ಕೆಎಸ್‌ಸಿಎ ಮಹಾರಾಣಿ ಟ್ರೋಫಿ ಕ್ರಿಕೆಟ್‌ – ಶಿವಮೊಗ್ಗ ಲಯನ್ಸ್‌ ತಂಡದಲ್ಲಿ ಶ್ರೀನಿತಿ ಪಿ. ರೈ

ಮಡಿಕೇರಿ : ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆ ಆಯೋಜಿಸುವ ಮಹಾರಾಣಿ ಟ್ರೋಫಿ ಕ್ರಿಕೆಟ್‌ ಟೂರ್ನಿಗೆ ಕೊಡಗು ಮೂಲದ ಶ್ರೀನಿತಿ ಪ್ರಕಾಶ್‌ ರೈ ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ನಡೆದ ಬಿಡ್ಡಿಂಗ್‌ ಪ್ರಕ್ರಿಯೆಯಲ್ಲಿ ಶಿವಮೊಗ್ಗ ಲಯನ್ಸ್ ತಂಡ 80,000 ರೂ.ಗೆ ಎಡಗೈ ಸ್ಪಿನ್ನರ್ ಶ್ರೀನಿತಿ ಅವರನ್ನು ಖರೀದಿಸಿದೆ. ರಾಜ್ಯ ಮಹಿಳಾ ಕ್ರಿಕೆಟ್‌ ತಂಡವನ್ನು ಪ್ರತಿನಿಧಿಸುತ್ತಿರುವ ಇವರು, ಕಳೆದ ವರ್ಷ 19 ಮತ್ತು 23 ವರ್ಷದೊಳಗಿನ ತಂಡವನ್ನು ಪ್ರತಿನಿಧಿಸಿದ್ದರು. 19 ವರ್ಷದೊಳಗಿನವರ ಟಿ20 ಟೂರ್ನಿಯಲ್ಲಿ ಅತಿ ಹೆಚ್ಚು ವಿಕೆಟ್ ಪಡೆದು ಗಮನ ಸೆಳೆದಿದ್ದರು. […]

ಬಯಲಾಗುತ್ತಾ ʼಬುರುಡೆʼ ರಹಸ್ಯ..? – ನೇತ್ರಾವತಿ ತೀರದಲ್ಲಿ SITಯಿಂದ ಉತ್ಕನನ ಶುರು – ಹಿಟಾಚಿ ಮೂಲಕ ಕಾರ್ಯಾಚರಣೆ ಮುಂದುವರಿಕೆ..!

ಧರ್ಮಸ್ಥಳ : ನೂರಕ್ಕೂ ಹೆಚ್ಚು ಶವಗಳನ್ನು ಹೂತಿದ್ದಾಗಿ ಹೇಳಿದ ವ್ಯಕ್ತಿಯ ವಿಚಾರದಲ್ಲಿ ತನಿಖೆ ಆರಂಭಿಸಿರುವ ಎಸ್‌ಐಟಿ ನೇತ್ರಾವತಿ ನದಿ ತೀರದಲ್ಲಿ ಉತ್ಕನನ ಆರಂಭಿಸಿದೆ. ನಿನ್ನೆ ಈ ವ್ಯಾಪ್ತಿಯ 13 ಸ್ಥಳಗಳನ್ನು ದೂರುದಾರ ವ್ಯಕ್ತಿಯ ಸಮ್ಮುಖದಲ್ಲಿ ಗುರುತು ಮಾಡಲಾಗಿತ್ತು. ಇಂದು ಬೆಳಗ್ಗೆ ತನಿಖಾಧಿಕಾರಿಗಳು ವಿವಿಧ ಅಧಿಕಾರಿಗಳ ಸಮ್ಮುಖದಲ್ಲಿ ಕಾರ್ಮಿಕರ ಸಹಾಯದಿಂದ ಕಳೇಬರಕ್ಕಾಗಿ ಉತ್ಕನನ ಆರಂಭಿಸಿದರು. ಪಾಯಿಂಟ್‌ 01ರಲ್ಲಿ ಮಳೆಯ ನಡುವೆಯೂ ಮಧ್ಯಾಹ್ನವರೆಗೆ ಅಗೆದಾಗ ಯಾವುದೇ ಕುರುಹು ಸಿಗಲಿಲ್ಲ. ತನಿಖಾ ತಂಡದ ಎಂ.ಎನ್.‌ ಅನುಚೇತ್‌ ಕೂಡಾ ಖುದ್ದು ಸ್ಥಳದಲ್ಲಿದ್ದು ಕಾರ್ಯಾಚರಣೆ […]

ಕೊಡಗಿನಲ್ಲಿ ತಗ್ಗಿದ ಮಳೆಯ ಆರ್ಭಟ: ಜಲಾಶಯಗಳ ನೀರಿನ ಮಟ್ಟ ಹೇಗಿದೆ

Rainfall

ಮಡಿಕೇರಿ:- ಕೊಡಗು (Kodagu) ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 9.56 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 46.68 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 2099.46 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 1996.15 ಮಿ.ಮೀ ಮಳೆಯಾಗಿತ್ತು. ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 20.18 ಮಿ.ಮೀ. ಕಳೆದ ವರ್ಷ ಇದೇ ದಿನ 61.33 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 3144.82 ಮಿ.ಮೀ, ಕಳೆದ ವರ್ಷ […]

ನಟಿ ರಮ್ಯಾಗೆ ದರ್ಶನ್‌ ಫ್ಯಾನ್ಸ್‌ ನಿಂದನೆ – ಕೊನೆಗೂ ಮೌನ ಮುರಿದ ಹ್ಯಾಟ್ರಿಕ್‌ ಹೀರೋ ಶಿವರಾಜ್‌ಕುಮಾರ್‌ – ರಮ್ಯಾ ಜೊತೆ ನಾವಿದ್ದೇವೆ ಎಂದ ಶಿವಣ್ಣ ದಂಪತಿ..!

ಬೆಂಗಳೂರು : ಸೋಷಿಯಲ್‌ ಮೀಡಿಯಾದಲ್ಲಿ ತನ್ನ ವಿರುದ್ಧ ಅಶ್ಲೀಲ ಪದ ಬಳಸಿ ನಿಂದಿಸಿದ ದರ್ಶನ್‌ ಫ್ಯಾನ್ಸ್‌ ವಿರುದ್ಧ ಕಾನೂನು ಹೋರಾಟಕ್ಕೆ ಇಳಿದಿರುವ ಸ್ಯಾಂಡಲ್‌ವುಡ್‌ ತಾರೆ ರಮ್ಯಾಗೆ ಹ್ಯಾಟ್ರಿಕ್‌ ಹೀರೋ ಶಿವರಾಜ್‌ ಕುಮಾರ್‌ ಬೆಂಬಲ ವ್ಯಕ್ತಪಡಿಸಿದ್ದಾರೆ. ನಿಮ್ಮ ನಿಲುವು ಸರಿಯಾಗಿದೆ. ನಿಮ್ಮ ಜೊತೆಗೆ ನಾವು ಸದಾ ನಿಲ್ಲುತ್ತೇವೆಂದು ಶಿವರಾಜ್‌ಕುಮಾರ್‌ ಹಾಗೂ ಗೀತಾ ಶಿವರಾಜ್‌ಕುಮಾರ್‌ ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಹಾಕಿದ್ದಾರೆ. ರಮ್ಯಾ ಅವರ ವಿರುದ್ಧ ಬಳಸಿರುವ ಪದಗಳು ಖಂಡನೀಯ. ಯಾವ ಮಹಿಳೆ ವಿರುದ್ಧವು ಆ ರೀತಿ ಮಾತನಾಡುವುದು ಸರಿಯಲ್ಲ. ಅದನ್ನು […]

ಗೂಗಲ್ ಪೇ, ಫೋನ್ ಪೇ ಬಳಕೆದಾರರೇ ಗಮನಿಸಿ: UPI ನಿಯಮಗಳಲ್ಲಿ ಮಹತ್ವದ ಬದಲಾವಣೆ

UPI payment

ಯೂನಿಫೈಡ್ ಪೇಮೆಂಟ್ ಇಂಟರ್‌ಫೇಸ್ (UPI) ವ್ಯವಸ್ಥೆಯಲ್ಲಿ ಆಗಸ್ಟ್ 1 ರಿಂದ ಮಹತ್ವದ ಬದಲಾವಣೆಗಳು ಜಾರಿಗೆ ಬರಲಿವೆ. ಫೋನ್‌ಪೇ, ಗೂಗಲ್ ಪೇ, ಪೇಟಿಎಂ ಮುಂತಾದ ಯುಪಿಐ ಆ್ಯಪ್​ಗಳನ್ನು ದಿನನಿತ್ಯ ಬಳಸುವವರಿಗೆ ಈ ನಿಯಮ ಅನ್ವಯವಾಗುತ್ತದೆ. ಪ್ರತಿ ಯುಪಿಐ ಆ್ಯಪ್​ನಲ್ಲಿ ಕೆಲ ಬಳಕೆದಾರರು ಪದೇ ಪದೇ ತಮ್ಮ ಬ್ಯಾಲೆನ್ಸ್ ಚೆಕ್​ ಮಾಡುತ್ತಾರೆ. ಈಗ ಬ್ಯಾಲನ್ಸ್ ಪರಿಶೀಲನೆ, ಆಟೊಪೇಯಂತಹ ಫೀಚರ್​ಗಳಿಂದ ಹಿಡಿದು ಎಪಿಐ ಬಳಕೆ ಸಂಬಂಧ ಪರಿಷ್ಕೃತ ಮಾರ್ಗಸೂಚಿಯವರೆಗೆ ಕ್ರಮ ಬದಲಾವಣೆ ಮಾಡಲಾಗುತ್ತಿದೆ. ಯುಪಿಐ ಬಳಕೆ ಈಗ ಬಹಳಷ್ಟು ಆಗುತ್ತಿದೆ. ಒಂದು […]

ಬೇಗೂರು ರಸ್ತೆ ಸಂಪರ್ಕ ಕಡಿತ

Begur road

ಬೇಗೂರು ರಸ್ತೆ ಸಂಪರ್ಕ ಕಡಿತ ಬಾರೀ ಮಳೆಗೆ ಪೊನ್ನಂಪೇಟೆ ತಾಲೂಕು ಕುಟ್ಟ ಬಾಡಗ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೇಗೂರು ಸಂಪರ್ಕ ರಸ್ತೆ ಕುಸಿದು ಸಂಪರ್ಕ ಕಡಿತಗೊಂಡಿದೆ. ವಿಷಯ ಅರಿತು ಕೂಡಲೇ ಸ್ಪಂದಿಸಿ ಸ್ಥಳ ಕ್ಕೆ ಭೇಟಿ ನೀಡಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಧರ್ಮಜ ಉತ್ತಪ್ಪ, ಡಿ.ಸಿ.ಸಿ. ಪದಾಧಿಕಾರಿಗಳಾದ ಮುಕ್ಕಾಟೀರ ಸಂದಿಪ್, ಚೊಟ್ಟಿಯನಮಾಡ ವಿಶು ರಂಜಿ, ಅನುಷ್ಠಾನ ಸಮಿತಿ ಅಧ್ಯಕ್ಷರಾದ ಕಾಳೀಮಾಡ ಪ್ರಶಾಂತ್, ಆಲೇಮಾಡ ಸೋಮಣ್ಣ ಅವರು ತಾತ್ಕಾಲಿಕವಾಗಿ ಕೂಡಲೇ ರಸ್ತೆ ಸರಿಪಡಿಸಿ ಮುಂದಿನ ದಿನಗಳಲ್ಲಿ ಮಳೆ ಕಳೆದ […]

ವಿಶ್ವ ಹಿಂದು ಪರಿಷತ್‌ ಕುಶಾಲನಗರ ಅಧ್ಯಕ್ಷರಾಗಿ ವಸಂತ ರೈ ಆಯ್ಕೆ

ಕುಶಾಲಗರ : ವಿಶ್ವ ಹಿಂದು ಪರಿಷತ್‌ ಕುಶಾಲನಗರ ಅಧ್ಯಕ್ಷರಾಗಿ ಉದ್ಯಮಿ ವಸಂತ್‌ ರೈ ಆಯ್ಕೆಯಾಗಿದ್ದಾರೆ. ಕುಶಾಲನಗರದ ವಾಸವಿ ಸಭಾಂಗಣದಲ್ಲಿ ನಡೆದ ವಿಎಚ್‌ಪಿ ಮುಖಂಡರ ಸಭೆಯಲ್ಲಿ ನೂತನ ನಗರಾಧ್ಯಕ್ಷರನ್ನು ಆಯ್ಕೆ ಮಾಡಲಾಯಿತು. ಸಂಘಟನೆಯ ರಾಜ್ಯ ಕಾರ್ಯದರ್ಶಿ ಶರಣ್‌ ಪಂಪ್ವೆಲ್‌ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಸಂಘಟನೆಯ ಕಾರ್ಯಚಟುವಟಿಕೆಗಳ ಬಗ್ಗೆ ಚರ್ಚಿಸಲಾಯಿತು. ನೂತನವಾಗಿ ಆಯ್ಕೆಯಾದ ವಸಂತ್‌ ರೈ ಅವರು ಅನುಮತಿ ಪಡೆದ ವಿದ್ಯುತ್‌ ಗುತ್ತಿಗೆದಾರರ ಸಂಘ ಹಾಗೂ ಯುವ ಬಂಟ್ಸ್ ಅಸೋಸಿಯೇಷನ್‌ನಲ್ಲಿ ಪ್ರಮುಖ ಜವಾಬ್ದಾರಿಯನ್ನು ನಿರ್ವಹಿಸಿದ್ದಾರೆ.

ಸಂಪಾಜೆ ಗ್ರಾಮ ವ್ಯಾಪ್ತಿಯಲ್ಲಿ ನೂತನ ರಸ್ತೆ ಉದ್ಘಾಟಿಸಿದ ಶಾಸಕ ಎ.ಎಸ್.‌ ಪೊನ್ನಣ್ಣ

ಸಂಪಾಜೆ : ಸಂಪಾಜೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಡಾವು ಬಳಿ ದುಗ್ಗಳ ಭಾಗದಲ್ಲಿ ೫ ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲಾಗಿರುವ ಕಾಂಕ್ರೀಟ್ ರಸ್ತೆಯನ್ನು ಶಾಸಕ ಎ.ಎಸ್.ಪೊನ್ನಣ್ಣ ಇತ್ತೀಚೆಗೆ ಉದ್ಘಾಟಿಸಿದರು. ಅದೇ ರೀತಿ ಬಂಟೋಡಿಯಲ್ಲಿ ನಿರ್ಮಿಸಲಾಗಿರುವ ಕಾಂಕ್ರೀಟ್ ರಸ್ತೆಯನ್ನು ಲೋಕಾರ್ಪಣೆಗೊಳಿಸಿದರು. ಗ್ರಾಮ ವ್ಯಾಪ್ತಿಯ ಮುಖಂಡರು, ಸಾರ್ವಜನಿಕರು ಈ ಸಂದರ್ಭ ಉಪಸ್ಥಿತರಿದ್ದರು.

ಅಧಿಕಾರಿಗಳು ತಳಮಟ್ಟದಲ್ಲಿ ಜನಸ್ನೇಹಿಯಾಗಿ ಕರ್ತವ್ಯ ನಿರ್ವಹಿಸಬೇಕು : ಶಾಸಕ ಎ.ಎಸ್.ಪೊನ್ನಣ್ಣ

ಮಡಿಕೇರಿ : ಅರಣ್ಯಕ್ಕೆ ಸಂಬಂಧಿಸಿದಂತೆ ಹಲವು ಸಮಸ್ಯೆ ಪರಿಹರಿಸಲು ಅಧಿಕಾರಿಗಳು ಮುಂದಾಗಬೇಕು. ಆ ನಿಟ್ಟಿನಲ್ಲಿ ತಳಮಟ್ಟದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಜನಸ್ನೇಹಿಯಾಗಿ ಕರ್ತವ್ಯ ನಿರ್ವಹಿಸಬೇಕು ಎಂದು ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ತಿಳಿಸಿದ್ದಾರೆ. ಸಂಪಾಜೆ, ಚೆಂಬು, ಪೆರಾಜೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅರಣ್ಯಕ್ಕೆ ಸಂಬಂಧಿಸಿದ ಹಲವು ವಿಚಾರಗಳ ಕುರಿತು ಅರಣ್ಯ ಅಧಿಕಾರಿಗಳು ಹಾಗೂ ಸಾರ್ವಜನಿಕರ ಜೊತೆ ಚೆಂಬು ಗ್ರಾ.ಪಂ.ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಶಾಸಕರು ಮಾತನಾಡಿದರು. ಅರಣ್ಯ ಇಲಾಖೆ ಅಧಿಕಾರಿಗಳು […]

ರಸ್ತೆ ಸಮಸ್ಯೆಯಿಂದ ಅಪಘಾತ ಸಂಭವಿಸಿದರೆ ಅಧಿಕಾರಿಗಳ ವಿರುದ್ಧ ಸುಮೊಟೋ ಪ್ರಕರಣ – ಜಿಲ್ಲಾಧಿಕಾರಿ ವೆಂಕಟ್‌ ರಾಜಾ ಎಚ್ಚರಿಕೆ

ಮಡಿಕೇರಿ : ಜಿಲ್ಲೆಯಲ್ಲಿನ ರಾಷ್ಟ್ರೀಯ ಹೆದ್ದಾರಿ, ಲೋಕೋಪಯೋಗಿ ಹಾಗೂ ಪಂಚಾಯತ್ ರಾಜ್ ಇಲಾಖೆ ವ್ಯಾಪ್ತಿಯ ರಸ್ತೆಯನ್ನು ಸಮರ್ಪಕವಾಗಿ ನಿರ್ವಹಿಸುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಸ್ಪಷ್ಟ ನಿರ್ದೇಶನ ನೀಡಿದ್ದಾರೆ. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ‘ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆ’ಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಅಗತ್ಯವಿರುವ ಕಡೆಗಳಲ್ಲಿ ವೇಗ ನಿಯಂತ್ರಣ ಸಂಬಂಧ ಹಂಪ್‌ಗಳನ್ನು ಅಳವಡಿಸುವುದು. ಜೊತೆಗೆ ಎದ್ದು ಕಾಣುವಂತೆ ಬಿಳಿ ಪಟ್ಟೆ ಬರೆಯುವುದು. ರಸ್ತೆ ಬದಿ ಗಿಡಗಂಟಿಗಳನ್ನು ಕಡಿಯುವುದು, ರಸ್ತೆ […]