳಲಾದ ಸ್ವಚ್ಚ ಕೊಡಗು – ಸುಂದರ ಕೊಡಗು ಸ್ವಚ್ಚತಾ ಅಭಿಯಾನದ ಸಂದರ್ಭ ಜಿಲ್ಲಾದ್ಯಂತ 200 ಟನ್ ತ್ಯಾಜ್ಯ ಸಂಗ್ರಹವಾಗಿದ್ದು ಮೈಸೂರಿನ ತ್ಯಾಜ್ಯ ವಿಲೇವಾರಿ ಸಂಗ್ರಹಾಗಾರ ಸೇರಿದಂತೆ ಕೊಡಗು ಜಿಲ್ಲೆಯ ತ್ಯಾಜ್ಯ ವಿಲೇವಾರಿ ಘಟಕಗಳಿಗೆ ಇವುಗಳನ್ನು ರವಾನಿಸಲಾಗಿದೆ ಎಂದು ಅಸೋಸಿಯೇಷನ್ ಅಧ್ಯಕ್ಷ ಕುಂಡ್ಯೋಳಂಡ ದಿನೇಶ್ ಕಾಯ೯ಪ್ಪ ಮಾಹಿತಿ ನೀಡಿದ್ದಾರೆ. ಸ್ವಚ್ಚ ಕೊಡಗು – ಸುಂದರ ಕೊಡಗು ಅಭಿಯಾನದಲ್ಲಿ ಜಿಲ್ಲೆಯ 30 ಸಾವಿರದಷ್ಟು ಸ್ವಚ್ಚತಾ ಕಾರ್ಯಕರ್ತರಿಗೆ 33,800 ಕೈಕವಚ […]

ಪವಿತ್ರ ಕಾವೇರಿ ತೀರ್ಥೋದ್ಭವ – ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಭಾಗಿ…

ಮಡಿಕೇರಿ : ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅಕ್ಟೋಬರ್‌ 17ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ನಾಳೆ ಮಧ್ಯಾಹ್ನ ಕಾವೇರಿ ಉಗಮಸ್ಥಳ ತಲಕಾವೇರಿಯಲ್ಲಿ ನಡೆಯಲಿರುವ ತೀರ್ಥೋದ್ಭವ ವೀಕ್ಷಣೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಅಪರಾಹ್ನ 12.30ಕ್ಕೆ ಭಾಗಮಂಡಲಕ್ಕೆ ಹೆಲಿಕಾಪ್ಟರ್‌ ಮೂಲಕ ಆಗಮಿಸಿ, ನಂತರ ತಲಕಾವೇರಿಗೆ ತೆರಳಲಿದ್ದಾರೆ. ಪೂಜಾ ಕಾರ್ಯ ಹಾಗೂ ತೀರ್ಥೋದ್ಭವ ವೀಕ್ಷಣೆ ಬಳಿಕ ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆಂದು ಡಿಸಿಎಂ ಕಚೇರಿ ಪ್ರಕಟಣೆ ತಿಳಿಸಿದೆ.