ಮೇಕೇರಿಯಲ್ಲಿ ನಿವೃತ್ತ ಕಾರ್ಯಕರ್ತೆಗೆ ಬೀಳ್ಕೊಡುಗೆ – ಸೀಮಂತ ಕಾರ್ಯಕ್ರಮ

ಮಡಿಕೇರಿ : 36 ವರ್ಷ ಕಾಲ ಬಿಳಿಗೇರಿ ಅಂಗನವಾಡಿ ಕೇಂದ್ರದಲ್ಲಿ ಕಾರ್ಯಕರ್ತೆಯಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ದೇವಕಿ ಅವರಿಗೆ ಬೀಳ್ಕೊಡುಗೆ ಸಮಾರಂಭ ಮೇಕೇರಿ ಅಂಗನವಾಡಿ ಕೇಂದ್ರದಲ್ಲಿ ನೆರವೇರಿತು. ಪೋಷಣ್ ಅಭಿಯಾನ ಯೋಜನೆ ಅಡಿ ಸಮುದಾಯ ಆಧಾರಿತ ಚಟುವಟಿಕೆಯಾದ ಸೀಮಂತ ಕಾರ್ಯಕ್ರಮವನ್ನು ಶ್ರೀಮತಿ ಭವ್ಯರವರಿಗೆ ನೆರವೇರಿಸಲಾಯಿತು. ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಪ್ರಸನ್ನ ಕುಮಾರ್ ಪಾಲ್ಗೊಂಡು ಶುಭ ಹಾರೈಸಿದರು. ಪೋಶನ್ ಟ್ರ್ಯಾಕರ್, ಭಾಗ್ಯಲಕ್ಷ್ಮಿ, ಮಾತೃ ವಂದನ, ಭೇಟಿ ಬಚಾವ್ ಭೇಟಿ ಪಡಾವೊ ಬಗ್ಗೆ […]
ನಾಣ್ಯ, ನೋಟುಗಳ ಸಂಗ್ರಹ ಹವ್ಯಾಸ ಬೆಳೆಸಿಕೊಳ್ಳಿ – ಡಿವೈಎಸ್ಪಿ ಎಸ್. ಮಹೇಶ್ ಕುಮಾರ್ ಕರೆ

ವೀರಾಜಪೇಟೆ : ನಾಣ್ಯ ನೋಟುಗಳ ಸಂಗ್ರಹದ ಹವ್ಯಾಸವನ್ನು ಇಂದಿನ ಪೀಳಿಗೆ ಬೆಳೆಸಿಕೊಳ್ಳಬೇಕು ಎಂದು ವಿರಾಜಪೇಟೆಯ ಡಿವೈಎಸ್‍ಪಿ ಎಸ್. ಮಹೇಶ್ ಕುಮಾರ್ ಹೇಳಿದರು. ಪಂಜರಪೇಟೆ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನಡೆದ ಭಾರತದ 2600 ವರ್ಷ ಪುರಾತನ, ನಂತರದ ಇತಿಹಾಸ ಪುರಾತನ ಹಾಗೂ ವಿಶ್ವದ 196 ದೇಶಗಳ ವಿವಿಧ ಕಾಲಘಟ್ಟದ ನಾಣ್ಯ ನೋಟುಗಳ ಬೃಹತ್ ಪ್ರದರ್ಶನ ಕಾರ್ಯಕ್ರಮವನ್ನು ಗಿಡಕ್ಕೆ ನೀರು ಹಾಕುವ ಮೂಲಕ ಉದ್ಗಾಟಿಸಿ ಮಾತನಾಡಿದ ಅವರು, ನಾಣ್ಯಗಳು ಮೌನವಾಗಿಯೇ ಗತಕಾಲದ ಇತಿಹಾಸವನ್ನು ತಿಳಿಸುತ್ತವೆ. ಈ ನಾಣ್ಯ ಪ್ರದರ್ಶನದಲ್ಲಿ […]
ವೀರಾಜಪೇಟೆಯಲ್ಲಿ ಹಿಂದು ಸಂಗಮ ಶೋಭಾಯಾತ್ರೆ ಹಾಗೂ ಸಭಾ ಕಾರ್ಯಕ್ರಮ ಫೆ.25ಕ್ಕೆ

ವರದಿ : ರಜಿತ ಕಾರ್ಯಪ್ಪ ವೀರಾಜಪೇಟೆ : ಹಿಂದೂ ಸಮಾಜದ ಸಂಘಟನೆ, ಸ್ವಾವಲಂಭಿ, ಸಂಸ್ಕಾರಯುಕ್ತ ಮತ್ತು ಸಾಮರಸ್ಯಯುಕ್ತ ಸಮಾಜವನ್ನು ನಿರ್ಮಾಣ ಮಾಡುವ ನಿಟ್ಟಿನಲ್ಲಿ ಹಿಂದೂ ಸಮಾಜವೇ ಒಟ್ಟುಗೂಡಿ ಹಿಂದೂ ಸಂಗಮ ಕಾರ್ಯಕ್ರಮವನ್ನು ವಿರಾಜಪೇಟೆಯಲ್ಲಿ ಆಯೋಜಿಸುತ್ತಿದೆ ಎಂದು ಹಿಂದೂ ಸಂಗಮ ಆಯೋಜನಾ ಸಮಿತಿ ವಿರಾಜಪೇಟೆ ತಾಲೂಕು ಅಧ್ಯಕ್ಷ ಕುಪ್ಪಂಡ ರಾಜೀವ್ ಕಾರ್ಯಪ್ಪ ಹೇಳಿದರು. ಹಿಂದೂ ಸಂಗಮ ಶೋಭಾಯಾತ್ರೆ ಮತ್ತು ಸಭಾ ಕಾರ್ಯಕ್ರಮ ನಡೆಸುವ ಬಗ್ಗೆ ಕರೆಯಲಾಗಿದ್ದ ಸಭೆಯಲ್ಲಿ ಅವರು ಮಾತನಾಡಿ, ವಿರಾಜಪೇಟೆ ನಗರದ ಹಿಂದೂ ಸಂಗಮ ಆಯೋಜನಾ ಸಮಿತಿ […]
Power Cut: ನಾಳೆ ಕೊಡಗಿನಲ್ಲಿ ಎಲ್ಲೆಲ್ಲಿ ಕರೆಂಟ್ ಇರಲ್ಲ?

ಫೆಬ್ರವರಿ, 22 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಶನಿವಾರಸಂತೆ ಶಾಖೆಯ ಶನಿವಾರಸಂತೆ ಪಟ್ಟಣ, ಅಪ್ಪ್ಡಶೆಟ್ಟಳ್ಳಿ, ಮಾದ್ರೆ, ಚಿಕ್ಕಕೊಳತ್ತೂರು, ದುಂಡಳ್ಳಿ, ಬೆಂಬಳೂರು, ಬಿಳಹ, ಹಂಡ್ಲಿ, ಕಿತ್ತೂರು, ಸಂಪಿಗೆದಳ, ಮಾದ್ರದಳ್ಳಿ, ಮಣಗಲಿ, ಗೌಡಳ್ಳಿ, ಬೀಟಿಕಟ್ಟೆ, ಶುಂಠಿ, ಶಾಂತ್ವೇರಿ, ಬಸವನಕೊಪ್ಪ, ಮುಳ್ಳೂರು, ಗೋಪಾಲಪುರ, ಜಾಗೇನಹಳ್ಳಿ, ನಿಡ್ತ, ಚೌಡೇನಹಳ್ಳಿ, ದೊಡ್ಡಳ್ಳಿ, ಹರೆಹೊಸೂರು, ಕೊಡ್ಲಿಪೇಟೆ ಹೋಬಳಿ ವ್ಯಾಪ್ತಿಯ ಬೆಸೂರು ಪಂಚಾಯಿತಿ, ನೀರುಗುಂದ, ನಿಲುವಾಗಿಲು, ದೊಡ್ಡಭಂಡಾರ, ಬ್ಯಾಡಗೊಟ್ಟ, ಕೊಡ್ಲಿಪೇಟೆ ಟೌನ್, ಅವರದಾಳು, ಬೆಂಬಳೂರು, ದೊಡ್ಡಕೊಡ್ಲಿ, ಕ್ಯಾತೆ, ದೊಡ್ಡಕುಂದಾ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ […]
ಪಯ್ಯವೂರು ಶಿವ ದೇವಾಲಯದಲ್ಲಿ ಸಾಂಪ್ರದಾಐಿಕ ಊಟ್ ಉತ್ಸವ ಆರಂಭ

ವೀರಾಜಪೇಟೆ : ಕೇರಳ-ಕರ್ನಾಟಕ ಗಡಿಯ ಸಮೀಪವಿರುವ ಕಣ್ಣೂರು ಜಿಲ್ಲೆಯ ಪಯ್ಯವೂರು ಶಿವ ದೇವಾಲಯದಲ್ಲಿ ವಾರ್ಷಿಕ ಉತ್ಸವ ನಡೆಯುತ್ತಿದ್ದು ಶುಕ್ರವಾರ ಬೆಳಿಗ್ಗೆ ಕೊಡಗಿನವರ ಊಟ್ ಉತ್ಸವದ 8 ಊಟ್ ಹಬ್ಬಕ್ಕೆ ಅಕ್ಕಿ ಅಳೆಯುವ ಶಾಸ್ತ್ರದ ಮೂಲಕ ಚಾಲನೆ ನೀಡಲಾಯಿತು. ಹಬ್ಬದ ಪ್ರಮುಖ ಭಾಗವಾದ ಕೊಡಗಿನ ಕಡಿಯತ್ತ್‍ನಾಡಿನ ಚೆಯ್ಯಂಡಾಣೆಯ ಮುಂಡ್ಯೋಳಂಡ ಹಾಗೂ ಬೊವ್ವೇರಿಯಂಡ ಕುಟುಂಬಗಳ ತಕ್ಕ ಮುಖ್ಯಸ್ಥರ ಹಾಗೂ ನಾಡಿನ ಪ್ರಮುಖ ಕುಟುಂಬಗಳ ಸದಸ್ಯರು ಕೊಡವರು ಪಯ್ಯವೂರ್ ಶಿವನಿಗೆ ಅರ್ಪಿಸಲು ಎತ್ತುಗಳ ಬೆನ್ನಿನ ಮೇಲೆ ಅಕ್ಕಿಯನ್ನು ದೇವಸ್ಥಾನಕ್ಕೆ ಸಾಗಿಸಿದ್ದು ದೇವಸ್ಥಾನದಲ್ಲಿ […]
ವೀರಾಜಪೇಟೆಯಲ್ಲಿ ಸಂಭ್ರಮದಿಂದ ಜರುಗಿದ ಗ್ರಾಮೀಣ ಕ್ರೀಡಾಕೂಟ

ವೀರಾಜಪೇಟೆ : ಕ್ರೀಡೆಯಲ್ಲಿ ಹೆಚ್ಚು ಹೆಚ್ಚು ತೊಡಗಿಸಿಕೊಳ್ಳುವುದರಿಂದ ದೈಹಿಕ, ಮಾನಸಿಕವಾಗಿ ಸದೃಢರಾಗಲು ಸಾಧ್ಯ ಎಂದು ವೀರಾಜಪೇಟೆ ಕ್ಷೇತ್ರದ ಶಾಸಕರು ಮುಖ್ಯ ಮಂತ್ರಿಗಳ ಸಲಹೆಗಾರರಾದ ಎ.ಎಸ್.ಪೊನ್ನಣ್ಣ ಹೇಳಿದರು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕೊಡಗು ಜಿಲ್ಲಾ ಜಾನಪದ ಪರಿಷತ್ ವಿರಾಜಪೇಟೆ ಘಟಕ, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿರಾಜಪೇಟೆ ತಾಲೂಕು, ಪೊನ್ನಂಪೇಟೆ ಇವರ ಸಹಯೋಗದಲ್ಲಿ ನಗರದ ತಾಲೂಕು ಮೈದಾನದಲ್ಲಿ ಆಯೋಜಿಸಲಾಗಿದ್ದ ಗ್ರಾಮೀಣ ಕ್ರೀಡಾಕೂಟವನ್ನು ಕಂಜರ ಬಾರಿಸುವ ಹಾಗೂ ದೀಪ ಬೆಳಗುವ ಮೂಲಕ ಉದ್ಘಾಟಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದ […]
ವಿರಾಜಪೇಟೆ ಕಾವೇರಿ ಕಾಲೇಜಿನಲ್ಲಿ ರಾಜ್ಯಮಟ್ಟದ 5 ಎ ಸೈಡ್ ರಿಂಕ್‌ಹಾಕಿ ಪಂದ್ಯಾಟ ಉದ್ಘಾಟನೆ

ಕ್ರೀಡೆಯು ದೈಹಿಕ ಆರೋಗ್ಯದೊಂದಿಗೆ ಮಾನಸಿಕ ಆರೋಗ್ಯವನ್ನು ಹೆಚ್ಚಿಸಲು ಪ್ರಮುಖ ಪಾತ್ರವನ್ನು ವಹಿಸುತ್ತದೆ. ಎಂದು ಹಿರಿಯ ಹಾಕಿ ಆಟಗಾರ ಹಾಗೂ ಹಾಕಿ ವೀಕ್ಷಕ ವಿವರಣೆಗಾರರಾದ ಮಾಳೇಟಿರ ಶ್ರೀನಿವಾಸ್ ಅಭಿಪ್ರಾಯ ವ್ಯಕ್ತಪಡಿಸಿದರು . ವಿರಾಜಪೇಟೆ ಕಾವೇರಿ ಕಾಲೇಜು ದೈಹಿಕ ಶಿಕ್ಷಣ ವಿಭಾಗದಿಂದ ಪೊನ್ನಂಪೇಟೆ ಟರ್ಫ್ ಮೈದಾನದಲ್ಲಿ ಆಯೋಜಿಸಲಾಗಿದ್ದ 5 ಎ ಸೈಡ್ ರಿಂಗ್ ಹಾಕಿ ಪಂದ್ಯಾಟವನ್ನು ಉದ್ಘಾಟಿಸಿ ಮಾತನಾಡಿದ ಅವರು ಕೊಡಗು ಜಿಲ್ಲೆಯು ಹಾಕಿ ತವರೆಂದು ಪ್ರಸಿದ್ಧಿಯನ್ನು ಪಡೆದಿದ್ದು ಹಾಕಿ ಕ್ರೀಡೆಗೆ ಇಲ್ಲಿ ವಿಶೇಷವಾದ ಸ್ಥಾನಮಾನವಿದೆ . ಕ್ರೀಡೆಯೂ ನಮ್ಮಲ್ಲಿ […]
ಕೊಡಗು ಗೌಡ ಸಮುದಾಯಕ್ಕೆ ಭೂಮಿ ಮಂಜೂರು: ಮುಖ್ಯಮಂತ್ರಿಗೆ ಶಾಸಕ ಪೊನ್ನಣ್ಣ ನೇತೃತ್ವದಲ್ಲಿ ಸನ್ಮಾನ

ಕೊಡಗು ಅರೆಭಾಷೆ ಗೌಡ ಸಮುದಾಯದ ಸಾಂಸ್ಕೃತಿಕ, ಶೈಕ್ಷಣಿಕ ಮತ್ತು ಕ್ರೀಡಾ ಚಟುವಟಿಕೆಗಳ ಅಭಿವೃದ್ಧಿಗಾಗಿ ಮಡಿಕೇರಿ ತಾಲೂಕಿನ ಮದೆ ಗ್ರಾಮದ ಕಾಟಕೇರಿಯಲ್ಲಿ 6 ಎಕರೆ ಜಾಗವನ್ನು ಮಂಜೂರು ಮಾಡಿದ ಹಾಗೂ ಜಿಲ್ಲೆಯ ಸುದೀರ್ಘ ಕಾಲದ ‘ಜಮ್ಮಬಾಣೆ’ ಸಮಸ್ಯೆಯನ್ನು ನಿವಾರಿಸಿದ ರಾಜ್ಯ ಸರ್ಕಾರಕ್ಕೆ ಗೌರವ ಸಮರ್ಪಿಸಲಾಯಿತು. ವಿರಾಜಪೇಟೆ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರ ನೇತೃತ್ವದಲ್ಲಿ, ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರನ್ನು ಕೊಡಗು ಗೌಡ ಸಮಾಜದ ವತಿಯಿಂದ […]
ವಿರಾಜಪೇಟೆ ಕಾವೇರಿ ಕಾಲೇಜಿನಲ್ಲಿ ರಾಜ್ಯಮಟ್ಟದ 5 ಎ ಸೈಡ್ ರಿಂಕ್‌ಹಾಕಿ ಪಂದ್ಯಾಟ

ರಾಜಪೇಟೆ ಕಾವೇರಿ ಕಾಲೇಜಿನ ದೈಹಿಕ ಶಿಕ್ಷಣ ವಿಭಾಗ ವತಿಯಿಂದ ಕೊಡಗಿನ ಇತಿಹಾಸದಲ್ಲಿ ಮೊದಲ ಬಾರಿಗೆ ರಿಂಕ್ 5 ಎ ಸೈಡ್ ರಾಜ್ಯಮಟ್ಟದ ಅಂತರ ಕಾಲೇಜು ಹಾಕಿ ಪಂದ್ಯಾಟವನ್ನು ಆಯೋಜಿಸಲಾಗಿದೆ ಎಂದು ಕಾವೇರಿ ಕಾಲೇಜಿನ ಪ್ರಾಂಶುಪಾಲರಾದ ಬೆನೆಡಿಕ್ಟ್ ಆರ್ ಸಲ್ಡನ್ ಮಾಹಿತಿ ನೀಡಿದರು . ಕಾವೇರಿ ಕಾಲೇಜಿನ ಕೌಸ್ತುಬ ಸಭಾಭವನದಲ್ಲಿ ಬುಧವಾರ ಕರೆದಿದ್ದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು ಪದವಿ ಮಟ್ಟದ ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದಲ್ಲಿಯೆ ಮೊದಲ ಬಾರಿ ಅಂತರ ಕಾಲೇಜು 5 ಎ ಸೈಡ್ ರಿಂಕ್ ಹಾಕಿ ಪಂದ್ಯಾಟವನ್ನು […]
ಎಡಪಾಲ ಕೌಟುಂಬಿಕ ಕ್ರಿಕೆಟ್ ಕ್ರೀಡಾಕೂಟ-2026: ಕಿಕ್ಕರೆ ಚಾಂಪಿಯನ್

ನರಿಯಂದಡ ಗ್ರಾಮದ ಎಡಪಾಲದ ಕುಪ್ಪೋಡಂಡ ಕುಟುಂಬಸ್ಥರ ಆತಿಥ್ಯದಲ್ಲಿ ನಡೆದ 23ನೇ ವರ್ಷದ ಎಡಪಾಲ ಕೌಟುಂಬಿಕ ಕ್ರೀಡಾಕೂಟ ಇತ್ತೀಚಿಗೆ ಯಶಸ್ವಿಯಾಗಿ ಮುಕ್ತಾಯಗೊಂಡಿತು. ಕ್ರೀಡಾಕೂಟದ ಕ್ರಿಕೆಟ್ ಪಂದ್ಯಾವಳಿಯಲ್ಲಿ ಕಿಕ್ಕರೆ ತಂಡ ಇದೇ ಮೊದಲ ಬಾರಿಗೆ ಚಾಂಪಿಯನ್ ಪಟ್ಟವನ್ನು ತನ್ನ ಮುಡಿಗೇರಿಸಿಕೊಂಡು ಸಂಭ್ರಮಿಸಿತು. ಫೈನಲ್ ನಲ್ಲಿ ತೀವ್ರ ಪೈಪೋಟಿ ನೀಡಿದ, ಕ್ರೀಡಾಕೂಟದ ಅತಿಥ್ಯ ವಹಿಸಿದ್ದ ಕುಪ್ಪೋಡಂಡ ತಂಡ ಕೊನೆಗೆ ರನ್ನರ್ಸ್ ಪ್ರಶಸ್ತಿಗೆ ತೃಪ್ತಿಪಟ್ಟುಕೊಂಡಿತು. ಕ್ರೀಡಾಕೂಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ಎಡಪಾಲ ಗ್ರಾಮದ ಬದ್ರಿಯಾ ಫ್ರೆಂಡ್ಸ್ ತಂಡ ವಿನ್ನರ್ಸ್ ಪ್ರಶಸ್ತಿ ಪಡೆದರೆ, ಕಿಕ್ಕರೆ ತಂಡ […]