ಕೊಡಗು ಮಳೆ ಅಪ್‌ಡೇಟ್ಸ್: ಹಾರಂಗಿ ಜಲಾಶಯದ ನೀರಿನ ಮಟ್ಟ ವಿವರ

Kodagu Rain

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಗುರುವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳ ಅವಧಿಯಲ್ಲಿ ಸರಾಸರಿ 9.20 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 15.87 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗೆ ಜಿಲ್ಲೆಯಲ್ಲಿ ಒಟ್ಟು 1106.57 ಮಿ.ಮೀ. ಮಳೆಯಾಗಿದ್ದು, ಕಳೆದ ವರ್ಷ ಇದೇ ಅವಧಿಯಲ್ಲಿ 2191.24 ಮಿ.ಮೀ. ದಾಖಲಾಗಿತ್ತು. ತಾಲ್ಲೂಕುವಾರು ಮಳೆ ವಿವರ: ಮಡಿಕೇರಿ ತಾಲ್ಲೂಕಿನಲ್ಲಿ ಸರಾಸರಿ 11.40 ಮಿ.ಮೀ (ವರ್ಷದ ಒಟ್ಟು: 1744.56 ಮಿ.ಮೀ), ವಿರಾಜಪೇಟೆಯಲ್ಲಿ 2.80 ಮಿ.ಮೀ (ಒಟ್ಟು: 1032.42 ಮಿ.ಮೀ), ಪೊನ್ನಂಪೇಟೆಯಲ್ಲಿ […]

ಕೊಡಗು ಸಾಹಿತ್ಯ ಪರಿಷತ್: ಆ.8ಕ್ಕೆ ಪದಗ್ರಹಣ ಹಾಗೂ ಪ್ರಶಸ್ತಿ ಪ್ರದಾನ

ವಿರಾಜಪೇಟೆ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಸ್ಕೃತಿ ಮತ್ತು ಸಾಹಿತ್ಯ ಪರಿಷತ್ತಿನ ಕೊಡಗು ಜಿಲ್ಲಾ ಘಟಕದ ಪದಗ್ರಹಣ ಕಾರ್ಯಕ್ರಮವು ಆಗಸ್ಟ್ 8 ರಂದು ಮಧ್ಯಾಹ್ನ 2:00 ಗಂಟೆಗೆ ವಿರಾಜಪೇಟೆಯ ಅಂಬೇಡ್ಕರ್ ಭವನದಲ್ಲಿ ನೆರವೇರಲಿದೆ. ಮಡಿಕೇರಿ ಜಿಲ್ಲಾ ಖಜಾನೆ ಉಪ ನಿರ್ದೇಶಕರಾದ ಡಾ. ರಘುನಾಥ ಬಿ. ಎನ್. ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ರಾಜ್ಯ ಉಪಾಧ್ಯಕ್ಷ ಗಣೇಶ್ ನಿಲುವಾಗಿಲು ಪ್ರಸ್ತಾವಿಕ ನುಡಿಗಳನ್ನಾಡಲಿದ್ದಾರೆ. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ರಾಜ್ಯ ಘಟಕದ ಮಹಾ ಪೋಷಕ ಮಲ್ಲಿಕಾರ್ಜುನ ತೊದಲಬಾಗಿ, ಗೌರವಾಧ್ಯಕ್ಷ ಎಲ್.ಐ. ಲಕ್ಕಮ್ಮನವರ್, ರಾಜ್ಯಾಧ್ಯಕ್ಷೆ ರಮಾ […]

ರೋಟರ್ಯಾಕ್ಟ್ ಜಿಲ್ಲಾ ಪ್ರತಿನಿಧಿಯಾಗಿ ಕೊಡಗಿನ ಶ್ರೀರಕ್ಷಾ ಅಧಿಕಾರ ಸ್ವೀಕಾರ

ಮಡಿಕೇರಿ ಆ. 4 – ರೋಟರ್ಯಾಕ್ಟ್ ಜಿಲ್ಲೆ 3181 ನ ಜಿಲ್ಲಾ ಪ್ರತಿನಿಧಿಯಾಗಿ ಕೊಡಗು ಮೂಲದ ಶ್ರೀರಕ್ಷಾ ಮೈಸೂರಿನಲ್ಲಿ ಆಯೋಜಿತ ಸಮಾರಂಭದಲ್ಲಿ ತನ್ನ ತಂಡದೊಂದಿಗೆ ಪದಗ್ರಹಣ ಸ್ವೀಕರಿಸಿದರು. ಮೈಸೂರಿನ ಶ್ರೀ ಕಂಠೀರವ ನರಸಿಂಹರಾಜ ಸ್ಪೋಟ್ಸ್೯ ಕ್ಲಬ್ ನಲ್ಲಿ ಆಯೋಜಿತ ಸಮಾರಂಭದಲ್ಲಿ ರೋಟರ್ಯಾಕ್ಟ್ ಗೆ ಸೇರಿದ 56 ಸಂಸ್ಥೆಗಳಿಗೆ ಜಿಲ್ಲಾ ಪ್ರತಿನಿಧಿಯಾಗಿ ನೇಮಕಗೊಂಡ ಶ್ರೀರಕ್ಷಾ ಮತ್ತು ಮಾರ್ಗದರ್ಶಿಯಾಗಿ ನೇಮಕಗೊಂಡ ಮೂಕಳೇರ ತುಳಸಿ ತಂಗಮ್ಮ ಅವರಿಗೆ ರೋಟರಿ ಗವನ೯ರ್ ಸತೀಶ್ ಬೋಳಾರ್ ಪದಗ್ರಹಣ ನೀಡಿದರು ನಾಪೋಕ್ಲುವಿನ ಹಿರಿಯ ಪತ್ರಕತ೯ ಪ್ರಭಾಕರ್ […]

ಕೊಡಗು ಜಿಲ್ಲೆಗೆ ಸಚಿವ ಸ್ಥಾನ ಬೇಕು – ಇದು ನಮ್ಮ ಅಂತಿಮ ಎಚ್ಚರಿಕೆ ಎಂದ ದಾವೂದ್ ‌

ಯಾರೇ ಕರ್ನಾಟಕದ ಮುಖ್ಯಮಂತ್ರಿಯಾದರು  ಯಾರೇ ಸರ್ಕಾರ ರಚಿಸಿದರೂ ಯಾರೇ ಮಂತ್ರಿಯಾದರೂ ಕೊಡಗಿನ ಪಾಲಿಗೆ ಮಾತ್ರ ಮೋಸ ಅನ್ಯಾಯ ಮತ್ತು ದ್ರೋಹವೇ ಸಿಕ್ಕಿದೆ. ಚುನಾವಣೆ ಬಂದಾಗ ಮಾತ್ರ ಕೊಡಗಿನ ಜನ ನೆನಪಾಗುತ್ತಾರೆ. ಮನೆ ಮನೆಗೆ ಬಂದು  ಈ ಬಾರಿ ಕೊಡಗಿಗೆ ಮಂತ್ರಿ ಸ್ಥಾನ ಖಚಿತ  ಕೊಡಗಿನ ಅಭಿವೃದ್ಧಿಗೆ ಹೊಸ ಅಧ್ಯಾಯ ಆರಂಭ ನಮ್ಮ ಸರ್ಕಾರ ಬಂದರೆ ಕೊಡಗಿಗೆ ನ್ಯಾಯ ಮಾಡುತ್ತೇವೆ ಎಂದು ಭರವಸೆಗಳ ಸುರಿಮಳೆ ಸುರಿಸುತ್ತಾರೆ ಹೊಸ ಮುಖಗಳನ್ನು ಪರಿಚಯಿಸುತ್ತಾರೆ ಜನರ ವಿಶ್ವಾಸ ಗಳಿಸುತ್ತಾರೆ ಮತ ಪಡೆದು ಅಧಿಕಾರಕ್ಕೆ […]

ಕೊಡಗು ಮಳೆ ವರದಿ: ಕಳೆದ 24 ಗಂಟೆಗಳಲ್ಲಿ ಎಲ್ಲೆಲ್ಲಿ ಎಷ್ಟಾಯ್ತು ಬಾರೀ ಮಳೆ?

Kodagu Rain

ಕೊಡಗು ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 8.90 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 11.08 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 1084.01 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 2173.95 ಮಿ.ಮೀ ಮಳೆಯಾಗಿತ್ತು. ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 32.40 ಮಿ.ಮೀ. ಕಳೆದ ವರ್ಷ ಇದೇ ದಿನ 14.40 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1697.64 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ […]

ಮೂರ್ನಾಡುವಿನಲ್ಲಿ ಆ. 15ರಂದು ಕೊಡಗಿನ ಸ್ವಾತಂತ್ರ್ಯ ಹೋರಾಟಗಾರರ ಸ್ಮರಣೆ

Freedom Fighters of Kodagu

ಮಡಿಕೇರಿ: ಭಾರತ ಸ್ವಾತಂತ್ರ್ಯದ 80ನೇ ವರ್ಷಾಚರಣೆಯ ಅಂಗವಾಗಿ ಇದೇ ಆಗಸ್ಟ್ 15ರಂದು ಮೂರ್ನಾಡು ಕೊಡವ ಸಮಾಜದಲ್ಲಿ ‘ಯುನೈಟೆಡ್ ಕೊಡವ ಆರ್ಗನೈಜೇಷನ್’ (ಯುಕೊ) ಹಾಗೂ ‘ಮೂರ್ನಾಡು ಕೊಡವ ಸಮಾಜ’ದ ಜಂಟಿ ಸಹಯೋಗದಲ್ಲಿ “ನೆಪ್ಪುರ ನಳತ್ ಮಾಂಜತ ಮೊಟ್ಟ್” (‘The Ever Lasting Footprints in the Shadow of Memories’) ಎಂಬ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಕೊಡಗಿನ ನೈಜ ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಆಯೋಜಿಸುತ್ತಿರುವುದಾಗಿ ಕೊಕ್ಕಲೆಮಾಡ ಮಂಜು ಚಿಣ್ಣಪ್ಪ ತಿಳಿಸಿದ್ದಾರೆ. ಮೂರ್ನಾಡು ಕೊಡವ ಸಮಾಜದ […]

ಮನೆಗಳಿಂದಲೇ ಆರಂಭವಾಗಲಿ ಪರಿಸರ ಸ್ವಚ್ಛತೆಯ ಜಾಗೃತಿ: ವಿರಾಜಪೇಟೆಯಲ್ಲಿ ಅರ್ಥಪೂರ್ಣ ‘ವನಮಹೋತ್ಸವ’

Tree Plantation

ವಿರಾಜಪೇಟೆ: ಪರಿಸರ ಸ್ವಚ್ಛತೆ ಮತ್ತು ಸಂರಕ್ಷಣೆಯ ಪರಿಪಾಠವು ಪ್ರತಿಯೊಬ್ಬರ ಮನೆಗಳಿಂದಲೇ ಆರಂಭವಾಗಬೇಕು. ಮನೆಯಲ್ಲಿ ಸ್ವಚ್ಛತೆಯ ಜಾಗೃತಿ ಮೂಡಿದಾಗ ಮಾತ್ರ ಸಮಾಜದಲ್ಲಿಯೂ ಸ್ವಚ್ಛ ಪರಿಸರ ನಿರ್ಮಾಣ ಸಾಧ್ಯ ಎಂದು ವಿರಾಜಪೇಟೆ ತಾಲೂಕು ತಹಸಿಲ್ದಾರ್ ಪ್ರವೀಣ್ ಕುಮಾರ್ ಅವರು ಅಭಿಪ್ರಾಯಪಟ್ಟಿದ್ದಾರೆ. ವಿರಾಜಪೇಟೆಯ ತಾಲೂಕು ಕಚೇರಿಯ ಆವರಣದಲ್ಲಿ ತಾಲೂಕು ಆಡಳಿತ, ವಿರಾಜಪೇಟೆ ಪತ್ರಕರ್ತರ ವೇದಿಕೆ, ನ್ಯೂಸ್ 3 ಡಿಜಿಟಲ್ ಮೀಡಿಯಾ ಹಾಗೂ ಸೆಂಟ್ ಆನ್ಸ್ ಪದವಿ ಕಾಲೇಜಿನ ಎನ್.ಎಸ್.ಎಸ್ ಮತ್ತು ಯುವ ರೆಡ್ ಕ್ರಾಸ್ ಘಟಕದ ಸಹಯೋಗದಲ್ಲಿ ಆಯೋಜಿಸಲಾಗಿದ್ದ ‘ವನಮಹೋತ್ಸವ’ ಕಾರ್ಯಕ್ರಮದಲ್ಲಿ […]

ಕಾಡುಹಂದಿ ಬೇಟೆಗಾರನ ಮೇಲೆ ಗುಂಡೇಟು: ಓರ್ವನ ಬಂಧನ, ಮೂವರು ಪರಾರಿ

Forest Officers

ಕಾಡುಹಂದಿ ಬೇಟೆಗಾರರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ನಡುವೆ ಘರ್ಷಣೆ ನಡೆದು, ಅರಣ್ಯಾಧಿಕಾರಿಗಳು ಗುಂಡು ಹಾರಿಸಿ ಓರ್ವ ಬೇಟೆಗಾರನನ್ನು ಬಂಧಿಸಿದ ಘಟನೆ ಮಲೆ ಮಹದೇಶ್ವರ ವನ್ಯಜೀವಿ ಧಾಮದಲ್ಲಿ ನಡೆದಿದೆ. ಬಂಧಿತನನ್ನು ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಅನ್ವಿತ್ ಎಂದು ಗುರುತಿಸಲಾಗಿದ್ದು, ಈತನ ಜೊತೆಗಾರರಾದ ದರ್ಶನ್, ಮಂಜ ಹಾಗೂ ಕಿರಣ್ ಎಂಬುವರು ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಶನಿವಾರ ರಾತ್ರಿ ತನಿಖಾ ತಂಡವು ಹನೂರು ತಾಲೂಕಿನ ಮಲೆ ಮಹದೇಶ್ವರ ವನ್ಯಜೀವಿ ಧಾಮದ ಅರಣ್ಯ ಪ್ರದೇಶದಲ್ಲಿ ಕಾಡುಹಂದಿ ಬೇಟೆ […]

ಕೊಡಗು: ಕಳೆದ 24 ಗಂಟೆ ಅವಧಿಯಲ್ಲಿ ಸುರಿದ ಮಳೆ ಮಾಹಿತಿ ಇಲ್ಲಿದೆ

rain

ಕೊಡಗು ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 13.46 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 13.86 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 851.04 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 2089.90 ಮಿ.ಮೀ ಮಳೆಯಾಗಿತ್ತು. ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 21.08 ಮಿ.ಮೀ. ಕಳೆದ ವರ್ಷ ಇದೇ ದಿನ 14.88 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1264.44 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ […]

ರೈತರ ಬಂಧನ ಖಂಡಿಸಿ ‘ಕೊಡಗು ಬಂದ್’?: ಜುಲೈ 29 ರಂದು ರೈತ ಸಂಘದ ಪ್ರಮುಖರ ನಿರ್ಣಾಯಕ ಸಭೆ

Farmers Protest

ಗೋಣಿಕೊಪ್ಪ: ಬಿಡದಿ ರೈತಪರ ಹೋರಾಟಕ್ಕೆ ತೆರಳುತ್ತಿದ್ದ ರೈತರನ್ನು ಪೊಲೀಸರು ಬಂಧಿಸಿರುವ ಕ್ರಮವನ್ನು ಖಂಡಿಸಿ ಕೊಡಗು ಬಂದ್‌ಗೆ ಕರೆ ನೀಡುವ ಕುರಿತು ನಿರ್ಧರಿಸಲು ಜುಲೈ 29 ರಂದು ಪೂರ್ವಭಾವಿ ಸಭೆ ನಡೆಸಲಾಗುವುದು ಎಂದು ಕೊಡಗು ರೈತ ಸಂಘ ಮತ್ತು ಹಸಿರು ಸೇನೆ ಕಾನೂನು ಸಲಹೆಗಾರ ಹೇಮಚಂದ್ರ ತಿಳಿಸಿದ್ದಾರೆ. ಸಂಘದ ಅಧ್ಯಕ್ಷ ಕಾಡ್ಯಮಾಡ ಮನು ಸೋಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯ ಬಳಿಕ ಮಾತನಾಡಿದ ಅವರು, ಬುಧವಾರ ಬೆಳಿಗ್ಗೆ 10.30ಕ್ಕೆ ಗೋಣಿಕೊಪ್ಪ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಸಭಾಂಗಣ ಮತ್ತು […]