ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾಟ: ಕಾವೇರಿ ಕಾಲೇಜಿಗೆ ಪ್ರಥಮ ಸ್ಥಾನ

ಸೋಮವಾರಪೇಟೆಯಲ್ಲಿ ನಡೆದ ಕೊಡಗು ವಿಶ್ವವಿದ್ಯಾಲಯದ ವಾಲಿಬಾಲ್ ಪಂದ್ಯಾಟದಲ್ಲಿ ಗೋಣಿಕೊಪ್ಪಲು ಕಾವೇರಿ ಕಾಲೇಜು ತಂಡವು ಮೊದಲ ಸ್ಥಾನ ಪಡೆದಿದೆ. ಶಹೀಮ್, ಆದರ್ಶ ಬಿದ್ದಪ್ಪ, ಬಸಿತ್, ಅಪ್ಸಲ್, ಮಿರನ್, ಹೃತಿಕ್, ಸಫ್ವಾನ್, ಮತ್ತು ರಿಜ್ವಾನ್ – ಈ ಯುವ ಆಟಗಾರರು ಉತ್ತಮ ಪ್ರದರ್ಶನ ನೀಡಿ ತಂಡಕ್ಕೆ ಪ್ರಥಮ ಬಹುಮಾನ ತಂದುಕೊಟ್ಟಿದ್ದಾರೆ.

ಅಕ್ರಮ ಆಸ್ತಿ ಗಳಿಕೆ ಆರೋಪ : PWD AEE ಕಚೇರಿ, ಮನೆ ಮೇಲೆ ಲೋಕಾಯುಕ್ತ ದಾಳಿ..!

ಮಡಿಕೇರಿ : ರಾಜ್ಯದ ವಿವಿಧೆಡೆ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರು ಬೆಳ್ಳಂಬೆಳಗ್ಗೆ ಬಿಸಿ ಮುಟ್ಟಿಸಿದ್ದಾರೆ. ಮಡಿಕೇರಿಯಲ್ಲೂ ಕೂಡಾ ಪಿಡಬ್ಲ್ಯೂಡಿ ಅಧಿಕಾರಿ ಮನೆ ಮೇಲೂ ಲೋಕಾಯುಕ್ತ ದಾಳಿಯಾಗಿದೆ. ಲೋಕೋಪಯೋಗಿ ಇಲಾಖೆ ಸಹಾಯಕ ಇಂಜಿನಿಯರ್‌ ಗಿರೀಶ್‌ ಕಚೇರಿ, ಮನೆಗಳ ಮೇಲೆ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಮಡಿಕೇರಿಯಲ್ಲಿನ‌ ಕಚೇರಿ, ಕುಶಾಲನಗರ, ಮೈಸೂರಿನ ಮನೆಗೆ ದಾಳಿ ನಡೆಸಿದ ಅಧಿಕಾರಿಗಳು ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ. ಅಕ್ರಮವಾಗಿ ಆಸ್ತಿ ಗಳಿಸಿದ್ದಾರೆಂದು ಲೋಕಾಯುಕ್ತಕ್ಕೆ ದೂರು ಬಂದ ಹಿನ್ನೆಲೆಯಲ್ಲಿ DYSP ದಿನಕರ್ ಶೆಟ್ಟಿ ನೇತೃತ್ವದಲ್ಲಿ ಮೈಸೂರಿನಲ್ಲಿ ದಾಳಿಯಾಗಿದೆ.

Power Cut: ನಾಳೆ ಕೊಡಗಿನಲ್ಲಿ ಎಲ್ಲೆಲ್ಲಿ ಕರೆಂಟ್ ಇರಲ್ಲ?

Kodagu power cut

 ನವೆಂಬರ್, 25 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ 3ನೇ ತ್ರೈಮಾಸಿಕ ನಿರ್ವಾಹಣೆ ಕಾಮಗಾರಿ ಕೈಗೆತ್ತಿಕೊಳ್ಳುತ್ತಿರುವುದರಿಂದ ಈ ಮಾರ್ಗದಿಂದ ವಿದ್ಯುತ್ ಸರಬರಾಜಾಗುವ ಕಣಗಾಲು, ದೊಡ್ಡಳ್ಳಿ, ಗೋಣಿಮರೂರು, ಬಾಣವಾರ, ಸಿದ್ದಲಿಂಗಪುರ, ಮಾಲಂಬಿ, ಹೊಸಗುತ್ತಿ, ಕೈಸರದಳ್ಳಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಸೆಸ್ಕ್ ಕಾರ್ಯ ಮತ್ತು ಪಾಲನೆ ವಿಭಾಗ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ. ಹಾಗೆಯೇ 33/11 ಕೆ.ವಿ ಮೂರ್ನಾಡು ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಹೊಮ್ಮುವ 11 ಕೆ.ವಿ ಎಫ್1  ಪಾರಾಣೆ […]

ಪೊನ್ನಂಪೇಟೆ : ಕೆರೆಗೆ ಹಾರಿ ಆತ್ಮಹ*ತ್ಯೆಗೆ ಶರಣಾದ ಮಹಿಳೆ..!

ಗೋಣಿಕೊಪ್ಪ : ಮಹಿಳೆಯೊಬ್ಬರು ಕೆರೆಗೆ ಹಾರಿ ಆತ್ಮಹ*ತ್ಯೆ ಮಾಡಿಕೊಂಡಿರುವ ಘಟನೆ ಪೊನ್ನಂಪೇಟೆ ತಾಲೂಕಿನ ತೂಚಮಕೇರಿಯಲ್ಲಿ ನಡೆದಿದೆ. ಮೂಕಳಮಾಡ ಸುರೇಶ್ ಎಂಬವರ ಪತ್ನಿ ಸುಮಿತಾ(48) ಆತ್ಮಹ*ತ್ಯೆಗೆ ಶರಣಾದವರು. ಇಂದು(ಸೋಮವಾರ) ಬೆಳಗ್ಗೆ ಮನೆ ಬಳಿಯ ಕೆರೆಗೆ ಹಾರಿ ಪ್ರಾಣ ಕಳೆದುಕೊಂಡಿದ್ದಾರೆ. ಕೆಲವು ದಿನಗಳಿಂದ ಸುಮಿತಾ ಅವರು ಮಾನಸಿಕವಾಗಿ ಬಹಳ ನೊಂದಿದ್ದರು ಎನ್ನಲಾಗಿದೆ. ಹೀಗಾಗಿ ಆತ್ಮಹ*ತ್ಯೆ ಮಾಡಿಕೊಂಡಿರಬಹುದೆಂದು ಶಂಕಿಸಲಾಗಿದೆ. ಘಟನಾ ಸ್ಥಳಕ್ಕೆ ಶ್ರೀಮಂಗಲ ಪೊಲೀಸರು ಭೇಟಿ ನೀಡಿ, ಪರಿಶೀಲಿಸಿದ್ದಾರೆ.

ಜಿಲ್ಲಾ ಮಟ್ಟದ ‘ಗ್ಯಾರಂಟಿ ಕಾರ್ಯಗಾರ ಮತ್ತು ಗ್ಯಾರಂಟಿ ಉತ್ಸವ’ ಕಾರ್ಯಕ್ರಮ

ಮಡಿಕೇರಿ:- ಚುನಾವಣಾ ಸಂದರ್ಭದಲ್ಲಿ ರಾಜ್ಯದ ಜನರಿಗೆ ಭರವಸೆ ನೀಡಿದಂತೆ ‘ಪಂಚ ಗ್ಯಾರಂಟಿ’ ಯೋಜನೆಗಳನ್ನು ಜಾರಿಗೊಳಿಸಿ ರಾಜ್ಯದ ಎಲ್ಲಾ ಜನರಿಗೆ ಒಂದಲ್ಲ ಒಂದು ಸೌಲಭ್ಯಗಳು ತಲುಪುವಂತೆ ಮಾಡುವಲ್ಲಿ ಸರ್ಕಾರ ಶ್ರಮಿಸುತ್ತಿದೆ ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರು ತಿಳಿಸಿದ್ದಾರೆ.  ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ವತಿಯಿಂದ ಕರ್ನಾಟಕ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಕುರಿತು ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶನಿವಾರ ನಡೆದ ಜಿಲ್ಲಾ ಮಟ್ಟದ ‘ಗ್ಯಾರಂಟಿ ಕಾರ್ಯಗಾರ ಮತ್ತು ಗ್ಯಾರಂಟಿ ಉತ್ಸವ ಕಾರ್ಯಕ್ರಮಕ್ಕೆ ಚಾಲನೆ […]

Power Cut: ನಾಳೆ ಕೊಡಗಿನ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

Kodagu power cut

ಮಡಿಕೇರಿ: ನವೆಂಬರ್, 23 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಕೊಡಗು ವಿದ್ಯುತ್ ಜಾಲದ ಬಲವರ್ಧನೆಯ ಕಾಮಗಾರಿಯನ್ನು ಕೈಗೆತ್ತಿಕೊಂಡಿರುವುದರಿಂದ ಈ ಫೀಡರ್‍ನಿಂದ ಹೊರಹೊಮ್ಮುವ ಶನಿವಾರಸಂತೆ ಟೌನ್ ಫೀಡರ್, ಶನಿವಾರಸಂತೆ ಪಟ್ಟಣ, ಕೆ.ಆರ್.ಸಿ ಸರ್ಕಲ್, ಅಡ್ಡಶೆಟ್ಟಳ್ಳಿ, ಶೆಟ್ಟಿಗನಹಳ್ಳಿ, ಮಾದ್ರೆ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಸೆಸ್ಕ್ ಕಾರ್ಯ ಮತ್ತು ಪಾಲನೆ ವಿಭಾಗ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.

ಮೀನು ಮಾರಾಟ ʼದ್ವಿಚಕ್ರ ವಾಹನʼ ಖರೀದಿಗೆ ಅರ್ಜಿ ಆಹ್ವಾನ

ಮಡಿಕೇರಿ : ಪೊನ್ನಂಪೇಟೆ ತಾಲ್ಲೂಕು ಮೀನುಗಾರಿಕೆ ಇಲಾಖೆ ವತಿಯಿಂದ 2025-26ನೇ ಸಾಲಿನಲ್ಲಿ ‘ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಜನ ಜಾತೀಯ ಗ್ರಾಮ ಉತ್ಕರ್ಷ ಅಭಿಯಾನದಡಿ ಪೊನ್ನಂಪೇಟೆ ತಾಲ್ಲೂಕಿನ ನಿಟ್ಟೂರು ಗ್ರಾಮದ ಸದರಿ ವ್ಯಾಪ್ತಿಗೊಂಡಿರುವ ಪರಿಶಿಷ್ಟ ಪಂಗಡ ಗಿರಿಜನ ಉಪ ಯೋಜನೆಯಡಿ ಆಯ್ದ ಮೀನು ಮಾರಾಟಗಾರರಿಗೆ/ ಮೀನುಗಾರಿಕೆ ವೃತ್ತಿ ಅವಲಂಬಿಸಿರುವವರಿಗೆ ದ್ವಿಚಕ್ರ ಮೀನು ಮಾರಾಟ ವಾಹನ ಖರೀದಿಗೆ ಶೇ.90 ಆರ್ಥಿಕ ನೆರವು ನೀಡಲು ಒಂದು ಭೌತಿಕ ಗುರಿ ನಿಗದಿಪಡಿಸಿದ್ದು, ಈ ಯೋಜನೆಯನ್ನು ಅನುಷ್ಠಾನಗೊಳಿಸಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಮತ್ತು […]

ನ.24 ರಿಂದ ಶ್ರೀ ಭಗಂಡೇಶ್ವರ-ತಲಕಾವೇರಿ ದೇವಾಲಯದಲ್ಲಿ ಸಂಪ್ರೋಕ್ಷಣೆ

ಭಾಗಮಂಡಲ : ಶ್ರೀ ಭಗಂಡೇಶ್ವರ–ತಲಕಾವೇರಿ ದೇವಾಲಯದಲ್ಲಿ ಪ್ರತೀ ವರ್ಷ ರೂಢಿ ಸಂಪ್ರದಾಯದಂತೆ ಸಂಪ್ರೋಕ್ಷಣೆಯನ್ನು ನಡೆಸಿಕೊಂಡು ಬರುತ್ತಿರುವ ಹಿನ್ನಲೆಯಲ್ಲಿ ಈ ವರ್ಷವೂ ಶ್ರೀ ಉಚ್ಚಿಲ ನೀಲೇಶ್ವರ ಪದ್ಮನಾಭ ತಂತ್ರಿಯವರ ನೇತೃತ್ವದಲ್ಲಿ ನವೆಂಬರ್ 24 ರಿಂದ 27 ರವರೆಗೆ “ಸಂಪ್ರೋಕ್ಷಣೆ” ಕಾರ್ಯಕ್ರಮ ನಡೆಯಲಿದೆ. ಆದ್ದರಿಂದ ಸಾರ್ವಜನಿಕ ಭಕ್ತಾದಿಗಳು ದೇವಾಲಯಗಳಲ್ಲಿ ನಡೆಯಲಿರುವ ಪೂಜಾ ಕಾರ್ಯಕ್ರಮಗಳಲ್ಲಿ ಭಾಗವಹಿಸಬೇಕಾಗಿ ದೇವಾಲಯದ ಆಡಳಿತಾಧಿಕಾರಿಗಳ ಪರವಾಗಿ ಕಾರ್ಯನಿರ್ವಾಹಕ ಅಧಿಕಾರಿ ಎನ್.ಜಿ ಚಂದ್ರಶೇಖರ್ ಕೋರಿದ್ದಾರೆ. ಶ್ರೀ ತಲಕಾವೇರಿ ದೇವಾಲಯದಲ್ಲಿ ನವೆಂಬರ್ 24 ರಂದು ಬೆಳಗ್ಗೆ 7.30 ಗಂಟೆಗೆ ಗಣಹೋಮ, […]

ನ.22 ರಂದು ಜಿಲ್ಲಾ ಮಟ್ಟದ ‘ಗ್ಯಾರಂಟಿ ಕಾರ್ಯಗಾರ ಮತ್ತು ಗ್ಯಾರಂಟಿ ಉತ್ಸವ’!

ಮಡಿಕೇರಿ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ವತಿಯಿಂದ ಕರ್ನಾಟಕ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಕುರಿತು ಜಿಲ್ಲಾ ಮಟ್ಟದ ‘ಗ್ಯಾರಂಟಿ ಕಾರ್ಯಗಾರ ಮತ್ತು ಗ್ಯಾರಂಟಿ ಉತ್ಸವವು ನವೆಂಬರ್ 22 ರಂದು ಬೆಳಗ್ಗೆ 10.30 ಗಂಟೆಗೆ ಕೊಡಗು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ. ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ಕರ್ನಾಟಕ ರಾಜ್ಯ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಎಚ್.ಎಂ.ರೇವಣ್ಣ, ಮೈಸೂರು ವಿಭಾಗ ಕರ್ನಾಟಕ ರಾಜ್ಯ […]

ಜಿಲ್ಲಾಮಟ್ಟದ ತ್ರೈಮಾಸಿಕ ಕೆಡಿಪಿ ಸಭೆ – ರಸ್ತೆ ಅವ್ಯವಸ್ಥೆ ಬಗ್ಗೆ ಬಿಸಿ ಬಿಸಿ ಚರ್ಚೆ..! – ಅಧಿಕಾರಿಗಳಿಗೆ ಉಸ್ತುವಾರಿ ಸಚಿವ ಹೇಳಿದ್ದೇನು..?

ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ಹೆಚ್ಚಿನ ಮಳೆಯಿಂದಾಗಿ ಲೋಕೋಪಯೋಗಿ, ಪಂಚಾಯತ್ ರಾಜ್ ಹಾಗೂ ನೀರಾವರಿ ಇಲಾಖೆ ವ್ಯಾಪ್ತಿಯ ರಸ್ತೆಗಳು ಹದಗೆಟ್ಟಿದ್ದು, ಈಗಾಗಲೇ ಮಳೆಗಾಲ ಮುಗಿದಿರುವುದರಿಂದ ಶೀಘ್ರ ರಸ್ತೆ ಕಾಮಗಾರಿ ಕೈಗೊಂಡು ಪೂರ್ಣಗೊಳಿಸುವಂತೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ನಗರದ ಜಿ.ಪಂ.ಸಭಾಂಗಣದಲ್ಲಿ ಶುಕ್ರವಾರ ನಡೆದ 2025-26 ನೇ ಸಾಲಿನ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ(20 ಅಂಶಗಳ ಕಾರ್ಯಕ್ರಮ ಸೇರಿದಂತೆ) ಜಿಲ್ಲಾ ಮಟ್ಟದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. […]