ಶೈಕ್ಷಣಿಕ ಲೋಕದ ಧ್ರುವತಾರೆಗಳು: ಕಾವೇರಿ ಶಿಕ್ಷಣ ಸಂಸ್ಥೆಯ ಸಿಬ್ಬಂದಿಗಳ ಕ್ರೀಡಾಕೂಟ

ಕ್ರೀಡೆ ಕೇವಲ ಆರೋಗ್ಯದ ದೃಷ್ಟಿಯಿಂದ ಮಾತ್ರವಲ್ಲ ನಮ್ಮ ನಡುವೆ ಪರಸ್ಪರ ಉತ್ತಮ ಸಂಬಂಧ ಬೆಳೆಸುವುದರೊಂದಿಗೆ ನಮ್ಮಲ್ಲಿ ಸಾಮರಸ್ಯ ಮೂಡಿಸುತ್ತದೆ ಎಂದು ವಿರಾಜಪೇಟೆ ಕಾವೇರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಪದ್ಮ ಅಭಿಪ್ರಾಯ ವ್ಯಕ್ತಪಡಿಸಿದರು. ವಿರಾಜಪೇಟೆ ಕಾವೇರಿ ಕಾಲೇಜಿನ ವತಿಯಿಂದ ಕಾಲೇಜಿನ ಮೈದಾನದಲ್ಲಿ ಕಾವೇರಿ ಎಜುಕೇಶನ್ ಸೊಸೈಟಿ ಅಧೀನ ಸಂಸ್ಥೆಗಳ ಸಿಬ್ಬಂದಿ ವರ್ಗದ ನಡುವೆ ಆಯೋಜಿಸಲಾಗಿದ್ದ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದ ಅವರು ನಮ್ಮ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಉತ್ತಮಪಡಿಸಿಕೊಳ್ಳಲು ಕ್ರೀಡೆಯು ಬಹಳ ಸಹಕಾರಿಯಾಗಿದೆ .ಕ್ರೀಡೆಯೂ ನಮ್ಮನ್ನೆಲ್ಲಾ ಒಂದೆಡೆ […]
ಅರಣ್ಯ ಸಚಿವರೇ… ಕಾಡಾನೆ ದಾಳಿಗೆ ಎಷ್ಟು ಜನ ಸತ್ರು ಅಂತ ಎಲ್ಲಿಯವರೆಗೆ ಹಾಕುತ್ತಾ ಇರ್ಬೇಕು..?

ನಾವು ಸತ್ತವರ ಸಂಖ್ಯೆ ಲೆಕ್ಕ ಹಾಕುತ್ತಲೇ ಎಷ್ಟು ದಿನ ಇರಬೇಕು..? ಮೊನ್ನೆ ಒಬ್ಬರು ಹಿರಿಯರು ಮಾತಿಗೆ ಸಿಕ್ಕಾಗ ಕೇಳಿದ ಪ್ರಶ್ನೆ ಇದು. ನನ್ನಲ್ಲೂ ಅವರ ಪ್ರಶ್ನೆಗೆ ಉತ್ತರವಿಲ್ಲದೆ, ಮರು ಪ್ರಶ್ನೆ ಹಾಕುತ್ತಲೇ ಮಾತು ಮುಂದುವರೆಸಿದೆ. ಕೊಡಗು ಜಿಲ್ಲೆಯಲ್ಲಿ ಕಾಡಾನೆ ದಾಳಿಗೆ ಪ್ರಾಣ ಕಳೆದುಕೊಳ್ಳುತ್ತಿರುವವರ ಸಂಖ್ಯೆ ಹೆಚ್ಚುತ್ತಲೇ ಇದೆ. ಕಾಡಾನೆಗಳ ದಾಳಿ ಇದೇ ಮೊದಲೇನಲ್ಲ. ದಶಕದಿಂದಲೂ ಇದೆ. ಈ ನಡುವೆ ಬಂದ ಹುಲಿರಾಯನ ಬಳಗ ಜಿಲ್ಲೆಯ ಜನರನ್ನು ನಿದ್ದೆಗೆಡಿಸಿತ್ತು. ಇದೀಗ ಅದರ ಜೊತೆಗೆ ಜಗಪಡೆಗಳೂ ಸೇರಿಕೊಂಡಿವೆ. ಹುಲಿ ದಾಳಿಗೆ […]
ವೀರಾಜಪೇಟೆಯ ಮಲೆ ಮಹಾದೇಶ್ವರ ದೇವಾಲಯದ ವಾರ್ಷಿಕ ಉತ್ಸವ ಮಾರ್ಚ್ 15ರಿಂದ

ವರದಿ : ರಜಿತ ಕಾರ್ಯಪ್ಪ(೯೪೮೧೭೭೧೮೫೧) ವೀರಾಜಪೇಟೆ : ಪ್ರಕೃತಿಯ ಸೊಬಗಿನ ನಡುವೆ ‘ಮಳೆ ದೇವರು’ಎಂದು ಹೆಸರು ಗಳಿಸಿರುವ ಮಲೆ ಮಹಾದೇಶ್ವರ (ಈಶ್ವರನ) ದೇವಾಲಯ ಭಕ್ತರ ಕಣ್ಮನ ಸೆಳೆಯುತ್ತಿದೆ. ವಾರ್ಷಿಕೋತ್ಸವಕ್ಕೆ ಮಲೆ ಮಹಾದೇಶ್ವರ ಸಜ್ಜಾಗಿ ನಿಂತಿದೆ. ಅಂದಾಜು ೮೦೦ಕ್ಕೂ ಹೆಚ್ಚು ವರ್ಷಗಳ ಇತಿಹಾಸವಿರುವ ಪುರಾತನ ದೇವಾಲಯ ಇದಾಗಿದ್ದು, ವಿರಾಜಪೇಟೆ ಪಟ್ಟಣದಿಂದ ಅಮ್ಮತ್ತಿ ಮುಖ್ಯ ರಸ್ತೆಯ ಮಗ್ಗುಲ ಜಂಕ್ಷನ್ ಬಳಿಯಿಂದ ದಂತ ವೈದ್ಯ ಕಾಲೇಜು ರಸ್ತೆಯಲ್ಲಿ ಸಾಗಿ ಮಲೆತಿರಿಕೆ ಬೆಟ್ಟ ಏರಿದರೆ ದೇವಾಲಯ ಸಿಗುತ್ತದೆ. ಬೆಟ್ಟ ಏರುವಾಗ ದಾರಿ ಮಧ್ಯೆ […]
ಪ್ರಕೃತಿದತ್ತ ಮಲೆತಿರಿಕೆ ದೇವಾಲಯದಲ್ಲಿ ವಾರ್ಷಿಕ ಉತ್ಸವ ಮಾರ್ಚ್ 14ಕ್ಕೆ

ವರದಿ : ರಜಿತ ಕಾರ್ಯಪ್ಪ (೯೪೮೧೭೭೧೮೫೧) ವಿರಾಜಪೇಟೆ : ಅಪಾರಶಕ್ತಿ ದೇವನೆಲೆಯಾದ ಮಲೆತಿರಿಕೆ ದೇವಾಲಯದಲ್ಲಿನ ಮಲೆತಂಬ್ರಾನ್ ಎಂಬ ಅಪಾರ ಶಕ್ತಿನೆಲೆ ಎನಿಸಿರುವ ಈಶ್ವರ ದೇವಾಲಯದ ವಾರ್ಷಿಕೋತ್ಸವ ಮಾ. ೧೪ ರಂದು ನಡೆಯಲಿದೆ. ವಿರಾಜಪೇಟೆ ಹತ್ತಿರದ ಕರಡ ಗ್ರಾಮದ ಸೋಮಗಿರಿ ಬೆಟ್ಟದ ಮೇಲಿರುವ ಮಲೆತಿರಿಕೆ ದೇವಸ್ಥಾನ ಒಂದು ಸುಂದರ, ಪ್ರಾಕೃತಿಕ ಶಿವನ ದೇವಸ್ಥಾನವಾಗಿದೆ. ಲ್ಲಿ ಯಾವುದೇ ನಿರ್ಮಿತ ಕಟ್ಟಡವಿಲ್ಲ, ಬದಲಾಗಿ ಮರದ ಕೆಳಗೆ ೫ ಸ್ವಯಂಭೂ ಶಿವಲಿಂಗಗಳಿವೆ. ಪಾಂಡವರು ಇಲ್ಲಿ ಪೂಜೆ ಸಲ್ಲಿಸಿದ್ದರು ಎಂಬ ನಂಬಿಕೆ ಇದೆ. ಇಲ್ಲಿನ […]
ಕೊಡಗಿನಲ್ಲಿ ವನ್ಯಜೀವಿ-ಮಾನವ ಸಂಘರ್ಷ ಹೆಚ್ಚಳ : ಅರಣ್ಯ ಸಚಿವರ ರಾಜೀನಾಮೆಗೆ ಬಿಜೆಪಿ ಒತ್ತಾಯ

ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ವನ್ಯಜೀವಿ-ಮಾನವ ಸಂಘರ್ಷ ದಿನೇ ದಿನೇ ಹೆಚ್ಚಾಗುತ್ತಿದೆ. ಆದರೂ ಅರಣ್ಯ ಸಚಿವರು ಜಿಲ್ಲೆಯ ಬಗ್ಗೆ ಕಾಳಜಿ ತೋರುತ್ತಿಲ್ಲ. ಬೇಜವಾಬ್ದಾರಿಯಿಂದ ವರ್ತಿಸುತ್ತಿರುವ ಅರಣ್ಯ ಸಚಿವರು ರಾಜೀನಾಮೆ ನೀಡುವಂತೆ ವೀರಾಜಪೇಟೆ ಮಂಡಲ ಬಿಜೆಪಿ ವಕ್ತಾರ ಚೆಪ್ಪುಡೀರ ರಾಕೇಶ್ ದೇವಯ್ಯ ಆಗ್ರಹಿಸಿದ್ದಾರೆ. ವನ್ಯಜೀವಿ ಹಾಗೂ ಮಾನವ ಸಂಘರ್ಷ ಕೊಡಗು ಜಿಲ್ಲೆಯಲ್ಲಿ ಹೆಚ್ಚಾಗುತ್ತಿದ್ದು ಹಾಗೂ ಇದರಿಂದ ಜನರ ಸಾವು ನೋವುಗಳು ಹೆಚ್ಚು ಸಂಭವಿಸುತ್ತಿದ್ದರೂ ಅರಣ್ಯ ಸಚಿವರು ಇದಕ್ಕೆ ತಲೆಕೆಡಿಸಿಕೊಂಡಂತೆ ಕಾಣುತ್ತಿಲ್ಲ. ಇಷ್ಟೊಂದು ಸಾವು ನೋವುಗಳು ಸಂಭವಿಸಿದ್ದರು ಅರಣ್ಯ ಸಚಿವರು […]
ರೆಡ್‍ಕ್ರಾಸ್ ಸಂಸ್ಥೆಯಿಂದ ಕ್ಯಾನ್ಸರ್ ತಪಾಸಣಾ ಶಿಬಿರ ಹಾಗೂ ಅರಿವು ಕಾರ್ಯಕ್ರಮ

ಸಮಾಜ ಸ್ವಸ್ಥವಾಗಿಡಲು ಮಹಿಳೆಯರ ಪಾತ್ರ ಅತೀ ಮುಖ್ಯವಾಗಿದೆ. ಆ ನಿಟ್ಟಿನಲ್ಲಿ ಮಹಿಳೆಯರು ಆರೋಗ್ಯದ ಕಡೆ ಹೆಚ್ಚಿನ ಗಮನಹರಿಸಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಅವರು ಸಲಹೆ ಮಾಡಿದ್ದಾರೆ. ಭಾರತೀಯ ರೆಡ್‍ಕ್ರಾಸ್ ಸಂಸ್ಥೆ ಕೊಡಗು ಘಟಕ ವತಿಯಿಂದ ನಗರದ ರೆಡ್‍ಬ್ರಿಕ್ಸ್ ಇನ್ ಸತ್ಕಾರ ಸಭಾಂಗಣದಲ್ಲಿ ಸೋಮವಾರ ನಡೆದ ಕ್ಯಾನ್ಸರ್ ತಪಾಸಣಾ ಶಿಬಿರ ಮತ್ತು ಅರಿವು ಕಾರ್ಯಕ್ರಮ ಮತ್ತು ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಮಹಿಳೆಯರು ಕುಟುಂಬ ನಿರ್ವಹಣೆಯಲ್ಲಿ ಹೆಚ್ಚಿನ ಪಾತ್ರ ವಹಿಸುತ್ತಾರೆ. ಆದ್ದರಿಂದ ಒಂದು ಕುಟುಂಬ […]
NSS ಶಿಬಿರ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ

ವಿರಾಜಪೇಟೆ: ವಿರಾಜಪೇಟೆ ಪಟ್ಟಣದ ಸೆಂಟ್ ಆನ್ಸ್ ಪದವಿ ಕಾಲೇಜಿನ ಎನ್ ಎಸ್ ಎಸ್ ಘಟಕದ ವಾರ್ಷಿಕ ವಿಶೇಷ ಶಿಬಿರವು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಲ್ತೋಡು ನಾಂಗಲದಲ್ಲಿ ಜರುಗುತಿದ್ದು ಅದರ ಪ್ರಯುಕ್ತ ಕಲ್ತೋಡು ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿತ್ತು. ವಿರಾಜಪೇಟೆಯ ದಂತ ವೈದ್ಯಕೀಯ ಮಹಾ ವಿದ್ಯಾಲಯದ ಸಹಯೋಗದಲ್ಲಿ ಉಚಿತ ದಂತ ವೈದ್ಯಕೀಯ ತಪಾಸಣಾ ಶಿಬಿರ ಹಾಗೂ ಚಿಕಿತ್ಸೆ, ವಿರಾಜಪೇಟೆಯ ಡಾ. ಅಗರವಾಲ್ಸ್ ಕ್ಲಿನಿಕ್ ನ ಸಹಯೋಗದಲ್ಲಿ ಉಚಿತ ಕಣ್ಣಿನ ತಪಾಸಣಾ […]
BSc in ಫ್ಯಾಷನ್ ಡಿಸೈನ್ ಪದವಿಯಲ್ಲಿ ಡಿವೀನ ಸಲ್ದಾನಗೆ ಚಿನ್ನದ ಪದಕ

ಮಂಗಳೂರು ವಿಶ್ವವಿದ್ಯಾನಿಲಯದ 2024-25 ನೇ ಸಾಲಿನ ಅಂತಿಮ ಪದವಿ ಪರೀಕ್ಷೆಯಲ್ಲಿ ಡೀವಿನ ಸಲ್ಡಾನ ಚಿನ್ನದ ಪದಕ ಪಡೆದು ಕೊಂಡಿದ್ದಾರೆ. ಶ್ರೀದೇವಿ ಕಾಲೇಜ್ ಆಫ್ ಫ್ಯಾಷನ್ ಡಿಸೈನ್, ಬಲ್ಲಾಳ್ ಭಾಗ್, ಮಂಗಳೂರುನಲ್ಲಿ ಬಿ.ಎಸ್.ಸಿ ಇನ್ ಫ್ಯಾಷನ್ ಡಿಸೈನ್ ವ್ಯಾಸಂಗ ಮಾಡಿದ ಇವರು ಫ್ಯಾಷನ್ ಡಿಸೈನ್ ಪದವಿ ವಿಭಾಗದಲ್ಲಿ ಅತಿ ಹೆಚ್ಚು ಅಂಕಗಳಿಸಿ ಮೊದಲ ರ್ಯಾಂಕ್ ನೊಂದಿಗೆ ಚಿನ್ನದ ಪದಕ ಪಡೆದು ಕೊಂಡಿದ್ದಾರೆ. ಡಿವೀನ ಸಲ್ದಾನ ಮೂಲತಹ ವಿರಾಜಪೇಟೆ ತಾಲೂಕಿನ ಅಪ್ಪಯ್ಯ ಸ್ವಾಮಿ ರಸ್ತೆಯ ಲಾರ್ಡ್ಸ್ ಮೋಟಾರ್ ಡ್ರೈವಿಂಗ್ ಶಾಲೆಯ […]
ಕಂದಾಯ ಇಲಾಖೆ ಕ್ರಿಕೆಟ್ ಟೂರ್ನಿ – ʼಟೀಮ್ ರೆವಿನ್ಯೂ ವಾರಿಯರ್ಸ್ʼ ತಂಡದ ಜೆರ್ಸಿ ಬಿಡುಗಡೆ

ಮಡಿಕೇರಿ : ಕೊಡಗು ಜಿಲ್ಲಾ ಕಂದಾಯ ಇಲಾಖೆಯ 2ನೇ ವರ್ಷದ ಕ್ರಿಕೆಟ್ ಪಂದ್ಯಾವಳಿ ಮಾರ್ಚ್ 14, 15 ರಂದು ಪೊನ್ನಪೇಟೆಯಲ್ಲಿ ನಡೆಯಲ್ಲಿದೆ. ಪಂದ್ಯಾವಳಿಯಲ್ಲಿ ಮಡಿಕೇರಿ ತಾಲೂಕಿ ʼಟೀಮ್ ರೆವಿನ್ಯೂ ವಾರಿಯರ್ಸ್ʼ ತಂಡ ಪಾಲ್ಗೊಳ್ಳುತ್ತಿದ್ದು, ತಂಡದ ಜೆರ್ಸಿ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ತಾಲೂಕು ತಹಸೀಲ್ದಾರ್ ಶ್ರೀಧರ್ ಜೆರ್ಸಿ ಬಿಡುಗಡೆಗೊಳಿಸಿದರು. ಉಪ ತಹಸೀಲ್ದಾರ್ ಗುರುರಾಜ್, ದೇವರಾಜು, ತಂಡದ ನಾಯಕ ಸಂತೋಷ್ ಪಾಟೀಲ್ ಉಪಸ್ಥಿತಿತರಿದ್ದರು.
ಸೆಂಟ್ ಆನ್ಸ್ ಪದವಿ ಕಾಲೇಜಿನ NSS ವಾರ್ಷಿಕ ಶಿಬಿರದಲ್ಲಿ ವಿದ್ಯಾರ್ಥಿಗಳಿಂದ ಗ್ರಾಮ ಸ್ವಚ್ಛತಾ ಅಭಿಯಾನ ಕಾರ್ಯಕ್ರಮ

ವಿರಾಜಪೇಟೆ: ಸ್ವಚ್ಛತೆಯ ಕುರಿತು ಪ್ರತಿಯೊಬ್ಬರಲ್ಲಿಯೂ ಜಾಗೃತಿ ಮೂಡಿದಾಗ ಮಾತ್ರ ಪರಿಸರ ಸಂರಕ್ಷಣೆ ಸಾಧ್ಯವಾಗುತ್ತದೆ ಎಂದು ಬಿಟ್ಟಂಗಾಲ ಗ್ರಾಮ ಪಂಚಾಯತ್ ನ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶಫೀಕ್ ಎ ಎ ರವರು ಅಭಿಪ್ರಾಯಪಟ್ಟರು. ಅವರು ವಿರಾಜಪೇಟೆ ಸೆಂಟ್ ಆನ್ಸ್ ಪದವಿ ಕಾಲೇಜಿನ ಎನ್ ಎಸ್ ಎಸ್ ಘಟಕದ ವಾರ್ಷಿಕ ವಿಶೇಷ ಶಿಬಿರವು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಲ್ತೋಡು ನಾಂಗಲದಲ್ಲಿ ನಡೆಯುತ್ತಿದ್ದು ಅದರ ಪ್ರಯುಕ್ತ ಜರುಗಿದ ಗ್ರಾಮ ಸ್ವಚ್ಛತಾ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿ ಸ್ವಯಂ ಸೇವಾ ವಿದ್ಯಾರ್ಥಿಗಳನ್ನು […]