ಪುತ್ತರಿ ಹಬ್ಬಕ್ಕೆ ಹಸಿರು ಪಟಾಕಿ ಹಚ್ಚೋಣ – ಸೋಷಿಯಲ್ ಮೀಡಿಯಾದಲ್ಲಿ ಸದ್ದು ಮಾಡಿದ ಅಭಿಯಾನ..!

Coorg BUzz Special ಮಡಿಕೇರಿ : ಪುತ್ತರಿ ಹಬ್ಬಕ್ಕೆ ಕೆಲವೇ ದಿನ ಬಾಕಿ ಇದೆ. ಹೊಸ ಅಕ್ಕಿಯನ್ನು ಮನೆ ತುಂಬಿಸಿಕೊಳ್ಳಲು, ಹಬ್ಬದ ಸಂಭ್ರಮದಲ್ಲಿ ಭಾಗಿಯಾಗಲು ಜನ ಕಾತರರಾಗಿದ್ದಾರೆ. ಈ ಮಧ್ಯೆ ಸೋಷಿಯಲ್ ಮೀಡಿಯಾದಲ್ಲಿ ಹಬ್ಬದ ಭಾಗವಾಗಿ ಒಂದು ಅಭಿಯಾನ ಸದ್ದು ಮಾಡುತ್ತಿದೆ. ಅದೇ ಹಸಿರು ಪಟಾಕಿ ಕ್ಯಾಂಪೇನ್. ದೀಪಾವಳಿ ಹಬ್ಬದಂತೆ ಕೊಡಗಿನಲ್ಲಿ ಆಚರಿಸುವ ಪುತ್ತರಿಯಲ್ಲೂ ತರಹೇವಾರಿ ಪಟಾಕಿಗಳು ಸದ್ದು ಮಾಡುತ್ತವೆ. ಈ ಬಾರಿ ಕೊಡಗಿನ ಪರಿಸರ ಕಾಳಜಿಯೊಂದಿಗೆ ಹಸಿರು ಪಟಾಕಿಯನ್ನು ಬಳಸೋಣ ಎಂಬ ಸಂದೇಶದೊಂದಿಗೆ ಸರಪಳಿ ಅಭಿಯಾನ […]
ಅರೆಭಾಷೆ ಗೌಡ ಸಮುದಾಯಕ್ಕೆ ಮಡಿಕೇರಿಯಲ್ಲಿ ಜಮೀನು – ಮುಂದಿನ ಬಜೆಟ್‌ನಲ್ಲಿ ಈಡೇರಿಕೆ – ಸಿಎಂ ಸಿದ್ದರಾಮಯ್ಯ ಭರವಸೆ

ಬೆಂಗಳೂರು : ಕನ್ನಡ ಭಾಷೆ ರಾಜ್ಯದ ಅಸ್ಮಿತೆಯ ತಳಹದಿಯಾಗಿದ್ದರೆ, ಅರೆಭಾಷೆಯಂತಹ ಪ್ರಾದೇಶಿಕ ಭಾಷೆಗಳು ಕನ್ನಡವನ್ನು ಶ್ರೀಮಂತಗೊಳಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕರ್ನಾಟಕ ಅರೆ ಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಲಾಗಿದ್ದ 2024ನೇ ಸಾಲಿನ ಅರೆ ಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರದಾನ ಜಂಬರ ಉದ್ಘಾಟಿಸಿ ಮಾತನಾಡಿದರು. ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಗಳಲ್ಲಿ ಅರೆಭಾಷೆ ಗೌಡರು ಹೆಚ್ಚಾಗಿ ವಾಸಿಸುತ್ತಿದ್ದು, ಇವರ ಜನಸಂಖ್ಯೆ ಮೂರು […]
ಯುವ ಸಮೂಹದಲ್ಲಿ ಕ್ಷೀಣಿಸುತ್ತಿರುವ ಪತ್ರಿಕೆ, ಪುಸ್ತಕ ಓದು – ಸಾಮಾಜಿಕ ಜಾಲತಾಣಗಳಲ್ಲಿ ಕಾಲಹರಣ – ಜಗದೀಶ್ ಜೋಡುಬೀಟಿ ಕಳವಳ

ಗೋಣಿಕೊಪ್ಪ : ಪತ್ರಿಕೆಗಳನ್ನು ಓದುವುದರಿಂದ ಜ್ಞಾನ ವೃದ್ಧಿಯಾಗುತ್ತದೆ ಎಂದು ಪತ್ರಕರ್ತ ಜಗದೀಶ್ ಜೋಡುಬೀಟಿ ಹೇಳಿದರು. ಪೊನ್ನಂಪೇಟೆ ತಾಲೂಕಿನ ಹುದಿಕೇರಿ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ, ಗೋಣಿಕೊಪ್ಪ ಕಾವೇರಿ ಕಾಲೇಜು ಎನ್‌ಎಸ್‌ಎಸ್ ಘಟಕ ವತಿಯಿಂದ ಆಯೋಜಿಸಲಾಗಿದ್ದ ವಿಶೇಷ ವಾರ್ಷಿಕ ಶಿಬಿರದ ಶೈಕ್ಷಣಿಕ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಪತ್ರಿಕಾ ಮಾಧ್ಯಮ, ಸಾಮಾಜಿಕ ಜಾಲತಾಣ ಹಾಗೂ ಯುವಜನತೆ ಎಂಬ ವಿಷಯದ ಬಗ್ಗೆ ಮಾತನಾಡಿದರು. ಪತ್ರಿಕೆಗಳು ವಿಶ್ವಾಸಾರ್ಹ ಮಾಹಿತಿಯ ಮೂಲವಾಗಿದೆ. ಯುವ ಜನರಿಗೆ ವಿಭಿನ್ನ ವಿಷಯಗಳ ಬಗ್ಗೆ ತಿಳುವಳಿಕೆಯನ್ನು ನೀಡುತ್ತವೆ. ಪತ್ರಿಕೆಗಳನ್ನ […]
ಒಂದು ಬಾರಿ ರಕ್ತದಾನ – ಬೆಳಗಲಿಗೆ ಮೂವರ ಜೀವನ – ಮಾಧ್ಯಮ ಸ್ಪಂದನ ನೇತೃತ್ವದಲ್ಲಿ ಯಶಸ್ವಿ ರಕ್ತದಾನ ಶಿಬಿರ

ಗೋಣಿಕೊಪ್ಪ : ಒಬ್ಬರ ರಕ್ತದಿಂದ ಮೂವರ ಜೀವ ಉಳಿಸಬಹುದಾಗಿದ್ದು, ಈ ಬಗ್ಗೆ ಸಾರ್ವಜನಿಕರು ಸ್ವಯಂ ಪ್ರೇರಿತವಾಗಿ ರಕ್ತದಾನಕ್ಕೆ ಮುಂದಾಗಬೇಕು ಎಂದು ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ರಕ್ತನಿಧಿ ಕೇಂದ್ರದ ಮುಖ್ಯಸ್ಥ ಡಾ. ಕರುಂಬಯ್ಯ ಮನವಿ ಮಾಡಿಕೊಂಡರು. ಮಾಧ್ಯಮ ಸ್ಪಂದನ, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ರಕ್ತನಿಧಿ ಕೇಂದ್ರ, ಪೊನ್ನಂಪೇಟೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ, ಗೋಣಿಕೊಪ್ಪ ಗ್ರಾಮ ಪಂಚಾಯಿತಿ, ಗೋಣಿಕೊಪ್ಪ ರೋಟರಿ ಸಹಯೋಗದಲ್ಲಿ ಉಮಾಮಹೇಶ್ವರಿ ದೇವಸ್ಥಾನ ಸಭಾಂಗಣದಲ್ಲಿ ಆಯೋಜಿಸಿದ್ದ ರಕ್ತದಾನ ಶಿಬಿರದಲ್ಲಿ ಮಾತನಾಡಿದರು. ಒಬ್ಬರು ನೀಡುವ ರಕ್ತದಿಂದ […]
ನಮ್ಮಿಬ್ಬರ ನಡುವೆ ಯಾವುದೇ ಗೊಂದಲ ಭಿನ್ನಾಭಿಪ್ರಾಯವಿಲ್ಲ – ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ..!

ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕಾಗಿ ನಡೆಯುತ್ತಿದ್ದ ಸಮರಕ್ಕೆ ತಾತ್ಕಾಲಿಕ ವಿರಾಮ ಬಿದ್ದಿದೆ. ಹೈಕಮಾಂಡ್ ಸೂಚನೆ ಮೇರೆಗೆ ಇಂದು ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಉಪಹಾರ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಗೊಂದಲ ತಾತ್ಕಾಲಿಕವಾಗಿ ಬಗೆಹರಿದಿರುವ ಬಗ್ಗೆ ಸ್ಪಷ್ಟಪಡಿಸಿದರು. ಬ್ರೇಕ್‌ಫಾಸ್ಟ್ ಮೀಟಿಂಗ್ ಬಳಿಕ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಹಿಂದೆಯೂ ಯಾವುದೇ ಭಿನ್ನಾಭಿಪ್ರಾಯ ಇರಲಿಲ್ಲ ಮುಂದೆಯೂ ಇಲ್ಲ. ಅನಗತ್ಯವಾಗಿ ಕೆಲವು ಗೊಂದಲ ನಿರ್ಮಾಣವಾಗಿದೆ ಎಂದರು. 2023ರ ಚುನಾವಣೆಯಲ್ಲಿ ನಾವಿಬ್ಬರು ಹೇಗೆ ಜೊತೆಗೆ ಹೋಗಿದ್ದೆವೋ ಅದೇ ರೀತಿ 2028ರ […]
ಸಿಎಂ ಸ್ಥಾನಕ್ಕಾಗಿ ಹಗ್ಗಜಗ್ಗಾಟ : ನನ್ನ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದ ಸಿದ್ದರಾಮಯ್ಯ

ಬೆಂಗಳೂರು : ನನ್ನ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ ಪಕ್ಷದ ವರಿಷ್ಠರು ಹೇಳಿದಂತೆ ನಡೆದುಕೊಳ್ಳುವುದಾಗಿ ಈಗಾಗಲೇ ತಿಳಿಸಿದ್ದೇನೆ. ಈಗಲೂ ಮತ್ತು ನಾಳೆಯೂ ಅದನ್ನೇ ಹೇಳುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪುನರುಚ್ಚರಿಸಿದರು. ಬೆಂಗಳೂರಿನಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಸುತ್ತಾ ಈ ಮಾತು ಹೇಳಿದರು. ಪಕ್ಷದ ವರಿಷ್ಠರು ನನಗೆ ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರಿಗೂ ಕರೆ ಮಾಡಿ ನೀವಿಬ್ಬರೂ ಭೇಟಿ ಮಾಡಿ ತಿಳಿಸಿರುತ್ತಾರೆ. ಹಾಗಾಗಿ ಅವರನ್ನು ನಾನು ಉಪಹಾರಕ್ಕಾಗಿ ಕರೆದಿದ್ದೇನೆ. ಹಾಗಾಗಿ ಅಲ್ಲಿ ಚರ್ಚೆ ಮಾಡುತ್ತೇವೆ. ಡಿ.ಕೆ ಶಿವಕುಮಾರ್ ಅವರು ಹೈಕಮಾಂಡ್ […]
ಮೂರ್ನಾಡು : ಯಶಸ್ವಿಯಾಗಿ ನಡೆದ ಆರೋಗ್ಯ ತಪಾಸಣಾ ಉಚಿತ ಶಿಬಿರ – 200ಕ್ಕೂ ಅಧಿಕ ಮಂದಿಯ ತಪಾಸಣೆ

ಮೂರ್ನಾಡು : ಕಾಂತೂರು-ಮೂರ್ನಾಡು ಹಾಗೂ ಹೊದ್ದೂರು ಪಂಚಾಯಿತಿ, ಕಂದಾಯ ಇಲಾಖೆ ನೇತೃತ್ವದಲ್ಲಿ ಮೈಸೂರಿನ ಬೃಂದಾವನ ಆಸ್ಪತ್ರೆ ಸಹಯೋಗದಲ್ಲಿ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿಯಾಗಿ ನಡೆಯಿತು. ಮೂರ್ನಾಡುವಿನ ಪಿ.ಎಂ.ಶ್ರೀ. ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ನಡೆದ ಶಿಬಿರದಲ್ಲಿ 200ಕ್ಕೂ ಅಧಿಕ ಮಂದಿ ಪಾಲ್ಗೊಂಡಿದ್ದರು. ಶಿಬಿರದಲ್ಲಿ ಸಾರ್ವಜನಿಕರಿಗೆ ರಕ್ತದೊತ್ತಡ, ಮಧುಮೇಹ, ನೇತ್ರ, ಮೂಳೆ&ಕೀಲು, ನರರೋಗ, ಕಿವಿ-ಮೂಗು, ಗಂಟಲು, ಸ್ತ್ರೀರೋಗ ಮುಂತಾದ ತಪಾಸಣೆಯನ್ನು ಉಚಿತವಾಗಿ ನಡೆಸಲಾಯಿತು. ಶಾಲೆ ವಿದ್ಯಾರ್ಥಿಗಳ ಆರೋಗ್ಯ ತಪಾಸಣೆಯನ್ನೂ ಈ ಸಂದರ್ಭ ಮಾಡಲಾಯಿತು. ಬೃಂದಾವನ ಆಸ್ಪತ್ರೆಯ ನಿರ್ದೇಶಕ […]
ಕೊಡಗು ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ

ಮಡಿಕೇರಿ:- ಕೊಡಗು ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟಕ್ಕೆ ಜಿ.ಪಂ.ಸಿಇಒ ಆನಂದ ಪ್ರಕಾಶ್ ಮೀನಾ ಅವರು ನಗರದ ಡಿ.ಎ.ಆರ್.ಕವಾಯತು ಮೈದಾನದಲ್ಲಿ ಗುರುವಾರ ಚಾಲನೆ ನೀಡಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಬಿ.ಪಿ.ದಿನೇಶ್ ಕುಮಾರ್ ಇತರರು ಇದ್ದರು. ನವೆಂಬರ್, 29 ರಂದು ಸಂಜೆ 4 ಗಂಟೆಗೆ ನಗರದ ಡಿಎಆರ್ ಕವಾಯತು ಮೈದಾನದಲ್ಲಿ ಸಮಾರೋಪ ಸಮಾರಂಭ ನಡೆಯಲಿದೆ. ಮೈಸೂರು ದಕ್ಷಿಣ ವಲಯದ ಪೊಲೀಸ್ ಉಪ ಮಹಾ ನಿರೀಕ್ಷಕರಾದ ಡಾ.ಎಂ.ಬಿ.ಬೋರಲಿಂಗಯ್ಯ ಇತರರು ಪಾಲ್ಗೊಳ್ಳಲಿದ್ದಾರೆ.
ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಅನುಗ್ರಹ ಕಾಲೇಜು ವಿದ್ಯಾರ್ಥಿ

ಕುಶಾಲನಗರ : ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ವಿದ್ಯಾರ್ಥಿಗಳ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಕುಶಾಲನಗರ ಅನುಗ್ರಹ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಹೆಚ್ ಎಸ್ ಜೀವನ್ ಜಿಮ್ನಾಸ್ಟಿಕ್ ಸ್ಪರ್ಧೆಯಲ್ಲಿ ಭಾಗವಹಿಸಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದು ಕಾಲೇಜಿಗೆ ಕೀರ್ತಿ ತಂದಿದ್ದಾನೆ. ಇವನಿಗೆ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರು ಉಪಾಧ್ಯಕ್ಷರು, ಕಾರ್ಯದರ್ಶಿಗಳು, ಸದಸ್ಯರು ಪ್ರಾಂಶುಪಾಲರು ದೈಹಿಕ ಶಿಕ್ಷಣ ನಿರ್ದೇಶಕರು, ಉಪನ್ಯಾಸಕ ವೃಂದದವರು ಆಡಳಿತ ವರ್ಗದವರು ಅಭಿನಂದನೆಯನ್ನು ಸಲ್ಲಿಸಿರುತ್ತಾರೆ ಹಾಗೂ ರಾಷ್ಟ್ರಮಟ್ಟದಲ್ಲಿಯೂ ಇದೇ ರೀತಿಯಾದ ಸಾಧನೆಯನ್ನು ಮಾಡಿ ತಂದೆ ತಾಯಿಗಳಿಗೆ ಹಾಗೂ ಕಾಲೇಜಿಗೆ ಕೀರ್ತಿ […]
ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಒಂದು ದಿನದ ಅರಿವು ಕಾರ್ಯಾಗಾರ

ಕುಶಾಲನಗರ : ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಕರ್ನಾಟಕ ತಾಂತ್ರಿಕ ಉನ್ನತೀಕರಣ ಪರಿಷತ್, ವಿಷನ್ ಕರ್ನಾಟಕ ಫೌಂಡೇಶನ್, ಬೆಂಗಳೂರು, ಜಿಲ್ಲಾ ಕೈಗಾರಿಕಾ ಕೇಂದ್ರ, ಮಡಿಕೇರಿ, ಹಾಗೂ ಕುಶಾಲನಗರ ಸರ್ಕಾರಿ ಇಂಜಿನಿಯರಿಂಗ್ ಕಾಲೇಜು ಸಂಯುಕ್ತ ಆಶ್ರಯದಲ್ಲಿ ಕೇಂದ್ರ ಸರ್ಕಾರ ರೂಪಿಸಿರುವ Raising and Accelerating MSME Performance ಅಡಿ Incubation ಯೋಜನೆ ಕುರಿತು ಬುಧವಾರ ಅಂತಿಮ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಒಂದು ದಿನದ ಅರಿವು ಕಾರ್ಯಾಗಾರ ನಡೆಯಿತು. ಕಾರ್ಯಾಗಾರದ ಮಾನವ ಸಂಪನ್ಮೂಲ ವ್ಯಕ್ತಿಯಾಗಿ ಡಿಎಫ್‌ಒ ಎಂಎಸ್‌ಎಂಇ ನಿವೃತ್ತ ಉಪ […]