ವಿರಾಜಪೇಟೆ ಕಾವೇರಿ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ದಿನಾಚರಣೆ

ದೇಶದ ಇತಿಹಾಸವನ್ನು ಮೆಲಕು ಹಾಕಿ ನೋಡುವುದಾದರೆ ಸಮಾಜದ ಏಳಿಗೆಗೆ ಶ್ರಮಿಸಿದವರನ್ನು, ಬಡವರ ಕಷ್ಟಕ್ಕೆ ನೆರವಾದವರನ್ನು, ನೊಂದವರಿಗೆ ನೆರವಾಗಿ ನಿಂತಂತವರನ್ನು ಸದಾ ನೆನಪಿಸಿಕೊಳ್ಳುತ್ತಾ ಬರುತ್ತಿದ್ದಾರೆಯೇ ಹೊರತು ಶ್ರೀಮಂತರನ್ನು ನೆನೆಸಿಕೊಳ್ಳುವುದಿಲ್ಲವೆಂದು ಕಾವೇರಿ ಕಾಲೇಜಿನ ಪ್ರಾಂಶುಪಾಲ ಬೆನೆಡಿಕ್ಟ್ ಆರ್ ಸಲ್ದಾನ ಹೇಳಿದರು . ವಿರಾಜಪೇಟೆ ಕಾವೇರಿ ಕಾಲೇಜಿನಲ್ಲಿ ಬುಧವಾರ ಆಯೋಜಿಸಲಾಗಿದ್ದ ರಾಷ್ಟ್ರೀಯ ಸೇವಾ ಯೋಜನೆ ದಿನಾಚರಣೆಯ ಧ್ವಜಾರೋಹಣವನ್ನು ನೆರವೇರಿಸಿ ಮಾತನಾಡಿದ ಅವರು ಎನ್.ಎಸ್.ಎಸ್ ಎಂಬುದು ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಕನಸಿನ ಕೂಸಾಗಿ ಆ ಹುಟ್ಟಿತು . ವಿದ್ಯಾರ್ಥಿಗಳನ್ನು ಶಿಕ್ಷಣದ ಹಂತದಲ್ಲಿ ಸಮಾಜ […]
ಗಮನ ಸೆಳೆದ ಕಾಫಿ ದಸರಾದಲ್ಲಿ ಆಕರ್ಷಕ 45 ಮಳಿಗೆ ನಿರ್ಮಾಣ

ಮಡಿಕೇರಿ: ಕಾಫಿಗೆ ಉತ್ತಮ ದರವಿದ್ದರೂ ಸಹ ಕಾಫಿ ಬೆಳೆಗಾರರು ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದು, ಕಾಫಿ ಬೆಳೆಗಾರರ ಸಂಕಷ್ಟವನ್ನು ಪರಿಹರಿಸುವಲ್ಲಿ ಎಲ್ಲರೂ ಕೈಜೋಡಿಸಬೇಕಿದೆ ಎಂದು ಶಾಸಕರಾದ ಡಾ.ಮಂತರ್ ಗೌಡ ಅವರು ತಿಳಿಸಿದ್ದಾರೆ. ಮಡಿಕೇರಿ ನಗರ ದಸರಾ ಸಮಿತಿ, ಮಡಿಕೇರಿ ದಸರಾ ಸಾಂಸ್ಕøತಿಕ ಸಮಿತಿ, ಕೂರ್ಗ್ ಪ್ಲಾಂಟಸ್ಸ್ ಅಸೋಸಿಯೇಷನ್ ಸಹಯೋಗದೊಂದಿಗೆ ನಗರದ ಗಾಂಧಿ ಮೈದಾನದ ಕರ್ನಾಟಕದ ಮೊದಲ ಮಹಿಳಾ ಕಾಫಿ ಉದ್ಯಮಿ ದಿ.ಸಾಕಮ್ಮ ಸಭಾಂಗಣದ ಕಲಾಸಂಭ್ರಮ ವೇದಿಕೆಯಲ್ಲಿ ಬುಧವಾರ ನಡೆದ ಕಾಫಿ ದಸರಾದಲ್ಲಿ ಅವರು ಮಾತನಾಡಿದರು. ಕಾಫಿ ಬೆಳೆಗೆ […]
ಕೊಡಗು: ಕಳೆದ 24 ಗಂಟೆ ಅವಧಿಯಲ್ಲಿ ಸುರಿದ ಮಳೆ ಮಾಹಿತಿ ಇಲ್ಲಿದೆ

ಕೊಡಗು ಜಿಲ್ಲೆಯಲ್ಲಿ ಬುಧವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 4.12 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 5.72 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 2728.93 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 2760.43 ಮಿ.ಮೀ ಮಳೆಯಾಗಿತ್ತು. ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 9.05 ಮಿ.ಮೀ. ಕಳೆದ ವರ್ಷ ಇದೇ ದಿನ 16.60 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 4133.91 ಮಿ.ಮೀ, ಕಳೆದ ವರ್ಷ ಇದೇ […]
ಕೊಡಗು ಜಿಲ್ಲೆಯಲ್ಲಿ ಜಾತಿ ಗಣತಿಗೆ ಹತ್ತಾರು ಅಡೆತಡೆ – ಕೈಕೊಡುತ್ತಿರುವ App – ಕೇಳುವವರಿಲ್ಲ ಸಿಬ್ಬಂದಿಯ ಗೋಳು..!

ವಿಶೇಷ ವರದಿ : ಕ-ವನ ಮಡಿಕೇರಿ : ರಾಜ್ಯ ಸರ್ಕಾರ ಹಲವು ಆಕ್ಷೇಪ, ವಿರೋಧಗಳ ನಡುವೆ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ/ ಜಾತಿ ಗಣತಿಯನ್ನು ಆರಂಭಿಸಿದೆ. ಆದರೆ ಕೊಡಗು ಜಿಲ್ಲೆಯಲ್ಲಿ ಆರಂಭದಲ್ಲೇ ಹಲವು ರೀತಿಯ ಅಡೆತಗಳು ಎದುರಾಗಿದ್ದು, ಸಮೀಕ್ಷೆಯಲ್ಲಿ ಭಾಗಿಯಾಗಿರುವ ಸಿಬ್ಬಂದಿಗೆ ತಲೆಬಿಸಿ ತಂದೊಡ್ಡಿದೆ. ಇಂದಿನಿಂದ ಸಮೀಕ್ಷೆ ಆರಂಭಿಸುವುದಕ್ಕೆ ಅಧಿಕಾರಿಗಳು ಸೂಚಿಸಿದ್ದರು. ಅದರಂತೆ ಶಿಕ್ಷಕರು ಸೇರಿದಂತೆ ಸಮೀಕ್ಷೆಗೆ ನಿಯೋಜನೆಗೊಂಡಿದ್ದ ಮಂದಿ ಬೆಳಗ್ಗೆಯೇ ತಮ್ಮ ಕಾರ್ಯಕ್ಷೇತ್ರಕ್ಕೆ ತೆರಳಿದ್ದಾರೆ. ಆದರೆ ಸರ್ವರ್ ಸಮಸ್ಯೆಯಿಂದಾಗಿ ಸಮೀಕ್ಷೆಗೆ ಬಳಸುವ ತಂತ್ರಾಂಶ ಓಪನ್ ಆಗಲೇ […]
ಮಡಿಕೇರಿ ಜನೋತ್ಸವ ದಸರಾದ ಐತಿಹ್ಯ ಅರಿಯೋಣ – ನಮ್ಮೂರ ಹಬ್ಬವನ್ನು ಸಂಭ್ರಮಿಸೋಣ

ಮಂಜಿನ ನಗರಿ ಮಡಿಕೇರಿಯು ಈಗ ತಾನೇ ಮಳೆಗಾಲದ ಏಕತಾನತೆಯಿಂದ ಮೆಲ್ಲ ಮೆಲ್ಲನೆ ಹೊರಬರುವ ಪ್ರಯತ್ನದಲ್ಲಿದೆ. ಇದನ್ನು ಸಂಭ್ರಮದಿಂದ ಸ್ವಾಗತಿಸಲು ತಯಾರಾಗಿ ನಿಂತಿದೆ ನಾಡಹಬ್ಬ ದಸರಾ ಹಬ್ಬ. ಈಗಾಗಲೇ ವಿಶ್ವ ವಿಖ್ಯಾತ ಮೈಸೂರು ದಸರಾ ಅಲಂಕಾರಗೊಂಡ ನವ ವಧುವಿನಂತೆ ಝಗ ಮಗಿಸುವ ಬೆಳಕಿನ ಅಲಂಕಾರದಲ್ಲಿ ಸಾಂಸ್ಕೃತಿಕ ಕಲರವದೊಂದಿಗೆ ಸದ್ದು ಮಾಡುತ್ತಿದೆ. ಮೈಸೂರು ದಸರಾದಂತೆ ಮಡಿಕೇರಿ ದಸರಾ ಕೂಡ ತನ್ನದೇ ಆದ ಐತಿಹಾಸಿಕ, ಧಾರ್ಮಿಕ, ಹಿನ್ನೆಲೆಯಲ್ಲಿ ಬೆಳೆದು ಬಂದು ವರ್ಷದಿಂದ ವರ್ಷಕ್ಕೆ ವಿಭಿನ್ನವಾಗಿ ಆಚರಿಸಲ್ಪಡುತ್ತಿರುವ ನಾಡ ಉತ್ಸವ. ಮೈಸೂರು ದಸರಾ […]
ಮಡಿಕೇರಿ ಜನೋತ್ಸವ ದಸರಾ : ‘ಬಹುಭಾಷಾ ಕವಿಗೋಷ್ಠಿ’ ಸೆ.25ಕ್ಕೆ – ರಾಜ್ಯದ 77 ಕವಿಗಳಿಂದ ಕವನ ವಾಚನ

ಮಡಿಕೇರಿ : ಐತಿಹಾಸಿಕ ಹಿನ್ನೆಲೆಯ ಮಡಿಕೇರಿ ದಸರಾ ಜನೋತ್ಸವದ ಪ್ರಮುಖ ಆಕರ್ಷಣೆಯಾಗಿರುವ ‘ಬಹುಭಾಷಾ ಕವಿ ಗೋಷ್ಠಿ’ ಸೆ.25 ರಂದು ನಗರದ ಗಾಂಧಿ ಮೈದಾನದ ಕಲಾ ಸಂಭ್ರಮ ವೇದಿಕೆಯಲ್ಲಿ ದಿನ ಪೂರ್ತಿ ನಡೆಯುವ ಮೂಲಕ, ಸಾಹಿತ್ಯ ಪ್ರೇಮಿಗಳಿಗೆ ರಸದೌತಣ ಉಣಬಡಿಸಲಿದೆಯೆಂದು ಬಹುಭಾಷಾ ಕವಿಗೋಷ್ಠಿ ಸಮಿತಿ ಅಧ್ಯಕ್ಷ ಉಜ್ವಲ್ ರಂಜಿತ್ ತಿಳಿಸಿದ್ದಾರೆ. ಅಂದು ಬೆಳಗ್ಗೆ 9 ಗಾಂಧಿ ಮೈದಾನ ರಸ್ತೆಯ ಬಳಿಯಲ್ಲಿರುವ, ಡಿಸಿಸಿ ಬ್ಯಾಂಕ್ ಮುಂಭಾಗದ ಕುವೆಂಪು ಪುತ್ಥಳಿಗೆ ಪುಷ್ಪನಮನ ಸಲ್ಲಿಸುವ ಮೂಲಕ ಕವಿಗೋಷ್ಠಿಯ ಅಧ್ಯಕ್ಷೆ, ಸಾಹಿತಿ ಸುನೀತಾ […]
ವಿಜ್ಞಾನ ಮತ್ತು ಸೃಜನಾತ್ಮಕತೆಯ ಕಲೆ ಛಾಯಾಗ್ರಹಣ – ಹಿರಿಯ ಛಾಯಾಗ್ರಾಹಕ ರವಿ ಪೊಸವಣಿಕೆ

ಮಡಿಕೇರಿ : ಛಾಯಾಚಿತ್ರ ಎನ್ನುವುದು ಒಂದು ಭಾಷೆ. ಇದು ಸಾವಿರ ಪದಗಳಿಗೆ ಸಮವಾಗಿದ್ದು, ಒಂದು ಚಿತ್ರದ ಮೂಲಕ ಕಥೆಯನ್ನು ಹೇಳಬಹುದು ಎಂದು ಟೈಮ್ಸ್ ಆಫ್ ಇಂಡಿಯಾ ದಿನ ಪತ್ರಿಕೆಯ ಮಂಗಳೂರು ಆವೃತ್ತಿಯ ಹಿರಿಯ ಛಾಯಾಚಿತ್ರ ಪತ್ರಕರ್ತ ರವಿ ಪೊಸವಣಿಕೆ ಹೇಳಿದರು. ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು, ಪತ್ರಿಕೋದ್ಯಮ ವಿಭಾಗ, ಕಾಲೇಜಿನ ಹಳೆ ವಿದ್ಯಾರ್ಥಿ ಸಂಘ ಹಾಗೂ ಕೊಡಗು ಪ್ರೆಸ್‍ಕ್ಲಬ್ ಸಹಯೋಗದಲ್ಲಿ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ವಿಚಾರ ಸಂಕಿರಣ ಕೊಠಡಿಯಲ್ಲಿ ನಡೆದ ಛಾಯಾಚಿತ್ರ ಪತ್ರಿಕೋದ್ಯಮದ ವ್ಯಾಪ್ತಿ […]
ಸುಂಟಿಕೊಪ್ಪ ಚಿನ್ನದ ಅಂಗಡಿಯಲ್ಲಿ ಚಿನ್ನದ ಸರ ಕಳವು – ಮೂವರು ಮಹಿಳೆಯರ ಬಂಧನ

ಮಡಿಕೇರಿ : ಸುಂಟಿಕೊಪ್ಪದ ಫ್ಯಾಷನ್ ಜ್ಯುವೆಲರಿಯಲ್ಲಿ ಸೆ.14 ರಂದು ನಡೆದ ಚಿನ್ನಾಭರಣ ಕಳವು ಪ್ರಕರಣದ ಸಂಬಂಧ ಮೂವರು ಆರೋಪಿಗಳನ್ನು ಕೊಡಗು ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ. ಮಹಾರಾಷ್ಟ್ರ ಸಾಂಗ್ಲಿ ಜಿಲ್ಲೆಯ ಅಲ್ಪನಾ(37), ಬಬಿತಾ(47), ಪೂಜಾ(29) ಬಂಧಿತರು. ಬಂಧಿತರಿಂದ 22.180 ಗ್ರಾಂ ತೂಕದ 2 ಚಿನ್ನದ ಸರ ವಶಪಡಿಸಿಕೊಳ್ಳಲಾಗಿದೆ. ಅಂಗಡಿಯಲ್ಲಿ ಚಿನ್ನಾಭರಣ ಖರೀದಿಸುವ ನೆಪದಲ್ಲಿ ಬಂದಿದ್ದ ಮೂವರು ಮಹಿಳೆಯರು, ಅಂಗಡಿಯವರ ಗಮನಕ್ಕೆ ಬಾರದಂತೆ 22 ಗ್ರಾಂ ತೂಕದ 2 ಚಿನ್ನದ ಸರಗಳನ್ನು ಕದ್ದೊಯ್ದಿದ್ದರು. ಈ ಬಗ್ಗೆ ಸುಂಟಿಕೊಪ್ಪ ಪೊಲೀಸ್ ಠಾಣೆಯಲ್ಲಿ […]
ಮಡಿಕೇರಿ ದಸರಾ ಜನೋತ್ಸವ 2025 – ಮಂಗಳವಾರದಿಂದ ಗಾಂಧಿ ಮೈದಾನದಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳು – ಇಲ್ಲಿದೆ ನೋಡಿ ಕಾರ್ಯಕ್ರಮಗಳ ಪಟ್ಟಿ

ಮಡಿಕೇರಿ : ಮಡಿಕೇರಿ ದಸರಾ- ಜನೋತ್ಸವ ಅಂಗವಾಗಿ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ಹತ್ತು ದಿನಗಳ ಕಾಲ ವೈವಿಧ್ಯಮಯ ಕಾರ್ಯಕ್ರಮಗಳು ನೆರವೇರಲಿದೆ. ಮಡಿಕೇರಿ ನಗರ ದಸರಾ ಸಮಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಡಿಕೇರಿ ದಸರಾ ಸಾಂಸ್ಕೃತಿಕ ಸಮಿತಿ ಆಶ್ರಯದಲ್ಲಿ ತಾ.23ರಿಂದ ಅಕ್ಟೋಬರ್ 2ರವರೆಗೆ ಗಾಂಧಿ ಮೈದಾನದ ಕಲಾ ಸಂಭ್ರಮ ವೇದಿಕೆಯಲ್ಲಿ ಸಂಜೆ 6 ಗಂಟೆಯಿಂದ ಕಾರ್ಯಕ್ರಮ ಜರುಗಲಿವೆ ಎಂದು ಸಾಂಸ್ಕೃತಿಕ ಸಮಿತಿ ಅಧ್ಯಕ್ಷ ಕುಡೆಕಲ್ ಸಂತೋಷ್ ತಿಳಿಸಿದ್ದಾರೆ. ತಾ.23ರಂದು ಸಂಜೆ 6ಗಂಟೆಗೆ ಭಾಗಮಂಡಲ ಜಾನ್ ಡ್ಯಾನ್ಸ್ […]
ಮೈಸೂರು ದಸರಾ ಉದ್ಘಾಟಿಸಿದ ಬಾನು ಮುಷ್ತಾಕ್ – ತಾಯಿ ಚಾಮುಂಡಿ ಬಗ್ಗೆ ಅವರು ಹೇಳಿದ್ದೇನು ಗೊತ್ತಾ..?

ಮೈಸೂರು : ಮೈಸೂರು ದಸರಾ, ನಾಡಿನ ನಾಡಿ, ಸಂಸ್ಕೃತಿಯ ಉತ್ಸವ, ಎಲ್ಲರನ್ನೂ ಒಗ್ಗೂಡಿಸುವ ಸಮನ್ವಯದ ಮೇಳವಾಗಿದೆ ಎಂದು ಸಾಹಿತಿ ಹಾಗೂ 2025ರ ಅಂತರಾಷ್ಟ್ರೀಯ ಬೂಕರ್ ವಿಜೇತ ಸಾಹಿತಿ ಬಾನು ಮುಷ್ತಾಕ್ ಹೇಳಿದರು. ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಯ ಅಗ್ರಪೂಜೆಯೊಂದಿಗೆ ಪ್ರಾರಂಭವಾದ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು. ಮೈಸೂರು ದಸರಾದ ಪವಿತ್ರದ ಕ್ಷಣದಲ್ಲಿ ಚಾಮುಂಡಿ ತಾಯಯ ಕೃಪೆಯ ನೆರಳಿನಲ್ಲಿ, ಈ ವೇದಿಕೆಯಿಂದ ನಿಮ್ಮೆದುರು ನಿಲ್ಲುವ ಅವಕಾಶ ದೊರೆತಿರುವುದು ನನ್ನ ಜೀವನದ ಅತ್ಯಂತ ಗೌರವದ ಘಳಿಕೆ. […]