ಮೃ*ತ ಹಂದಿಯನ್ನು ರಸ್ತೆ ಬದಿ ಎಸೆದು ಅನಾಗರಿಕ ವರ್ತನೆ – ಕ್ರಮಕ್ಕೆ ಗಾಳಿಬೀಡು ಗ್ರಾಮಸ್ಥರ ಆಗ್ರಹ

ಮಡಿಕೇರಿ : ಮೃ*ತ ಹಂದಿಯನ್ನು ರಸ್ತೆ ಬದಿಯಲ್ಲಿ ಎಸೆದು ಹೋಗಿರುವ ಘಟನೆ ಗಾಳಿಬೀಡು ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಗ್ರಾಮದ ಯಾಲದಾಳು ಶರತ್ ಎಂಬವರ ತೋಟಕ್ಕೆ ಹೋಗುವ ರಸ್ತೆಯಲ್ಲಿ 2 ದಿನಗಳ ಹಿಂದೆ ಯಾರೋ ತಂದು ಎಸೆದು ಹೋಗಿದ್ದಾರೆ. ಇದು ಆ ಭಾಗದ ಜನರನ್ನು ಆತಂಕಕ್ಕೀಡು ಮಾಡಿದೆ. ಮಾರಕ ಕಾಯಿಲೆಯಿಂದ ಮೃತಪಟ್ಟ ಹಂದಿಯಾಗಿದ್ದರೆ ಇದರಿಂದ ಜನರಿಗೆ ಸಮಸ್ಯೆಯಾಗುವ ಸಾಧ್ಯತೆ ಇದೆ. ಜೊತೆಗೆ ಅದು ಕೊಳೆಯುತ್ತಾ ಹೋದಂತೆ ದುರ್ವಾಸನೆಯಿಂದಾಗಿ ಇಡೀ ಪರಿಸರ ಹಾಳಾಗಲಿದೆ. ಈ ಬಗ್ಗೆ ಸ್ಥಳೀಯಾಡಳಿತ ಎಚ್ಚೆತ್ತು, ಹಂದಿಗಳನ್ನು […]

ಸರ್ಕಾರ ಡಿಜೆ ನಿಷೇಧ ಮಾಡಿಲ್ಲ ಎಂದ ಸಚಿವ ಶಿವರಾಜ ತಂಗಡಗಿ – ಆದ್ರೆ ಆಯೋಜಕರು ಈ ಬಗ್ಗೆ ಗಮನ ಹರಿಸದಿದ್ರೆ ಸಮಸ್ಯೆ ಆಗೋದು ನಿಶ್ಚಿತ..!

ಕೊಪ್ಪಳ : ಈ ಬಾರಿಯ ಗೌರಿ ಗಣೇಶ ಹಬ್ಬದಲ್ಲಿ ಡಿಜೆ ಬಳಕೆ ಸಂಬಂಧಿತವಾಗಿ ಆಯೋಜಕರಲ್ಲಿ ಗೊಂದಲ, ಆತಂಕ ಇದೆ. ಈ ನಡುವೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿನ ಶಿವರಾಜ ತಂಗಡಗಿ ಹೇಳಿಕೆ ಕೊಟ್ಟಿದ್ದು, ಸರ್ಕಾರ ಡಿಜೆ ನಿಷೇಧ ಮಾಡಿಲ್ಲ ಎಂದಿದ್ದಾರೆ. ಗಣೇಶ ಹಬ್ಬದಲ್ಲಿ ಡಿಜೆ ಬಳಕೆ ಕುರಿತು ಸರ್ಕಾರದ ಮಾರ್ಗಸೂಚಿ ಪ್ರಕಾರ ನಡೆಸಲಾಗುತ್ತದೆ. ಈ ವಿಷಯದಲ್ಲಿ ಬಿಜೆಪಿ ಜನರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದೆ. ಸರ್ಕಾರ ಡಿಜೆ ನಿಷೇಧ ಮಾಡಿಲ್ಲ. ಡಿಜೆ ಬಳಕೆಗೆ ಕೋರ್ಟ್‌ ಮಾರ್ಗಸೂಚಿಯ […]

ʼರಸ್ತೆ ಕಾಣೆಯಾಗಿದೆʼ – ವಾಹನ ಸವಾರರು ಎಚ್ಚರಿಕೆಯಿಂದ ಸಂಚರಿಸಿ..! – ಕೊಡಗಿನ ರಸ್ತೆಗಳ ಶೋಚನೀಯ ಸ್ಥಿತಿಗೆ ಕನ್ನಡಿ ಹಿಡಿದ ಬ್ಯಾನರ್..!

ಸಿದ್ದಾಪುರ : ಕೊಡಗು ಜಿಲ್ಲೆಯಲ್ಲಿ ಬಹುತೇಕ ರಸ್ತೆಗಳ ಸ್ಥಿತಿ ಬಹಳ ಶೋಚನೀಯವಾಗಿದೆ. ಎಲ್ಲೆಡೆ ಹೊಂಡ ಗುಂಡಿಗಳಿಂದ ಕೂಡಿರುವ ರಸ್ತೆಗಳಿಂದಾಗಿ ವಾಹನ ಸಂಚಾರಕ್ಕೆ ಸಮಸ್ಯೆಯಾಗುತ್ತಿದೆ. ಕೊಡಗು ಜಿಲ್ಲೆಯಲ್ಲಿ ಎಲ್ಲಿ ಉತ್ತಮ ರಸ್ತೆ ಇದೆ ಅಂತ ಹುಡುಕುವ ಪರಿಸ್ಥಿತಿ ಎದುರಾಗಿದೆ ಎಂದರೆ ತಪ್ಪಾಗಲಾರದು. ಈ ನಡುವೆ ಮಳೆಗಾಲದಲ್ಲಿ ರಸ್ತೆಗಳು ಹಾಳಾಗಿರುವುದರಿಂದಾಗಿ ಸರ್ಕಾರ ವಿಶೇಷ ಪ್ಯಾಕೇಜ್‌ ಅನ್ನು ಜಿಲ್ಲೆಗೆ ನೀಡಬೇಕೆಂಬ ಆಗ್ರಹವೂ ವ್ಯಕ್ತವಾಗುತ್ತಿದೆ. ಇದರ ನಡುವೆ ಸರ್ಕಾರವನ್ನು ಅಣಕಿಸುವ ರೀತಿಯಲ್ಲಿ ಒಂದಷ್ಟು ಪೋಸ್ಟ್‌ಗಳು ಗಮನಸೆಳೆಯುತ್ತಿದೆ. ಜಿಲ್ಲೆಯ ನೆಲ್ಯಹುದಿಕೇರಿಯ ಮುಖ್ಯ ರಸ್ತೆ ಬದಿಯಲ್ಲಿ […]

ಕಿರು ಆಹಾರ ಸಂಸ್ಕರಣಾ ಉದ್ಯಮಕ್ಕೆ ಅವಕಾಶ: 15.20 ಕೋಟಿ ರೂ. ಸಾಲ ಮಂಜೂರು

Food processing industry

ಮಡಿಕೇರಿ:- ಕಿರು ಆಹಾರ ಸಂಸ್ಕರಣಾ ಉದ್ಯಮಕ್ಕೆ ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಸಹಾಯಧನ ದೊರೆಯಲಿದ್ದು, ಈ ಅವಕಾಶ ಬಳಸಿಕೊಂಡು ಸ್ವಉದ್ಯೋಗ ಕೈಗೊಳ್ಳುವತ್ತ ಗಮನಹರಿಸಬೇಕು ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಕರೆ ನೀಡಿದ್ದಾರೆ. ಪ್ರಧಾನಮಂತ್ರಿಯವರ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮ ಬದ್ಧಗೊಳಿಸುವಿಕೆ(ಪಿಎಂಎಫ್‍ಎಂಇ) ಯೋಜನೆ ಕುರಿತು ನಗರದ ಜಿ.ಪಂ.ಸಭಾಂಗಣದಲ್ಲಿ ಶುಕ್ರವಾರ ನಡೆದ ಅರಿವು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಆತ್ಮ ನಿರ್ಭರ ಭಾರತ ಅಭಿಯಾನದಡಿ ಕಿರು ಆಹಾರ ಸಂಸ್ಕರಣಾ ಉದ್ಯಮ ಅಭಿವೃದ್ಧಿಗೆ ವಿಫುಲ ಅವಕಾಶವಿದೆ. ಆ […]

ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಖಂಡಿಸಿ ಜಿಲ್ಲಾ ಬಿಜೆಪಿಯಿಂದ ಆ.22ರಂದು ಮಡಿಕೇರಿಯಲ್ಲಿ ಪ್ರತಿಭಟನೆ

ಮಡಿಕೇರಿ : ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಖಂಡಿಸಿ ಕೊಡಗು ಜಿಲ್ಲಾ ಬಿಜೆಪಿ ವತಿಯಿಂದ ಆ.22ರಂದು ಪ್ರತಿಭಟನೆ ನಡೆಯಲಿದೆ. ಬೆಳಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ಹಮ್ಮಿಕೊಂಡಿದ್ದು, ಹಿಂದುಗಳ ಧಾರ್ಮಿಕ ಶ್ರದ್ಧಾ ಕೇಂದ್ರದ ಮೇಲೆ ನಡೆಯುತ್ತಿರುವ ಅಪಪ್ರಚಾರದ ಹಾಗೂ ಇದನ್ನು ತಡೆಯುವಲ್ಲಿ ವಿಫಲವಾಗಿರುವ ರಾಜ್ಯ ಸರ್ಕಾರದ ಧೋರಣೆ ಖಂಡಿಸಲಾಗುವುದೆಂದು ಜಿಲ್ಲಾ ಬಿಜೆಪಿ ವಕ್ತಾರ ಬಿ.ಕೆ. ಅರುಣ್‌ ಕುಮಾರ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಗೋಣಿಕೊಪ್ಪ ಕಾವೇರಿ ದಸರಾ ಸಮಿತಿ ಅಧ್ಯಕ್ಷರಾಗಿ ಕೆ.ಜಿ. ರಾಮಕೃಷ್ಣ ಆಯ್ಕೆ

ಗೋಣಿಕೊಪ್ಪ : ಶ್ರೀ ಕಾವೇರಿ ದಸರಾ ಸಮಿತಿಯ ೪೭ನೇ ದಸರಾ ಜನೋತ್ಸವದ ಅಧ್ಯಕ್ಷರಾಗಿ ಗ್ರಾ.ಪಂ. ಸದಸ್ಯ ಕೆ.ಜಿ. ರಾಮಕೃಷ್ಣ ಆಯ್ಕೆಯಾಗಿದ್ದಾರೆ. ಗುರುವಾರ ನಡೆದ ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ಸರ್ವ ಸದಸ್ಯರ ಒಮ್ಮತ ಈ ಆಯ್ಕೆ ನಡೆದಿದೆ. ಈ ಸಂದರ್ಭ ಮಾತನಾಡಿದ ನೂತನ ಅಧ್ಯಕ್ಷರು ಜನೋತ್ಸವವನ್ನು ವಿಭಿನ್ನವಾಗಿ ಆಚರಿಸಲು ಸರ್ವರ ಸಹಕಾರದೊಂದಿಗೆ ಮುಂದುವರೆಯುವುದಾಗಿ ತಿಳಿಸಿದ್ದಾರೆ. ಈ ಆಯ್ಕೆಯ ಸಂದರ್ಭ ಗ್ರಾ.ಪಂ. ಅಧ್ಯಕ್ಷ ಪ್ರಮೊದ್ ಗಣಪತಿ, ಉಪಾಧ್ಯಕ್ಷೆ ಮಂಜುಳ, ಪಿ.ಡಿ.ಓ ತಿಮ್ಮಯ್ಯ ಹಾಗೂ ಸದಸ್ಯರು ಹಾಜರಿದ್ದರು.

ಬಾಲ ಗೋಕುಲ ವತಿಯಿಂದ ಸಂಭ್ರಮದಿಂದ ಜರುಗಿದ ಶ್ರೀಕೃಷ್ಣ ಜನ್ಮಾಷ್ಟಮಿ & ಛದ್ಮವೇಷ ಸಮಾಗಮ

ಮಡಿಕೇರಿ : ಕೇಶವ ಸ್ಮೃತಿ ಸಂವರ್ಧನ ಸಮಿತಿ ಮತ್ತು ಬಾಲ ಗೋಕುಲ ಮಡಿಕೇರಿ ವತಿಯಿಂದ ಮಡಿಕೇರಿಯ ಮಹದೇವಪೇಟೆಯಲ್ಲಿರುವ ಚೌಡೇಶ್ವರಿ ದೇವಾಲಯದ ಸಭಾಂಗಣದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ʼಶ್ರೀ ಕೃಷ್ಣ, ರುಕ್ಮಣಿ, ರಾಧೆ, ದೇವಕಿ, ಯಶೋಧೆ ಹಾಗೂ ವಸುದೇವರʼ ಛದ್ಮವೇಷ ಸಮಾಗಮ ಕಾರ್ಯಕ್ರಮ ನಡೆಯಿತು. ಮುಖ್ಯ ಭಾಷಣಕಾರರಾಗಿ ಭಾಗವಹಿಸಿ ಮಾತನಾಡಿದ ಬಾಲಗೋಕುಲ ಸಮಿತಿಯ ಕರ್ನಾಟಕ ದಕ್ಷಿಣ ಪ್ರಾಂತ ಪ್ರಮುಖರಾದ ಉಮೇಶ್‌, ನೈತಿಕ ವೌಲ್ಯ ಕುಸಿಯುತ್ತಿರುವ ಈ ಕಾಲಘಟ್ಟದಲ್ಲಿ ಸಾಮಾಜಿಕ ಅಧಃಪತನ ಉಂಟಾಗುತ್ತಿದ್ದು, ಮಾನವೀಯ ವೌಲ್ಯ ಬೆಳೆಸುವ ಸಾಂಸ್ಕೃತಿಕ […]

ಕುಶಾಲನಗರ : ಧರ್ಮಸ್ಥಳ ವಿರೋಧಿಗಳ ವಿರುದ್ಧ ಪ್ರತಿಭಟನೆ – ರಾಷ್ಟ್ರ ರಕ್ಷಣಾ ಪಡೆ ಸ್ಥಾಪಕ ಪುನೀತ್‌ ಕೆರೆಹಳ್ಳಿ ಪೊಲೀಸ್‌ ವಶಕ್ಕೆ..!

ಕುಶಾಲನಗರ : ಧರ್ಮಸ್ಥಳ ವಿರುದ್ಧ ಕೆಲವರು ಷಡ್ಯಂತ್ರ ಮಾಡುತ್ತಿದ್ದಾರೆಂದು ಆರೋಪಿಸಿ ವಿವಿಧ ಸಂಘಟನೆಗಳು ಕುಶಾಲನಗರದಲ್ಲಿ ಪ್ರತಿಭಟನಾ ಸಮಾವೇಶ ಹಮ್ಮಿಕೊಂಡಿದ್ದವು. ಈ ಕಾರ್ಯಕ್ರಮದಲ್ಲಿ ರಾಷ್ಟ್ರ ರಕ್ಷಣಾ ಪಡೆ ಸಂಸ್ಥಾಪಕ ಪುನೀತ್ ಕೆರೆಹಳ್ಳಿ(punith kerehalli) ಮುಖ್ಯ ಭಾಷಣ ಮಾಡಬೇಕಿತ್ತು. ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸಿದ ಪುನೀತ್‌ಗೆ ಪೊಲೀಸರು ಅವಕಾಶ ನೀಡಲಿಲ್ಲ. ವಶಕ್ಕೆ ಪಡೆಯಲು ಮುಂದಾದಾಗ ಸಂಘಟನೆ ಕಾರ್ಯಕರ್ತರು ಮತ್ತು ಪೊಲೀಸರ ನಡುವೆ ವಾಗ್ವಾದ ನಡೆಯಿತು. ನಂತರ ಅಲ್ಲಿ ನೆರೆದಿದ್ದ ಕಾರ್ಯಕರ್ತರನ್ನು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಸೂಚಿಸಿದ ಪುನೀತ್‌ ಅಲ್ಲಿಂದ ತೆರಳಿದರು. ಈ ಬೆಳವಣಿಗೆಯಿಂದ […]

ಸುಳ್ಯ ಪಿಜಿಯಲ್ಲಿ ಕೊಡಗಿನ ವಿದ್ಯಾರ್ಥಿ ಆತ್ಮಹತ್ಯೆ..!

ಸುಳ್ಯ : ಪಿಜಿಯೊಂದರಲ್ಲಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸುಳ್ಯದಲ್ಲಿ ನಡೆದಿದೆ. ಅಭಿ(20) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ. ಕೊಡಗು ಜಿಲ್ಲೆಯ ವೀರಾಜಪೇಟೆ ಕಲ್ಲುಬಾಣೆ ನಿವಾಸಿ ವಿಜು ಹಾಗೂ ಸುಮತಿ ದಂಪತಿಯ ಪುತ್ರ ಅಭಿ ಸುಳ್ಯದ ಕೆವಿಜಿ ವಿದ್ಯಾಸಂಸ್ಥೆಯಲ್ಲಿ ವ್ಯಾಸಂಗ ಮಾಡುತ್ತಿದ್ದ. ಪಿಜಿಯಲ್ಲಿದ್ದುಕೊಂಡು ಕಾಲೇಜಿಗೆ ಹೋಗುತ್ತಿದ್ದು, ಇಂದು ಬೆಳಗ್ಗೆ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.  ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ನಾಳೆ ಕೊಡಗಿನ ಈ ಪ್ರದೇಶಗಳಲ್ಲಿ ಕರೆಂಟ್‌ ಇರಲ್ಲ

Power Cut

ಪೊನ್ನಂಪೇಟೆ ಹಾಗೂ ಶ್ರೀಮಂಗಲ ವಿದ್ಯುತ್ ಉಪ ಕೇಂದ್ರದಲ್ಲಿ ದುರಸ್ತಿ ಕಾರ್ಯ ಕೈಗೆತ್ತಿಕೊಂಡಿರುವ ಹಿನ್ನೆಲೆ, ಎಫ್1 ನಲ್ಲೂರು, ಎಫ್2 ಬಾಳೆಲೆ, ಎಫ್4 ತಿತಿಮತಿ, ಎಫ್5 ಪಾಲಿಬೆಟ್ಟ, ಎಫ್6 ಬೇಗೂರು, ಎಫ್7 ಗೋಣಿಕೊಪ್ಪ, ಎಫ್8 ಪೊನ್ನಂಪೇಟೆ, ಎಫ್9 ಹಾತೂರು, ಎಫ್10 ಹೈಸೊಡ್ಲೂರು, ಎಫ್1 ಬಿರುನಾಣಿ, ಎಫ್2 ಕುಟ್ಟ, ಎಫ್3 ಶ್ರೀಮಂಗಲ, ಎಫ್4 ಕಾನೂರು, ಎಫ್5 ಕೆ.ಬಾಡಗ, ಎಪ್6 ಬೀರುಗ, ಎಫ್7 ಟಿ.ಶೆಟ್ಟಗೇರಿ, ಈ ಫೀಡರ್‍ಗಳಿಂದ ಹೊರಹೊಮ್ಮುವ ಸುಳುಗೋಡು, ಕೋಣನಕಟ್ಟೆ, ಕೊಟ್ಟಗೇರಿ, ದೇವನೂರು, ಕಿರಗೂರು, ನಿಟ್ಟೂರು, ಜಾಗಲೆ, ಅರವತೋಕ್ಲು, ದೇವರಪುರ, ಕಾಯಿಮನೆ, […]