ಸರ್ಕಾರದ ಸವಲತ್ತು ಪಡೆಯಲು ವಿಕಲಚೇತನರಿಂದ ಅರ್ಜಿ ಆಹ್ವಾನ…

ಮಡಿಕೇರಿ : ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ೧೩ ಫಲಾನುಭವಿ ಆಧಾರಿತ ಯೋಜನೆಗಳನ್ನು ೨೦೨೫-೨೬ ನೇ ಸಾಲಿನಲ್ಲಿ ಸೇವಾ ಸಿಂಧು, ಆನ್‌ಲೈನ್ ತಂತ್ರಾಂಶದಡಿ ಅಳವಡಿಸಲಾಗಿರುತ್ತದೆ. ಆದ್ದರಿಂದ ಪ್ರತಿಭಾವಂತ ಅಂಗವಿಕಲ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಯೋಜನೆ, ಶಿಶುಪಾಲನಾ ಭತ್ಯೆ, ನಿರುದ್ಯೋಗ ಭತ್ಯೆ, ಆಧಾರ ಯೋಜನೆ, ಮರಣ ಪರಿಹಾರ ನಿಧಿ, ಸಾಧನೆ ಯೋಜನೆ, ಪ್ರತಿಭೆ ಯೋಜನೆ, ವೈದ್ಯಕೀಯ ಪರಿಹಾರ ನಿಧಿ ಯೋಜನೆ, ಅಂಧ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪ್ ಟಾಪ್, ದೈಹಿಕ ವಿಕಲಚೇತನರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನ ಯೋಜನೆ, ಶ್ರವಣದೋಷವುಳ್ಳ […]
ಕೆ. ನಿಡುಗಣೆ ಗೋಶಾಲೆ – 08 ಎಕರೆ ಜಾಗಕ್ಕೆ ಒಂದು ತಿಂಗಳಲ್ಲಿ ತಂತಿ ಬೇಲಿ ಅಳವಡಿಸಲು ಜಿಲ್ಲಾಧಿಕಾರಿ ಸೂಚನೆ

ಮಡಿಕೇರಿ : ತಾಲ್ಲೂಕಿನ ಕೆ.ನಿಡುಗಣೆ ಬಳಿ ಸರ್ಕಾರಿ ಗೋಶಾಲೆಯಲ್ಲಿ ೩೭ ಜಾನುವಾರುಗಳ ಸಂರಕ್ಷಣೆಗೆ ಮಾತ್ರ ಅವಕಾಶವಿದ್ದು, ಇನ್ನೂ ಹೆಚ್ಚಿನ ಜಾನುವಾರುಗಳ ಸಂರಕ್ಷಣೆಗೆ ಒತ್ತು ನೀಡುವಲ್ಲಿ ಸರ್ಕಾರಕ್ಕೆ ಪತ್ರ ಬರೆಯಲು ಪ್ರಾಣಿ ದಯಾಸಂಘ ಮಹಾಸಭೆಯಲ್ಲಿ ತೀರ್ಮಾನಿಸಲಾಯಿತು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅಧ್ಯಕ್ಷತೆಯಲ್ಲಿ ನಡೆದ ಪ್ರಾಣಿ ದಯಾಸಂಘ ಮಹಾಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಯಿತು. ಈ ಕುರಿತು ವಿಷಯ ಪ್ರಸ್ತಾಪಿಸಿದ ಪ್ರಾಣಿ ದಯಾ ಸಂಘದ ಸಮಿತಿ ಸದಸ್ಯರಾದ ಹರೀಶ್ ಆಚಾರ್ಯ, ಕೆ.ನಿಡುಗಣೆ ಬಳಿಯ ಸರ್ಕಾರಿ ಗೋಶಾಲೆಯಲ್ಲಿ […]
ಬೇಟೋಳಿ ಪುದುಪಾಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಗಣೇಶೋತ್ಸವ – ಶೋಭಾಯಾತ್ರೆಗೆ ಮೆರುಗು ನೀಡಿದ ಕುಣಿತ ಭಜನೆ

ವಿರಾಜಪೇಟೆ : ಬೇಟೋಳಿ ಗ್ರಾಮದ ರಾಮನಗರದಲ್ಲಿರುವ ಪುದುಪಾಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಒಳ ಆವರಣದಲ್ಲಿರುವ ಶ್ರೀ ಗಣಪತಿ ಗುಡಿಯಲ್ಲಿ ಪ್ರತಿಷ್ಠಾಪಿಸಲಾಗಿದ್ದ ಶ್ರೀ ಗೌರಿ ಗಣೇಶ ಮೂರ್ತಿಗಳ ವಿಸರ್ಜನೋತ್ಸವ ಶ್ರದ್ಧಾ ಭಕ್ತಿಯಿಂದ ನೆರವೇರಿತು. ಈ ಬಾರಿ 43ನೇ ವರ್ಷದ ಗಣೇಶೋತ್ಸವವನ್ನು ಆಚರಿಸುತ್ತಿದ್ದು, ಧಾರ್ಮಿಕ ಕಾರ್ಯಕ್ರಮಗಳು ಶಾಸ್ತ್ರೋಕ್ತವಾಗಿ ನಡೆಯಿತು. ಗಣೇಶ ಚತುರ್ಥಿಯಂದು ಪ್ರತಿಷ್ಠಾಪಿಸಲಾಗಿದ್ದ ಗಣೇಶ ಮೂರ್ತಿಯನ್ನು ಏಳು ದಿವಸಗಳ ಕಾಲ ದೇವಸ್ಥಾನದಲ್ಲಿ ವಿಶೇಷ ಪೂಜೆಗಳೊಂದಿಗೆ ಆರಾಧಿಸಲಾಯಿತು. ವಿಸರ್ಜನೋತ್ಸವದಂದು ಮಧ್ಯಾಹ್ನ ಮಹಾಪೂಜೆ ಬಳಿಕ ಭಕ್ತಾದಿಗಳಿಗೆ ಪ್ರಸಾದ ವಿತರಣೆ ಹಾಗೂ ಅನ್ನ […]
ಡಾ. ವಿಷ್ಣುವರ್ಧನ್‌ಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ನೀಡುವಂತೆ ಸಿಎಂಗೆ ಮನವಿ ಸಲ್ಲಿಸಿದ ಹಿರಿಯ ನಟಿಯರು..!

ಬೆಂಗಳೂರು : ಸಾಹಸ ಸಿಂಹ ಡಾ. ವಿಷ್ಣುವರ್ಧನ್(Dr VIshnuvardhan) ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡುವಂತೆ ಆಗ್ರಹ ಕೇಳಿಬರುತ್ತಿದೆ. ಕನ್ನಡ ಚಲನಚಿತ್ರ ರಂಗದ ಹಿರಿಯ ನಟಿಯರಾದ ಜಯಮಾಲ, ಶ್ರತಿ ಮತ್ತು ಮಾಳವಿಕ ಅವಿನಾಶ್ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ವಿಷ್ಣುವರ್ಧನ್ ಅವರಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ನೀಡುವಂತೆ ಮನವಿ ಸಲ್ಲಿಸಿದರು. ಜೊತೆಗೆ ಇತ್ತೀಚೆಗೆ ನಿಧನರಾದ ಪಂಚಭಾಷಾ ನಟಿ ಬಿ. ಸರೋಜಾದೇವಿ ಅವರ ಹೆಸರನ್ನು ಅವರು ವಾಸವಿದ್ದ ಸ್ಥಳಕ್ಕೆ ನಾಮಕರಣ ಮಾಡುವಂತೆಯೂ ಮನವಿ ಮಾಡಿದರು.
ಸ್ವಾತಂತ್ರ್ಯೋತ್ಸವ ಪ್ರಯುಕ್ತ ತಾಲೂಕು ಮಟ್ಟದ ನೃತ್ಯ ಸ್ಪರ್ಧೆ – ಕೂರ್ಗ್ ಇನ್ಸ್ಟಿಟ್ಯೂಟ್ ಆಫ್ ಪಿ.ಯು. ಕಾಲೇಜು ತೃತೀಯ

ಪೊನ್ನಂಪೇಟೆ : ಗೋಣಿಕೊಪ್ಪ ಲಯನ್ಸ್ ವಿದ್ಯಾಸಂಸ್ಥೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಆಯೋಜಿಸಿದ್ದ ತಾಲೂಕು ಮಟ್ಟದ ನೃತ್ಯ ಸ್ಪರ್ಧೆಯಲ್ಲಿ ಪೊನ್ನಂಪೇಟೆಯ ಕೂರ್ಗ್ ಇನ್ಸ್ಟಿಟ್ಯೂಟ್ ಆಫ್ ಪಿ.ಯು. ಕಾಲೇಜು ವಿದ್ಯಾರ್ಥಿಗಳು ಪ್ರಶಸ್ತಿ ಗಳಿಸಿದ್ದಾರೆ. ಕಾಲೇಜಿನ ತಂಡಕ್ಕೆ ತೃತೀಯ ಬಹುಮಾನ ಲಭಿಸಿದೆ. ದ್ವಿತೀಯ ಪಿಯುಸಿ ವಿದ್ಯಾರ್ಥಿ ದೈವಿಕ್ ದೇವಯ್ಯ, ಮೋಕ್ಷಾ ಮುತ್ತಮ್ಮ, ಪ್ರಥಮ ಪಿಯುಸಿ ವಿದ್ಯಾರ್ಥಿನಿಯರಾದ ಪ್ರಿಯದರ್ಶಿನಿ, ಮಂಜುಶ್ರೀ ವಿನೋದ್, ಜೋಶ್ನಾ, ಸಮನ್ವಿತ ಭಾಗವಹಿಸಿದ್ದರು.
ವಿಶೇಷ ಚೇತನ ಫಲಾನುಭವಿಗಳಿಗೆ ಶಾಸಕರ ನಿಧಿಯಿಂದ ವಾಹನ ವಿತರಿಸಿದ ಎ.ಎಸ್. ಪೊನ್ನಣ್ಣ

ವೀರಾಜಪೇಟೆ : ಶಾಸಕರ ನಿಧಿಯಿಂದ ವಿಶೇಷ ಚೇತನರಿಗೆ ನೀಡಲಾಗುವ ನಾಲ್ಕು ಚಕ್ರ ವಾಹನಗಳನ್ನು ಅರ್ಹ ಫಲಾನುಭವಿಗಳಿಗೆ ಇಂದು ವಿತರಿಸಲಾಯಿತು. ವಿರಾಜಪೇಟೆಯಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ವಿತರಿಸಿದರು. ಸಮಾಜದಲ್ಲಿ ವಿಶೇಷ ಚೇತನರಿಗೆ ಅನುಕೂಲ ಕಲ್ಪಿಸಲು ಈ ಸೌಲಭ್ಯ ಒದಗಿಸಲಾಗುತ್ತಿದೆ. ವಿಶೇಷ ಚೇತನರು ತಮ್ಮಲ್ಲಿನ ಸಮಸ್ಯೆಯನ್ನು ಮರೆತು ಸಮಾಜದಲ್ಲಿ ತಮ್ಮ ಕೈಲಾದ ಸಾಧನೆ ಮಾಡಲು ಪ್ರಯತ್ನಿಸಬೇಕೆಂದು ಹೇಳಿದರು. ವೀರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಟ್ಟಡ ರಂಜಿ ಪೂಣಚ್ಚ, ನಾಪೋಕ್ಲು […]
ದಸರಾ ಉದ್ಘಾಟಕರು ಕುಂಕುಮ ಹಚ್ಚಲಿ, ಹಿಂದುವಾಗಲಿ ಎನ್ನುವುದು ತರವಲ್ಲ – ಸಿಎಂ ಸಿದ್ದರಾಮಯ್ಯ

ಮೈಸೂರು : ಸಾಹಿತಿ ಬಾನು ಅವರು ಕುಂಕುಮ ಹಚ್ಚಿಕೊಂಡು ದಸರಾ ಉದ್ಘಾಟಸಲಿ ಎಂದು ಬಿಜೆಪಿಯವರು ಒತ್ತಾಯಿಸಿರುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಬುಕರ್ ಪ್ರಶಸ್ತಿ ವಿಜೇತರಾದ ಬಾನು ಮುಷ್ತಾಕ್ ಓರ್ವ ಮುಸ್ಲಿಂ ಮಹಿಳೆಯಾಗಿದ್ದು, ಕುಂಕುಮ ಹಚ್ಚಿಕೊಳ್ಳುವುದು ಅವರ ಧರ್ಮದಲ್ಲಿಲ್ಲ. ದಸರಾ ಹಬ್ಬವನ್ನು ನಾಡ ಹಬ್ಬ ಎಂದು ಆಚರಿಸುತ್ತೇವೆ. ಬೇರೆ ಧರ್ಮದವರನ್ನು ಉದ್ಘಾಟಕರನ್ನಾಗಿ ಆಹ್ವಾನಿಸಿದರೆ ಕುಂಕುಮ ಹಚ್ಚಿಕೊಂಡು ಬನ್ನಿ, ಹಿಂದೂಗಳಾಗಿ ಎನ್ನುವುದು ತರವಲ್ಲ ಎಂದರು. ಮುಸ್ಲಿಂ ಗುರುಗಳು ನಾನು ಮುಷ್ತಾಕ್ ಅವರ ವಿರುದ್ಧ ಫತ್ವಾ ಹೊರಡಿಸಿಲ್ಲ ಎಂದು ಈಗಾಗಲೇ […]
ನಿವೃತ್ತ ಶಿಕ್ಷಕಿಗೆ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಗೌರವದ ಸನ್ಮಾನ

ಗೋಣಿಕೊಪ್ಪ : ಕಳತ್ಮಾಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 26 ವರ್ಷ ಕಾಲ ಸೇವೆ ಸಲ್ಲಿಸಿ ನಿವೃತ್ತರಾದ ಹಿರಿಯ ಶಿಕ್ಷಕಿ ಪೂದ್ರಿಮಾಡ ತಾರಾ ಪ್ರಕಾಶ್ ಅವರನ್ನು ಗ್ರಾಮಸ್ಥರು ಸನ್ಮಾನಿಸಿ ಅಭಿನಂದಿಸಿದರು. ಗೊಟ್ಟಡ ಕಳತ್ಮಾಡುವಿನ ಶ್ರೀ ಅಯ್ಯಪ್ಪ ಕ್ರೀಡಾ ಮತ್ತು ಸಾಂಸ್ಕೃತಿಕ ಸೇವಾ ಸಂಘದವ ವತಿಯಿಂದ 27ನೇ ವರ್ಷದ ಶ್ರೀ ಗೌರಿ ಗಣೇಶ ಉತ್ಸವ ನಡೆಯಿತು. ಈ ಕಾರ್ಯಕ್ರಮದಲ್ಲಿ ತಾರಾ ಪ್ರಕಾಶ್ ಅವರ ಸೇವೆಯನ್ನು ಗುರುತಿಸಿ ಗೌರವಿಸಲಾಯಿತು. ಗ್ರಾಮಸ್ಥರು, ವಿದ್ಯಾರ್ಥಿಗಳು, ತಾರಾ ಪ್ರಕಾಶ್ ಅವರ ಶಿಷ್ಯ ವೃಂದ ಈ […]
26 ವರ್ಷದ ಪ್ರೇಯಸಿಯನ್ನು ಬೆಂಕಿ ಹಚ್ಚಿ ಕೊಂದ 52 ವರ್ಷದ ವ್ಯಕ್ತಿಯನ್ನು ಬಂಧಿಸಿದ ಪೊಲೀಸರು..!

ಬೆಂಗಳೂರು : ತನ್ನಿಂದ ದೂರವಾಗಲು ಮುಂದಾದ 26 ವರ್ಷದ ಪ್ರೇಯಸಿಯನ್ನು ಪೆಟ್ರೋಲ್ ಸುರಿದು ಕೊಲೆ ಮಾಡಿರರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. 52 ವರ್ಷದ ವಿಠ್ಠಲ ಎಂಬಾತನೇ ಪ್ರೇಯಸಿಯನ್ನು ಹತ್ಯೆಗೈದ ವ್ಯಕ್ತಿ. ಇಬ್ಬರು ಕೂಡಾ ಆನೇಕಲ್ ಮಳೆನಲ್ಲಸಂದ್ರ ನಿವಾಸಿಗಳಾಗಿದ್ದು, ವನಜಾಕ್ಷಿ ವಿಧವೆಯಾಗಿದ್ದು, ವಿಠ್ಠಲನ ಪತ್ನಿಯೂ ತೀರಿಕೊಂಡಿದ್ದಳು. ಇಬ್ಬರು ಪರಿಚಯವಾಗಿ ಪರಸ್ಪರ ಪ್ರೀತಿಸುತ್ತಿದ್ದರು. ನಾಲ್ಕು ವರ್ಷದಿಂದ ಇಬ್ಬರು ಸಹಜೀವನ ನಡೆಸುತ್ತಿದ್ದರು ಅಂತ ಹೇಳಲಾಗಿದೆ. ಹೀಗಿರುವಾಗ ವನಜಾಕ್ಷಿ ಬೇರೊಬ್ಬನ ಜೊತೆ ಸ್ನೇಹ ಬೆಳೆಸಿ ಈತನಿಂದ ದೂರವಾಗಲು ಮುಂದಾಗಿದ್ದಾಳೆ. ಈ ವಿಷಯವಾಗಿ ಇಬ್ಬರ […]
ಮಗು ಹೊಟ್ಟೆಯಲ್ಲಿರುವಾಗಲೇ ವಾಕ್ ಮತ್ತು ಶ್ರವಣ ಸಮಸ್ಯೆ ಪತ್ತೆ ಹಚ್ಚಲು ಸಾಧ್ಯವಾಗಿರುವುದು ದೊಡ್ಡ ಸಾಧನೆ : ಸಿ.ಎಂ.ಸಿದ್ದರಾಮಯ್ಯ

ಮೈಸೂರು : ಮಗು ಹೊಟ್ಟೆಯಲ್ಲಿರುವಾಗಲೇ ಮಗುವಿನ ವಾಕ್ ಮತ್ತು ಶ್ರವಣ ಸಮಸ್ಯೆ ಪತ್ತೆ ಹಚ್ಚಲು ಸಾಧ್ಯವಾಗಿರುವುದು ನಿಜಕ್ಕೂ ದೊಡ್ಡ ಸಾಧನೆ. ಇದಕ್ಕಾಗಿ ಮೈಸೂರಿನ ವಾಕ್ ಮತ್ತು ಶ್ರವಣ ಸಂಸ್ಥೆ ಅಭಿನಂದನೀಯವಾಗಿದೆ ಎಂದು ಸಿ.ಎಂ.ಸಿದ್ದರಾಮಯ್ಯ ನುಡಿದರು. ಅಖಿಲ ಭಾರತ ವಾಕ್-ಶ್ರವಣ ಸಂಸ್ಥೆ (ಆಯಿಷ್) ಮೈಸೂರು ಇವರ ವತಿಯಿಂದ ಆಯೋಜಿಸಿದ್ದ ಅಖಿಲ ಭಾರತ ವಾಕ್-ಶ್ರವಣ ಸಂಸ್ಥೆಯ “ವಜ್ರ ಮಹೋತ್ಸವ ಕಾರ್ಯಕ್ರಮ”ದಲ್ಲಿ ಮಾತನಾಡಿದರು. ಈ ಕ್ಷೇತ್ರದಲ್ಲಿ ಇನ್ನಷ್ಟು ಸಾಧನೆ ಮತ್ತು ಪ್ರಗತಿ ಕಾಣಬೇಕಾಗಿದೆ. ಇದಕ್ಕಾಗಿ ನಮ್ಮ ಸರ್ಕಾರ ಈಗಾಗಲೇ 10 ಎಕರೆ […]