ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಹಾಕಿ ಪಂದ್ಯಾವಳಿ ಆ.೧೨ಕ್ಕೆ

ಮಡಿಕೇರಿ : ಪದವಿ ಪೂರ್ವ ಶಿಕ್ಷಣ ಇಲಾಖೆ, ಸರ್ಕಾರಿ ಪದವಿ ಪೂರ್ವ ಕಾಲೇಜು, ಇವರ ಸಂಯುಕ್ತಾಶ್ರಯದಲ್ಲಿ ಮಡಿಕೇರಿ ತಾಲ್ಲೂಕು ಮಟ್ಟದ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಹಾಕಿ ಪಂದ್ಯಾವಳಿ ಆಗಸ್ಟ್ ೧೨ ರಂದು ಬೆಳಗ್ಗೆ ೯ ಗಂಟೆಗೆ ನಗರದ ಭಾರತೀಯ ಕ್ರೀಡಾ ಪ್ರಾಧಿಕಾರದ ಸಾಯಿ ಹಾಕಿ ಮೈದಾನದಲ್ಲಿ ನಡೆಯಲಿದೆ. ಪ್ರಾಧಿಕಾರದ ಸಹಾಯಕ ನಿರ್ದೇಶಕರಾದ ಮಿನಿ ಉಣ್ಣಿರಾಜ್ ಹಾಗೂ ಇತರರು ಪಾಲ್ಗೊಳ್ಳಲಿದ್ದಾರೆ.

ಜವಾಹರ್‌ ನವೋದಯ ವಿದ್ಯಾಲಯ ೧೧ ನೇ ತರಗತಿ ವಿಜ್ಞಾನ ಮತ್ತು ವಾಣಿಜ್ಯ ವಿಭಾಗದ ಪ್ರವೇಶಕ್ಕೆ ಅರ್ಜಿ ಆಹ್ವಾನ

ಮಡಿಕೇರಿ : ಗಾಳಿಬೀಡು ಜವಾಹರ ನವೋದಯ ವಿದ್ಯಾಲಯದಲ್ಲಿ ೨೦೨೫-೨೬ ನೇ ಸಾಲಿನ ಖಾಲಿ ಇರುವ ೧೧ ನೇ ತರಗತಿಯ ವಿಜ್ಞಾನ ಮತ್ತು ವಾಣಿಜ್ಯ ವಿಭಾಗದ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಕೊಡಗು ಜಿಲ್ಲೆಯ ಅರ್ಹ ಅಭ್ಯರ್ಥಿಗಳು ಸಿಬಿಎಸ್‌ಇ ಅಥವಾ ಮಾನ್ಯತೆ ಪಡೆದ ರಾಜ್ಯ ಮಂಡಳಿಯಿAದ ಹತ್ತನೇ ತರಗತಿ ಪಾಸಾಗಿದ್ದು, ಕನಿಷ್ಠ ಶೇ.೬೦ ಅಂಕಗಳನ್ನು ಪಡೆದಿರಬೇಕು. ವಿಜ್ಞಾನ ಮತ್ತು ವಾಣಿಜ್ಯ ವಿಷಯದಲ್ಲಿ ಕನಿಷ್ಠ ೬೦ ಅಂಕಗಳನ್ನು ಕಡ್ಡಾಯವಾಗಿ ಪಡೆದಿರಬೇಕು. ಅರ್ಜಿ ಸಲ್ಲಿಸಲು ಆನ್‌ಲೈನ್ ಮತ್ತು ಆಪ್‌ಲೈನ್ ಎರಡು ಮಾರ್ಗಗಳಲ್ಲಿ ಅವಕಾಶವಿದ್ದು, […]

ಪರಿಸರ ಸ್ನೇಹಿಯಾಗಿ ಗೌರಿ-ಗಣೇಶ ಹಬ್ಬ ಆಚರಿಸಲು ಜಿಲ್ಲಾಡಳಿತ ಮನವಿ – ಏನು ಮಾಡ್ಬೇಕು? ಏನು ಮಾಡ್ಬಾರ್ದು..? ಇಲ್ಲಿದೆ ನೋಡಿ ಗೈಡ್ಲೈನ್ಸ್

  ಮಡಿಕೇರಿ : ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಕೊಡಗು ಜಿಲ್ಲಾಡಳಿತ ಮನವಿ ಮಾಡಿದೆ. ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ನೈಸರ್ಗಿಕ ಜಲಮೂಲಗಳನ್ನು ಸಂರಕ್ಷಿಸುವ ನಿಟ್ಟಿನಲ್ಲಿ ದಿನಾಂಕ ೨೦-೦೭-೨೦೧೬ ರಂದು ಅಧಿಸೂಚನೆಯನ್ನು ಹೊರಡಿಸಿದ್ದು, ಪ್ಲಾಸ್ಟರ್ ಆಫ್ ಪ್ಯಾರಿಸ್ ಮತ್ತು ಬಣ್ಣ ಲೇಪಿತ ಗೌರಿ ಹಾಗೂ ಗಣೇಶನ ವಿಗ್ರಹಗಳನ್ನು ರಾಜ್ಯದ ಕೆರೆ, ನದಿ, ಕಾಲುವೆ, ಬಾವಿ ಹಾಗೂ ಇತರೆ ಜಲಮೂಲಗಳಲ್ಲಿ ವಿಸರ್ಜಿಸುವುದನ್ನು ನಿಷೇಧಿಸಲಾಗಿದೆ. ಆದ್ದರಿಂದ ಈ ವರ್ಷದ ಗೌರಿ-ಗಣೇಶ ಚರ್ತುರ್ಥಿ ಆಚರಣೆಯನ್ನು ಪರಿಸರಸ್ನೇಹಿಯಾಗಿ ಆಚರಿಸಲು ಸಾರ್ವಜನಿಕರಲ್ಲಿ […]

Power Cut: ನಾಳೆ ಕೊಡಗಿನ ಹಲವೆಡೆ ವಿದ್ಯುತ್ ಕಡಿತ: ಯಾವೆಲ್ಲ ಪ್ರದೇಶಗಳಲ್ಲಿ ಪವರ್‌ ಕಟ್‌

Power Cut

66/11 ಕೆ.ವಿ ಮಡಿಕೇರಿ ವಿದ್ಯುತ್ ಉಪಕೇಂದ್ರದಲ್ಲಿ ನಾಳೆ ಬೆಳಗ್ಗೆ 10.00 ರಿಂದ 5.00 ಗಂಟೆಯವರಗೆ ನಿರ್ವಹಣಾ ಕಾಮಗಾರಿ ನಡೆಯುವ ಕಾರಣದಿಂದ ಮಡಿಕೇರಿ ನಗರ, ರಾಜಾಸೀಟ್ ರಸ್ತೆ, ಗದ್ದಿಗೆ, ಕೋಟೆ, ಕುಂಡಮೇಸ್ತ್ರಿ, ಒಂಕಾರೇಶ್ವರ, ಜೆ.ಟಿ ರಸ್ತೆ, ಕೆ.ಎಸ್.ಆರ್.ಟಿ.ಸಿ, ಮೇಕೇರಿ, ಭಾಗಮಂಡಲ, ಬೊಯಿಕೇರಿ, ಸಂಪಾಜೆ, ಗಾಳಿಬೀಡು, ಮಕ್ಕಂದೂರು, ಹೆಬ್ಬಟ್ಟಗೇರಿ, ಕೆ.ಬಾಡಗ, ಬೆಟ್ಟಗೆರಿ, ಚೆಟ್ಟಿಮಾಣಿ, ಚೇರಂಬಾಣೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಕೋರಲಾಗಿದೆ.

ನವೆಂಬರ್ 18-20ರವರೆಗೆ ಬೆಂಗಳೂರು ಟೆಕ್ ಸಮ್ಮಿತ್-2025 : ಕಂಪನಿಗಳ ಪ್ರಮುಖರೊಂದಿಗೆ ಸಿಎಂ Breakfast Meet

ಬೆಂಗಳೂರು : ನವೆಂಬರ್ 18-20ರ ವರೆಗೆ ನಡೆಯಲಿರುವ ಬೆಂಗಳೂರು ಟೆಕ್ ಸಮ್ಮಿತ್-2025ರ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 100 ಕ್ಕೂ ಹೆಚ್ಚು ಕಂಪನಿಗಳ CEOಗಳ ಜೊತೆ Breakfast Meetನಲ್ಲಿ ಪಾಲ್ಗೊಂಡರು. DCM ಡಿ.ಕೆ.ಶಿವಕುಮಾರ್, ಐಟಿ ಸಚಿವರಾದ ಪ್ರಿಯಾಂಕ್ ಖರ್ಗೆ, ಕಿಯೋನಿಕ್ಸ್ ಅಧ್ಯಕ್ಷ ಶರತ್ ಬಚ್ಚೇಗೌಡ ಮತ್ತು ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. “Futurise” “ಭವಿಷ್ಯೋದಯ” ಧ್ಯೇಯವಾಕ್ಯದೊಂದಿಗೆ 2025ರ ಬೆಂಗಳೂರು ಟೆಕ್ ಸಮ್ಮಿತ್ ಸಂಯೋಜಿದಲಾಗುತ್ತಿದೆ.

ಆಟೋ ರಿಕ್ಷಾ ಮೇಲೆ ಕಾಡಾನೆ ದಾಳಿ – ಪ್ರಯಾಣಿಕನಿಗೆ ಗಂಭೀರ ಗಾಯ..!

ಗೋಣಿಕೊಪ್ಪ : ಕೊಡಗು ಜಿಲ್ಲೆಯಲ್ಲಿ ಕಳೆದ ಕೆಲವು ದಿನದಿಂದ ಕಾಡಾನೆಗಳ ದಾಳಿ ಮಿತಿಮೀರಿದೆ. ಚಲಿಸುತ್ತಿದ್ದ ಆಟೋ ಮೇಲೆ ಕಾಡಾನೆ ದಾಳಿ ಮಾಡಿದ್ದು, ಪ್ರಯಾಣಿಕರೊಬ್ಬರು ಗಂಭೀರ ಗಾಯಗೊಂಡಿರುವ ಘಟನೆ ಇಂಜಿಲಗೆರೆಯಲ್ಲಿ ನಡೆದಿದೆ. ಆಟೋ ರಿಕ್ಷಾ ರಸ್ತೆಯಲ್ಲಿ ತೆರಳುತ್ತಿದ್ದ ಸಂದರ್ಭ ಪಕ್ಕದ ತೋಟದಿಂದ ಏಕಾಏಕಿ ಬಂದ ಕಾಡಾನೆ ದಾಳಿ ಮಾಡಿದೆ. ಆಟೋ ರಿಕ್ಷಾ ಚಾಲಕ ಅಪಾಯದಿಂದ ಪಾರಾಗಿದ್ದರೆ, ರಿಕ್ಷಾದಲ್ಲಿದ್ದ ಪ್ರಯಾಣಿಕ ಪ್ರದೀಪ್‌ ಎಂಬವರು ಗಾಯಗೊಂಡಿದ್ದಾರೆ. ಅವರನ್ನು ಸಿದ್ದಾಪುರ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ […]

ಉದ್ಯಮಿ ಅಜ್ಜಿನಂಡ ಗಣೇಶ್‌ ಅಯ್ಯಣ್ಣ ನಿಧನ…

ಮಡಿಕೇರಿ : ಉದ್ಯಮಿ ಅಜ್ಜಿನಂಡ ಗಣೇಶ್ ಅಯ್ಯಣ್ಣ(68) ಹೃದಯಾಘಾತದಿಂದ ನಿಧನರಾಗಿದ್ದಾರೆ. ಇವರು ಶ್ರೀ ದಂಡಿನ ಮಾರಿಯಮ್ಮ ದೇವಾಲಯದ ಟ್ರಸ್ಟಿ ಆಗಿದ್ದರು. ಕಾಲೇಜು ರಸ್ತೆಯಲ್ಲಿ ಅಂಬಿಕಾ ವಿಡಿಯೋ ಶಾಪ್ ಹೊಂದಿದ್ದರು. ಮೃತರಿಗೆ ಪತ್ನಿ, ಸಾಮಾಜಿಕ ಕಾರ್ಯಕರ್ತೆ ಮೋಂತಿ ಗಣೇಶ್, ಮೂವರು ಮಕ್ಕಳು ಇದ್ದಾರೆ. ಅಂತ್ಯಕ್ರಿಯೆ ನಾಳೆ ಮಧ್ಯಾಹ್ನ ಕೊಡವ ಸಮಾಜ ರುದ್ರ ಭೂಮಿಯಲ್ಲಿ ನಡೆಯಲಿದೆ.

ಧರ್ಮಸ್ಥಳದ ವಿರುದ್ಧ‌ ಅಪಪ್ರಚಾರ: ಮಡಿಕೇರಿಯಲ್ಲಿ ಭಕ್ತರ ಪ್ರತಿಭಟನೆ

ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಧರ್ಮಧಿಕಾರಿಗಳ ಬಗ್ಗೆ ಸಾಮಾಜಿಕ ಜಾಲ ತಾಣದಲ್ಲಿ ಅಪಪ್ರಚಾರ ಮತ್ತು ಭಕ್ತರ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಿದೆ ಎಂದು ಕೊಡಗು ಧರ್ಮಸ್ಥಳ ಭಕ್ತಾಭಿಮಾನಿ ಬಳಗ ವತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿದರು. ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ 300ಕ್ಕೂ ಹೆಚ್ಚು ಪ್ರತಿಭಟನಾಕಾರಾರು ಅಶಾಂತಿ ಮೂಡಿಸುತ್ತಿರುವ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಅಶಾಂತಿ ಮೂಡಿಸುತ್ತಿರುವ ಬಳಿ ಹಲವು ಸಾಕ್ಷಿಗಳು ಇದೆ ಎಂದು ಸಾರುತ್ತಿರುವವರ ಮನೆ, ಕಛೇರಿ ಗಳನ್ನು ತನಿಖೆ ಮಾಡಬೇಕು,ಈಗಿರುವ ತನಿಖಾ ತಂಡ ಎಸ್ ಐ […]

ಕೊಡಗು: ಕಳೆದ 24 ಗಂಟೆ ಅವಧಿಯಲ್ಲಿ ಸುರಿದ ಮಳೆ ಮಾಹಿತಿ ನೋಡಿ

Kodagu rain

ಕೊಡಗು ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 3.63 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 2.70 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 2196.33 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 2317.87 ಮಿ.ಮೀ ಮಳೆಯಾಗಿತ್ತು. ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 3.55 ಮಿ.ಮೀ. ಕಳೆದ ವರ್ಷ ಇದೇ ದಿನ 7.18 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 3304.65 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ […]

ವಿರಾಜಪೇಟೆಯ ರಾಮನಗರದಲ್ಲಿ ಸಮುದಾಯ ಭವನದ ಸ್ಥಳ ವೀಕ್ಷಿಸಿದ ಶಾಸಕ ಪೊನ್ನಣ್ಣ

ವಿರಾಜಪೇಟೆಯ ಬೆಟೋಳಿಯ ರಾಮನಗರದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಸಮುದಾಯ ಭವನದ ಸ್ಥಳ ವೀಕ್ಷಣೆ ಹಾಗೂ ಪರಿಶೀಲನೆಯನ್ನು ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ನಡೆಸಿದರು. ಮೂಲಸೌಕರ್ಯ ಕಲ್ಪಿಸುವುದರೊಂದಿಗೆ ಗ್ರಾಮಕ್ಕೆ ಅವಶ್ಯಕತೆ ಇರುವ ಸಮುದಾಯ ಭವನಕ್ಕಾಗಿ ಈ ಹಿಂದೆ ಮಾನ್ಯ ಶಾಸಕರಲ್ಲಿ ಗ್ರಾಮಸ್ಥರು ತಮ್ಮ ಅಹವಾಲನ್ನು ಹೇಳಿಕೊಂಡಿದ್ದರು. ಇಂದು ಸಮುದಾಯ ಭವನ ನಿರ್ಮಿಸಲು ಉದ್ದೇಶಿಸಿರುವ ಸ್ಥಳಕ್ಕೆ ತೆರಳಿದ ಶಾಸಕರು ವ್ಯವಸ್ಥೆಗಳ ಬಗ್ಗೆ ಪರಿಶೀಲಿಸಿ ಅಧಿಕಾರಿಗಳೊಂದಿಗೆ ಚರ್ಚಿಸಿದರು. ಈ ಸಂದರ್ಭದಲ್ಲಿ ವಿರಾಜಪೇಟೆ ಬ್ಲಾಕ್ ಅಧ್ಯಕ್ಷರಾದ ರಂಜಿ ಪೂಣಚ್ಚ, […]