ಕೆನರಾ ಬ್ಯಾಂಕ್ & ಬ್ಯಾಂಕ್ ಆಫ್ ಬರೋಡ ವತಿಯಿಂದ ಜನ ಸುರಕ್ಷಾ ಆಂದೋಲನ ಕಾರ್ಯಕ್ರಮ

ಸುಂಟಿಕೊಪ್ಪ : ಕೊಡಗು ಜಿಲ್ಲಾ ಲೀಡ್ ಬ್ಯಾಂಕ್ ಮಡಿಕೇರಿ, ಸಹಯೋಗದೊಂದಿಗೆ ಸುಂಟಿಕೊಪ್ಪದಲ್ಲಿ ಕೇಂದ್ರ ಸರಕಾರದ ಆದೇಶದಂತೆ ಆಯಾ ಗ್ರಾಮದ ಬ್ಶಾಂಕ್ ಶಾಖೆ ಮುಖಾಂತರ ಪ್ರತೀವರ್ಷವೂ ನಡೆಸುವ ಜನ ಸುರಕ್ಷಾ ಅಭಿಯಾನ ಕಾರ್ಯಕ್ರಮವನ್ನು ಸುಂಟಿಕೊಪ್ಪ ಗ್ರಾಮ ಪಂಚಾಯಿತಿಯಲ್ಲಿ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕೆನರಾ ಬ್ಯಾಂಕ್ ವ್ಯವಸ್ಥಾಪಕ ಅನಿಕೇತ್, ಜನ ಸಾಮಾನ್ಯರು ಕಡ್ಡಾಯವಾಗಿ ಸಾಮಾಜಿಕ ಭದ್ರತಾ ಯೋಜನೆಗಳನ್ನು ಮಾಡಿಸುವ ಮೂಲಕ ಅದರ ಪ್ರಯೋಜನ ಪಡೆದುಕೊಳ್ಳುವಂತೆ ಸಲಹೆ ನೀಡಿದರು. ಯೋಜನೆಗಳಲ್ಲಿ ಒಂದಾದ ಪ್ರಧಾನಮಂತ್ರಿ ಸುರಕ್ಷ ಭಿಮಾ ಯೋಜನೆಯು ಒಂದು ಅಪಘಾತ […]
ಶಿಕ್ಷಕರ ದಿನದ ಸುಸಂದರ್ಭದಲ್ಲಿ ನಿಮ್ಮ ನೆಚ್ಚಿನ ಶಿಕ್ಷಕರ ಸ್ಮರಣೆಯನ್ನು Coorg Buzz ಜೊತೆ ಹಂಚಿಕೊಂಡು ಸಂಭ್ರಮಿಸಿ…

ಮಡಿಕೇರಿ : ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮ ದಿನವನ್ನು ಶಿಕ್ಷಕರ ದಿನವನ್ನಾಗಿ ಆಚರಿಸಲಾಗುತ್ತದೆ. ಪ್ರತಿಯೊಬ್ಬರ ಜೀವನದಲ್ಲೂ ಶಿಕ್ಷಕರು ಮಹತ್ತರವಾದ ಪಾತ್ರ ನಿರ್ವಹಿಸಿರುತ್ತಾರೆ. ಈ ಸಂದರ್ಭದಲ್ಲಿ ಅವರನ್ನು ಮತ್ತೊಮ್ಮೆ ನೆನಪು ಮಾಡಿಕೊಳ್ಳುವುದಕ್ಕೆ Coorg Buzz ಅವಕಾಶ ಕಲ್ಪಿಸುತ್ತಿದೆ. ನಿಮ್ಮ ನೆಚ್ಚಿನ ಶಿಕ್ಷಕರ ಬಗ್ಗೆ ವಿಡಿಯೋ ಮಾಡಿ ನಮಗೆ ಕಳುಹಿಸಿ. ನಿಮ್ಮ ನೆಚ್ಚಿನ ಶಿಕ್ಷಕರು ಯಾರು, ಯಾಕಾಗಿ ಅವರಂದ್ರೆ ನಿಮಗೆ ಅಚ್ಚುಮೆಚ್ಚು ಎಂಬ ಬಗ್ಗೆ ವಿಡಿಯೋ ಮಾಡುವಾಗ ಮೊಬೈಲ್ ಅನ್ನು ಸರಿಯಾದ ರೀತಿಯಲ್ಲಿ ಸೆಟ್ ಮಾಡಿಕೊಳ್ಳಿ. ನಿಮಿಷದ ಒಳಗೆ […]
ಭಾಗಮಂಡಲ ಸರ್ಕಾರಿ ಶಾಲೆಯ ಹಳೆ ವಿದ್ಯಾರ್ಥಿಗಳ ಪುನರ್ಮಿಲನ – ಗುರುಗಳಿಗೆ ಸನ್ಮಾನಿಸಿ ಗೌರವಾರ್ಪಣೆ

ಭಾಗಮಂಡಲ(Bhagamandala) : ಇಲ್ಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 2007ನೇ ಸಾಲಿನ ವಿದ್ಯಾರ್ಥಿಗಳು ಹಾಗೂ ಶಿಕ್ಷಕರ ಪುನರ್ಮಿಲನ ಕಾರ್ಯಕ್ರಮ ನಡೆಯಿತು. ಭಾನುವಾರ ನಡೆದ ಕಾರ್ಯಕ್ರಮದಲ್ಲಿ ಹಳೆಯ ವಿದ್ಯಾರ್ಥಿಗಳೆಲ್ಲ ಸೇರಿ ಶಿಕ್ಷಕರನ್ನು ಸನ್ಮಾನಿಸಿ ಗೌರವಿಸಿದರು. ಇದೇ ವೇಳೆ ವಿದ್ಯಾರ್ಥಿಗಳು ತಮ್ಮ ಬಾಲ್ಯದ ನೆನಪುಗಳನ್ನು ಹಂಚಿಕೊಂಡರು. ಶಾಲೆಯ ಅಭಿವೃದ್ಧಿಗೆ ತಾವು ಸಹಕರಿಸುತ್ತೇವೆ ಎಂಬ ಭರವಸೆ ನೀಡಿದರು. 2007ನೇ ಸಾಲಿನ ಹಳೆಯ ವಿದ್ಯಾರ್ಥಿಗಳಿಂದ ಶಾಲೆಗೆ ಪ್ರೊಜೆಕ್ಟರ್ ಹಾಗೂ ತಟ್ಟೆಗಳನ್ನು ಕೊಡುಗೆಯಾಗಿ ನೀಡಲಾಯಿತು. ಹಳೆಯ ವಿದ್ಯಾರ್ಥಿಗಳು, ಶಿಕ್ಷಕರು, ಎಸ್.ಡಿ.ಎಂ.ಸಿ. ಅಧ್ಯಕ್ಷರು ಸೇರಿದಂತೆ ಅನೇಕರು […]
ನಿಯಮ ಮೀರಿ ಡಿಜೆ ಬಳಕೆ – 05 ಸಮಿತಿ ವಿರುದ್ಧ ಪ್ರಕರಣ ದಾಖಲು – ಡಿಜೆ ಸಿಸ್ಟಂ ವಶಪಡಿಸಿಕೊಂಡ ಪೊಲೀಸರು..!

ಕುಶಾಲನಗರ(Kushalnagar) : ನಿಯಮ ಮೀರಿ ಧ್ವನಿವರ್ದಕ/ಡಿಜೆ(dj) ಬಳಸುವವರ ವಿರುದ್ಧ ಕ್ರಮಕ್ಕೆ ಜಿಲ್ಲಾ ಪೊಲೀಸ್(police) ಮುಂದಾಗಿದೆ. ಕುಶಾಲನಗರ ವ್ಯಾಪ್ತಿಯಲ್ಲಿ ನಿನ್ನೆ ಕಾರ್ಯಾಚರಣೆ ನಡೆಸಿದ ಪೊಲೀಸರು ವಿವಿಧೆಡೆ ಬಳಸಲಾಗಿದ್ದ ಡಿಜೆ ಸಿಸ್ಟಂಗಳನ್ನು ವಶಕ್ಕೆ ಪಡೆದಿದ್ದಾರೆ. ಮಾದಾಪಟ್ಟಣ ವ್ಯಾಪ್ತಿಯಲ್ಲಿ 04, ಜನತಾ ಕಾಲನಿ ಗಣೇಶೋತ್ಸವ ಮೆರವಣಿಗೆಯಲ್ಲಿ ಬಳಸಲಾಗಿದ್ದ ಒಂದು ಡಿಜೆ ಸಿಸ್ಟಂ, ಧ್ವನಿವರ್ದಕ, ಲಾರಿಯನ್ನು ವಶಪಡಿಸಿಕೊಂಡಿದ್ದಾರೆ. ಜೊತೆಗೆ ಸಮಿತಿಯವರ ಮೇಲೆ ಕೇಸ್ ಕೂಡಾ ದಾಖಲಾಗಿದೆ. ನಿಯಮ ಮೀರಿ ಅಬ್ಬರದ ಸಂಗೀತ ಹಾಕಿದಲ್ಲಿ ಕ್ರಮ ಕೈಗೊಳ್ಳುವುದಾಗಿ ಜಿಲ್ಲಾ ಪೊಲೀಸ್ ಅಧಿಕಾರಿಗಳು ಗಣೇಶೋತ್ಸವಕ್ಕೆ ಮುಂಚಿತವಾಗಿಯೇ […]
ಪ್ರೀತಿಸುತ್ತಿದ್ದ ಯುವತಿಗೆ ಬೇರೊಬ್ಬನೊಂದಿಗೆ ನಿಶ್ಚಿತಾರ್ಥ – ನೊಂದು ಆತ್ಮಹ*ತ್ಯೆಗೆ ಶರಣಾದ ಯುವಕ..!

ಮಡಿಕೇರಿ : ತಾನು ಪ್ರೀತಿಸುತ್ತಿದ್ದ ಯುವತಿಗೆ ಬೇರೊಬ್ಬನೊಂದಿಗೆ ನಿಶ್ಚಿತಾರ್ಥ ಆದ ವಿಚಾರ ತಿಳಿದು ಮನನೊಂದು ಯುವಕನೊಬ್ಬ ಆತ್ಮಹ*ತ್ಯೆ ಮಾಡಿಕೊಂಡಿದ್ದಾನೆ. ಮರಗೋಡು ಜನತಾ ಕಾಲೋನಿ ನಿವಾಸಿ ಮನೋಜ್(26) ಮೃತ ಯುವಕ. ಮನೋಜ್ ಉಡುಪಿಯಲ್ಲಿ ಹೋಟೆಲ್ ಮೇಲ್ವಿಚಾರಕನಾಗಿ ಕೆಲಸ ಮಾಡುತ್ತಿದ್ದ. ಅಲ್ಲಿ ಯುವತಿಯೊಬ್ಬಳ ಪರಿಚಯವಾಗಿದ್ದು, ಪರಸ್ಪರ ಪ್ರೀತಿಸುತ್ತಿದ್ದರು ಎನ್ನಲಾಗಿದೆ. ಈ ನಡುವೆ ಆಕೆಗೆ ಇತ್ತೀಚೆಗೆ ಬೇರೊಬ್ಬನೊಂದಿಗೆ ನಿಶ್ಚಿತಾರ್ಥವಾಗಿದೆ. ಈ ವಿಚಾರ ತಿಳಿದ ಮನೋಜ್ ಮಾನಸಿಕವಾಗಿ ಆಘಾತಕ್ಕೊಳಗಾಗಿದ್ದಾನೆ. ನಿನ್ನೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಸಂಬಂಧ ಮಡಿಕೇರಿ ಗ್ರಾಮಾಂತರ […]
ನಿವೃತ್ತರಾದ ಪಿಎಸ್‌ಐ ಮತ್ತು ಎಎಸ್ಐಗೆ ಜಿಲ್ಲಾ ಪೊಲೀಸ್ ವತಿಯಿಂದ ಬೀಳ್ಕೊಡುಗೆ…

ಮಡಿಕೇರಿ : ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಸೇವೆ ಸಲ್ಲಿಸಿದ ಪಿಎಸ್ಐ ಹೆಚ್.ಇ. ವೆಂಕಟ್ ಮತ್ತು ಎಎಸ್‌ಐ ಕೆ.ಪಿ. ಮಾಚಯ್ಯ ಅವರು ವಯೋ ನಿವೃತ್ತಿ ಹೊಂದಿದ್ದಾರೆ. ಇವರನ್ನು ಜಿಲ್ಲಾ ಪೊಲೀಸ್ ಘಟಕದ ಪರವಾಗಿ ಎಸ್ಪಿ ಕೆ. ರಾಮರಾಜನ್ ಮತ್ತು ಇತರೆ ಅಧಿಕಾರಿಗಳು ಆತ್ಮೀಯವಾಗಿ ಸನ್ಮಾನಿಸಿ ಬೀಳ್ಕೊಟ್ಟರು.
ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜು – NSS ವಾರ್ಷಿಕ ಚಟುವಟಿಕೆಗಳಿಗೆ ಚಾಲನೆ

ಮಡಿಕೇರಿ : ಫೀಲ್ಡ್ ಮಾರ್ಷಲ್ ಕೆ.ಎಂ ಕಾರ್ಯಪ್ಪ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭ ಕಾಲೇಜು ಸಭಾಂಗಣದಲ್ಲಿ ಶನಿವಾರ ನಡೆಯಿತು. ಕಾರ್ಯಕ್ರಮದಲ್ಲಿ ಅತಿಥಿಗಳು ಫೀಲ್ಡ್ ಮಾರ್ಷಲ್ ಕೆ.ಎಂ ಕಾರ್ಯಪ್ಪ ಪ್ರತಿಮೆಗೆ ಪುಷ್ಪ ನಮನ ಮಾಡಿ, ಯುವ ಸ್ಪಂದನವನ್ನು ಉದ್ಘಾಟಿಸಿದರು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಪತ್ರಕರ್ತ ಕಿಶೋರ್ ರೈ ಕತ್ತಲೆಕಾಡು, ರಾಷ್ಟ್ರೀಯ ಸೇವಾ ಯೋಜನೆಯಲ್ಲಿ ವಿದ್ಯಾರ್ಥಿಗಳು ತಮ್ಮನ್ನ ತಾವು ತೋಡಗಿಸಿಕೊಳ್ಳಲು ಹಾಗೂ ಗುರುತಿಸಿಕೊಳ್ಳಲು ಒಂದು ಉತ್ತಮ ಅವಕಾಶ. ಇಲ್ಲಿ ಸೇವಾ ಮನೋಭಾವ ಮಾತ್ರವಲ್ಲ ಅದರ […]
ʼಕೊಡಗಿನಲ್ಲಿ ಡೇಟಿಂಗ್‌ಗೆ ಆಂಟಿ, ಹುಡ್ಗೀರು ಸಿಗ್ತಾರೆʼ ಅಂತ ಪೋಸ್ಟ್ ಹಾಕಿದವ ಅಂದರ್..!

ಮಡಿಕೇರಿ : ಕೊಡಗು ಜಿಲ್ಲೆಯ ಖ್ಯಾತಿಗೆ ಧಕ್ಕೆ ತರುವಂತೆ ಪೋಸ್ಟ್ ಹಾಕಿದ್ದ ವ್ಯಕ್ತಿಯನ್ನು ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ. ಕೆಲವು ದಿನದ ಹಿಂದೆ ಇನ್ಸ್ಟಾಗ್ರಾಂನಲ್ಲಿ ಮಡಿಕೇರಿಯ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ವಿಡಿಯೋ ಬಳಸಿಕೊಂಡು ʼಮಡಿಕೇರಿ ಜಿಲ್ಲೆಯಲ್ಲಿ ಹುಡುಗಿ ಆಂಟಿ ಡೇಟಿಂಗ್ ಮಾಡೋದಕ್ಕೆ ಸರ್ವಿಸ್ ಬೇಕಾದ್ರೆ ಕಾಲ್ ಮಾಡಿʼ ಅಂತ ಪೋಸ್ಟ್ ಹಾಕಲಾಗಿತ್ತು. ಈ ವಿಚಾರವಾಗಿ ಅನೇಕರು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದರು. ಈ ಸಂಬಂಧ ಮಡಿಕೇರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಮಡಿಕೇರಿ ಡಿವೈಎಸ್ಪಿ ಪಿ.ಎ. ಸೂರಜ್, ಸಿಪಿಐ […]
ದಸರಾ ಪೂರ್ವಭಾವಿ ಸಭೆ – ದಶಮಂಟಪ ಸಾಗುವ ಮಾರ್ಗದ ಗುಂಡಿ ಮುಚ್ಚಲು ಶಾಸಕ ಮಂತರ್ ಗೌಡ ಸೂಚನೆ

ಮಡಿಕೇರಿ : ಮಡಿಕೇರಿ ಜನೋತ್ಸವ ದಸರಾ ಆಚರಣೆ ಸಂಬಂಧ ಪೂರ್ವಭಾವಿ ಸಭೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆಯಿತು. ಶಾಸಕ ಡಾ.ಮಂತರ್ ಗೌಡ, ನಗರಸಭೆ ಅಧ್ಯಕ್ಷೆ ಪಿ.ಕಲಾವತಿ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಉಪ ಪೊಲೀಸ್ ವರಿಷ್ಠಾಧಿಕಾರಿ ದಿನೇಶ್ ಕುಮಾರ್, ದಸರಾ ಸಮಿತಿ ಕಾರ್ಯಾಧ್ಯಕ್ಷ ಅರುಣ್ ಕುಮಾರ್ ಮುಂತಾದವರು ಉಪಸ್ಥಿತರಿದ್ದರು. ಡಾ.ಮಂತರ್ ಗೌಡ ಮಾತನಾಡಿ, ಮಡಿಕೇರಿ ದಸರಾವನ್ನು ವ್ಯವಸ್ಥಿತವಾಗಿ ಆಚರಿಸಬೇಕು. ಸುರಕ್ಷತೆಗೆ ಒತ್ತು ನೀಡಬೇಕು. ಕರಗ ಹಾಗೂ ದಶಮಂಟಪಗಳು ಸಾಗುವ ಮಾರ್ಗದ ಗುಂಡಿ ಮುಚ್ಚುವ […]
ಕೊಡಗಿನಲ್ಲಿ ಮದ್ಯ ಮಾರಾಟ ನಿಷೇಧ: ಯಾವಾಗ? ಎಲ್ಲೆಲ್ಲಿ?

ಮಡಿಕೇರಿ ನಗರದಲ್ಲಿ ಹಾಗೂ ವಿರಾಜಪೇಟೆ ನಗರದಲ್ಲಿ ಗೌರಿ-ಗಣೇಶ ಮೂರ್ತಿಗಳ ವಿಸರ್ಜನಾ ಕಾರ್ಯಕ್ರಮ ನಡೆಯಲಿದ್ದು, ಸಾರ್ವಜನಿಕ ಹಿತಾಸಕ್ತಿಯಿಂದ ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಅಬಕಾರಿ ಕಾಯ್ದೆ 1965ರ ಕಲಂ 21 ರಲ್ಲಿ ದತ್ತವಾದ ಅಧಿಕಾರದಂತೆ ಆಗಸ್ಟ್, 29 ರಂದು ಬೆಳಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ ಮಡಿಕೇರಿ ನಗರದ ವ್ಯಾಪ್ತಿಯಲ್ಲಿ, ಸೆಪ್ಟೆಂಬರ್, 06 ರಂದು ಬೆಳಗ್ಗೆ 6 ಗಂಟೆಯಿಂದ ಸೆಪ್ಟೆಂಬರ್, 07 ರ ಬೆಳಗ್ಗೆ 10 ಗಂಟೆಯವರೆಗೆ ವಿರಾಜಪೇಟೆ ನಗರ ಹಾಗೂ ಅದರ ಸುತ್ತಮುತ್ತಲಿನ ಸುಮಾರು […]