ಕೊಡಗಿನ ಯುವ ಫುಟ್‌ಬಾಲ್ ಆಟಗಾರ ಆತ್ಮಹತ್ಯೆ

ಸುಂಟಿಕೊಪ್ಪ: ಕೊಡಗು (Kodagu) ಜಿಲ್ಲೆಯ ಉದಯೋನ್ಮುಖ ಯುವ ಫುಟ್ ಬಾಲ್ (Football) ಆಟಗಾರ(ಗೋಲ್ ಕೀಪರ್) ಕಿರಣ ಸುಂಟಿಕೊಪ್ಪದ ಬೆಟ್ಟಗೇರಿ ತೋಟದ ಲೈನ್ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳವಾರ ರಾತ್ರಿ ನಡೆದಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಕೊಡಗು ಜಿಲ್ಲೆಯಲ್ಲಿ ಪ್ರತಿಷ್ಠಿತ ಫುಟ್ ಬಾಲ್ ತಂಡಗಳಲ್ಲಿ ಗೋಲ್ ಕೀಪರ್ ಆಗಿ ಉತ್ತಮ ಪ್ರದರ್ಶನ ನೀಡಿರುವ ಕಿರಣ ಎಲ್ಲರ ಫೇವರೇಟ್ ಗೋಲ್ ಕೀಪರ್ ಆಗಿ ಹಲವು ಪ್ರಶಸ್ತಿಯನ್ನು ಜಯಿಸಿದ್ದಾನೆ.
ಪೊಲೀಸರ ಭರ್ಜರಿ ಕಾರ್ಯಚರಣೆ : ಜಾನುವರು ಕಳ್ಳರ ಬಂಧನ

ಜೂ.24 ರಂದು ನೋಕ್ಯ ಗ್ರಾಮದ ನಿವಾಸಿ ಆನಂದ ಎ.ಎಸ್ ಅವರ ಎಸ್ಟೇಟ್ನ ಕೊಟ್ಟಿಗೆಯಲ್ಲಿ ಕಟ್ಟಿದ್ದ 02 ಹಸುಗಳನ್ನು ಕಳ್ಳತನ ಮಾಡಿರುವ ಕುರಿತು ಹಾಗೂ ಭದ್ರಗೋಳ ಗ್ರಾಮದ ನಿವಾಸಿ ಪಿ.ಪಿ. ಮುತ್ತಣ್ಣ, ಮನೆಯ ಕೊಟ್ಟಿಗೆಯಲ್ಲಿ ಕಟ್ಟಿದ್ದ 01 ಎಮ್ಮೆಯನ್ನು ಕಳ್ಳತನ ಮಾಡಿರುವ ಕುರಿತು ದೂರು ಸ್ವೀಕರಿಸಿದ್ದು, ಗೋಣಿಕೊಪ್ಪ ಪೊಲೀಸ್ ಠಾಣೆಯಲ್ಲಿ ಎರಡು ಪತ್ಯೇಕ ಪ್ರಕರಣಗಳನ್ನು ದಾಖಲಿಸಿ ತನಿಖೆ ಕೈಗೊಂಡರು ಎರಡು ಪ್ರಕರಣಗಳ ಆರೋಪಿ ಪತ್ತೆಗಾಗಿ ಮಹೇಶ್ ಕುಮಾರ್.ಎಸ್, ಡಿಎಸ್ಪಿ, ವಿರಾಜಪೇಟೆ ಉಪವಿಭಾಗ, ಶಿವರಾಜ ಆರ್.ಮುಧೋಳ್, ಸಿಪಿಐ, ಗೋಣಿಕೊಪ್ಪ ವೃತ್ತ, […]
ಕಾಂತೂರು ಮೂರ್ನಾಡು ಗ್ರಾಮ ಪಂಚಾಯತಿ ವತಿಯಿಂದ ಅಂಗನವಾಡಿಗಳಿಗೆ ಸಾಮಗ್ರಿಗಳ ವಿತರಣೆ

ಮೂರ್ನಾಡು: ಕಾಂತೂರು ಗ್ರಾಮ ಪಂಚಾಯತಿ ವ್ಯಾಪ್ತಿಗೆ ಒಳಪಟ್ಟ 12 ಅಂಗನವಾಡಿ ಕೇಂದ್ರಗಳಿಗೆ (Anganwadis) ಗ್ರಾಮ ಪಂಚಾಯಿತಿ ವತಿಯಿಂದ ಬಕೆಟ್, ಮಗ್, ಹ್ಯಾಂಡ್ ವಾಶ್, ಬ್ಲೀಚಿಂಗ್ ಪೌಡರ್, ಚಾಪೆ, ಕೌದಿ, ಕಂಬಳಿ, ಪಿನಾಯಿಲ್, ಪೊರಕೆಗಳನ್ನು ವಿತರಿಸಲಾಯಿತು. ಗ್ರಾಮ ಪಂಚಾಯಿತಿ ಅಧ್ಯಕ್ಷ ಕುಶನ್ ರೈ, ಉಪಾಧ್ಯಕ್ಷೆ ರೇಖಾ, ಸದಸ್ಯರಾದ ಸುಜಾತ, ವಿಜಯಲಕ್ಷ್ಮಿ, ಮೂಡೇರ ಅಶೋಕ, ಅಯ್ಯಪ್ಪ, ಈರ ಸುಬ್ಬಯ್ಯ, ಅಪ್ಪಚಂಡ ಮೀನಾಕ್ಷಿ ದೇವಯ್ಯ, ಅವರೇಮಾದಂಡ ಅನಿಲ್, ಪುಷ್ಪಲತಾ, ಪುಷ್ಪ, ಸೋಮಣ್ಣ, ದಿವ್ಯ, ನಿಂಗಪ್ಪ, ಕೃಷ್ಣಪ್ಪ, ಯಶ್ವಿನ್ ಪೊನ್ನಪ್ಪ, ರಾಜೇಶ್, ರೀತ, […]
ಗರವಾಲೆ ಅಂಗನವಾಡಿ ಮೇಲೆ ಮರ ಬಿದ್ದು ಕಟ್ಟಡಕ್ಕೆ ಹಾನಿ

ಅಂಗನವಾಡಿ ಸಹಾಯಕಿಯ ಬೇಬಿ ಅಂಗನವಾಡಿಯ ಒಳಗಿದ್ದ ಸಂದರ್ಭದಲ್ಲಿ ಮರ ಬಿದ್ದು ಗಾಯಗೊಂಡಿದ್ದು, ಅವರನ್ನು ಸ್ಥಳೀಯರು ಮಡಿಕೇರಿಯ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿದ್ದಾರೆ. ತಲೆ ಹಾಗೂ ಎದೆ ಬಾಗಕ್ಕೆ ಗಾಯಗಳಾಗಿವೆ.
ಕೊಡಗಿನಲ್ಲಿ ಕಳೆದ 24 ಗಂಟೆಗಳಲ್ಲಿ ಮಳೆ ಅಬ್ಬರ ಹೇಗಿತ್ತು ನೋಡಿ

ಕೊಡಗು ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 19.29 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 16.23 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 1617.95 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 997.06 ಮಿ.ಮೀ ಮಳೆಯಾಗಿತ್ತು. ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 20.65 ಮಿ.ಮೀ. ಕಳೆದ ವರ್ಷ ಇದೇ ದಿನ 34.68 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 2329.56 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ […]
ವಿರಾಜಪೇಟೆಯ ಉದ್ಯಮಿ ಮಂಜುನಾಥ್ ಮಲ್ಯ ನಿಧನ

ವಿರಾಜಪೇಟೆಯ ಉದ್ಯಮಿ ಗಾಂಧಿನಗರ ನಿವಾಸಿ ಶ್ರೀ ಮಂಜುನಾಥ್ ಮಲ್ಯ (ಮಂಜು )ಶಾಂತಲಾ ಎಜೆನ್ಸಿ ಮಾಲೀಕರು ಆಕಸ್ಮಿಕ ವಾಗಿ ಕಾಲುಜಾರಿ ತಮ್ಮ ಸ್ವಂತ ಕಟ್ಟಡದಿಂದ ಬಿದ್ದು ಗಂಭೀರ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಕೆಲವು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಅತಿವೃಷ್ಟಿಯಿಂದ ಕಾಫಿ ಬೆಳೆ ಹಾನಿ – ಬೆಳೆಗಾರರಿಗೆ ನೆರವಾಗುವಂತೆ ಕಾಫಿ ಮಂಡಳಿಗೆ ಮನವಿ..!

ಸೋಮವಾರಪೇಟೆ : ಪ್ರಸ್ತುತ ವರ್ಷ ಕೊಡಗು ಜಿಲ್ಲೆಯಲ್ಲಿ ಸುರಿದ ಅತಿವೃಷ್ಟಿಯಿಂದ ಮುಂದಿನ ದಿನಗಳಲ್ಲಿ ಕಾಫಿ (Coffee) ಕ್ಷೇತ್ರ ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆಗಳಿರುವುದರಿಂದ ಸರ್ಕಾರ ಹಾಗೂ ಕಾಫಿ ಮಂಡಳಿ ಬೆಳೆಗಾರರ ನೆರವಿಗೆ ಬರಬೇಕೆಂದು ಶಾಸಕ ಡಾ.ಮಂತರ್ ಗೌಡ ಅವರ ನೇತೃತ್ವದ ಬೆಳೆಗಾರರ ನಿಯೋಗ ಕಾಫಿ ಮಂಡಳಿಯ ಅಧ್ಯಕ್ಷ ಎಂ.ಜಿ.ದಿನೇಶ್ ಅವರಿಗೆ ಮನವಿ ಸಲ್ಲಿಸಿದೆ. ಸೋಮವಾರಪೇಟೆಗೆ ಆಗಮಿಸಿದ ಕಾಫಿ ಮಂಡಳಿಯ ಅಧ್ಯಕ್ಷ ಎಂ.ಜಿ.ದಿನೇಶ್ ಅವರನ್ನು ಭೇಟಿಯಾದ ಪ್ರಮುಖರು ಇತ್ತೀಚಿನ ದಿನಗಳಲ್ಲಿ ಕೊಡಗಿನ ಕಾಫಿ ಬೆಳೆಗಾರರು ಅನುಭವಿಸುತ್ತಿರುವ ಕಷ್ಟ ನಷ್ಟಗಳ ಕುರಿತು […]
ವಾಯುಪಡೆ ಅಗ್ನಿವೀರರ ಪ್ರವೇಶ ಆಯ್ಕೆ ಪರೀಕ್ಷೆಗೆ ಅರ್ಜಿ ಆಹ್ವಾನ

ಭಾರತೀಯ ವಾಯು ಪಡೆಯಿಂದ ಅಗ್ನಿಪತ್ ಯೋಜನೆಯಡಿಯಲ್ಲಿ ಅಗ್ನಿವೀರ್ ವಾಯು ಪ್ರವೇಶ ಆಯ್ಕೆ ಪರೀಕ್ಷೆಗಾಗಿ ಅವಿವಾಹಿತ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಪಿಯುಸಿ ವಿಜ್ಞಾನ ವಿಭಾಗದಲ್ಲಿ ಶೇ.50 ರಷ್ಟು ಅಂಕಗಳೊಂದಿಗೆ ತೇರ್ಗಡೆಯಾಗಿರಬೇಕು. ಅಥವಾ ಡಿಪ್ಲೋಮಾ ವಿಭಾಗದ ಮೆಕ್ಯಾನಿಕಲ್, ಎಲೆಕ್ಟ್ರಿಕಲ್, ಎಲೆಕ್ಟ್ರಾನಿಕ್ಷ್, ಆಟೋಮೊಬೈಲ್, ಕಂಪ್ಯೂಟರ್ ಸೈನ್ಸ್, ಇನ್‍ಸ್ಟ್ರುಮೆಂಟ್ ಟೆಕ್ನಾಲಜಿ, ಇನ್ಪಾರ್ಮೇಶನ್ ಟೆಕ್ನಾಲಜಿಯಲ್ಲಿ ಶೇ.50 ರಷ್ಟು ಅಂಕಗಳೊಂದಿಗೆ ತೇರ್ಗಡೆ ಆಗಿರಬೇಕು. ಇಲ್ಲವೇ 02 ವರ್ಷದ ವೃತ್ತಿಪರ ಕೋರ್ಸ್‍ಗಳಲ್ಲಿ ಭೌತಶಾಸ್ತ್ರ ಮತ್ತು ಗಣಿತ ವಿಷಯಗಳನ್ನು ವ್ಯಾಸಂಗ […]
ಕರ್ಣಂಗೇರಿಯಲ್ಲಿ ವಿಟಮಿನ್ ʼಎʼ ದ್ರಾವಣ, ಅಂಧತ್ವ ನಿವಾರಣೆ ಜಾಗೃತಿ ಕಾರ್ಯಕ್ರಮ

ಮಡಿಕೇರಿ : ಕರ್ಣಂಗೇರಿ ಅಂಗನವಾಡಿ ಕೇಂದ್ರದ ವ್ಯಾಪ್ತಿಗೆ ಒಳಪಟ್ಟ ಮಕ್ಕಳಿಗೆ ಅಂಧತ್ವ ನಿವಾರಣೆ ಮತ್ತು ರೋಗನಿರೋಧಕ ಶಕ್ತಿ ಹೆಚ್ಚಳಕ್ಕಾಗಿ ವಿಟಮಿನ್ ಎ ದ್ರಾವಣ ಹಾಕಲಾಯಿತು. ವಿಟಮಿನ್ಎ ದ್ರಾವಣ, ಅತಿಸಾರ ತಡೆಗಟ್ಟುವ ಮುನ್ನೆಚ್ಚರಿಕಾ ಕ್ರಮ, ಜಿಂಕ್ ಮಾತ್ರೆ ಬಳಕೆ ಬಗ್ಗೆ ಆರೋಗ್ಯ ಇಲಾಖೆಯ phco ದೇವಕಿ ಮಾಹಿತಿ ನೀಡಿದರು. ಪ್ರಭಾರ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮೇಪಾಡಂಡ ಸವಿತಾ ಕೀರ್ತನ್, ಮಳೆಗಾಲದಲ್ಲಿ ಮಕ್ಕಳಿಗೆ ಎದುರಾಗುವ ಆರೋಗ್ಯ ಸಮಸ್ಯೆ ತಡೆಗಟ್ಟಲು ಪೋಷಣಾಂಶಯುಕ್ತ ಆಹಾರ ಸೇವನೆ ಹಾಗೂ ಸ್ವಚ್ಛತೆಗೆ ಹೆಚ್ಚು ಗಮನಹರಿಸಲು […]
ಕೊಡಗಿನಲ್ಲಿ ಕಳೆದ 24 ಗಂಟೆ ಅವಧಿಯಲ್ಲಿ ಸುರಿದ ಮಳೆ ಮಾಹಿತಿ

ಕೊಡಗು ಜಿಲ್ಲೆಯಲ್ಲಿ ಸೋಮವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 27.18 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 9.09 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 1598.65 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 980.83 ಮಿ.ಮೀ ಮಳೆಯಾಗಿತ್ತು. ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 44.90 ಮಿ.ಮೀ. ಕಳೆದ ವರ್ಷ ಇದೇ ದಿನ 19.63 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 2308.91 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ […]