ದಸರಾದಲ್ಲಿ ಬಿದ್ದು ಸಿಕ್ಕಿದ ಚಿನ್ನದ ಸರವನ್ನು ಮಾಲೀಕರಿಗೆ ಮರಳಿಸಿ ಪ್ರಾಮಾಣಿಕತೆ ಮೆರೆದ ಯುವಕ…

ಮಡಿಕೇರಿ : ದಸರಾದ ರಾತ್ರಿ ಬಿದ್ದು ಸಿಕ್ಕಿದ ಚಿನ್ನದ ಕರಿಮಣಿ ಸರವನ್ನು ವ್ಯಕ್ತಿಯೊಬ್ಬರ ಅದರ ಮಾಲೀಕರಿಗೆ ನೀಡಿ ಪ್ರಾಮಾಣಿಕತೆ ತೋರಿದ್ದಾರೆ. ಮಡಿಕೇರಿ ನಿವಾಸಿ ಕೊಂಗಂಡ ಎಸ್. ದೇವಯ್ಯ ಎಂಬವರ ಪತ್ನಿ ದಸರಾ ವೀಕ್ಷಣೆಗೆ ಬಂದಿದ್ದ ಸಂದರ್ಭ ತಾವು ಧರಿಸಿದ್ದ ಕರಿಮಣಿ ಸವರನ್ನು ಕಳೆದುಕೊಂಡಿದ್ದರು. ಇದು ಕೋಟೆ ಮಹಾಗಣಪತಿ ದೇವಾಲಯ ಸಮಿತಿ ಸದಸ್ಯ ಪುನೀತ್ ಎಂಬವರಿಗೆ ಸಿಕ್ಕಿದೆ. ಅದನ್ನು ಅವರು ಪೊಲೀಸರಿಗೆ ನೀಡಿದ್ದರು. ಈ ಬಗ್ಗೆ ಸಾರ್ವಜನಿಕ ಪ್ರಕಟಣೆ ನೀಡಲಾಗಿತ್ತು. ಈ ಬಗ್ಗೆ ಮಾಹಿತಿ ತಿಳಿದ ದೇವಯ್ಯ ಹಾಗೂ […]
ಚೆಟ್ಟಳ್ಳಿ ಕಾಫಿ ಸಂಶೋಧನಾ ಉಪಕೇಂದ್ರದಲ್ಲಿ ಉದ್ಯೋಗಾವಕಾಶ – ಇಲ್ಲಿದೆ ನೋಡಿ ಮಾಹಿತಿ

ಚೆಟ್ಟಳ್ಳಿ ಕಾಫಿ ಬೋರ್ಡ್ನಲ್ಲಿ ಉದ್ಯೋಗ ಪಡೆಯಲು ಇಲ್ಲಿದೆ ಸುವರ್ಣವಕಾಶ; ಪದವೀಧರರು ಅರ್ಹರು * ಕೊಡಗು ಜಿಲ್ಲೆಯ ಚೆಟ್ಟಳ್ಳಿಯಲ್ಲಿ ಕಾಫಿ ಬೋರ್ಡ್ ಗೆ ಯುವ ವೃತ್ತಿಪರ ಹುದ್ದೆಗೆ ನೇರ ಸಂದರ್ಶನದ ಮೂಲಕ ಅರ್ಹ ಎಂ.ಎಸ್ಸಿ ಪದವೀಧರರನ್ನು ಆಹ್ವಾನಿಸಲಾಗಿದೆ. ಮಾಸಿಕ 21,000 ರೂ. ಸಂಬಳದ ಈ ಅವಕಾಶ, ಕರ್ನಾಟಕದಲ್ಲಿ ಉದ್ಯೋಗ ಹುಡುಕುತ್ತಿರುವವರಿಗೆ ಸೂಕ್ತವಾಗಿದೆ. ವಯಸ್ಸಿನ ಮಿತಿ 18-35 ವರ್ಷ ಎಂದು ನಿಗದಿಪಡಿಸಲಾಗಿದೆ. ಆಸಕ್ತ ಅರ್ಹ .ಎಸ್ಸಿ ಪದವೀಧರರು ಅಕ್ಟೋಬರ್ 08 ರಂದು ನಡೆಯುವ ಸಂದರ್ಶನದಲ್ಲಿ ಭಾಗವಹಿಸಬಹುದು. ಕೊಡಗು ಜಿಲ್ಲೆಯ ಚೆಟ್ಟಳ್ಳಿಯಲ್ಲಿರುವ […]
ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಅಂತಾರಾಷ್ಟ್ರೀಯ ಕಾಫಿ ದಿನಾಚರಣೆ

ಮಡಿಕೇರಿ : ಕೊಡಗು ಮಹಿಳಾ ಕಾಫಿ ಜಾಗೃತಿ ಸಂಸ್ಥೆ (Coorg Women Coffee Awareness Body – CWCAB) ವತಿಯಿಂದ ಅಂತಾರಾಷ್ಟ್ರೀಯ ಕಾಫಿ ದಿನವನ್ನು ಮಡಿಕೇರಿಯಲ್ಲಿರುವ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (KOIMS)ಬೋಧಕ ಆಸ್ಪತ್ರೆಯ ಸಭಾಂಗಣದಲ್ಲಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಕಾಫಿ ಉತ್ಪಾದನೆ ಹೆಚ್ಚಿಸುವ ಗುರಿ ಹಾಗೂ ಆರೋಗ್ಯದ ದೃಷ್ಟಿಯಿಂದ ಕಾಫಿ ಸೇವನೆಯ ಮಹತ್ವದ ಬಗ್ಗೆ ಗಣ್ಯರು ಮಾತನಾಡಿದರು. ಮುಖ್ಯ ಭಾಷಣ ಮಾಡಿದ ಕೂರ್ಗ್ ಪ್ಲಾಂಟರ್ಸ್ ಅಸೋಸಿಯೇಷನ್ (CPA)ನ ಮಾಜಿ ಅಧ್ಯಕ್ಷ ಎನ್.ಎ. ಅಪ್ಪಯ್ಯ, ಭಾರತೀಯ ಕಾಫಿಯನ್ನು […]
ಮಡಿಕೇರಿ ದಸರಾ ಶೋಭಾಯಾತ್ರೆ – ಅಂತಿಮ ಸಿದ್ಧತೆ ಪರಿಶೀಲಿಸಿದ ಶಾಸಕ ಮಂತರ್ ಗೌಡ

ಮಡಿಕೇರಿ : ಐತಿಹಾಸಿಕ ಮಡಿಕೇರಿ ದಸರಾ ಉತ್ಸವದ ಪ್ರಮುಖ ಆಕರ್ಷಣೆ ದಶಮಂಟಮಗಳ ಶೋಭಾಯಾತ್ರೆ ಹಿನ್ನೆಲೆಯಲ್ಲಿ ಮಡಿಕೇರಿ ನಗರದಾದ್ಯಂತ ಕೈಗೊಂಡಿರುವ ಕ್ರಮಗಳ ಬಗ್ಗೆ ಶಾಸಕ ಡಾ. ಮಂತರ್ ಗೌಡ ಪರಿಶೀಲನೆ ನಡೆಸಿದರು. ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರ ಜೊತೆ ವಿವಿಧ ಪ್ರದೇಶಗಳಿಗೆ ತೆರಳಿ ವಾಹನ ನಿಲುಗಡೆ ವ್ಯವಸ್ಥೆ, ಸುಗಮ ಸಂಚಾರ ವ್ಯವಸ್ಥೆ ಹಾಗೂ ಕೈಗೊಳ್ಳಬೇಕಾದ ಅಗತ್ಯ ಕ್ರಮಗಳ ಬಗ್ಗೆ ಮಾಹಿತಿ ಪಡೆದರು.
NSS ವಿದ್ಯಾರ್ಥಿಗಳಿಂದ ಜಾಗೃತಿ ಕಾರ್ಯಕ್ರಮ

ವಿರಾಜಪೇಟೆ : ರಾಜ್ಯ ಸರ್ಕಾರವು ರಾಜ್ಯಾದ್ಯಂತ ಸಾಮಾಜಿಕ ಹಾಗೂ ಶೈಕ್ಷಣಿಕ ಗಣತಿಯನ್ನು ಮಾಡುತ್ತಿದ್ದು, ವಿರಾಜಪೇಟೆಯ ಸೆಂಟ್ ಆನ್ಸ್ ಪದವಿ ಕಾಲೇಜಿನ ಎನ್ ಎಸ್ ಎಸ್ ಘಟಕದ ಸ್ವಯಂ ಸೇವಕರು ಗಣತಿಯ ಕುರಿತು ಸಾರ್ವಜನಿಕರಲ್ಲಿ ಜಾಗೃತಿಯನ್ನು ಮೂಡಿಸಿದರು. ವಿರಾಜಪೇಟೆಯ ಪುರಸಭಾ ವ್ಯಾಪ್ತಿಯ ಚರ್ಚ್ ಸ್ಟ್ರೀಟ್, ಜನರಲ್ ತಿಮ್ಮಯ್ಯ ಬಡಾವಣೆ, ಹಾಗೂ ಅಪ್ಪಯ್ಯ ಸ್ವಾಮಿ ರಸ್ತೆಯ ಮನೆಗಳಿಗೆ ತೆರಳಿ ವಿದ್ಯಾರ್ಥಿಗಳು ಸಾರ್ವಜನಿಕರಲ್ಲಿ ಗಣತಿಯ ಕುರಿತು ಜಾಗೃತಿಯನ್ನು ಮೂಡಿಸಿದರು. ಎನ್ಎಸ್ಎಸ್ ಸ್ವಯಂಸೇವಕರು ವಿವಿಧ ಗುಂಪುಗಳಾಗಿ ವಿಂಗಡಿಸಿ ಪ್ರತ್ಯೇಕವಾಗಿ ಮನೆಮನೆಗಳಿಗೆ ತೆರಳಿ ಜಾಗೃತಿಯನ್ನು […]
ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಪ್ರತಿಯೊಬ್ಬರೂ ಪಾಲ್ಗೊಳ್ಳಿ: ಎ.ಎಸ್.ಪೊನ್ನಣ್ಣ

ಸರ್ಕಾರದಿಂದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಯುತ್ತಿದ್ದು, ಹಿಂದುಳಿದ ವರ್ಗಗಳಿಗೆ ಸಾಮಾಜಿಕ ನ್ಯಾಯ, ಮೀಸಲಾತಿ ಹಾಗೂ ಸರ್ಕಾರದ ಕಾರ್ಯಕ್ರಮ ರೂಪಿಸಲು ಈ ಸಮೀಕ್ಷೆ ನಡೆಸಲಾಗುತ್ತಿದೆ. ಆ ದಿಸೆಯಲ್ಲಿ ಸಮೀಕ್ಷೆಯಲ್ಲಿ ಎಲ್ಲರೂ ಪಾಲ್ಗೊಳ್ಳುವಂತೆ ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಮನವಿ ಮಾಡಿದ್ದಾರೆ. ನಗರದ ಸುದರ್ಶನ ಅತಿಥಿ ಗೃಹದಲ್ಲಿ ಸೋಮವಾರ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಶಾಸಕರು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಸಂಬಂಧಿಸಿದಂತೆ ಅಪಪ್ರಚಾರ ಮಾಡುತ್ತಿದ್ದು, ರಾಜಕೀಯ ಪ್ರೇರಿತವಾಗಿದೆ ಎಂದರು. […]
ಜಾನಪದ ಸಂಸ್ಕೃತಿ, ಕಲೆ ಉಳಿಸಿ ಬೆಳೆಸಿ: ಎ.ಎಎಸ್.ಪೊನ್ನಣ್ಣ

ಮಡಿಕೇರಿ ದಸರಾಗೆ ತನ್ನದೇ ಆದ ಇತಿಹಾಸವಿದ್ದು, ಆ ನಿಟ್ಟಿನಲ್ಲಿ ದಸರಾ ಸಂಸ್ಕøತಿ ಮತ್ತು ಜಾನಪದವನ್ನು ಉಳಿಸಿ ಬೆಳೆಸಿಕೊಂಡು ಹೋಗುವಂತಾಗಬೇಕು ಎಂದು ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ..ಎಸ್.ಪೊನ್ನಣ್ಣ ಅವರು ತಿಳಿಸಿದ್ದಾರೆ. ಮಳೆಯ ನಡುವೆಯೂ ದಸರಾಗೆ ಉತ್ತಮ ಪ್ರತಿಕ್ರಿಯೆ ದೊರೆತಿದೆ. ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿರುವುದೇ ಸಾಕ್ಷಿಯಾಗಿದೆ ಎಂದು ನುಡಿದರು. ನಾಡಹಬ್ಬ ಮಡಿಕೇರಿ ಮತ್ತು ಗೋಣಿಕೊಪ್ಪದಲ್ಲಿ ದಸರಾಗೆ ಹೆಚ್ಚಿನ ಸ್ಪಂದನೆ ದೊರೆತಿರುವುದು ಮೆಚ್ಚುವಂತದ್ದು ಎಂದು ಎ.ಎಸ್.ಪೊನ್ನಣ್ಣ ಅವರು ಹೇಳಿದರು. ಸಾಂಸ್ಕøತಿಕ ಹಿನ್ನೆಲೆ ಇರುವ ತಮ್ಮದೇ ಆಚರಣೆ […]
ತ್ರಿನೇತ್ರ ವಾಹನ ಮಾಲೀಕರ ಸಂಘದ ವತಿಯಿಂದ 32ನೇ ವರ್ಷದ ಆಯುಧ ಪೂಜೆ ಕಾರ್ಯಕ್ರಮ

ಮೂರ್ನಾಡು : ತ್ರಿನೇತ್ರ ವಾಹನ ಮಾಲೀಕರ ಹಾಗೂ ಚಾಲಕರ ಸಂಘದ ವತಿಯಿಂದ 32ನೇ ವರ್ಷದ ಆಯುಧ ಪೂಜೆ ಕಾರ್ಯಕ್ರಮ ಅ.01ರಂದು ಸರ್ಕಾರಿ ಪ್ರೌಢಶಾಲೆ ಮೈದಾನ(ನಾಡ್‌ಮಂದ್)ದಲ್ಲಿ ನಡೆಯಲಿದೆ. ಅಂದು ಸಂಜೆ 06 ಗಂಟೆಗೆ ಸಂಘದ ಅಧ್ಯಕ್ಷ ಕರವಂಡ ಸಜನ್ ಗಣಪತಿ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಲಿದೆ. ಮುಖ್ಯ ಅತಿಥಿಗಳಾಗಿ ಕಾಂತೂರು ಮೂರ್ನಾಡು ಗ್ರಾಮ ಪಂಚಾಯಿತಿ ಅಧ್ಯಕ್ಷ ಬಿ.ಎಸ್. ಕುಶನ್ ರೈ, ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯ ನಿರೀಕ್ಷಕ ಚಂದ್ರಶೇಖರ್, ಗ್ರಾಮ ಆಡಳಿತಾಧಿಕಾರಿ ಅಕ್ಷತಾ ಶೆಟ್ಟಿ, ಪಿಡಿಒ ಚಂದ್ರಮೌಳಿ, ವಕೀಲ ಬಿ.ಎ. […]
ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಉದ್ದೇಶವೇನು ಗೊತ್ತಾ..?

ಕರ್ನಾಟಕ ಸರ್ಕಾರವು ವಿವಿಧ ಜಾತಿಗಳ, ವಿಶೇಷವಾಗಿ ಹಿಂದುಳಿದ ಮತ್ತು ಅಳಿವಿನ ಅಂಚಿನಲ್ಲಿರುವ ಸಮುದಾಯಗಳ ಸಾಮಾಜಿಕ ಮತ್ತು ಶೈಕ್ಷಣಿಕ ದತ್ತಾಂಶವನ್ನು ಸಂಗ್ರಹಿಸಲು ಈ ಸಮೀಕ್ಷೆಯನ್ನು ಸೆಪ್ಟೆಂಬರ್ ತಿಂಗಳ 22 ರಿಂದ ಮುಂದಿನ ಅಕ್ಟೋಬರ್ ತಿಂಗಳ 7ರವರೆಗೆ ನಡೆಸುತ್ತಿದೆ. ಈ ಸಮೀಕ್ಷೆಯು ಈ ಕೆಳಗಿನ ವಿಷಯಗಳಿಗೆ ಸಂಬಂಧಿಸಿದಂತೆ ನೀತಿ ನಿರೂಪಣೆ ರೂಪಿಸಲು ಪ್ರಮುಖ ಪಾತ್ರ ವಹಿಸುತ್ತದೆ. ಉತ್ತಮ ನೀತಿ ಯೋಜನೆ: ಈ ಸಮೀಕ್ಷೆಯು ವಿಭಿನ್ನ ಜಾತಿಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಬಗ್ಗೆ ಒಳನೋಟವನ್ನು ಸರಕಾರಕ್ಕೆ ಒದಗಿಸುತ್ತದೆ. ಇದರಿಂದ ಸರ್ಕಾರವು […]
ವಿರಾಜಪೇಟೆಯ ಲಾವಣ್ಯಗೆ ಕಲಾನಿಧಿ ರಾಷ್ಟ್ರೀಯ ಪ್ರಶಸ್ತಿ

ವಿರಾಜಪೇಟೆ: ವಿರಾಜಪೇಟೆಯ ಭರತನಾಟ್ಯ ಕಲಾವಿದೆ ಬಿ. ಎನ್. ಲಾವಣ್ಯ ಬೋರ್ಕಾರ್ಗೆ ಕಲಾನಿಧಿ ರಾಷ್ಟ್ರೀಯ ಪ್ರಶಸ್ತಿ ಲಭಿಸಿದೆ. ವಿರಾಜಪೇಟೆಯ ನಾಟ್ಯ ಮಯೂರಿ ನೃತ್ಯ ಟ್ರಸ್ಟ್ (ರಿ ) ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಕಾರದಲ್ಲಿ ಶಿಕ್ಷಕರ ದಿನಾಚರಣೆಯ ಅಂಗವಾಗಿ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದ ನಯನ ಸಭಾಂಗಣದಲ್ಲಿ ಜರುಗಿದ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಲಾವಣ್ಯ ರವರ ಭರತನಾಟ್ಯದಲ್ಲಿನ ಸಾಧನೆಯನ್ನು ಗುರುತಿಸಿ ಈ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಕರ್ನಾಟಕ ಸಾವಿತ್ರಿ ಬಾಯಿ ಪುಲೆ ಶಿಕ್ಷಕಿಯರ ಸಂಘದ ಸಂಸ್ಥಾಪಕ […]