ಗಬ್ಬದ ಹಸು ಹತ್ಯೆ – ಮೂವರ ಸದಸ್ಯತ್ವ ರದ್ದುಪಡಿಸಿದ ಜಮಾಅತ್ – ವಹಿವಾಟು ನಡೆಸದಂತೆ ಇತರೆ ಸದಸ್ಯರಿಗೆ ಎಚ್ಚರಿಕೆ..!

ಮಡಿಕೇರಿ : ವಿರಾಜಪೇಟೆ ಬಳಿಯ ಮೈತಾಡಿ ಗ್ರಾಮದಲ್ಲಿ ಗಬ್ಬದ ಹಸು ಹತ್ಯೆಗೈದ ಪ್ರಕರಣ ಸಂಬಂಧ ಬಂಧಿತರಾಗಿರುವ ಮೂವರನ್ನು ಕೊಂಡಂಗೇರಿ ಜಮಾ-ಅತ್ ಸದಸ್ಯತ್ವದಿಂದ ಹೊರಹಾಕಲಾಗಿದೆ. ಕೊಂಡಂಗೇರಿ ನಿವಾಸಿಗಳಾದ ಮೊಹಮ್ಮದ್ ಆಶಿಕ್(22), ಶಾಹಿದ್(25), ಹ್ಯಾರೀಸ್ (34) ಗೋಹತ್ಯೆ ಕೇಸ್‌ನಲ್ಲಿ ಬಂಧನಕ್ಕೊಳಗಾಗಿದ್ದಾರೆ. ಈ ಬೆಳವಣಿಗೆ ಬಳಿಕ ಪ್ರಕಟಣೆ ಹೊರಡಿಸಿರುವ ಸುನ್ನಿ ಮುಸ್ಲಿಂ ಜಮಾಅತ್, ಇವರು ಶರೀಅರ್‌ಗೆ ವಿರುದ್ಧವಾದ ಚಟುವಟಿಕೆಯಲ್ಲಿ ಭಾಗಿಯಾಗಿದ್ದಾರೆ. ಇವರೊಂದಿಗೆ ಜಮಾಅತ್‌ನ ಸದಸ್ಯರು ಯಾವುದೇ ಚಟುವಟಿಕೆ ನಡೆಸುಂತಿಲ್ಲ. ಯಾರಾದರು ಈ ಮೂವರೊಂದಿಗೆ ಗುರುತಿಸಿಕೊಂಡಲ್ಲ, ಯಾವುದೇ ವಹಿವಾಟು ನಡೆಸಿದಲ್ಲಿ, ಅಂಥವರ ವಿರುದ್ಧವೂ […]
ಬಿಜೆಪಿ ಮುಖಂಡ ಕೆದಂಬಾಡಿ ಎಸ್.ಪ್ರಕಾಶ್ ನಿಧನ

ಮಡಿಕೇರಿ : ಬಿಜೆಪಿಯ ಹಿರಿಯ ಮುಖಂಡ ಕೆದಂಬಾಡಿ ಎಸ್.ಪ್ರಕಾಶ್(76) ನಿಧನರಾಗಿದ್ದಾರೆ. ಮೃತರಿಗೆ ಪತ್ನಿ, ಓರ್ವ ಪುತ್ರಿ ಇದ್ದಾರೆ. ಅಂತ್ಯಕ್ರಿಯೆ ನಾಳೆ ನಡೆಯಲಿದೆ. ಇವರು ನಗರ ಬಿಜೆಪಿ ಅಧ್ಯಕ್ಷರಾಗಿ, ದೇಚೂರು ದೇವಾಲಯದ ಸ್ಥಾಪಕ ಅಧ್ಯಕ್ಷರಾಗಿ, ಜನತಾ ಬಜಾರ್ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ಬಾಲಭವನದ ಅಧ್ಯಕ್ಷರಾಗಿದ್ದರು.
ಯೂಟ್ಯೂಬ್ ಚಾನಲ್‌ಗಳಿಗೆ ಸರ್ಕಾರದಿಂದ ಅಂಕುಶ..? – ಸಿಎಂ ಸಿದ್ದರಾಮಯ್ಯ ಕೊಟ್ರು ಮಹತ್ವದ ಸುಳಿವು..!

ಹುಬ್ಬಳ್ಳಿ : ಮೊದಲು ನೀವೆಲ್ಲಾ ಊಹಾ ಪತ್ರಿಕೋದ್ಯಮವನ್ನು ನಿಲ್ಲಿಸಿ. ಇದು ಸಮಾಜಕ್ಕೆ ಹಾನಿಕರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಲೆಕ್ಟ್ರಾನಿಕ್ ಮೀಡಿಯಾ ಪತ್ರಕರ್ತರಿಗೆ ಕರೆ ನೀಡಿದರು. ಕರ್ನಾಟಕ ಎಲೆಕ್ಟ್ರಾನಿಕ್ ಮೀಡಿಯಾ ಜರ್ನಲಿಸ್ಟ್ ಅಸೋಸಿಯೇಷನ್ ಉದ್ಘಾಟಿಸಿ, ಲೋಗೋ ಬಿಡುಗಡೆ ಮಾಡಿ ಮಾತನಾಡಿದರು. ನಾನು ರಾಜಕಾರಣಕ್ಕೆ ಬಂದು ಇಷ್ಟು ವರ್ಷದಲ್ಲಿ ಯಾವ ಮಾಧ್ಯಮಗಳಿಗೂ ನನ್ನ ಬಗ್ಗೆ ಹೀಗೇ ಬರೆಯಿರಿ, ಹಾಗೇ ಬರೆಯಿರಿ ಎಂದು ಯಾವತ್ತೂ ಹೇಳಿಲ್ಲ. ನನ್ನ ಬಗ್ಗೆ ಸುಳ್ಳುಗಳನ್ನು ಸತತವಾಗಿ ತೋರಿಸುವಾಗಲೂ ಯಾಕೆ ಹೀಗೆ ತೋರಿಸ್ತೀರಿ ಅಂತಲೂ […]
ಮೈತಾಡಿ ಗ್ರಾಮದಲ್ಲಿ ಗಬ್ಬದ ಹಸು ಹತ್ಯೆ – ಮೂವರು ಹಂತಕರ ಬಂಧನ..!

ವಿರಾಜಪೇಟೆ : ಮೈತಾಡಿ ಗ್ರಾಮದಲ್ಲಿ ಇತ್ತೀಚೆಗೆ ಗಬ್ಬದ ಹಸು ಕೊಂದ ಪ್ರಕರಣ ಸಂಬಂಧ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಕೊಂಡಂಗೇರಿಯ ಮೊಹಮ್ಮದ್ ಆಶಿಕ್(22), ಶಾಹಿದ್(25), ಹ್ಯಾರೀಸ್ (34) ಬಂಧಿತರು. ಮೈತಾಡಿ ಗ್ರಾಮದ ಬೊಳ್ಳಪಂಡ ಎಂ.ಭೀಮಯ್ಯ ಎಂಬವರ ಹಸುವನ್ನು ಕದ್ದೊಯ್ದು ಹತ್ಯೆ ಮಾಡಲಾಗಿತ್ತು. ಈ ಸಂಬಂಧ ವಿರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ 303(1) 22 & 4, 5, 12 The Karnataka Prevention of Slaughter & Preservation of cattle Act-2020 ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿಗಳ […]
ಸಿದ್ದಾಪುರ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ – ಇಬ್ಬರನ್ನು ಬಂಧಿಸಿದ ಪೊಲೀಸರು

ಸಿದ್ದಾಪುರ : ಗಾಂಜಾ ಮಾರಾಟ ಮತ್ತು ಸರಬರಾಜು ಮಾಡುತ್ತಿದ್ದ ಇಬ್ಬರನ್ನು ಕೊಡಗು ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ. ತಪಾನ್ ಸರ್ದಾರ್(38), ಅರ್ಚನಾ ಸರ್ದಾರ್(30) ಬಂಧಿತ ವ್ಯಕ್ತಿಗಳು. ಪಶ್ಚಿಮ ಬಂಗಾಳ ಮೂಲದವರಾದ ಇವರು ಬಾಡಗ ಬಾಣಂಗಾಲ ವ್ಯಾಪ್ತಿಯಲ್ಲಿ ಗಾಂಜಾ ಕೊಂಡೊಯ್ದು ಮಾರಾಟ ಮಾಡುತ್ತಿದ್ದರು ಎನ್ನಲಾಗಿದೆ. ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ಪೊಲೀಸರು 1.166 ಕೆಜಿ ಗಾಂಜಾದೊಂದಿಗೆ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಪ್ರಾಣಿಗಳ ಭಾವನೆ ಅರ್ಥ ಮಾಡಿಕೊಂಡು ಅವುಗಳನ್ನು ಪ್ರೀತಿಯಿಂದ ಕಾಣಬೇಕು : ಡಾ. ರಾಕೇಶ್

ವೀರಾಜಪೇಟೆ : ಪ್ರಾಣಿಗಳನ್ನು ಮನುಷ್ಯರು ಪ್ರೀತಿಯಿಂದ ಕಾಣಬೇಕು ಎಂದು ವಿರಾಜಪೇಟೆಯ ಪಶು ವೈದ್ಯಕೀಯ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ರಾಕೇಶ್ ಅಭಿಪ್ರಾಯಪಟ್ಟರು. ವಿರಾಜಪೇಟೆಯ ಮಗ್ಗುಲದಲ್ಲಿರುವ ಲಿಟಲ್ ಸ್ಕಾಲರ್ಸ್ ಅಕಾಡೆಮಿ ಶಾಲೆಯಲ್ಲಿ ಆಯೋಜಿಸಲಾಗಿದ್ದ ಪ್ರಾಣಿಗಳ ದಿನಾಚರಣೆ ಹಾಗೂ ಅರಿವು ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡುತಿದ್ದರು. ಪ್ರಾಣಿಗಳನ್ನು ಹಿಂಸಿಸದೆ ಅವುಗಳನ್ನು ನಾವು ಪ್ರೀತಿಯಿಂದ ಕಾಣಬೇಕು. ಮನುಷ್ಯರು ಅವುಗಳನ್ನು ಹಿಂಸಿಸಿದರೆ ಅವುಗಳು ಕೂಡ ನಮಗೆ ಹಾನಿಯನ್ನು ಮಾಡಬಲ್ಲವು ಎಂದರು. ಮಕ್ಕಳು ತಮ್ಮ ವಿದ್ಯಾರ್ಥಿ ಹಂತದಿಂದಲೇ ಪ್ರಾಣಿಗಳ ಬಗ್ಗೆ ಅರಿವನ್ನು ಹೊಂದಿರಬೇಕು. ನಾವು […]
ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ – ‘ಕೊಡವ ಮುಸ್ಲಿಂ’ ಎಂದು ಬರೆಸಲು KMA ಮನವಿ

ಪೊನ್ನಂಪೇಟೆ : ಸರ್ಕಾರವು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮೂಲಕ ರಾಜ್ಯದ ಜನರ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ನಡೆಸಲು ಮುಂದಾಗಿರುವುದು ಸ್ವಾಗತಾರ್ಹವಾಗಿದೆ. ಇದೇ ತಿಂಗಳ 22 ರಿಂದ ಆರಂಭಗೊಳ್ಳುವ ಈ ಸಮೀಕ್ಷೆಯಲ್ಲಿ ಕೊಡಗಿನ ಮೂಲ ನಿವಾಸಿಗರಾಗಿರುವ ಕೊಡವ ಮುಸ್ಲಿಮರು ಕಡ್ಡಾಯವಾಗಿ ಪಾಲ್ಗೊಳ್ಳಬೇಕು ಎಂದು ಕೊಡವ ಮುಸ್ಲಿಂ ಅಸೋಸಿಯೇಷನ್ (ಕೆ.ಎಂ.ಎ.) ಮನವಿ ಮಾಡಿದೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕೆ.ಎಂ.ಎ. ಅಧ್ಯಕ್ಷ ದುದ್ದಿಯಂಡ ಹೆಚ್. ಸೂಫಿ ಹಾಜಿ, ಮೊಬೈಲ್ ಫೋನ್ ಬಳಸಿಕೊಂಡು ಡಿಜಿಟಲ್ ತಂತ್ರಜ್ಞಾನದ ಮೂಲಕ ಅಕ್ಟೋಬರ್ 7ರವರೆಗೆ […]
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಪ್ರವೇಶಕ್ಕೆ ಅವಧಿ ವಿಸ್ತರಣೆ – ಹೆಚ್ಚಿನ ವಿವರ ಇಲ್ಲಿದೆ

ಮಡಿಕೇರಿ : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಕ.ರಾ.ಮು.ವಿ ಮಡಿಕೇರಿಯಲ್ಲಿ 2025-26 ಸಾಲಿನ ಪ್ರವೇಶಾತಿಯ ಕೊನೆಯ ದಿನಾಂಕವನ್ನು ಅಕ್ಟೋಬರ್, 10 ರವರೆಗೆ ವಿಸ್ತರಿಸಲಾಗಿದೆ. ಪ್ರಾದೇಶಿಕ ಕೇಂದ್ರ ಮಡಿಕೇರಿಯಲ್ಲಿ 2025-26 ನೇ ಸಾಲಿನ ಜುಲೈ ಆವೃತ್ತಿಯ ವಿವಿಧ ಕೋರ್ಸ್‍ಗಳಿಗೆ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ತನ್ನ 2025-26ನೇ ಜುಲೈ ಆವೃತ್ತಿಗೆ ಶೈಕ್ಷಣಿಕ ಕಾರ್ಯಕ್ರಮಗಳಿಗೆ ಪ್ರವೇಶಾತಿಗೆ ಈಗಾಗಲೇ ಆನ್‍ಲೈನ್ ಮುಖಾಂತರ ಅರ್ಜಿ ಆಹ್ವಾನಿಸಲಾಗಿದೆ. ಮುಕ್ತ ವಿಶ್ವವಿದ್ಯಾಲಯವು “ನಿಮ್ಮ ಮನೆಯೇ ನಿರಂತರ ಪಾಠಶಾಲೆ” ಎಂಬ ಧ್ಯೆಯವಾಕ್ಯದೊಂದಿಗೆ ಯು.ಜಿ.ಸಿ […]
ಸ್ಥಳೀಯ ಆಡಳಿತದಲ್ಲಿ ಮಹಿಳಾ ನಾಯಕರ ಸಬಲೀಕರಣ ತರಬೇತಿ

ಜಿಲ್ಲಾ ಪಂಚಾಯತ್ ಸಂಪನ್ಮೂಲ ಕೇಂದ್ರ ಕೊಡಗು ಜಿಲ್ಲಾ ಪಂಚಾಯತ್ ನಲ್ಲಿ ತಾಲೂಕು ಮಟ್ಟದ ಅಧಿಕಾರಿಗಳಿಗೆ ನಾಲ್ಕು ದಿನದ ಸ್ಥಳೀಯ ಆಡಳಿತದಲ್ಲಿ ಮಹಿಳಾ ನಾಯಕರ ಸಬಲೀಕರಣ ತರಬೇತಿಯು ನಡೆಯುತ್ತಿದ್ದು, ಈ ಕಾರ್ಯಕ್ರಮ ಉದ್ಘಾಟಿಸಿ ಕೊಡಗು ಜಿಲ್ಲಾ ಪಂಚಾಯಿತಿಯ ಮುಖ್ಯ ಯೋಜನಾಧಿಕಾರಿ ಅಬ್ದುಲ್ ನಬಿ ರವರು ಮಾತನಾಡಿ, ರಾಜಕೀಯವನ್ನು ಪ್ರವೇಶಿಸಿದ ನಂತರ ಪಂಚಾಯಿತಿ ಅಧ್ಯಕ್ಷರಾಗಿ ಸಾರ್ವಜನಿಕ ಅಭಿವೃದ್ಧಿಗೆ ಶ್ರಮಿಸಿ, ಉತ್ತಮ ಸೇವೆ ಆಡಳಿತ ನೀಡಬೇಕೆಂಬ ಹಂಬಲ ಮಹಿಳಾ ಚುನಾಯಿತ ಪ್ರತಿನಿಧಿಗಳಲ್ಲಿರುತ್ತದೆ. ಪಂಚಾಯತ್ ರಾಜ್ ವ್ಯವಸ್ಥೆಯಲ್ಲಿ ತಮ್ಮ ಅಧಿಕಾರದ ವ್ಯಾಪ್ತಿ ,ನೀತಿ […]
ನಾಳೆ ಕೊಡಗಿನಲ್ಲಿ ಎಲ್ಲೆಲ್ಲಿ ಕರೆಂಟ್ ಇರಲ್ಲ?

ವಿರಾಜಪೇಟೆ ವಿದ್ಯುತ್ ವಿತರಣಾ ಉಪಕೇಂದ್ರದ ವಿರಾಜಪೇಟೆ ಶಾಖಾ ವ್ಯಾಪ್ತಿಯ ವಿಎಫ್-3 ಕೆ.ಎಸ್.ಆರ್.ಟಿ.ಸಿ ಮತ್ತು ವಿಎಫ್-7 ಹೆಗ್ಗಳ ಫೀಡರ್‍ಗಳಲ್ಲಿ ಸೆಪ್ಟೆಂಬರ್, 11 ರಂದು ಬೆಳಗ್ಗೆ 9 ರಿಂದ ಸಂಜೆ 6 ಗಂಟೆಯವರೆಗೆ ಫೀಡರ್ ಬೇರ್ಪಡಿಸುವ ಕಾರ್ಯ ಕೈಗೆತ್ತಿಕೊಂಡಿರುವುದರಿಂದ ಈ ಮಾರ್ಗದಿಂದ ವಿದ್ಯುತ್ ಸರಬರಾಜಾಗುವ ವಿರಾಜಪೇಟೆ ಪಟ್ಟಣದ ಮೀನುಪೇಟೆ, ಸುಣ್ಣದ ಬೀದಿ, ಖಾಸಗಿ ಬಸ್ ನಿಲ್ದಾಣ, ಪೋಲಿಸ್ ಸ್ಠೇಷನ್ ಹಿಂಬಾಗ, ಆರ್ಜಿ, ಪೆರಂಬಾಡಿ, ಹೆಗ್ಗಳ, ತೋರ, ರಾಮನಗರ, ಬಟ್ಟಮಕ್ಕಿ, ಎಡಮಕ್ಕಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು […]