ನಿಮ್ಮ ಹಣ ನಿಮ್ಮ ಹಕ್ಕು ಜಾಗೃತಿ ಶಿಬಿರಕ್ಕೆ ಜಿಲ್ಲಾಧಿಕಾರಿ ಚಾಲನೆ

ದೀರ್ಘ ಕಾಲದಿಂದ ಬ್ಯಾಂಕ್‍ನಲ್ಲಿರುವ ತಮ್ಮ ಹಣ ಪಡೆಯದೆ ಉಳಿದಿರುವ ಠೇವಣಿ, ವಿಮಾ ಕಂತುಗಳನ್ನು ಅವುಗಳ ಮಾಲೀಕರು ಅಥವಾ ಕಾನೂನುಬದ್ಧ ವಾರಸುದಾರರು ಹಣವನ್ನು ವಾಪಸ್ಸು ಪಡೆಯುವ ಸಂಬಂಧ ‘ನಿಮ್ಮ ಹಣ ನಿಮ್ಮ ಹಕ್ಕು’ ಜಾಗೃತಿ ಶಿಬಿರಕ್ಕೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಸೋಮವಾರ ಚಾಲನೆ ನೀಡಿದರು. ನಗರದ ಜಿ.ಪಂ.ಸಭಾಂಗಣದಲ್ಲಿ ನಡೆದ ಜಾಗೃತಿ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ವಿವಿಧ ಕಾರಣಗಳಿಂದ ಬ್ಯಾಂಕ್‍ನಲ್ಲಿ ದೀರ್ಘಕಾಲದಿಂದ ಇರುವ ಹಣ ಹಾಗೂ ವಿಮಾ ಕಂತನ್ನು ಪಡೆಯದಿರುವ ಗ್ರಾಹಕರಿಗೆ ಮಾಹಿತಿ ನೀಡಿ ಹಣವನ್ನು […]
Power Cut: ನಾಳೆ ಕೊಡಗಿನ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ!

ಶನಿವಾರಸಂತೆಯಲ್ಲಿ ವಿದ್ಯುತ್ ವಿತರಣಾ ಉಪ ಕೇಂದ್ರದಲ್ಲಿ ಮೂರನೇ ತ್ರೈಮಾಸಿಕ ಅವಧಿಯ ನಿರ್ವಹಣೆ ಕಾಮಗಾರಿಯನ್ನು ಕೈಗೆತ್ತಿಕೊಂಡಿರುವುದರಿಂದ ಡಿಸೆಂಬರ್, 10 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಶನಿವಾರಸಂತೆ ಶಾಖೆಯ ಶನಿವಾರಸಂತೆ ಪಟ್ಟಣ, ಅಪ್ಪ್ಡಶೆಟ್ಟಳ್ಳಿ, ಮಾದ್ರೆ, ಚಿಕ್ಕಕೊಳತ್ತೂರು, ದುಂಡಳ್ಳಿ, ಬೆಂಬಳೂರು, ಬಿಳಹ, ಹಂಡ್ಲಿ, ಕಿತ್ತೂರು, ಸಂಪಿಗೆದಳ, ಮಾದ್ರದಳ್ಳಿ, ಮಣಗಲಿ, ಗೌಡಳ್ಳಿ, ಬೀಟಿಕಟ್ಟೆ, ಶುಂಠಿ, ಶಾಂತ್ವೇರಿ, ಬಸವನಕೊಪ್ಪ, ಕೊಡ್ಲಿಪೇಟೆ ಶಾಖೆಯ ಮುಳ್ಳೂರು, ಗೋಪಾಲಪುರ, ಜಾಗೇನಹಳ್ಳಿ, ನಿಡ್ತ, ಚೌಡೇನಹಳ್ಳಿ, ದೊಡ್ಡಳ್ಳಿ, ಹರೆಹೊಸೂರು, ಕೊಡ್ಲಿಪೇಟೆ ಹೋಬಳಿ ವ್ಯಾಪ್ತಿಯ ಬೆಸೂರು ಪಂಚಾಯಿತಿ, ನೀರುಗುಂದ, […]
ವಿರಾಜಪೇಟೆಯ ಸಂತ ಅನ್ನಮ್ಮ ಪ್ರೌಢಶಾಲೆಯ NCC ವಿದ್ಯಾರ್ಥಿಗಳಿಂದ ಸೈಕಲ್ ಜಾಥಾ

ವಿರಾಜಪೇಟೆ : ಪಟ್ಟಣದ ಸಂತ ಅನ್ನಮ್ಮ ಪ್ರೌಢಶಾಲೆಯ ಎನ್‌ಸಿಸಿ ಘಟಕದ ಏರ್ ವಿಂಗ್ ಹಾಗೂ ಆರ್ಮಿ ವಿಂಗ್ ಗಳ ವತಿಯಿಂದ ಆರ್ಮಡ್ ಫೋರ್ಸ್ ಫ್ಲಾಗ್ ಡೇ ಯ ಪ್ರಯುಕ್ತ ಎಂಸಿಸಿ ವಿದ್ಯಾರ್ಥಿಗಳಿಂದಎಂಸಿಸಿ ವಿದ್ಯಾರ್ಥಿಗಳಿಂದ ಸೈಕಲ್ ಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಸಂತ ಅನ್ನಮ್ಮ ಪ್ರೌಢಶಾಲೆಯ ಬಳಿ ವಿದ್ಯಾಸಂಸ್ಥೆ ವ್ಯವಸ್ಥಾಪಕರು ಹಾಗೂ ಸಂತ ಅನ್ನಮ್ಮ ಚರ್ಚ್ ನ ಪ್ರಧಾನ ಗುರುಗಳಾದ ರೆ. ಫಾ. ಜೇಮ್ಸ್ ಡೊಮಿಮಿಕ್ ಹಾಗೂ ಎನ್‌ಸಿಸಿ ವಿಂಗ್ ಕಮಾಂಡರ್ ಆಫೀಸರ್ ಪ್ರವೀಣ್ ಕಾರ್ಯಪ್ಪ ರವರು ಈ ಜಾಥಾಕ್ಕೆ […]
ಕೋವಿ ಕೊಡವರ ಸಂಪ್ರದಾಯದ ಅವಿಭಾಜ್ಯ ಅಂಗ: ಅರುಣ್ ಮಾಚಯ್ಯ

ಪೊನ್ನಂಪೇಟೆ: ಪೂಜ್ಯನೀಯ ಸ್ಥಾನದಲ್ಲಿರುವ ಕೋವಿ ಕೊಡವರ ಪುರಾತನ ಸಂಪ್ರದಾಯದ ಅವಿಭಾಜ್ಯ ಅಂಗವಾಗಿದೆ. ಕೊಡವರ ಸಂಸ್ಕೃತಿ ಮತ್ತು ಪದ್ಧತಿ ಪರಂಪರೆಯಿಂದ ಕೋವಿಯನ್ನು ಹೊರತುಪಡಿಸಲು ಸಾಧ್ಯವಿಲ್ಲ ಎಂದು ಕರ್ನಾಟಕ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷರಾದ, ವಿಧಾನ ಪರಿಷತ್ತಿನ ಮಾಜಿ ಸದಸ್ಯ ಚೆಪ್ಪುಡಿರ ಎಸ್. ಅರುಣ್ ಮಾಚಯ್ಯ ಹೇಳಿದರು. ಮಾಯಾಮುಡಿಯ ರಿಮ್ ಫೈರ್ ಶೂಟರ್ಸ್ ಹಾಗೂ ಗೋಣಿಕೊಪ್ಪಲಿನ ಕಾವೇರಿ ಪೊಮ್ಮಕ್ಕಡ ಕೂಟದ ವತಿಯಿಂದ ಮಾಯಮುಡಿಯ ಸರ್ಕಾರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ನಡೆದ ತೆಂಗಿನಕಾಯಿಗೆ ಗುಂಡು ಹೊಡೆಯುವ ಮುಕ್ತ ಸ್ಪರ್ಧೆ ತೋಕ್ ನಮ್ಮೆ 2025 […]
ಕೊಡವ ಮುಸ್ಲಿಮರಿಂದ ಕಾಟ್ರಕೊಲ್ಲಿ ಪುತ್ತರಿ ಆಚರಣೆ

ಪೊನ್ನಂಪೇಟೆ: ಕೊಡವ ಮುಸ್ಲಿಂ ಅಸೋಸಿಯೇಷನ್ (ಕೆಎಂಎ) ವತಿಯಿಂದ ಪುತ್ತರಿ ಹಬ್ಬದ ಪ್ರಯುಕ್ತ ಸಾಂಪ್ರದಾಯಿಕ ಕದಿರು ತೆಗೆಯುವ ಕಾರ್ಯಕ್ರಮವನ್ನು ಗುರುವಾರ ರಾತ್ರಿ ನೂರಾರು ಕೊಡವ ಮುಸ್ಲಿಂ ಸಮುದಾಯದವರು ದ. ಕೊಡಗಿನ ಕಾಟ್ರಕೊಲ್ಲಿಯಲ್ಲಿ ಅಲ್ಲಿನ ಆಲೀರ ಕುಟುಂಬಸ್ಥರ ಆತಿಥ್ಯದಲ್ಲಿ ಅದ್ದೂರಿಯಾಗಿ ಆಚರಿಸಿದರು. ಕಾಟ್ರಕೊಲ್ಲಿಯ ಆಲೀರ ಎಂ. ಸಾದಲಿ ಅವರ ಗದ್ದೆಯಲ್ಲಿ ಈ ಸಾಂಪ್ರದಾಯಿಕ ಕದಿರು ತೆಗೆಯುವ ಕಾರ್ಯಕ್ರಮವನ್ನು ಕೆಎಂಎ ವತಿಯಿಂದ ಹಮ್ಮಿಕೊಳ್ಳಲಾಗಿತ್ತು. ಕೆ.ಎಂ.ಎ. ಅಧ್ಯಕ್ಷರಾದ ದುದ್ದಿಯಂಡ ಹೆಚ್. ಸೂಫಿ ಹಾಜಿಯವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಆಲೀರ ಕುಟುಂಬದ ಹಿರಿಯರಾದ […]
ದಸರಾ ಆನೆ ಅರ್ಜುನನ ಎರಡನೇ ವರ್ಷದ ಸ್ಮರಣೆ – ರಮೇಶ್ ಉತ್ತಪ್ಪ ರಚಿತ ಎರಡು ಕೃತಿಗಳ ಲೋಕಾರ್ಪಣೆ

ಮೈಸೂರು : ದಸರಾ ಆನೆ ಅರ್ಜುನನ ಎರಡನೇ ವರ್ಷದ ನೆನಪು ಹಾಗೂ ಪತ್ರಕರ್ತ ಐತಿಚಂಡ ರಮೇಶ್ ಉತ್ತಪ್ಪ ಬರೆದಿರುವ ಎರಡು ಕೃತಿಗಳ ಲೋಕಾರ್ಪಣೆ ಕಾರ್ಯಕ್ರಮ ಮೈಸೂರಿನಲ್ಲಿ ನಡೆಯಿತು. ಮೈಸೂರು ಕಲ್ಚರಲ್ ಅಸೋಸಿಯೇಷನ್ ಹಾಗೂ ಕಲಿಸು ಫೌಂಡೇಷನ್ ವತಿಯಿಂದ ನಗರದ ಇನ್‌ಸ್ಟಿಟ್ಯೂಟ್ ಆಫ್ ಎಂಜಿನಿಯರ್ಸ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಗಣ್ಯರು ಎರಡು ಕೃತಿ ಲೋಕಾರ್ಪಣೆ ಮಾಡಿದರು. ಐತಿಚಂಡ ರಮೇಶ್ ಉತ್ತಪ್ಪ ಅವರ 40ನೇ ಕೃತಿ ಅರ್ಜುನ ಬಲಿಯಾದ ಘಟನೆಯ ತನಿಖಾ ವರದಿಯನ್ನು ಒಳಗೊಂಡ ‘‘ಸಾವಿನ ಸತ್ಯ-ಅರ್ಜುನ ನಿನ್ನ ಕೊಂದದ್ದು ಮದಗಜವಲ್ಲ […]
ಏಡ್ಸ್ ಬಗ್ಗೆ ಜಾಗೃತಿ ಮೂಡಿದಾಗ ಮಾತ್ರ ಅದರ ಸಂಪೂರ್ಣ ನಿರ್ಮೂಲನೆ ಸಾಧ್ಯ : ಡಾ. ಸನತ್ ಕುಮಾರ್

ವೀರಾಜಪೇಟೆ : ಹೆಚ್ಐವಿ / ಏಡ್ಸ್ ಕುರಿತು ಪ್ರತಿಯೊಬ್ಬರಲ್ಲಿಯೂ ಜಾಗೃತಿ ಮೂಡಿದಾಗ ಮಾತ್ರ ಅದರ ಸಂಪೂರ್ಣ ನಿರ್ಮೂಲನೆ ಸಾಧ್ಯ ಎಂದು ಕೊಡಗು ಜಿಲ್ಲಾ ಏಡ್ಸ್ ನಿಯಂತ್ರಣ ಘಟಕದ ಅಧಿಕಾರಿ ಡಾ. ಸನತ್ ಕುಮಾರ್ ಅಭಿಪ್ರಾಯಪಟ್ಟರು. ಕೊಡಗು ಜಿಲ್ಲಾ ಪಂಚಾಯತ್, ಕೊಡಗು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಘಟಕ, ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆಂಷನ್ ಸೊಸೈಟಿ, ವಿರಾಜಪೇಟೆ ತಾಲೂಕು ಆರೋಗ್ಯ ಇಲಾಖೆ ಹಾಗೂ ಸೆಂಟ್ ಆನ್ಸ್ ಪದವಿ ಕಾಲೇಜಿನ ಎನ್ ಎಸ್ […]
ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಖಜಾಂಚಿಯಾಗಿ ಸುನೀಲ್ ಪೊನ್ನೇಟಿ ನೇಮಕ

ಮಡಿಕೇರಿ : ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಖಜಾಂಚಿಯಾಗಿ ಸುನಿಲ್ ಪೊನ್ನೇಟಿ ಅವರನ್ನು ನೇಮಕ ಮಾಡಲಾಯಿತು. ಸಂಘದ ಅಧ್ಯಕ್ಷ ಬಾಚರಣಿಯಂಡ ಅನು ಕಾರ್ಯಪ್ಪ ಅಧ್ಯಕ್ಷತೆಯಲ್ಲಿ ನಡೆದ ಆಡಳಿತ ಮಂಡಳಿ ಸಭೆಯಲ್ಲಿ ಖಾಲಿಯಿದ್ದ ಖಜಾಂಚಿ ಹಾಗೂ ವಿವಿಧ ಸ್ಥಾನಗಳಿಗೆ ನೇಮಕಾತಿ ಮಾಡಲಾಯಿತು. ರಾಷ್ಟ್ರೀಯ ಸಮಿತಿ ಸದಸ್ಯರಾಗಿ ಪಳೆಯಂಡ ಪಾರ್ಥ ಚಿಣ್ಣಪ್ಪ, ಖಜಾಂಚಿ ಆಯ್ಕೆಯಿಂದ ತೆರವಾಗಿದ್ದ ನಿರ್ದೇಶಕ ಸ್ಥಾನಕ್ಕೆ ಕೆ. ಶಿವಕುಮಾರ್, ನಾಮನಿರ್ದೇಶಿತ ಸದಸ್ಯರುಗಳಾಗಿ ಬೊಳ್ಳಜಿರ ಅಯ್ಯಪ್ಪ, ರಾಜು ರೈ ಹಾಗೂ ವಿ.ವಿ. ಅರುಣ್ ಕುಮಾರ್ ಅವರನ್ನು ನೇಮಿಸಲಾಯಿತು. […]
ಮನೋವಿಜ್ಞಾನದಲ್ಲಿ ಕೊಡಗಿನ ಶಮೀನಾ ಅಸೈನಾರ್ ಸ್ನಾತಕೋತ್ತರ ಪದವಿ

ಗೋಣಿಕೊಪ್ಪ : ಕೊಡಗಿನ ಆಲೀರ ಶಮೀನಾ ಅಸೈನಾರ್ ಇಂದಿರಾಗಾಂಧಿ ರಾಷ್ಟ್ರೀಯ ವಿಶ್ವವಿದ್ಯಾಲಯದಲ್ಲಿ ಮನೋವಿಜ್ಞಾನ (Counselling Psychology)ಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಗೋಣಿಕೊಪ್ಪ ಬಳಿಯ ಮಾಪಿಳ್ಳೆತೋಡುವಿನ ಅಸೈನಾರ್ ಹಾಗೂ ಫಾತಿಮಾ ದಂಪತಿಯ ಪುತ್ರಿ, ಕೊಳಕೇರಿಯ ಕಣ್ಣಪಣೆ ಅಜೀಝ್ ಅವರ ಪತ್ನಿಯಾಗಿರುವ ಶಮೀನಾ ಬೆಂಗಳೂರಿನ ಸರ್ಕಾರಿ ಶಾಲೆಯಲ್ಲಿ ಕಂಪ್ಯೂಟರ್ ಶಿಕ್ಷಕಿಯಾಗಿ ವೃತ್ತಿ ನಿರ್ವಹಿಸುತ್ತಿದ್ದಾರೆ. ಓದಿನಲ್ಲಿ ಆಸಕ್ತಿ ಇದ್ದ ಇವರು 19ನೇ ವಯಸ್ಸಿನಲ್ಲಿ ವೈವಾಹಿಕ ಬಂಧಕ್ಕೆ ಒಳಗಾದರು. ಮದುವೆ ನಂತರವೂ ಓದು ಮುಂದುವರೆದ್ದು, ಮುಂದೆ ಪಿಎಚ್‌ಡಿ ಮಾಡುವ ಇರಾದೆ ಹೊಂದಿದ್ದಾರೆ.
ಭಜನೆ, ನೃತ್ಯ, ಹಾಡು – ಸುಂದರ ಪರಿಸರದಲ್ಲಿ ಮೇಳೈಸಿದ ದೀಪಾವಳಿ ಸಂಭ್ರಮ..!

ಮಡಿಕೇರಿ : ಶ್ರೀ ರಾಮಾಂಜನೇಯ ಭಜನಾ ತಂಡ, ಆರೋಹಣ, ಯೋಗ ಭಾರತಿ ಬಳಗದ ವಾರ್ಷಿಕ ದೀಪಾವಳಿ ಸಂಭ್ರಮ ಮಂಗಳವಾರ ರಾತ್ರಿ ವರ್ಣರಂಜಿತವಾಗಿ ಜರುಗಿತು. ಮಡಿಕೇರಿ ಹೊರವಲಯದ ಅಭಿರತಿ ಸ್ಟೇನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮೂರು ತಂಡದ ಸದಸ್ಯರು ಸಂಭ್ರಮದಿಂದ ಪಾಲ್ಗೊಂಡಿದ್ದರು. ಭಜನೆ, ನೃತ್ಯ, ಗಾಯನ ಕಾರ್ಯಕ್ರಮಕ್ಕೆ ವಿಶೇಷ ಮೆರುಗು ನೀಡಿತು. ಅಭಿರತಿ ಮಾಲೀಕರಾದ ಜಯಂತಿ ಸಂಜಯ್ ದಂಪತಿ ದೀಪ ಬೆಳಗಿ ಕಾರ್ಯಕ್ರಮಕ್ಕೆ ಚಾಲನೆ ನೀಡದಿರು. ಸವಿತಾ ತಂಡದವರು ಪೂಜೆ, ಮಂಗಳಾರತಿ ನೆರವೇರಿಸಿದರು. ಅತಿಥಿಯಾಗಿ ಪತ್ರಕರ್ತ ಕಿಶೋರ್ ರೈ ಕತ್ತಲೆಕಾಡು […]