ಮತಗಳ್ಳತನದ ವಿರುದ್ಧ ಕಾಂಗ್ರೆಸ್‌ನಿಂದ ಸಹಿ ಸಂಗ್ರಹ ಅಭಿಯಾನ – ಮಡಿಕೇರಿ ಬ್ಲಾಕ್ ವ್ಯಾಪ್ತಿಯಲ್ಲಿ 40 ಸಾವಿರ ಸಹಿ ಸಂಗ್ರಹಿಸುವ ಗುರಿ

ಮಡಿಕೇರಿ : ಮತಗಳ್ಳತನದ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಕಾಂಗ್ರೆಸ್ ಪಕ್ಷದ ವತಿಯಿಂದ ದೇಶಾದ್ಯಂತ ಸಹಿ ಸಂಗ್ರಹ ಅಭಿಯಾನ ನಡೆಯುತ್ತಿದೆ. ಜಿಲ್ಲಾ ಕಾಂಗ್ರೆಸ್ ವತಿಯಿಂದ ಕೊಡಗು ಜಿಲ್ಲೆಯಲ್ಲೂ ಈ ಅಭಿಯಾನ ಆರಂಭಿಸಲಾಗಿದೆ. ಮಡಿಕೇರಿ ಬ್ಲಾಕ್ ವ್ಯಾಪ್ತಿಯಲ್ಲಿ 40 ಸಾವಿರ ಮತದಾರರ ಸಹಿ ಸಂಗ್ರಹಿಸುವ ಗುರಿ ಇದೆ. ಬುಧವಾರದಿಂದ ಮನೆ, ಮನೆಗೆ ತೆರಳಿ ಸಹಿ ಸಂಗ್ರಹಿಸಲಾಗುವುದು ಎಂದು ಕ್ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎ. ಹಂಸ ತಿಳಿಸಿದ್ದಾರೆ. ನೈಜ ಮತದಾರರನ್ನು ನಿಗ್ರಹಿಸಲು ಮೋಸದ ಜಾಲಗಳನ್ನು ಬಳಸಿಕೊಂಡು ಚುನಾವಣೆಯಲ್ಲಿ ಅಕ್ರಮಗಳು ನಡೆಯುತ್ತಿವೆ. […]
ವಕೀಲ ಸಿ.ಕೆ. ಪೂವಣ್ಣ ಮೇಲೆ ಹಲ್ಲೆ ಯತ್ನಕ್ಕೆ ಖಂಡನೆ – ಬಾರ್ ಅಸೋಸಿಯೇಷನ್ ಪ್ರತಿಭಟನೆ

ಮಡಿಕೇರಿ : ವೀರಾಜಪೇಟೆ ವಕೀಲರ ಸಂಘದ ಅಧ್ಯಕ್ಷ ಸಿ.ಕೆ. ಪೂವಣ್ಣ ಮೇಲೆ ಕೆಲವು ವ್ಯಕ್ತಿಗಳು ಹಲ್ಲೆಗೆ ಯತ್ನಿಸಿದ್ದನ್ನ ಖಂಡಿಸಿ ಜಿಲ್ಲಾದ್ಯಂತ ವಕೀಲರು ಪ್ರತಿಭಟನೆ ನಡೆಸಿದ್ದಾರೆ. ವಿವಿಧ ನ್ಯಾಯಾಲಯಗಳಲ್ಲಿ ಕಲಾಪ ಬಹಿಷ್ಕರಿಸಿದ ವಕೀಲರು ಘಟನೆಗೆ ತಮ್ಮ ಖಂಡನೆಯನ್ನು ವ್ಯಕ್ತಪಡಿಸಿ ಕೃತ್ಯಕ್ಕೆ ಯತ್ನಿಸಿದವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ. ನಿನ್ನೆ ಪೂವಣ್ಣ ಅವರ ಕಚೇರಿಗೆ ನುಗ್ಗಿದ ಕೆಲವರು ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆಗೆ ಯತ್ನಿಸಿದ್ದರು. ಈ ಸಂಬಂಧ ವೀರಾಜಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇಂದು ಮಡಿಕೇರಿ ನ್ಯಾಯಾಲಯದ ವಕೀಲರು ಬಾರ್ […]
ಬಸ್‌ಗಳಲ್ಲಿ ಎಲ್ಲಿ ನೋಡಿದ್ರೂ ಮಹಿಳೆಯರೇ… ನಾಲ್ಕು ಜನ ಗಂಡಸ್ರು ಹೋಗೋದು ಕಷ್ಟ – ಗ್ಯಾರಂಟಿ ಯೋಜನೆ ಬಗ್ಗೆ ಆರ್.ವಿ. ದೇಶಪಾಂಡೆ ಲೇವಡಿ..!

ಬೆಂಗಳೂರು( coorgbuzz.com ) : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆ ಬಗ್ಗೆ ವಿಪಕ್ಷ ಬಿಜೆಪಿ ಟೀಕೆ ಮಾಡುತ್ತಲೇ ಇದೆ. ಈಗ ಈ ಸಾಲಿಗೆ ಆಡಳಿತ ಪಕ್ಷದ ಶಾಸಕರು ಕೂಡಾ ಕೈಜೋಡಿಸಿದಂತಿದೆ. ಸ್ವಪಕ್ಷೀಯರಿಂದಲೇ ಗ್ಯಾರಂಟಿ ಯೋಜನೆ ಬಗ್ಗೆ ಟೀಕೆ ವ್ಯಕ್ತವಾಗುತ್ತಿದೆ. ಕಾಂಗ್ರೆಸ್‌ನ ಹಿರಿಯ ಶಾಸಕ ಆರ್.ವಿ. ದೇಶಪಾಂಡ ಕಾರ್ಯಕ್ರಮವೊಂದರಲ್ಲಿ ಮಾತನಾಡಿ, ತಮ್ಮದೇ ದಾಟಿಯಲ್ಲಿ ಯೋಜನೆಗಳನ್ನು ವ್ಯಂಗ್ಯವಾಡಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ದೇಶಪಾಂಡೆ, ಸರ್ಕಾರ ಜಾರಿಗೆ ತಂದಿರುವ ಯೋಜನೆ ಒಂದಾ ಎರಡಾ… ಉಚಿತ ಬಸ್‌ನಿಂದಾಗಿ ಮಹಿಳೆಯರೇ ಎಲ್ಲಿ ನೋಡಿದ್ರೂ […]
RSS ವಿರುದ್ಧ ಮುಂದುವರೆದ ಕಾಂಗ್ರೆಸ್ಸಿಗರ ಆಕ್ರೋಶ – ಪ್ರಿಯಾಂಕ್ ಖರ್ಗೆ ಹೇಳಿಕೆಗೆ ದಿನೇಶ್ ಗುಂಡೂರಾವ್ ಬೆಂಬಲ…

ಬೆಂಗಳೂರು : ರಾಷ್ಟ್ರೀಯ ಸ್ವಯಂ ಸೇವಕ ಸಂಘ(RSS) ವಿರುದ್ಧ ಕಾಂಗ್ರೆಸ್ ನಾಯಕರ ಟೀಕೆ, ವಾಗ್ದಾಳಿ ಮುಂದುವರೆದಿದೆ. ಸಂಘಕ್ಕೆ 100 ವರ್ಷ ತುಂಬಿದ ಹಿನ್ನೆಲೆಯಲ್ಲಿ ಅ.12ರಂದು ರಾಜ್ಯಾದ್ಯಂತ ಪಥಸಂಚಲನ ಹಮ್ಮಿಕೊಳ್ಳಲಾಗಿತ್ತು. ಲಕ್ಷಾಂತರ ಕಾರ್ಯಕರ್ತರು ಈ ಪಥಸಂಚಲನದಲ್ಲಿ ಪಾಲ್ಗೊಂಡಿದ್ದರು. ಇದರ ಬೆನ್ನಲ್ಲೇ ರಾಜ್ಯದಲ್ಲಿ ಆರ್‌ಎಸ್‌ಎಸ್ ಚಟುವಟಿಕೆಗಳಿಗೆ ನಿಷೇಧ ಹೇರಬೇಕೆಂದು ಸಚಿವ ಪ್ರಿಯಾಂಕ್ ಖರ್ಗೆ ಮುಖ್ಯಮಂತ್ರಿಗೆ ಪತ್ರಬರೆದಿದ್ದು, ಅದಕ್ಕೆ ಸರ್ಕಾರದಿಂದ ಪ್ರತಿಕ್ರಿಯೆ ಸಿಕ್ಕ ವಿಚಾರ ಬಹಿರಂಗವಾಗಿತ್ತು. ಇದಾದ ಬೆನ್ನಲ್ಲೇ ಮತ್ತೊಬ್ಬ ನಾಯಕ ದಿನೇಶ್ ಗುಂಡೂರಾವ್ ಆರ್‌ಎಸ್‌ಎಸ್ ವಿರುದ್ಧ ಮಾತನಾಡಿದ್ದಾರೆ. . ಆರ್‌ಎಸ್‌ಎಸ್ […]
ಮಡಿಕೇರಿಯಲ್ಲಿ ಕಬ್ಬಿಣದ ಸರಳುಗಳನ್ನು ಸಾಗಿಸುತ್ತಿದ್ದ ವಾಹನ ಪಲ್ಟಿ..!

ಮಡಿಕೇರಿ : ಕಬ್ಬಿಣದ ಸರಳುಗಳನ್ನು ಸಾಗಿಸುತ್ತಿದ್ದ ಪಿಕಪ್ ವಾಹವೊಂದು ನಿಯಂತ್ರಣ ಕಳೆದುಕೊಂಡು ರಸ್ತೆ ಮಧ್ಯೆ ಪಲಿಯಾಗಿದೆ. ಆಜಾದ್ ನಗರಕ್ಕೆ ತೆರಳುವ ಮಾರ್ಗದಲ್ಲಿ ಘಟನೆ ಸಂಭಸಿದ್ದು, ರಾಡ್‌ಗಳನ್ನು ಸಾಗಿಸುತ್ತಿದ್ದ ವಾಹನ ಇಳಿಜಾರು ಪ್ರದೇಶದಲ್ಲಿ ಚಾಲಕಮ ನಿಯಂತ್ರಣ ಕಳೆದುಕೊಂಡು ರಸ್ತೆಗೆ ಅಡ್ಡಲಾಗಿ ಪಲ್ಟಿಯಾಗಿದೆ. ಯಾವುದೇ ಹೆಚ್ಚಿನ ಅನಾಹುತವಾಗಿಲ್ಲ.
ಕೊಡಗು ಜಿಲ್ಲಾದ್ಯಂತ ಅಕ್ಟೋಬರ್ 15ಕ್ಕೆ ಬೃಹತ್ ಸ್ವಚ್ಛತಾ ಆಂದೋಲನ – ಕೂರ್ಗ್ ಹೋಟೆಲ್, ರೆಸಾರ್ಟ್ ಅಸೋಸಿಯೇಷನ್ ಮುಂದಾಳತ್ವ

ಮಡಿಕೇರಿ : ಕೂರ್ಗ್ ಹೋಟೆಲ್, ರೆಸಾರ್ಟ್ ಅಸೋಸಿಯೇಷನ್ ವತಿಯಿಂದ ಕೊಡಗಿನ ವಿವಿಧ ಸಂಘಸಂಸ್ಥೆಗಳ ಸಹಕಾರದಲ್ಲಿ ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪ್ರವಾಸೋದ್ಯಮ ಇಲಾಖೆ, ಗ್ರಾಮ ಪಂಚಾಯತ್, ಸ್ಥಳೀಯ ಸಂಸ್ಥೆಗಳ ಸಹಭಾಗಿತ್ವದಲ್ಲಿ ಸ್ವಚ್ಚ ಕೊಡಗು – ಸುಂದರ ಕೊಡಗು ಎಂಬ ಬೃಹತ್ ಸ್ವಚ್ಚತಾ ಆಂದೋಲನ ಆಯೋಜಿಸಲಾಗಿದೆ. ಬುಧವಾರ(15.10.2025) ಬೆಳಗ್ಗೆ 8 ಗಂಟೆಯಿಂದ ಏಕಕಾಲದಲ್ಲಿ ಕೊಡಗಿನಾದ್ಯಂತ ಈ ಸ್ವಚ್ಚತಾ ಅಭಿಯಾನ ನಡೆಯಲಿದೆ. ಪ್ರತಿ ಊರಿನಲ್ಲಿಯೂ ಅಲ್ಲಿನ ಸಂಘಸಂಸ್ಥೆಗಳು ಸಕಾ೯ರಿ ಮತ್ತು ಸಕಾ೯ರೇತರ ಸಂಸ್ಥೆಗಳು ಈ ಸ್ವಚ್ಚತಾ ಅಭಿಯಾನದಲ್ಲಿ ಪಾಲ್ಗೊಳ್ಳಲಿದೆ. ಸ್ವಚ್ಚತೆಯಲ್ಲಿ […]
ರಾಜ್ಯದಲ್ಲಿ ಆರ್‌ಎಸ್‌ಎಸ್ ಚಟುವಟಿಕೆಗಳಿಗೆ ನಿಷೇಧ ಹೇರಿ – ಸಿಎಂಗೆ ಪತ್ರ ಬರೆದ ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು : ರಾಷ್ಟ್ರೀಯ ಸ್ವಯಂ ಸೇವಕ ಸಂಘ(RSS) ಶತಮಾನದ ಸಂಭ್ರಮದಲ್ಲಿದೆ. ಈ ನಡುವೆ ಸರ್ಕಾರಿ ಸ್ಥಳಗಳಲ್ಲಿ ಆರ್‌ಎಸ್‌ಎಸ್ ನಡೆಸುವ ಎಲ್ಲಾ ರೀತಿಯ ಚಟುವಟಿಕೆಗಳ ಮೇಲೆ ನಿಷೇಧ ಹೇರಬೇಕೆಂದು ರಾಜ್ಯದ ಪ್ರಭಾವಿ ಸಚಿವರೊಬ್ಬರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆಗ್ರಹಿಸಿದ್ದಾರೆ. ಈ ಸಂಬಂಧಿತವಾಗಿ ಸಿಎಂಗೆ ಪತ್ರವನ್ನೂ ಬರೆದಿದ್ದಾರೆ. ಆರ್‌ಎಸ್‌ಎಸ್ ಚಟುವಟಿಕೆಗಳಿಗೆ ನಿರ್ಬಂಧ ಹೇರಬೇಕೆಂದು ಆಗ್ರಹಿಸಿರುವುದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ. ಅವರು ಬರೆದಿರುವ ಪತ್ರದಲ್ಲಿನ ಅಂಶಗಳು ಇಂತಿವೆ. ಆರ್‌ಎಸ್‌ಎಸ್ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳು, ಸರ್ಕಾರಿ […]
ಜಿಲ್ಲಾಸ್ಪತ್ರೆಯಲ್ಲಿ ರಕ್ತ ಕೊರತೆ – ಸ್ವಯಂಪ್ರೇರಿತರಾಗಿ ರಕ್ತದಾನ ಮಾಡಿ ಮಾದರಿಯಾದ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ

ಮಡಿಕೇರಿ : ಕೊಡಗು ಜಿಲ್ಲಾಸ್ಪತ್ರೆಯ ರಕ್ತನಿಧಿ ಘಟಕದಲ್ಲಿ ಕೆಲವು ದಿನದಿಂದ ರಕ್ತದ ಬೇಡಿಕೆ ಹೆಚ್ಚಾಗಿದೆ. ಆದರೆ ಅಗತ್ಯ ಪ್ರಮಾಣದಲ್ಲಿ ಸಂಗ್ರಹ ಇಲ್ಲದ ಕಾರಣ ದಾನಿಗಳಿಂದ ರಕ್ತ ಕೊಡಿಸುವ ಕಾರ್ಯವನ್ನು ಅನೇಕರು ಮಾಡುತ್ತಿದ್ದಾರೆ. ವಿವಿಧ ಸಂಘ ಸಂಸ್ಥೆಗಳ ಪ್ರಮುಖರು ದಾನಿಗಳನ್ನು ಸಂಪರ್ಕಿಸಿ ರಕ್ತ ಸಂಗ್ರಹಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಈ ಸಮಾಜಮುಖಿ ಕಾರ್ಯಕ್ಕೆ ಜಿಲ್ಲೆಯ ಪೊಲೀಸರು ಕೂಡಾ ಸಾಥ್ ನೀಡಿದ್ದಾರೆ. ಕಳೆದೊಂದು ವಾರದಿಂದ ಜಿಲ್ಲೆಯ ವಿವಿಧೆಡೆ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿಗಳು ಹಾಗೂ ಸಿಬ್ಬಂದಿ ಸ್ವಯಂಪ್ರೇರಿತರಾಗಿ ಬಂದು ಜಿಲ್ಲಾಸ್ಪತ್ರೆಯಲ್ಲಿ ರಕ್ತದಾನ ಮಾಡಿದ್ದಾರೆ. […]
ಮೈಸೂರಿನಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದೆ – ಸರ್ಕಾರದ ವಿರುದ್ಧ ಸಂಸದ ಯದುವೀರ್ ಆಕ್ರೋಶ

ಮೈಸೂರು : ಇತ್ತೀಚಿನ ದಿನದಲ್ಲಿ ಮೈಸೂರಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಕೊಡಗು-ಮೈಸೂರು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಆರೋಪಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೈಸೂರಿನಲ್ಲಿ ಹಬ್ಬದ ವಾತಾವರಣ ಈಗಲೂ ಇದೆ. ಆದರೆ ಇಲ್ಲಿ ನಡೆದ ಘಟನೆಗಳು ಕಾನೂನು ಸುವ್ಯವಸ್ಥೆ ಹೇಗಿದೆ ಅನ್ನೋದನ್ನ ತೋರಿಸುತ್ತಿದೆ. ಹಿಂದೆ ಉದಯಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ನಡೆಯಿತು. 340 ಕೋಟಿ ರೂಪಾಯಿಯ ಡ್ರಗ್ಸ್ ಪತ್ತೆಯಾಯಿತು. ಇದನ್ನ ಮಹಾರಾಷ್ಟ್ರದ ಪೊಲೀಸರು ಪತ್ತೆ ಮಾಡಬೇಕಾಯಿತು. ಇದೀಗ ಅರಮನೆ ಬಳಿಯಲ್ಲೇ ಕೊಲೆ […]
ಬಾಲಕಿಯ ಅ*ತ್ಯಾಚಾರ, ಕೊ*ಲೆ ಪ್ರಕರಣ – ಆರೋಪಿ ಕಾಲಿಗೆ ಗುಂಡೇಟು..!

ಮೈಸೂರು : ದಸರಾದಲ್ಲಿ ಬಲೂನ್ ಮಾರಾಟ ಮಾಡುತ್ತಿದ್ದ ಬಾಲಕಿಯ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮೈಸೂರಿನ ಸಿದ್ದಲಿಂಗಪುರದ ಕಾರ್ತಿಕ್ ಬಂಧಿತ ಆರೋಪಿ. ಅತ್ಯಾಚಾರ ಮಾಡಿ, ಕೊಲೆಗೈದು ಬಸ್‌ನಲ್ಲಿ ಕೊಳ್ಳೇಗಾಲಕ್ಕೆ ಎಸ್ಕೇಪ್ ಆಗಿದ್ದ. ಸಿಸಿ ಕ್ಯಾಮರಾ ದೃಶ್ಯಾವಳಿಯನ್ನು ಆಧರಿಸಿ ಕಾರ್ಯಾಚರಣೆಗಿಳಿದ ಪೊಲೀಸರು ಕಾಮುಕನನ್ನು ಬಂಧಿಸಿದ್ದಾರೆ. ಬಂಧಿಸಿ ಕರೆತರುವ ವೇಳೆ ಪೊಲೀಸರ ವಶದಿಂದ ತಪ್ಪಿಸಿಕೊಳ್ಳಲು ಈತ ಯತ್ನಿಸಿದ್ದು, ಪೊಲೀಸರು ಆತನ ಮೊಣಕಾಲಿಗೆ ಗುಂಡು ಹಾರಿಸಿದ್ದಾರೆ. ಸದ್ಯ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಹಿಂದೆ ಮಂಡ್ಯದಲ್ಲಿ ಮಹಿಳೆ ಮೇಲೆ […]