ಶಿವರಾತ್ರಿ ಪ್ರಯುಕ್ತ ಮುತ್ತಪ್ಪ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಹೋಮ

ವೀರಾಜಪೇಟೆ : ವೀರಾಜಪೇಟೆಯ ಮುತ್ತಪ್ಪ ಮಲಯಾಳಿ ಸಮಾಜದ ವತಿಯಿಂದ ಮಹಾ ಶಿವರಾತ್ರಿಯ ಅಂಗವಾಗಿ ಮೀನುಪೇಟೆಯ ಚೈತನ್ಯ ಮಡಪ್ಪುರ ಶ್ರೀ ಮುತ್ತಪ್ಪ ದೇವಸ್ಥಾನದ ಆವರಣದಲ್ಲಿರುವ ಶ್ರೀ ಮುತ್ತಪ್ಪ ಕಲಾ ಮಂಟಪದಲ್ಲಿ ಮಹಾ ಮೃತ್ಯುಂಜಯ ಹೋಮ ಹಮ್ಮಿಕೊಳ್ಳಲಾಗಿದೆ. ಪೂಜೆಗೆ ಬರುವಾಗ ಎರಡು ಬಾಳೆ ಎಲೆ, ಹೂವು ಹಾಗೂ ದೀಪ ತರಬೇಕು. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸೇರಿ ದೇವರ ಕೃಪೆಗೆ ಪಾತ್ರರಾಗಬೇಕು ಎಂದು ಮುತ್ತಪ್ಪ ಮಲಯಾಳಿ ಸಂಘದ ಅಧ್ಯಕ್ಷ ಸುಮೇಶ್ ಪಿ.ಜಿ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ
ಪಯ್ಯವೂರು ಶಿವ ದೇವಾಲಯದಲ್ಲಿ ಊಟ್ ಮಹೋತ್ಸವ – ಬೊವ್ವೇರಿಯಂಡ, ಮುಂಡಿಯೋಳಂಡ ಕುಟುಂಬಸ್ಥರು ಭಾಗಿ

ವೀರಾಜಪೇಟೆ : ಕೊಡಗು ನಿವಾಸಿಗಳು ಮತ್ತು ಮಲಯಾಳಿಗಳು ಜಂಟಿಯಾಗಿ ಕೇರಳದ ಪಯ್ಯಾವೂರಿನ ಶಿವ ದೇವಾಲಯದಲ್ಲಿ ಆಚರಿಸುವ ಹದಿಮೂರು ದಿನಗಳ ಪಯ್ಯವೂರು ಶಿವ ದೇವಾಲಯದ ಊಟ್‍ಮಹೋತ್ಸವವು ಕೊಡಗಿನಿಂದ ಮುಂಡಿಯೋಳಂಡ ಹಾಗೂ ಬೋವ್ವೇರಿಯಂಡ ಕುಟುಂಬಸ್ಥರ ಎತ್ತು ಪೋರಾಟ್‍ನೊಂದಿಗೆ ತೆರಳಿ ಅಕ್ಕಿ ಅಳೆಯುವ ಶಾಸ್ತ್ರದೊಂದಿಗೆ ಪ್ರಾರಂಭವಾಯಿತು. ಪಟ್ಟಣದ ಪಳಸ್ಸಿ ಭಗವತಿ ದೇವಸ್ಥಾನದ ಆವರಣಕ್ಕೆ ಆಗಮಿಸಿದ ಕೊಡವರನ್ನು ಪಯ್ಯಾವೂರು ದೇವಸ್ವಂ ಕಾರ್ಯನಿರ್ವಾಹಕ ಅಧಿಕಾರಿ ಸಿ.ವಿ. ಅನೀಶ್, ವಿಶ್ವಸ್ಥ ಮಂಡಳಿ ಸದಸ್ಯ ಕೆ.ವಿ. ಉತ್ತಮರಾಜನ್, ಮತ್ತು ಆಚರಣೆ ಸಮಿತಿಯ ಪದಾಧಿಕಾರಿಗಳಾದ ಪಿ.ಸುಂದರನ್, ಫಲ್ಗುಣನ್ ಮೆಳೇದತ್, […]
ಮಡಿಕೇರಿ ಪೊಲೀಸ್ ಪೇದೆ ಸಂದೀಪ್ ನಿಧನ

ಮಡಿಕೇರಿಯಲ್ಲಿ ಪೊಲೀಸ್ ಕಾನ್ಸ್ಟೇಬಲ್ ಆಗಿ ಸೇವೆ ಸಲ್ಲಿಸುತ್ತಿದ್ದ ಸಂದೀಪ್ ರೈ (42) ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಂದರ್ಭದಲ್ಲಿ ಮಂಗಳವಾರ ನಿಧನರಾಗಿದ್ದಾರೆ. ಮೂಲತಃ ಮಡಿಕೇರಿಯವರಾದ ಇವರು ಕಳೆದ ವಾರ ಅಸ್ವಸ್ಥಗೊಂಡಿದ್ದರು. ಹೀಗಾಗಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ. ಮೃತ ಸಂದೀಪ್ ಅವರು ಇಲಾಖೆಯಲ್ಲಿ ಕರ್ತವ್ಯನಿಷ್ಠೆ, ಶಿಸ್ತು ಹಾಗೂ ಜನಸ್ನೇಹಿ ವ್ಯಕ್ತಿತ್ವದ ಮೂಲಕ ಎಲ್ಲರ ಗೌರವಕ್ಕೆ ಪಾತ್ರರಾಗಿದ್ದರು.
Power Cut: ನಾಳೆ ಕೊಡಗಿನ ಈ ಈ ಎಲ್ಲಾ ಪ್ರದೇಶಗಳಲ್ಲಿ ಇರಲ್ಲ ಕರೆಂಟ್!

ವಿದ್ಯುತ್ ವಿತರಣಾ ಉಪ ಕೇಂದ್ರದಲ್ಲಿ ನಾಲ್ಕನೇ ತ್ರೈಮಾಸಿಕ ನಿರ್ವಹಣೆಯನ್ನು ಕೈಗೆತ್ತಿಕೊಂಡಿರುವುದರಿಂದ ಫೆಬ್ರವರಿ, 12 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಕುಶಾಲನಗರ ಟೌನ್, ನಂಜರಾಯಪಟ್ಟಣ, ಗುಡ್ಡೆಹೊಸೂರು, ಹೆಬ್ಬಾಲೆ, ಕಣಿವೆ, ಮಲ್ಲೇನಹಳ್ಳಿ, ಭುವನಗಿರಿ, ಇಂಡಸ್ಟ್ರಿಯಲ್ ಏರಿಯಾ, ಕೂಡಿಗೆ, ಕೂಡುಮಂಗಳೂರು, ಶಿರಂಗಾಲ, ಕಾನ್ ಬೈಲು, ಅಂದಗೋವೆ, ನಾಕೂರು, ಹಾದ್ರೆ ಹೊರೂರು, ಹಟ್ಟಿಹೊಳೆ, ಗರ್ವಾಲೆ, ಗರಗಂದೂರು, ಕಾಂಡನಕೊಲ್ಲಿ, ಕುಂಬೂರು, ಮಾದಾಪುರ, ಪನ್ಯ, ಚೆಟ್ಟಳ್ಳಿ, ನೆಲ್ಲಿಹುದಿಕೇರಿ, ಅಭ್ಯತ್‍ಮಂಗಲ, ನಾಕೂರು ಶಿರಂಗಾಲ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಮಡಿಕೇರಿ […]
ಕೊಡಗಿನಲ್ಲಿ ಶೀಘ್ರದಲ್ಲೇ ಮೆಗಾ ಪಾಸ್‌ಪೋರ್ಟ್ ಮೇಳ – ಸಂಸದ ಯದುವೀರ್

ನವದೆಹಲಿ : ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್ಪೋರ್ಟ್ ಸೇವಾ ಕೇಂದ್ರ ಆರಂಭಿಸುವಂತೆ ಕೇಂದ್ರ ವಿದೇಶಾಂಗ ಸಚಿವರಿಗೆ ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಮನವಿ ಮಾಡಿದ್ದಾರೆ. ಸಾಂಸ್ಕೃತಿಕ ನಗರಿ ಮೈಸೂರು ಈಗ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ನಗರವಾಗಿ ಹೊರಹೊಮ್ಮುತ್ತಿದೆ. ಇಲ್ಲಿಂದ ದೇಶ-ವಿದೇಶಗಳಿಗೆ ತೆರಳುವವರ ಸಂಖ್ಯೆಯೂ ಹೆಚ್ಚಾಗಿದೆ. ಈ ನಿಟ್ಟಿನಲ್ಲಿ ಮೈಸೂರಿನಲ್ಲಿ ಈಗಿರುವ ಪಾಸ್ಪೋರ್ಟ್ ಸೇವಾ ಕೇಂದ್ರವನ್ನು ತತ್ಕಾಲ್ ಸೇವೆಯನ್ನೂ ಒಳಗೊಂಡಂತೆ ಪೂರ್ಣ ಪ್ರಮಾಣದ ಕೇಂದ್ರವನ್ನಾಗಿ ಮೇರ್ಲರ್ಜೆಗೇರಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ. ಮೈಸೂರಿನಲ್ಲಿರುವ ಅಂಚೆ ಕಚೇರಿ ಪಾಸ್ಪೋರ್ಟ್ […]
ಪೊಮ್ಮಕ್ಕಡ ಕೂಟದಿಂದ ಚೇರಂಬಾಣೆಯಲ್ಲಿ ಗೃಹಬಳಕೆ ವಸ್ತುಗಳ ತಯಾರಿ ಕಾರ್ಯಾಗಾರ

ಚೇರಂಬಾಣೆ : ಮಹಿಳೆಯರು ದಿನಬಳಕೆ ವಸ್ತುಗಳ ತಯಾರಿಯಲ್ಲಿ ತೊಡಗಿಸಿಕೊಳ್ಳುವುದರ ಮೂಲಕ ಸ್ವಾವಲಂಬಿಯಾಗಬೇಕು ಎಂದು ಪೊಮ್ಮಕ್ಕಡ ಕೂಟದ ಅಧ್ಯಕ್ಷೆ ಬಡ್ಡಿರ ನಳಿನಿ ಪೂವಯ್ಯ ಹೇಳಿದರು. ಚೇರಂಬಾಣೆ ಬೇಂಗ್‌ನಾಡು ಕೊಡವ ಸಮಾಜದಲ್ಲಿ ಮೊಮ್ಮಕ್ಕಡ ಕೂಟ ಮಹಿಳೆಯರಿಗಾಗಿ ಆಯೋಜಿಸಿದ್ದ ಗೃಹ ಬಳಕೆ ವಸ್ತುಗಳ ತಯಾರಿ ಕಾರ್ಯಗಾರದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವಿವಿಧ ಸಂಸ್ಥೆಗಳು ಮಹಿಳೆಯರ ಅಭಿವೃದ್ಧಿಗಾಗಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುತ್ತಿವೆ ಮಹಿಳೆಯರು ಆ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವುದರ ಮೂಲಕ ಆರ್ಥಿಕವಾಗಿ ಸ ಬಲರಾಗಬೇಕು ಎಂದರು. ಪ್ರಾತ್ಯಕ್ಷಿಕೆಯಲ್ಲಿ ಬಾಳೆದಿಂಡು, ನಿಂಬೆಹಣ್ಣು, ಕಾಳುಮೆಣಸು, ಶುಂಠಿ, ಕ್ಯಾರೆಟ್, […]
ಮೂರ್ನಾಡು ಸರ್ಕಾರಿ ಶಾಲೆಯಲ್ಲಿ ಪರಿಸರ ಜಾಗೃತಿ ಭಾಷಣ ಸ್ಪರ್ಧೆ

ಮೂರ್ನಾಡು : ಕ್ಲೀನ್ ಕೂರ್ಗ್ ಇನಿಶಿಯೇಟಿವ್ ಸದಸ್ಯರು ಹಾಗೂ ಮೂರ್ನಾಡು ಮಾರುತಿ ಶಾಲೆ ವಿದ್ಯಾರ್ಥಿಗಳು ಮೂರ್ನಾಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪರಿಸರ ಜಾಗೃತಿ ಭಾಷಣ ಸ್ಪರ್ಧೆ ಏರ್ಪಡಿಸಿದ್ದರು. ಬಡವಂಡ ಅರುಣ್ ಅಪ್ಪಚ್ಚು ನೇತೃತ್ವದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪರಿಸರ ಜಾಗೃತಿ ಭಾಷಣ ಸ್ಪರ್ಧೆ, ಪರಿಸರ ಮತ್ತು ಸ್ವಚ್ಛತೆಯ ಬಗ್ಗೆ ತಿಳಿ ಹೇಳುವ ಚಿತ್ರವನ್ನು ಶಾಲೆಯ ಗೋಡೆ ಮೇಲೆ ಚಿತ್ರೀಕರಿಸಲಾಯಿತು. ಸ್ಪರ್ಧೆಯ ವಿಜೇತರಿಗೆ ಗಣ್ಯರು ಬಹುಮಾನ ವಿತರಿಸಿ ಶುಭ ಹಾರೈಸಿದರು. ಶಾಲೆಯ ಮುಖ್ಯ ಶಿಕ್ಷಕಿ ಪ್ರೇಮಕುಮಾರಿ, ಶಿಕ್ಷಕ ವೃಂದ […]
ನಾಳೆ ಭಾರತ್ ಬಂದ್: ಶಾಲಾ-ಕಾಲೇಜುಗಳು ರಜೆ ಇರುತ್ತಾ? ಏನಿರುತ್ತೆ? ಏನಿರಲ್ಲ?

ಕೇಂದ್ರ ಸರ್ಕಾರದ ಹೊಸ ಕಾರ್ಮಿಕ ಸಂಹಿತೆಗಳು ಮತ್ತು ಭಾರತ-ಯುಎಸ್ ವ್ಯಾಪಾರ ಒಪ್ಪಂದವನ್ನು ವಿರೋಧಿಸಿ ವಿವಿಧ ಕಾರ್ಮಿಕ ಸಂಘಗಳು ಹಾಗೂ ರೈತ ಸಂಘಟನೆಗಳು ಫೆಬ್ರವರಿ 12ರಂದು (ನಾಳೆ) ದೇಶಾದ್ಯಂತ ಭಾರತ್ ಬಂದ್ಗೆ ಕರೆ ನೀಡಿವೆ. ಈ ರಾಷ್ಟ್ರವ್ಯಾಪಿ ಮುಷ್ಕರದ ಹಿನ್ನೆಲೆಯಲ್ಲಿ ಸಾರ್ವಜನಿಕ ವಲಯದ ಬ್ಯಾಂಕುಗಳು, ಸರ್ಕಾರಿ ಕಚೇರಿಗಳು, ಸಾರಿಗೆ ಸೇವೆಗಳು ಹಾಗೂ ಮಾರುಕಟ್ಟೆಗಳ ಕಾರ್ಯನಿರ್ವಹಣೆಯಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆಯಿದೆ. ಸ್ಥಳೀಯ ಪರಿಸ್ಥಿತಿಗಳನ್ನು ಅವಲಂಬಿಸಿ ಅಡಚಣೆಗಳು ಹೆಚ್ಚು-ಕಡಿಮೆಯಾಗಬಹುದು. ತುರ್ತು ಸೇವೆಗಳು ಸಾಮಾನ್ಯವಾಗಿ ಕಾರ್ಯನಿರ್ವಹಿಸುವ ನಿರೀಕ್ಷೆ ಇದೆ. ಮುಷ್ಕರದ ಕಾರಣ: ಕಳೆದ […]
ಕುಪ್ಪೋಡಂಡ ಎ. ರಫೀಕ್ ಡಿಟೆಕ್ಟಿವ್ ಪೊಲೀಸ್ ಇನ್ಸ್ಪೆಕ್ಟರ್ ಆಗಿ ಬಡ್ತಿ

ಪೊನ್ನಂಪೇಟೆ: ಕೊಡಗು ಮೂಲದ ಕುಪ್ಪೋಡಂಡ ಎ. ರಫೀಕ್ ಅವರು ರಾಜ್ಯ ಪೊಲೀಸ್ ಇಲಾಖೆಯ ಅಧೀನದ ಡಿಟೆಕ್ಟಿವ್ ಪೊಲೀಸ್ ಇನ್ಸ್ಪೆಕ್ಟರ್ (ಡಿ.ಪಿ.ಐ.) ಆಗಿ ಮುಂಬಡ್ತಿ ಹೊಂದಿದ್ದಾರೆ. ಇದುವರೆಗೂ ಬೆಂಗಳೂರಿನ ಸಿಐಡಿ ಘಟಕದಲ್ಲಿ ಡಿಟೆಕ್ಟಿವ್ ಸಬ್ ಇನ್ಸ್ಪೆಕ್ಟರ್ (ಡಿ.ಎಸ್.ಐ.) ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಕುಪ್ಪೋಡಂಡ ಎ. ರಫೀಕ್ ಅವರಿಗೆ ಪೊಲೀಸ್ ಇನ್ಸ್ಪೆಕ್ಟರ್ ಆಗಿ ಮುಂಬಡ್ತಿ ನೀಡಿ ಸಿಐಡಿ ಘಟಕದಲ್ಲೇ ಮುಂದುವರಿಸಲಾಗಿದೆ. ಈ ಕುರಿತು ರಾಜ್ಯ ಪೊಲೀಸ್ ಮಹಾನಿರ್ದೇಶಕರ ಅನುಮೋದನೆಯೊಂದಿಗೆ ರಾಜ್ಯ ಪೊಲೀಸ್ ಪ್ರಧಾನ ಕಚೇರಿಯ ಆಡಿಷನಲ್ ಡೈರೆಕ್ಟರ್ ಜನರಲ್ ಆಫ್ […]
05 ವರ್ಷದಿಂದ ಕಳುವಾಗಿದ್ದ 104 ಮೊಬೈಲ್ ಫೋನ್‌ಗಳು ಒಂದೇ ತಿಂಗಳಲ್ಲಿ ಪತ್ತೆ..! – ಕೊಡಗು ಎಸ್ಪಿ ಹೇಳಿದ್ದೇನು..?

ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ಕಳೆದ 5 ವರ್ಷಗಳಲ್ಲಿ ಕಳುವಾಗಿದ್ದ 104 ಮೊಬೈಲ್ ಫೋನ್‌ಗಳನ್ನು ಜಿಲ್ಲಾ ಪೊಲೀಸರು ಪತ್ತೆ ಹಚ್ಚಿದ್ದಾರೆ. 2001ರಿಂದ ಈಚೆಗೆ ಕಳುವಾಗಿದ್ದ ಮೊಬೈಲ್ ಫೋನ್‌ಗಳ ಪತ್ತೆಗೆ ಒಂದು ತಿಂಗಳ ಹಿಂದೆ ಕಾರ್ಯಾಚರಣೆ ಆರಂಭಿಸಿದ್ದರು. ಕಳುವಾದ ಫೋನ್‌ಗಳು ಕರ್ನಾಟಕ ಮಾತ್ರವಲ್ಲದೆ ಕೇರಳ, ತಮಿಳುನಾಡು ರಾಜ್ಯದಲ್ಲಿಯೂ ಪತ್ತೆಯಾಗಿದೆ. ಅಂದಾಜು 11 ಲಕ್ಷ ರೂ. ಮೌಲ್ಯದ 104 ಮೊಬೈಲ್ ಫೋನ್‌ಗಳನ್ನು ಕಾರ್ಯಾಚರಣೆಗಿಳಿದಿದ್ದ ತಂಡ ವಶಪಡಿಸಿಕೊಂಡಿದೆ. ಇಂದು ಜಿಲ್ಲಾ ಎಸ್ಪಿ ಕಚೇರಿಯಲ್ಲಿ ಅವುಗಳನ್ನು ಮಾಲೀಕರಿಗೆ ಹಿಂತಿರುಗಿಸಲಾಯಿತು. ಈ ಬಗ್ಗೆ ಮಾಹಿತಿ […]