ಪ್ರಧಾನಿ ಮೋದಿ ಬಗ್ಗೆ ಯುವಕರಿಂದ ಅವಹೇಳನ – ಬಿಜೆಪಿಗರು ಬಹಿರಂಗವಾಗಿ ಕ್ಷಮೆ ಯಾಚಿಸಲಿ – ತೆನ್ನೀರ ಮೈನಾ ಆಗ್ರಹ

ಮಡಿಕೇರಿ : ಪ್ರಧಾನಿ ನರೇಂದ್ರ ಮೋದಿಯವರ ಬಗ್ಗೆ ಅವಹೇಳನ ಮಾಡಿ ಬಂಧಿತರಾಗಿರುವ ಕಿಡಿಗೇಡಿಗಳು ಮಡಿಕೇರಿ ನಗರ ಬಿಜೆಪಿ ಮುಖಂಡರ ಚೇಲಾಗಳು ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ತೆನ್ನಿರ ಮೈನಾ ಗಂಭೀರ ಆರೋಪ ಮಾಡಿದ್ದಾರೆ. ಮಡಿಕೇರಿಯ ರಾಷ್ಟ್ರೀಯ ಹೆದ್ದಾರಿ ಸಮೀಪದಲ್ಲಿ ಅನಧಿಕೃತ ಮಳಿಗೆಗಳನ್ನು ಮಡಿಕೇರಿ ಬಿಜೆಪಿ ಮುಖಂಡರ ಬಹಿರಂಗ ಕುಮ್ಮಕ್ಕಿನಿಂದ ನಡೆಸುತ್ತಿರುವ ವ್ಯಕ್ತಿಯ ಸಿಬ್ಬಂದಿ ಅತ್ಯಂತ ಕೀಳಾಗಿ ನಿಂದಿಸಿ ವಿಡಿಯೋ ಹರಿಯಬಿಟ್ಟಿದ್ದರು. ಈ ಹಿನ್ನೆಲೆಯಲ್ಲಿ ಮಡಿಕೇರಿ ನಗರ ಪೋಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು ಕ್ಷಿಪ್ರಗತಿಯಲ್ಲಿ ಆರೋಪಿಗಳನ್ನು ಬಂಧಿಸಿದ್ದಾರೆ. […]
ಪತ್ನಿಯನ್ನು ಹ*ತ್ಯೆಗೈದ ಪತಿಗೆ ಕಠಿಣ ಜೀವಾವಧಿ ಶಿಕ್ಷೆ – ವೀರಾಜಪೇಟೆ ನ್ಯಾಯಾಲಯ ತೀರ್ಪು

ವೀರಾಜಪೇಟೆ : ಪತ್ನಿಯ ಕೊ*ಲೆಗೈದ ಪತಿಗೆ ಜೀವಾವಧಿ ಶಿಕ್ಷೆ ವಿಧಿಸಿ ನ್ಯಾಯಾಲಯ ತೀರ್ಪು ಪ್ರಕಟಿಸಿದೆ. ವೀರಾಜಪೇಟೆ ತಾಲೂಕಿನ ಕಾಕೋಟುಪರಂಬುವಿನ ಚೋಮಚ್ಚರ ಪಿ. ಲವ(30) ಶಿಕ್ಷೆಗೊಳಗಾದ ವ್ಯಕ್ತಿ. ಈತ 2022 ಏಪ್ರಿಲ್ 28ರಂದು ತನ್ನ ಪತ್ನಿ ಸುಮಿತ್ರಳನ್ನು ಹ*ತ್ಯೆಗೈದಿದ್ದ. ಪತ್ನಿ ತನಗೆ ಹೇಳದೆ ಮನೆಯಿಂದ ಹೋಗುತ್ತಾಳೆ ಎಂಬ ವಿಚಾರವಾಗಿ ಗಲಾಟೆ ಶುರುವಾಗಿ, ನಂತರ ಕಬ್ಬಿಣದ ಪೈಪ್‌ನಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದ. ಪರಿಣಾಮ ಆಕೆ ಮೃತಪಟ್ಟಿದ್ದರು. ಈ ಸಂಬಂದ ವೀರಾಜಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದರ ವಿಚಾರಣೆ 2ನೇ […]
ಶ್ರೀ ರಾಮಾಂಜನೇಯ ಭಜನಾ ಮಂಡಳಿಯ 35ನೇ ವಾರ್ಷಿಕೋತ್ಸವ ಪ್ರಯುಕ್ತ ಅಖಂಡ ಏಕಾಹ ಭಜನೆ ಡಿ.14ಕ್ಕೆ

ಮಡಿಕೇರಿ : ಶ್ರೀ ರಾಮಾಂಜನೇಯ ಭಜನಾ ಮಂಡಳಿಯ 35ನೇ ವಾರ್ಷಿಕೋತ್ಸವ ಪ್ರಯುಕ್ತ ಅಖಂಡ ಏಕಾಹ ಭಜನೆ ಕಾರ್ಯಕ್ರಮ ಡಿಸೆಂಬರ್ 14(ಭಾನುವಾರ) ಮಡಿಕೇರಿಯಲ್ಲಿ ನಡೆಯಲಿದೆ. ಶ್ರೀ ಆಂಜನೇಯ ದೇವಾಲಯದಲ್ಲಿ ಅಂದು ಬೆಳಗ್ಗೆ 6.10ರಿಂದ ಭಜನೆ ಆರಂಭವಾಗಲಿದ್ದು, ಮಡಿಕೇರಿ ನಗರಸಭೆ ಅಧ್ಯಕ್ಷೆ ಕೆ.ಪಿ. ಕಲಾವತಿ ಭದ್ರದೀಪ ಜ್ವಲನದ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಬಳಿಕ ಜಿಲ್ಲೆಯ ವಿವಿಧೆಡೆಯ 15 ತಂಡಗಳಿಂದ ನಿರಂತರ ಭಜನೆ ಇರಲಿದೆ. ಸಂಜೆ ವಿನಾಯಕ ಸೇವಾ ಟ್ರಸ್ಟ್ ಕತ್ತಲೆಕಾಡು, ಆದಿಶಕ್ತಿ ವಿನಾಯಕ ಭಜನಾ ಮಂಡಳಿ ಉಡೋತ್‌ಮೊಟ್ಟೆ, ಮದೆ […]
ಪ್ರಧಾನಿ ಮೋದಿಯ ಅವಹೇಳನ ಪ್ರಕರಣ – ಆರೋಪಿಗಳ ಗಡಿಪಾರಿಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

ಮಡಿಕೇರಿ : ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಅವಹೇಳನ ಮಾಡಿದ ಯುವಕರ ಗಡಿಪಾರಿಗೆ ಆಗ್ರಹಿಸಿ ಜಿಲ್ಲಾ ಬಿಜೆಪಿ ವತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಯಿತು. ಇಂದಿರಾಗಾಂಧಿ ವೃತ್ತದಲ್ಲಿ ಸೇರಿದ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದರು. ಜಿಲ್ಲಾ ಬಿಜೆಪಿ ಅಧ್ಯಕ್ಷ ರವಿ ಕಾಳಪ್ಪ, ಮಾಜಿ ಶಾಸಕರಾದ ಅಪ್ಪಚ್ಚು ರಂಜನ್, ನಗರಸಭೆ ಅಧ್ಯಕ್ಷೆ ಕಲಾವತಿ. ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಅನಿತಾ ಪೂವಯ್ಯ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.
ಪ್ರಧಾನಿ ಮೋದಿಗೆ ಅವಾಚ್ಯ ಪದಗಳಿಂದ ನಿಂದನೆ: ಸ್ಪೈಸಸ್ ಅಂಗಡಿಯ ಮೂವರನ್ನು ಬಂಧಿಸಿದ ಪೊಲೀಸರು

ಮಡಿಕೇರಿ : ಸ್ಪೈಸಸ್ ಅಂಗಡಿಯಲ್ಲಿ ಪ್ರಧಾನ ಮಂತ್ರಿ ಮೋದಿಯವರ ಬಗ್ಗೆ ಕೆಟ್ಟದಾಗಿ ಮಾತನಾಡುತ್ತಾ ವಿಡಿಯೋ ಮಾಡಿ ವಿಕೃತಿ ಮೆರೆದಿದ್ದ ಮೂವರು ಯುವಕರನ್ನು ಪೊಲೀಸರು ಬಂಧಿಸಿದ್ದಾರೆ. ಮಡಿಕೇರಿಯ ರಾಣಿಪೇಟೆ ನಿವಾಸಿ ಫಹಾದ್ ಎಮ್.ಇ(31), ತ್ಯಾಗರಾಜ ಕಾಲನಿಯ ನಿವಾಸಿ ಬಾಸಿಲ್ ಎಂ.ಎಚ್.(29), ತ್ಯಾಗರಾಜ ಕಾಲೋನಿ ನಿವಾಸಿ ಸಮೀರ್ ಎಂ.ಎಂ.(31) ಬಂಧಿತರು. ಯುವಕರ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆದ ಬೆನ್ನಲ್ಲೇ ಎಚ್ಚೆತ್ತ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದರು. ಕೀಳುಮಟ್ಟದ ಭಾಷೆ ಬಳಕೆ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತವಾಗಿತ್ತು. ಅವರ ವಿರುದ್ಧ […]
ಕುರುಳಿ ಅಂಬಲಮಂದ್‌ನಲ್ಲಿ ಸಂಭ್ರಮದಿಂದ ಜರುಗಿದ ಪುತ್ತರಿ ಕೋಲಾಟ್

ಮಡಿಕೇರಿ : ಕಡಗದಾಳುವಿನ ಕುರುಳಿ ಅಂಬಲ ಮಂದ್‌ನಲ್ಲಿ ಪುತ್ತರಿ ಕೋಲಾಟ್ ಸಾಂಪ್ರದಾಯಿಕವಾಗಿ ಮಂಗಳವಾರ ನಡೆಯಿತು. ಡಿಸೆಂಬರ್ 03ರ ಸಂಜೆ ಈಡ್, ಡಿ.7 ಭಾನುವಾರ ಮುಂಜಾನೆ ಮಂದ್ ತೊರ್‌ಪ, ಡಿ 9ರ ಮಂಗಳವಾರ ಊರಿನವರು ಮಂದ್‌ನಲ್ಲಿ ಸೇರಿ ಮಧ್ಯಾಹ್ನ 12 ಗಂಟೆಗೆ ಊರ್ ತಕ್ಕರ ಮನೆಗೆ ತೆರಳಿ ಫಲಹಾರ ಊಟೋಪಚಾರದ ನಂತರ ತಳಿಯಕ್ಕಿ ಬೊಳ್‌ಚ, ದುಡಿಕೊಟ್ಟ್ ಪಾಟ್, ಒಡ್ಡೋಲಗದೊಂದಿಗೆ ಊರ್ ತಕ್ಕರನ್ನು ಮಂದ್‌ಗೆ ಕರೆ ತಂದರು. ನಂತರ ಊರ್ ಕೋಲ್ ನಡೆಯಿತು. 3 ಗಂಟೆಗೆ ದೇಶ ತಕ್ಕರನ್ನು ಹಾಗು […]
ಡಿ.11ರಂದು ಕೊಡವ ಮುಸ್ಲಿಂ ಸ್ಪೋರ್ಟ್ಸ್ ಅಕಾಡೆಮಿ ಲೋಕಾರ್ಪಣೆ

ಪೊನ್ನಂಪೇಟೆ: ಕ್ರೀಡಾ ಚಟುವಟಿಕೆಗಳ ಆಯೋಜನೆ ಮತ್ತು ಕ್ರೀಡಾ ಪ್ರತಿಭೆಗಳ ಉತ್ತೇಜನಕ್ಕೆ ಮಾತ್ರ ಸೀಮಿತಪಟ್ಟು ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಕೊಡವ ಮುಸ್ಲಿಂ ಸ್ಪೋರ್ಟ್ಸ್ ಅಕಾಡೆಮಿ (ಕೆ.ಎಂ.ಎಸ್.ಎ.) ಇದೇ ತಿಂಗಳ 11ರಂದು ಗುರುವಾರ ಉದ್ಘಾಟನೆಗೊಳ್ಳಲಿದೆ. ಮಡಿಕೇರಿ ತಾಲೂಕಿನ ಕಕ್ಕಬ್ಬೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಸ್ಥಳೀಯ ಶಾಲೆಯೊಂದಕ್ಕೆ ವಿವಿಧ ಕ್ರೀಡಾ ಪರಿಕರಗಳನ್ನು ವಿತರಿಸುವ ಮೂಲಕ ಕೆ.ಎಂ.ಎಸ್.ಎ.ಯನ್ನು ವಿದ್ಯುಕ್ತವಾಗಿ ಲೋಕಾರ್ಪಣೆಗೊಳಿಸಲಾಗುವುದು ಎಂದು ಅಕಾಡೆಮಿ ಅಧ್ಯಕ್ಷರಾದ ಆಲೀರ ರಶೀದ್ ತಿಳಿಸಿದ್ದಾರೆ. ಈ ಕುರಿತು ವಿರಾಜಪೇಟೆಯಲ್ಲಿ ನಡೆದ ಕೊಡವ ಮುಸ್ಲಿಂ ಸ್ಪೋರ್ಟ್ಸ್ ಅಕಾಡೆಮಿಯ ಕಾರ್ಯಕಾರಿ ಸಮಿತಿ ಸಭೆಯ […]
ಡಿ. 21ರಿಂದ ವಿ.ಬಾಡಗದಲ್ಲಿ ಕೊಡವ ಕೌಟುಂಬಿಕ ಹಾಕಿ ಪಂದ್ಯಾವಳಿ

ಪೊನ್ನಂಪೇಟೆ: ಬಿಟ್ಟಂಗಾಲ ಸಮೀಪದ ವಿ. ಬಾಡಗದ ಹೈ ಪ್ಲೈಯರ್ಸ್ ತಂಡದ ವತಿಯಿಂದ ವಿಯೋಮನ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಅವರ ಸಹ ಪ್ರಾಯೋಜಕತ್ವದಲ್ಲಿ 4ನೇ ವರ್ಷದ ಕೊಡವ ಕೌಟುಂಬಿಕ ಹಾಕಿ ಪಂದ್ಯಾವಳಿ ಹೈಪ್ಲೈಯರ್ಸ್ ಕಪ್-2025 ಅನ್ನು ಇದೇ ಡಿ.21ರಿಂದ 25ರವರೆಗೆ ಆಯೋಜಿಸಲಾಗಿದೆ. ಬಿಟ್ಟಂಗಾಲ, ಬಿ.ಶೆಟ್ಟಿಗೇರಿ ಮತ್ತು ಹಾತೂರು ಗ್ರಾ. ಪಂ. ವ್ಯಾಪ್ತಿಯಲ್ಲಿ ಐನ್ ಮನೆ ಹೊಂದಿರುವ ಕೊಡವ ಕುಟುಂಬಗಳ ತಂಡಗಳಿಗಾಗಿ ಈ ಹಾಕಿ ಪಂದ್ಯಾವಳಿ ಏರ್ಪಡಿಸಲಾಗಿದೆ ಎಂದು ವಿ. ಬಾಡಗ ಹೈಪ್ಲೈಯರ್ಸ್ ತಂಡದ ಅಧ್ಯಕ್ಷರಾದ ಅಮ್ಮಣಿಚಂಡ ರಂಜು ಪೂಣಚ್ಚ […]
ಬೀದಿ ಶ್ವಾನಗಳ ಸ್ಥಳಾಂತರ: ನಗರಸಭೆಯ ಜೊತೆ ಕೈಜೋಡಿಸಲು ಮನವಿ

ಮಡಿಕೇರಿ ನಗರ ಸ್ಥಳೀಯ ಸಂಸ್ಥೆಯ ವತಿಯಿಂದ ನಗರದ ಸಾರ್ವಜನಿಕ ಆರೋಗ್ಯ, ಸುರಕ್ಷತೆ ಹಾಗೂ ಪ್ರಾಣಿ ಕಲ್ಯಾಣವನ್ನು ಮನನದಲ್ಲಿಟ್ಟುಕೊಂಡು, ಪ್ರಸ್ತುತ ನಗರ ವ್ಯಾಪ್ತಿಯಲ್ಲಿ ಖಾಸಗಿ ಹಾಗು ಸರ್ಕಾರಿ ಶಿಕ್ಷಣ ಸಂಸ್ಥೆಗಳು, ಆಸ್ಪತ್ರೆಗಳು, ಕ್ರೀಡಾ ಸಂಕೀರ್ಣಗಳು, ಬಸ್ ನಿಲ್ದಾಣಗಳ ಆವರಣಗಳಲ್ಲಿ ಇರುವ ಬೀದಿ ನಾಯಿಗಳನ್ನು ಆಶ್ರಯ ಕೇಂದ್ರಗಳಿಗೆ ಸ್ಥಳಾಂತರಿಸುವ ಕಾರ್ಯವನ್ನು ಮಡಿಕೇರಿ ನಗರಸಭೆ ಕೈಗೊಂಡಿದೆ. ಈ ಕಾರ್ಯಕ್ರಮದ ಸತತ ಮತ್ತು ಜವಾಬ್ದರಿಯುತ ಎನ್‍ಜಿಒ ಸಂಸ್ಥೆಗಳ ಸಹಕಾರ ಅತ್ಯಗತ್ಯವಾಗಿದ್ದು, ಮಡಿಕೇರಿ ನಗರಸಭೆಯೊಂದಿಗೆ ಸಹಭಾಗಿತ್ವಕ್ಕಾಗಿ ವಿನಂತಿಸುತ್ತೇವೆ. ಈ ಆಶ್ರಯ ಕೇಂದ್ರಗಳಿಗೆ ಸ್ಥಳಾಂತರ ಗೊಂಡ […]
ಜಗತ್ತಿನ ಎರಡನೇ ಅತಿ ದೊಡ್ಡ ತ್ರಿವರ್ಣ ಧ್ವಜ ಬೆಳಗಾವಿಯಲ್ಲಿ ಅನಾವರಣ

ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಬೆಳಗಾವಿಯ ಸುವರ್ಣ ಸೌಧದ ಪಶ್ಚಿಮ ದಿಕ್ಕಿನ ಮೆಟ್ಟಿಲುಗಳ ಮೇಲೆ ಜಗತ್ತಿನ ಎರಡನೇ ಅತೀ ದೊಡ್ಡ ಖಾದಿ ತ್ರಿವರ್ಣ ಧ್ವಜವನ್ನು ಅನಾವರಣ ಮಾಡಿದರು. ಬಳಿಕ ಮಾತನಾಡಿದ ಅವರು, ಭಾರತದ ತ್ರಿವರ್ಣ ಧ್ವಜ ಕೇವಲ ಖಾದಿ ವಸ್ತ್ರವಾಗಿರದೇ, ಭಾರತದ ಹೆಮ್ಮೆ ಮತ್ತು ಸ್ವಾಭಿಮಾನದ ಸಂಕೇತ ಎಂದು ತಿಳಿಸಿದರು. ಅವರು ಇಂದು ಬೆಳಗಾವಿಯ ಸುವರ್ಣ ಸೌಧದ ಪಶ್ಚಿಮ ದಿಕ್ಕಿನ ಮೆಟ್ಟಿಲುಗಳ ಮೇಲೆ ಜಗತ್ತಿನ ಎರಡನೇ ಅತೀ ದೊಡ್ಡ ಖಾದಿ ತ್ರಿವರ್ಣ ಧ್ವಜವನ್ನು ಅನಾವರಣ […]