ಮೈತಾಡಿ ಗ್ರಾಮದಲ್ಲಿ ಗಬ್ಬದ ಹಸು ಹತ್ಯೆ – ಮೂವರು ಹಂತಕರ ಬಂಧನ..!

ವಿರಾಜಪೇಟೆ : ಮೈತಾಡಿ ಗ್ರಾಮದಲ್ಲಿ ಇತ್ತೀಚೆಗೆ ಗಬ್ಬದ ಹಸು ಕೊಂದ ಪ್ರಕರಣ ಸಂಬಂಧ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಕೊಂಡಂಗೇರಿಯ ಮೊಹಮ್ಮದ್ ಆಶಿಕ್(22), ಶಾಹಿದ್(25), ಹ್ಯಾರೀಸ್ (34) ಬಂಧಿತರು. ಮೈತಾಡಿ ಗ್ರಾಮದ ಬೊಳ್ಳಪಂಡ ಎಂ.ಭೀಮಯ್ಯ ಎಂಬವರ ಹಸುವನ್ನು ಕದ್ದೊಯ್ದು ಹತ್ಯೆ ಮಾಡಲಾಗಿತ್ತು. ಈ ಸಂಬಂಧ ವಿರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ 303(1) 22 & 4, 5, 12 The Karnataka Prevention of Slaughter & Preservation of cattle Act-2020 ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿಗಳ […]

ಸಿದ್ದಾಪುರ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ – ಇಬ್ಬರನ್ನು ಬಂಧಿಸಿದ ಪೊಲೀಸರು

ಸಿದ್ದಾಪುರ : ಗಾಂಜಾ ಮಾರಾಟ ಮತ್ತು ಸರಬರಾಜು ಮಾಡುತ್ತಿದ್ದ ಇಬ್ಬರನ್ನು ಕೊಡಗು ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ. ತಪಾನ್‌ ಸರ್ದಾರ್(38), ಅರ್ಚನಾ ಸರ್ದಾರ್‌(30) ಬಂಧಿತ ವ್ಯಕ್ತಿಗಳು. ಪಶ್ಚಿಮ ಬಂಗಾಳ ಮೂಲದವರಾದ ಇವರು ಬಾಡಗ ಬಾಣಂಗಾಲ ವ್ಯಾಪ್ತಿಯಲ್ಲಿ ಗಾಂಜಾ ಕೊಂಡೊಯ್ದು ಮಾರಾಟ ಮಾಡುತ್ತಿದ್ದರು ಎನ್ನಲಾಗಿದೆ. ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ಪೊಲೀಸರು 1.166 ಕೆಜಿ ಗಾಂಜಾದೊಂದಿಗೆ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಪ್ರಾಣಿಗಳ ಭಾವನೆ ಅರ್ಥ ಮಾಡಿಕೊಂಡು ಅವುಗಳನ್ನು ಪ್ರೀತಿಯಿಂದ ಕಾಣಬೇಕು : ಡಾ. ರಾಕೇಶ್

ವೀರಾಜಪೇಟೆ : ಪ್ರಾಣಿಗಳನ್ನು ಮನುಷ್ಯರು ಪ್ರೀತಿಯಿಂದ ಕಾಣಬೇಕು ಎಂದು ವಿರಾಜಪೇಟೆಯ ಪಶು ವೈದ್ಯಕೀಯ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ರಾಕೇಶ್ ಅಭಿಪ್ರಾಯಪಟ್ಟರು. ವಿರಾಜಪೇಟೆಯ ಮಗ್ಗುಲದಲ್ಲಿರುವ ಲಿಟಲ್ ಸ್ಕಾಲರ್ಸ್ ಅಕಾಡೆಮಿ ಶಾಲೆಯಲ್ಲಿ ಆಯೋಜಿಸಲಾಗಿದ್ದ ಪ್ರಾಣಿಗಳ ದಿನಾಚರಣೆ ಹಾಗೂ ಅರಿವು ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡುತಿದ್ದರು. ಪ್ರಾಣಿಗಳನ್ನು ಹಿಂಸಿಸದೆ ಅವುಗಳನ್ನು ನಾವು ಪ್ರೀತಿಯಿಂದ ಕಾಣಬೇಕು. ಮನುಷ್ಯರು ಅವುಗಳನ್ನು ಹಿಂಸಿಸಿದರೆ ಅವುಗಳು ಕೂಡ ನಮಗೆ ಹಾನಿಯನ್ನು ಮಾಡಬಲ್ಲವು ಎಂದರು. ಮಕ್ಕಳು ತಮ್ಮ ವಿದ್ಯಾರ್ಥಿ ಹಂತದಿಂದಲೇ ಪ್ರಾಣಿಗಳ ಬಗ್ಗೆ ಅರಿವನ್ನು ಹೊಂದಿರಬೇಕು. ನಾವು […]

ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ – ‘ಕೊಡವ ಮುಸ್ಲಿಂ’ ಎಂದು ಬರೆಸಲು KMA ಮನವಿ

ಪೊನ್ನಂಪೇಟೆ : ಸರ್ಕಾರವು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮೂಲಕ ರಾಜ್ಯದ ಜನರ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ನಡೆಸಲು ಮುಂದಾಗಿರುವುದು ಸ್ವಾಗತಾರ್ಹವಾಗಿದೆ. ಇದೇ ತಿಂಗಳ 22 ರಿಂದ ಆರಂಭಗೊಳ್ಳುವ ಈ ಸಮೀಕ್ಷೆಯಲ್ಲಿ ಕೊಡಗಿನ ಮೂಲ ನಿವಾಸಿಗರಾಗಿರುವ ಕೊಡವ ಮುಸ್ಲಿಮರು ಕಡ್ಡಾಯವಾಗಿ ಪಾಲ್ಗೊಳ್ಳಬೇಕು ಎಂದು ಕೊಡವ ಮುಸ್ಲಿಂ ಅಸೋಸಿಯೇಷನ್ (ಕೆ.ಎಂ.ಎ.) ಮನವಿ ಮಾಡಿದೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕೆ.ಎಂ.ಎ. ಅಧ್ಯಕ್ಷ ದುದ್ದಿಯಂಡ ಹೆಚ್. ಸೂಫಿ ಹಾಜಿ, ಮೊಬೈಲ್ ಫೋನ್ ಬಳಸಿಕೊಂಡು ಡಿಜಿಟಲ್ ತಂತ್ರಜ್ಞಾನದ ಮೂಲಕ ಅಕ್ಟೋಬರ್ 7ರವರೆಗೆ […]

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಪ್ರವೇಶಕ್ಕೆ ಅವಧಿ ವಿಸ್ತರಣೆ – ಹೆಚ್ಚಿನ ವಿವರ ಇಲ್ಲಿದೆ

ಮಡಿಕೇರಿ : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಕ.ರಾ.ಮು.ವಿ ಮಡಿಕೇರಿಯಲ್ಲಿ 2025-26 ಸಾಲಿನ ಪ್ರವೇಶಾತಿಯ ಕೊನೆಯ ದಿನಾಂಕವನ್ನು ಅಕ್ಟೋಬರ್, 10 ರವರೆಗೆ ವಿಸ್ತರಿಸಲಾಗಿದೆ. ಪ್ರಾದೇಶಿಕ ಕೇಂದ್ರ ಮಡಿಕೇರಿಯಲ್ಲಿ 2025-26 ನೇ ಸಾಲಿನ ಜುಲೈ ಆವೃತ್ತಿಯ ವಿವಿಧ ಕೋರ್ಸ್‍ಗಳಿಗೆ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ತನ್ನ 2025-26ನೇ ಜುಲೈ ಆವೃತ್ತಿಗೆ ಶೈಕ್ಷಣಿಕ ಕಾರ್ಯಕ್ರಮಗಳಿಗೆ ಪ್ರವೇಶಾತಿಗೆ ಈಗಾಗಲೇ ಆನ್‍ಲೈನ್ ಮುಖಾಂತರ ಅರ್ಜಿ ಆಹ್ವಾನಿಸಲಾಗಿದೆ. ಮುಕ್ತ ವಿಶ್ವವಿದ್ಯಾಲಯವು “ನಿಮ್ಮ ಮನೆಯೇ ನಿರಂತರ ಪಾಠಶಾಲೆ” ಎಂಬ ಧ್ಯೆಯವಾಕ್ಯದೊಂದಿಗೆ ಯು.ಜಿ.ಸಿ […]

ಸ್ಥಳೀಯ ಆಡಳಿತದಲ್ಲಿ ಮಹಿಳಾ ನಾಯಕರ ಸಬಲೀಕರಣ ತರಬೇತಿ

women leaders

ಜಿಲ್ಲಾ ಪಂಚಾಯತ್ ಸಂಪನ್ಮೂಲ ಕೇಂದ್ರ ಕೊಡಗು ಜಿಲ್ಲಾ ಪಂಚಾಯತ್ ನಲ್ಲಿ ತಾಲೂಕು ಮಟ್ಟದ ಅಧಿಕಾರಿಗಳಿಗೆ ನಾಲ್ಕು ದಿನದ ಸ್ಥಳೀಯ ಆಡಳಿತದಲ್ಲಿ ಮಹಿಳಾ ನಾಯಕರ ಸಬಲೀಕರಣ ತರಬೇತಿಯು ನಡೆಯುತ್ತಿದ್ದು, ಈ ಕಾರ್ಯಕ್ರಮ ಉದ್ಘಾಟಿಸಿ ಕೊಡಗು ಜಿಲ್ಲಾ ಪಂಚಾಯಿತಿಯ ಮುಖ್ಯ ಯೋಜನಾಧಿಕಾರಿ ಅಬ್ದುಲ್ ನಬಿ ರವರು ಮಾತನಾಡಿ, ರಾಜಕೀಯವನ್ನು ಪ್ರವೇಶಿಸಿದ ನಂತರ ಪಂಚಾಯಿತಿ ಅಧ್ಯಕ್ಷರಾಗಿ ಸಾರ್ವಜನಿಕ ಅಭಿವೃದ್ಧಿಗೆ ಶ್ರಮಿಸಿ, ಉತ್ತಮ ಸೇವೆ ಆಡಳಿತ ನೀಡಬೇಕೆಂಬ ಹಂಬಲ ಮಹಿಳಾ ಚುನಾಯಿತ ಪ್ರತಿನಿಧಿಗಳಲ್ಲಿರುತ್ತದೆ. ಪಂಚಾಯತ್ ರಾಜ್ ವ್ಯವಸ್ಥೆಯಲ್ಲಿ ತಮ್ಮ ಅಧಿಕಾರದ ವ್ಯಾಪ್ತಿ ,ನೀತಿ […]

ನಾಳೆ ಕೊಡಗಿನಲ್ಲಿ ಎಲ್ಲೆಲ್ಲಿ ಕರೆಂಟ್ ಇರಲ್ಲ?

Power Cut

ವಿರಾಜಪೇಟೆ ವಿದ್ಯುತ್ ವಿತರಣಾ ಉಪಕೇಂದ್ರದ ವಿರಾಜಪೇಟೆ ಶಾಖಾ ವ್ಯಾಪ್ತಿಯ ವಿಎಫ್-3 ಕೆ.ಎಸ್.ಆರ್.ಟಿ.ಸಿ ಮತ್ತು ವಿಎಫ್-7 ಹೆಗ್ಗಳ ಫೀಡರ್‍ಗಳಲ್ಲಿ ಸೆಪ್ಟೆಂಬರ್, 11 ರಂದು ಬೆಳಗ್ಗೆ 9 ರಿಂದ ಸಂಜೆ 6 ಗಂಟೆಯವರೆಗೆ ಫೀಡರ್ ಬೇರ್ಪಡಿಸುವ ಕಾರ್ಯ ಕೈಗೆತ್ತಿಕೊಂಡಿರುವುದರಿಂದ ಈ ಮಾರ್ಗದಿಂದ ವಿದ್ಯುತ್ ಸರಬರಾಜಾಗುವ ವಿರಾಜಪೇಟೆ ಪಟ್ಟಣದ ಮೀನುಪೇಟೆ, ಸುಣ್ಣದ ಬೀದಿ, ಖಾಸಗಿ ಬಸ್ ನಿಲ್ದಾಣ, ಪೋಲಿಸ್ ಸ್ಠೇಷನ್ ಹಿಂಬಾಗ, ಆರ್ಜಿ, ಪೆರಂಬಾಡಿ, ಹೆಗ್ಗಳ, ತೋರ, ರಾಮನಗರ, ಬಟ್ಟಮಕ್ಕಿ, ಎಡಮಕ್ಕಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು […]

ಮಡಿಕೇರಿ ತಾಲೂಕು ಬಂಟರ ಸಂಘದ ವತಿಯಿದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಅ.26ಕ್ಕೆ

ಮಡಿಕೇರಿ : ಮಡಿಕೇರಿ ತಾಲೂಕು ಬಂಟರ ಸಂಘದ ಆಶ್ರಯದಲ್ಲಿ ಬಂಟ ಸಮುದಾಯದ ಸಾಧಕ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭ ಅ.26ರಂದು ನಡೆಯಲಿದೆ. ಕೊಡಗು ಜಿಲ್ಲಾ ಬಂಟರ ಸಂಘ, ಮಡಿಕೇರಿ ತಾಲೂಕು ಮಹಿಳಾ ಘಟಕ, ಯುವ ಬಂಟ್ಸ್‌ ಅಸೋಸಿಯೇಷನ್‌, ನಗರ ಬಂಟರ ಸಂಘ, ನಗರ ಮಹಿಳಾ ಘಟಕ, ವಿರಾಜಪೇಟೆ, ಸೋಮವಾರಪೇಟೆ ತಾಲೂಕು ಘಟಕದ ಸಹಯೋಗದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಅಂದು ಮಡಿಕೇರಿಯ ಗಾಂಧಿ ಮೈದಾನದಲ್ಲಿ ಕಾರ್ಯಕ್ರಮ ನಡೆಯಲಿದೆ. ಶೈಕ್ಷಣಿಕವಾಗಿ ಸಾಧನೆಗೈದ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಗುವುದು ಎಂದು […]

ಪ್ರವಾಸಿಗರ ಮೇಲೆ ಹಲ್ಲೆ ಪ್ರಕರಣ – ನಂದಿಮೊಟ್ಟೆ ಜೀಪ್‌ ಚಾಲಕರ ವಿರುದ್ಧ ಪ್ರಕರಣ ದಾಖಲು..!

ಮಡಿಕೇರಿ : ನಗರದ ಹೊರವಲಯದ ನಂದಿಮೊಟ್ಟೆಯಲ್ಲಿ ಇತ್ತೀಚೆಗೆ ಪ್ರವಾಸಿಗರ ಮೇಲೆ ಹಲ್ಲೆ ನಡೆಸಿದ ಸಂಬಂಧ ಮಡಿಕೇರಿ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಾಂದಲಪಟ್ಟಿಗೆ ಬಾಡಿಗೆ ತೆರಳುವ ವಿಚಾರಕ್ಕೆ ಸಂಬಂಧಪಟ್ಟಂತೆ ಪ್ರವಾಸಿ ಕುಟುಂಬ ಹಾಗೂ ಸ್ಥಳೀಯ ಜೀಪ್‌ ಚಾಲಕರ ನಡುವೆ ಗಲಾಟೆ ನಡೆದು, ಈ ವೇಳೆ ಅಲ್ಲಿನ ಚಾಲಕರು ಕೆಲವರು ಪ್ರವಾಸಿಗರ ಮೇಲೆ ಹಲ್ಲೆ ನಡೆಸಿದ್ದರು. ಘಟನೆಯ ವಿಡಿಯೋ ಎಲ್ಲೆಡೆ ಹರಿದಾಡಿತ್ತು. ಬಳಿಕ ಹಲ್ಲೆಗೊಳಗಾದ ಮಂದಿ ಆಸ್ಪತ್ರೆಗೆ ದಾಖಲಾಗಿದ್ದರು. ನಂತರ ದಾಖಲೆ ಸಹಿತವಾಗಿ ಪೊಲೀಸ್‌ ಠಾಣೆಯಲ್ಲಿ ದೂರು […]

ಕಾಲೇಜು ಆವರಣದಲ್ಲಿ ಮಚ್ಚು ಹಿಡಿದು ರೀಲ್ಸ್‌ – ಕೇಸ್‌ ದಾಖಲಾಗುತ್ತಿದ್ದಂತೆ ಕ್ಷಮೆ ಯಾಚಿಸಿದ ವಿದ್ಯಾರ್ಥಿ..!

ಕುಶಾಲನಗರದ : ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಳೆದ ಎರಡು ದಿನಗಳ ಹಿಂದೆ ಮಾರಕಾಸ್ತ್ರ ಹಿಡಿದು ರಿಲ್ಸ್ ಮಾಡಿ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದ ವಿದ್ಯಾರ್ಥಿ ಈಗ ಕ್ಷಮೆ ಯಾಚಿಸಿದ್ದಾನರೆ. ಪ್ರಥಮ ದರ್ಜೆ ಕಾಲೇಜಿನ ಅಂತಿಮ ಬಿಕಾಂ ವಿದ್ಯಾರ್ಥಿ ಕಾಲೇಜಿನೊಳಗೆ ಲಾಂಗ್ ಹಿಡಿದು ರೀಲ್ಸ್ ಮಾಡಿದ್ದ, ಇದರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದರು. ಕಾಲೇಜು ಪ್ರಾಂಶುಪಾಲರು ಹಾಗೂ ಆಡಳಿತ ವ್ಯವಸ್ಥೆ ವಿರುದ್ಧ ಕೂಡ ತೀವ್ರ ಅಸಮಾಧಾನ ವ್ಯಕ್ತವಾಗಿತ್ತು. ಮಾತ್ರವಲ್ಲ ಈ ಬಗ್ಗೆ ಕುಶಾಲನಗರ ಪೊಲೀಸ್‌ […]