ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಉದ್ದೇಶವೇನು ಗೊತ್ತಾ..?

ಕರ್ನಾಟಕ ಸರ್ಕಾರವು ವಿವಿಧ ಜಾತಿಗಳ, ವಿಶೇಷವಾಗಿ ಹಿಂದುಳಿದ ಮತ್ತು ಅಳಿವಿನ  ಅಂಚಿನಲ್ಲಿರುವ ಸಮುದಾಯಗಳ ಸಾಮಾಜಿಕ ಮತ್ತು ಶೈಕ್ಷಣಿಕ ದತ್ತಾಂಶವನ್ನು ಸಂಗ್ರಹಿಸಲು ಈ ಸಮೀಕ್ಷೆಯನ್ನು ಸೆಪ್ಟೆಂಬರ್ ತಿಂಗಳ 22 ರಿಂದ ಮುಂದಿನ ಅಕ್ಟೋಬರ್ ತಿಂಗಳ 7ರವರೆಗೆ ನಡೆಸುತ್ತಿದೆ. ಈ ಸಮೀಕ್ಷೆಯು  ಈ ಕೆಳಗಿನ ವಿಷಯಗಳಿಗೆ ಸಂಬಂಧಿಸಿದಂತೆ ನೀತಿ ನಿರೂಪಣೆ ರೂಪಿಸಲು ಪ್ರಮುಖ ಪಾತ್ರ ವಹಿಸುತ್ತದೆ. ಉತ್ತಮ ನೀತಿ ಯೋಜನೆ: ಈ ಸಮೀಕ್ಷೆಯು ವಿಭಿನ್ನ ಜಾತಿಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಬಗ್ಗೆ ಒಳನೋಟವನ್ನು ಸರಕಾರಕ್ಕೆ ಒದಗಿಸುತ್ತದೆ. ಇದರಿಂದ ಸರ್ಕಾರವು […]

ವಿರಾಜಪೇಟೆಯ ಲಾವಣ್ಯಗೆ ಕಲಾನಿಧಿ ರಾಷ್ಟ್ರೀಯ ಪ್ರಶಸ್ತಿ

ವಿರಾಜಪೇಟೆ: ವಿರಾಜಪೇಟೆಯ ಭರತನಾಟ್ಯ ಕಲಾವಿದೆ ಬಿ. ಎನ್. ಲಾವಣ್ಯ ಬೋರ್ಕಾರ್ಗೆ ಕಲಾನಿಧಿ ರಾಷ್ಟ್ರೀಯ ಪ್ರಶಸ್ತಿ ಲಭಿಸಿದೆ. ವಿರಾಜಪೇಟೆಯ ನಾಟ್ಯ ಮಯೂರಿ ನೃತ್ಯ ಟ್ರಸ್ಟ್ (ರಿ ) ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಕಾರದಲ್ಲಿ ಶಿಕ್ಷಕರ ದಿನಾಚರಣೆಯ ಅಂಗವಾಗಿ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದ ನಯನ ಸಭಾಂಗಣದಲ್ಲಿ ಜರುಗಿದ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಲಾವಣ್ಯ ರವರ ಭರತನಾಟ್ಯದಲ್ಲಿನ ಸಾಧನೆಯನ್ನು ಗುರುತಿಸಿ ಈ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಕರ್ನಾಟಕ ಸಾವಿತ್ರಿ ಬಾಯಿ ಪುಲೆ ಶಿಕ್ಷಕಿಯರ ಸಂಘದ ಸಂಸ್ಥಾಪಕ […]

ನಾಳೆ‌(ಸೆ. 28) ಮಡಿಕೇರಿಯಲ್ಲಿ ರಂಗೇರಲಿದೆ ಮಹಿಳೆಯರ ಸಂಭ್ರಮ

ಮಡಿಕೇರಿ ನಗರ ದಸರಾ ಸಮಿತಿ, ಮಡಿಕೇರಿ ದಸರಾ ಸಾಂಸ್ಕೃತಿಕ ಸಮಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದೊಂದಿಗೆ ಮಂಜಿನ ನಗರಿ ಮಡಿಕೇರಿಯಲ್ಲಿ 8ನೇ ವರ್ಷದ ಮಹಿಳಾ ದಸರಾ ಏರ್ಪಡಿಸಲಾಗಿದ್ದು ತಾ. 28ರ ಭಾನುವಾರದಂದು ನಡೆಯಲಿದೆ. ಮಡಿಕೇರಿಯ ಗಾಂಧಿ ಮೈದಾನದ ಕಲಾ ಸಂಭ್ರಮ ವೇದಿಕೆಯಲ್ಲಿ ಬೆಳಿಗ್ಗೆ  9.30  ಗಂಟೆಯಿಂದ ಕಾರ್ಯಕ್ರಮ ಆರಂಭವಾಗಲಿದ್ದು, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಜಾನಪದ ಕಲಾವಿದೆ ಐಮುಡಿಯಂಡ ರಾಣಿ ಮಾಚಯ್ಯ ಉದ್ಘಾಟನೆ ಮಾಡಲಿದ್ದಾರೆ. ನಗರ ಸಭೆ ಹಾಗೂ ನಗರ […]

ದಸರಾ ಕ್ರೀಡಾಕೂಟಕ್ಕೆ ಮಳೆ ಅಡ್ಡಿ – ಕಬಡ್ಡಿ ಪಂದ್ಯಾವಳಿ ಮುಂದೂಡಿಕೆ: ಅಧ್ಯಕ್ಷ ಪ್ರದೀಪ್‌ ಕರ್ಕೇರ

ಮಡಿಕೇರಿ : ಮಡಿಕೇರಿ ಜನೋತ್ಸವ ದಸರಾ ಕ್ರೀಡಾ ಸಮಿತಿ ವತಿಯಿಂದ ಸೆ.28ರಂದು ನಡೆಯಬೇಕಿದ್ದ ಕಬಡ್ಡಿ ಪಂದ್ಯಾವಳಿಯನ್ನು ಮುಂದೂಡಲಾಗಿದೆ ಎಂದು ಸಮಿತಿ ಅಧ್ಯಕ್ಷ ಪ್ರದೀಪ್‌ ಕರ್ಕೇರ ಹೇಳಿದ್ದಾರೆ. ಮಡಿಕೇರಿಯಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಈ ಬಾರಿಯ ದಸರಾ ಕ್ರೀಡಾಕೂಟಕ್ಕೆ ವಿವಿಧ ರೀತಿಯಲ್ಲಿ ಸಮಸ್ಯೆಯಾಗುತ್ತಿದೆ. ಹಲವು ಸ್ಪರ್ಧೆಗಳನ್ನು ಮಳೆಯ ನಡುವೆಯೇ ನಡೆಸಿದ್ದೇವೆ. ಆದರೆ ಕಬಡ್ಡಿ ಪಂದ್ಯಾವಳಿಗೆ ಹೊರ ಜಿಲ್ಲೆಗಳಿಂದಲೂ ತಂಡಗಳು ಆಗಮಿಸಲಿದ್ದು, ಎಲ್ಲಾ ಆಟಗಾರರಿಗೆ ಯಾವುದೇ ಸಮಸ್ಯೆ ಆಗದಂತೆ ಮುಂಜಾಗ್ರತೆ ವಹಿಸಬೇಕಿದೆ. ಮಳೆಯ ನಡುವೆ ಪಂದ್ಯಾವಳಿ ನಡೆಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಸಮಿತಿ […]

ಪ್ರಕೃತಿಯ ಜೊತೆಗೆ ಪ್ರತಿಯೊಬ್ಬರೂ ಭಾವನಾತ್ಮಕ ಸಂಬಂಧವನ್ನು ಹೊಂದಿರಬೇಕು: ಸಂಕೇತ್ ಪೂವಯ್ಯ

ವಿರಾಜಪೇಟೆ : ಪ್ರತಿಯೊಬ್ಬರೂ ಕೂಡ ಪ್ರಕೃತಿಯ ಜೊತೆಗೆ ಭಾವನಾತ್ಮಕ ಸಂಬಂಧವನ್ನು ಹೊಂದಿರಬೇಕು ಎಂದು ರಾಜ್ಯ ವನ್ಯಜೀವಿ ಮಂಡಳಿಯ ಸದಸ್ಯರಾದ ಮೇರಿಯಂಡ ಸಂಕೇತ್ ಪೂವಯ್ಯರವರು ಅಭಿಪ್ರಾಯಪಟ್ಟರು. ಅವರು ವಿರಾಜಪೇಟೆ ಪಟ್ಟಣದ ಸೆಂಟ್ ಆನ್ಸ್ ಪದವಿ ಕಾಲೇಜಿನಲ್ಲಿ ಕಾಲೇಜಿನ ನೇಚರ್ ಕ್ಲಬ್ ಘಟಕದ ವತಿಯಿಂದ ಆಯೋಜಿಸಲಾಗಿದ್ದ ಉಪನ್ಯಾಸ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಪ್ರಕೃತಿಯು ಮಾನವನಿಗೆ ಒಂದು ವರವಾಗಿದ್ದು ಭಾವನಾತ್ಮಕವಾಗಿಯೂ, ಆರೋಗ್ಯದ ದೃಷ್ಟಿಯಿಂದಲೂ ತನ್ನದೇ ಆದ ಕೊಡುಗೆಯನ್ನು ನೀಡುತ್ತಿದೆ. ಪರಿಸರ ಅಧ್ಯಯನವನ್ನು ನಾವು ಪ್ರಾಯೋಗಿಕವಾಗಿ ಅಧ್ಯಯನ ಮಾಡಬೇಕು. ಪರಿಸರದಲ್ಲಿ ನಾವು ಕಲಿಯುವ […]

ತಾಲ್ಲೂಕು ಮಟ್ಟದ ಕಬಡ್ಡಿ ಪಂದ್ಯಾವಳಿಯಲ್ಲಿ CIPUC ಬಾಲಕಿಯರ ತಂಡಕ್ಕೆ ರನ್ನರ್ ಅಪ್ ಪ್ರಶಸ್ತಿ

ಸಿದ್ದಾಪುರದ ಸರ್ಕಾರಿ ಪ್ರೌಢಶಾಲೆಯಲ್ಲಿ ಪದವಿಪೂರ್ವ ಶಿಕ್ಷಣ ಇಲಾಖೆಯ ವತಿಯಿಂದ ಆಯೋಜಿಸಲಾಗಿದ್ದ ತಾಲ್ಲೂಕು ಮಟ್ಟದ ಕಬಡ್ಡಿ ಪಂದ್ಯಾವಳಿಯಲ್ಲಿ ಪೊನ್ನಂಪೇಟೆಯ ಕೂರ್ಗ್ ಇನ್ಸ್ಟಿಟ್ಯೂಟ್ ಆಫ್ ಪಿ.ಯು.ಕಾಲೇಜಿನ ವಿದ್ಯಾರ್ಥಿನಿಯರು ಭಾಗವಹಿಸಿ ರನ್ನರ್ ಪ್ರಶಸ್ತಿಯನ್ನು ತಮ್ಮದಾಗಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಹಾಗೂ ಜಿಲ್ಲಾಮಟ್ಟಕ್ಕೆ ಮೂವರು ವಿದ್ಯಾರ್ಥಿನಿಯರು ಆಯ್ಕೆಯಾಗಿದ್ದಾರೆ. ಈ ಕಬಡ್ಡಿ ಪಂದ್ಯಾವಳಿಯಲ್ಲಿ ದ್ವಿತೀಯ ಪಿ.ಯು.ವಿದ್ಯಾರ್ಥಿನಿಯರಾದ ಎಂ.ಎಸ್.ನಿಶಿತಾ ನೀಲಮ್ಮ, ಫಾತಿಮಾ ರಿಫ಼ಾನ , ತಾನ್ಯ ಕಾವೇರಮ್ಮ ಮತ್ತು ಪ್ರಥಮ ಪಿ.ಯು.ವಿದ್ಯಾರ್ಥಿಯರಾದ ಕೃತಿಕಾ ಎ.ಬಿ , ಇಫ್ರಾ ರಿಫ಼ಾತ್ , ಮೌಲ್ಯ ಜಿ , ಜೋಶ್ನಾ ಸಿ.ಜೆ , […]

ಕೊಡವ ಭಾಷಿಕರ ಅಸ್ಮಿತೆ ಉಳಿಸಿ ಬೆಳೆಸುವಲ್ಲಿ ಶ್ರಮಿಸಿ: ಅಜ್ಜಿನಿಕಂಡ ಮಹೇಶ್ ನಾಚಯ್ಯ

ಸರ್ಕಾರದಿಂದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಯುತ್ತಿದ್ದು, ಕೊಡವ ಭಾಷಿಕರು ಜಾತಿಯಲ್ಲಿ ಕೊಡವ ಎಂದು, ಉಪ ಜಾತಿಯಲ್ಲಿ 21 ಸಮಾಜಗಳು ತಮ್ಮ ತಮ್ಮ ಉಪಜಾತಿ, ಧರ್ಮದಲ್ಲಿ ‘ಕೊಡವ’ ಎಂದು ನಮೂದಿಸುವಂತಾಗಬೇಕು ಎಂದು ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಅಜ್ಜಿನಿಕಂಡ ಮಹೇಶ್ ನಾಚಯ್ಯ ಅವರು ಕರೆ ನೀಡಿದ್ದಾರೆ. ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಹಾಗೂ ಮೂರ್ನಾಡು ಕೊಡವ ಸಮಾಜ ಇವರ ಸಹಯೋಗದಲ್ಲಿ ಮೂರ್ನಾಡು ಕೊಡವ ಸಮಾಜದಲ್ಲಿ ಗುರುವಾರ ನಡೆದ ‘ಕೊಡವಾಮೆರ ಬಟ್ಟೆ-ಬೊಳಿ’ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು […]

ಮಡಿಕೇರಿಯ ಜಿಲ್ಲಾ ಆಸ್ಪತ್ರೆಯಲ್ಲಿ ಅಪೌಷ್ಟಿಕ ಮಕ್ಕಳ ಪೌಷ್ಟಿಕ ಪುನಃಶ್ಚೇತನ ಕೇಂದ್ರ

ಮಡಿಕೇರಿ: ಕೊಡಗು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಕೊಡಗು ಜಿಲ್ಲಾ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಮತ್ತು ಬೋಧಕ ಆಸ್ಪತ್ರೆಯ ಸಹಯೋಗದಲ್ಲಿ ಅಪೌಷ್ಟಿಕ ಮಕ್ಕಳ ಪೌಷ್ಠಿಕ ಪುನಃಚೇತನ ಕೇಂದ್ರ ನಡೆಸಲಾಗುತ್ತಿದೆ. ಇದು ಸರ್ಕಾರದ ಯೋಜನೆಯಾಗಿದೆ. ಪೌಷ್ಟಿಕ ವಿಭಾಗವು ರಾಜ್ಯದ ಅನುದಾನದ ಅಡಿಯಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ನಡೆಸಲಾಗುತ್ತಿದೆ. 0-6 ವರ್ಷದೊಳಗಿನ, ಅಪೌಷ್ಟಿಕತೆ ಮತ್ತು ಸಾಧಾರಣ ಅಪೌಷ್ಟಿಕತೆಯುಳ್ಳ ಅಪೌಷ್ಟಿಕ ಮಕ್ಕಳನ್ನು ಇಲ್ಲಿ ದಾಖಲಿಸಿಕೊಳ್ಳಲಾಗುತ್ತದೆ. ಮಾನದಂಡಗಳು: ವಿಶ್ವ ಆರೋಗ್ಯ ಸಂಸ್ಥೆಯ ಬೆಳವಣಿಗೆ ನಕ್ಷೆಯ ಪ್ರಕಾರ ಎತ್ತರಕ್ಕೆ ತಕ್ಕ […]

ಮಡಿಕೇರಿ ದಸರಾ ಕವಿಗೋಷ್ಠಿ 2025 – ಸರಸ್ವತಿ ಸಮ್ಮಾನ್‌ ಭೈರಪ್ಪನವರಿಗೆ ಅರ್ಪಣೆ – ಕವನ ವಾಚಿಸಿದ 70ಕ್ಕೂ ಅಧಿಕ ಮಂದಿ

ಮಡಿಕೇರಿ : ಮಡಿಕೇರಿ ದಸರಾ ಜನೋತ್ಸವ ಪ್ರಯುಕ್ತ ಬಹುಭಾಷಾ ಕವಿಗೋಷ್ಠಿ ಗುರುವಾರ ನಡೆಯಿತು. ಗಾಂಧಿ ಮೈದಾನದಲ್ಲಿ ನಡೆದ ಗೋಷ್ಠಿಯನ್ನು ನಿನ್ನೆ ನಮ್ಮನ್ನಗಲಿದ ಹಿರಿಯ ಸಾಹಿತಿ, ಪದ್ಮಭೂಷಣ ಎಸ್.ಎಲ್.‌ ಭೈರಪ್ಪ ಅವರಿಗೆ ಅರ್ಪಿಸಲಾಯಿತು.   ಕವಿಗೋಷ್ಠಿಯನ್ನು ಉದ್ಯಮಿ ಹರಪಳ್ಳಿ ರವೀಂದ್ರ ಅವರು ಉದ್ಘಾಟಿಸಿದರು. ಮುಖ್ಯ ಅತಿಥಿಯಾಗಿ ಕನ್ನಡ ಚಿತ್ರರಂಗದ ಹಿರಿಯ ಸಾಹಿತಿ, ಕೆಜಿಎಫ್‌ ಖ್ಯಾತಿಯ ಕಿನ್ನಾಳ ರಾಜ್ ಪಾಲ್ಗೊಂಡಿದ್ದರು.  ಕವಿಗೋಷ್ಠಿಯ ಆರಂಭಕ್ಕೂ ಮುನ್ನ ಗಾಂಧಿ ಮೈದಾನ ರಸ್ತೆಯ ‘ಕುವೆಂಪು ಪುತ್ಥಳಿ’ಗೆ ಕವಿಗೋಷ್ಠಿಯ ಅಧ್ಯಕ್ಷೆ, ಸಾಹಿತಿ ಸುನೀತಾ ಲೋಕೇಶ್, ಬಹುಭಾಷಾ ಕವಿಗೋಷ್ಠಿ […]

ವಿರಾಜಪೇಟೆ ಕದನೂರು ಗ್ರಾಮದಲ್ಲಿ ದೇವರ ಕಾಡು ಒತ್ತುವರಿ ಆರೋಪ: ಜಂಟಿ ಸರ್ವೇ

ವಿರಾಜಪೇಟೆ (Virajpet) ಕದನೂರು ಗ್ರಾಮದ ದೇವರ ಕಾಡಿನ ಜಾಗದಿಂದ ಹಿಟಾಚಿ ಮೂಲಕ ಮಣ್ಣು ತೆಗೆದು ಸರಕಾರಿ ತೋಡನ್ನು ಮುಚ್ಚಿ ರಸ್ತೆ ನಿರ್ಮಾಣ ಮಾಡುತಿರುವುದಾಗಿ ನೀಡಿದ ದೂರಿನ ಅನ್ವಯ ಕಂದಾಯ, ಅರಣ್ಯ ಇಲಾಖೆ, ಭೂ ದಾಖಲೆ ಗಳ, ಪಂಚಾಯತ್ ರಾಜ್ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಸಮ್ಮುಖದಲ್ಲಿ ಇಂದು ಜಂಟಿ ಸರ್ವೇ ಕಾರ್ಯ ನಡೆಯಿತು.