ಮಡಿಕೇರಿ ನಗರಸಭೆ ನಿರ್ಲಕ್ಷ್ಯ – ಮೋರಿಗೆ ಬಿದ್ದು ನರಳಾಡಿದ ಹಸು..!

ಮಡಿಕೇರಿ : ಸ್ಥಳೀಯಾಡಳಿತದ ನಿರ್ಲಕ್ಷ್ಯದಿಂದ ಮೋರಿಗೆ ಹಸು ಬಿದ್ದು ಕೆಲ ಹೊತ್ತು ನರಕ ಯಾತನೆ ಅನುಭವಿಸಿದೆ. ನಗರದ ಅಬ್ದುಲ್ ಕಲಾಂ ಬಡಾವಣೆಯ ರಸ್ತೆ ಬದಿಯಲ್ಲಿ ಮೋರಿಯೊಂದು ಯಾವುದೇ ಸುರಕ್ಷತೆ ಇಲ್ಲದೆ ಇತ್ತು. ಇಂದು ರಸ್ತೆ ಬದಿ ಹುಲ್ಲು ಮೇಯುತ್ತಾ ಬಂದ ಹಸುವೊಂದು ನಿಯಂತ್ರಣ ತಪ್ಪಿ ಮೋರಿಯೊಳಕ್ಕೆ ಬಿದ್ದಿದೆ. ಮೇಲೆ ಏಳಲಾಗದೆ ಹಲವು ಹೊತ್ತು ಒದ್ದಾಡಿದೆ. ಇದನ್ನು ಕಂಡ ಸಾರ್ವಜನಿಕರು ಅದನ್ನು ರಕ್ಷಿಸಲು ಮುಂದಾದರು. ಆದರೆ ಅದು ಸಾಧ್ಯವಾಗಲಿಲ್ಲ. ಬಳಿಕ ಅಗ್ನಿಶಾಮಕ ದಳಕ್ಕೆ ವಿಷಯ ತಿಳಿಸಿದ್ದಾರೆ. ಕೆಲ ಹೊತ್ತಿನ […]
ಟೈಲರಿಂಗ್ ಉಚಿತ ತರಬೇತಿಗೆ ಅರ್ಜಿ ಆಹ್ವಾನ – ಮಹಿಳೆಯರಿಗೆ ಮಾತ್ರ ಅವಕಾಶ..!

ಮಡಿಕೇರಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಮಹಿಳೆಯರಿಗೆ ಟೈಲರಿಂಗ್ ಕುರಿತ ೩೧ ದಿನಗಳ ಉಚಿತ ತರಬೇತಿಯು ಜುಲೈ ೨೬ ರಿಂದ ಪ್ರಾರಂಭವಾಗಲಿದ್ದು, ಗ್ರಾಮೀಣ ಆಸಕ್ತ ನಿರುದ್ಯೋಗಿ ಮಹಿಳೆಯರು ಅರ್ಜಿ ಸಲ್ಲಿಸಬಹುದಾಗಿದೆ. ಆಸಕ್ತರು ೧೮ ರಿಂದ ೪೫ ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಬಿಪಿಎಲ್ ಕಾರ್ಡ್ ಅಥವಾ ಜಾಬ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ ಅನ್ನು ಹೊಂದಿರುವ […]
ರೆಡ್‌ಕ್ರಾಸ್ ಕೊಡಗು ಘಟಕದ ವಾರ್ಷಿಕ ಮಹಾಸಭೆ ಜೂ.26ಕ್ಕೆ

ಮಡಿಕೇರಿ : ರೆಡ್‌ಕ್ರಾಸ್ ಕೊಡಗು ಘಟಕದ ವಾರ್ಷಿಕ ಮಹಾಸಭೆ ಜೂನ್ ೨೬ ರಂದು ನಡೆಯಲಿದೆ ಎಂದು ಸಭಾಪತಿ ಬಿ.ಕೆ.ರವೀಂದ್ರ ರೈ ಮಾಹಿತಿ ನೀಡಿದ್ದಾರೆ. ಮಡಿಕೇರಿಯ ಸ್ಟೀವರ್ಟ್ ಹಿಲ್‌ನಲ್ಲಿರುವ ರೆಡ್‌ಕ್ರಾಸ್ ಭವನದಲ್ಲಿ ಬೆಳಗ್ಗೆ ೧೧ ಗಂಟೆಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅಧ್ಯಕ್ಷತೆಯಲ್ಲಿ ವಾರ್ಷಿಕ ಮಹಾಸಭೆ ನಡೆಯಲಿದೆ. ಮಹಾಸಭೆಯಲ್ಲಿ ಸರ್ವ ಸದಸ್ಯರು ಪಾಲ್ಗೊಳ್ಳುವಂತೆ ರವೀಂದ್ರ ರೈ ಕೋರಿದ್ದಾರೆ.
ಸೀಳು ತುಟಿ, ಸೀಳು ಅಂಗುಳ, ಮ್ಯಾಕ್ಸಿಲೊಫೇಶಿಯಲ್, ಕ್ರೇನಿಯೋಫೇಶಿಯಲ್ ವಿರೂಪಗಳ ತಪಾಸಣಾ ಶಿಬಿರ ಜೂ.28ಕ್ಕೆ
ಮಡಿಕೇರಿ : ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಕಾರ್ಯಕ್ರಮದಡಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಾಲಾ ಶಿಕ್ಷಣ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ, ಇವರ ಸಂಯುಕ್ತ ಆಶ್ರಯದಲ್ಲಿ ಇಂಗಾ ಹೆಲ್ತ್ ಪೌಂಡೇಶನ್, ಬೆಂಗಳೂರು ಇವರ ವತಿಯಿಂದ ಜೂನ್ ೨೮ ರಂದು ಬೆಳಗ್ಗೆ ೧೦.೩೦ ಗಂಟೆಗೆ ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೀಳು ತುಟಿ, ಸೀಳು ಅಂಗುಳ, ಮ್ಯಾಕ್ಸಿಲೊಫೇಶಿಯಲ್ ಮತ್ತು ಕ್ರೇನಿಯೋಫೇಶಿಯಲ್ ವಿರೂಪಗಳ ತಪಾಸಣಾ […]
ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆ – ಹಲವು ಸಮಸ್ಯೆಗಳ ಬಗ್ಗೆ ಗಮನ ಸೆಳೆದ ಸದಸ್ಯರು..!

ಮಡಿಕೇರಿ : ಅನುಸೂಚಿತ ಮತ್ತು ಅನುಸೂಚಿತ ಪಂಗಡಗಳ(ದೌರ್ಜನ್ಯ ನಿಯಂತ್ರಣ) ನಿಯಮ ರೀತಿಯ ರಚಿಸಲಾಗಿರುವ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆಯಿತು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸದಸ್ಯ ಎಚ್.ಎಸ್. ಮುತ್ತಪ್ಪ, ಹೊದ್ದೂರು, ಹೊದವಾಡ ಸೇರಿದಂತೆ ಕಾವೇರಿ ನದಿ ಪಾತ್ರದ ಪ್ರವಾಹ ಪೀಡಿತ ಪ್ರದೇಶದಲ್ಲಿ ಪರಿಶಿಷ್ಟರು ವಾಸ ಮಾಡುತ್ತಿದ್ದು, ಇವರಿಗೆ ಶಾಶ್ವತ ನೆಲೆ ಕಲ್ಪಿಸಬೇಕು ಎಂದು ಮನವಿ ಮಾಡಿದರು. […]
ಹಾರಂಗಿ ಜಲಾಶಯದಲ್ಲಿ ನೀರಿನ ಪ್ರಮಾಣ ಎಷ್ಟಿದೆ ಗೊತ್ತಾ..? ಇಲ್ಲಿದೆ ಅಂಕಿ ಅಂಶ…

ಕುಶಾಲನಗರ : ಕೊಡಗಿನ ಏಕೈಕ ಅಣೆಕಟ್ಟು ಹಾರಂಗಿಯಲ್ಲಿ ಈ ಬಾರಿ ನಿರೀಕ್ಷೆಗೂ ಮುನ್ನವೇ ನೀರು ಭರ್ತಿಯಾಗಿದೆ. ೨,೮೫೯ ಅಡಿ ಗರಿಷ್ಠ ಸಾಮರ್ಥ್ಯದ ಡ್ಯಾಂನಲ್ಲಿ ಇಂದಿನ ನೀರಿನ ಮಟ್ಟ ೨೮೫೧.೫೨ ಅಡಿ ಇದೆ. ಕಳೆದ ವರ್ಷ ಇದೇ ದಿನ ೨೮೨೯.೧೪ ಅಡಿ ನೀರಿತ್ತು. ಕಳೆದ ೨೪ ಗಂಟೆಯಲ್ಲಿ ಹಾರಂಗಿ ವ್ಯಾಪ್ತಿಯಲ್ಲಿ ೧೨.೫೦ ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ ೩.೨೦ ಮಿ.ಮೀ. ಮಳೆಯಾಗಿತ್ತು. ಇಂದಿನ ಒಳಹರಿವು ೪೬೧೨ ಕ್ಯುಸೆಕ್, ಕಳೆದ ವರ್ಷ ಇದೇ ದಿನ ೩೭೮ ಕ್ಯುಸೆಕ್ […]
ಪೊದಕೋಟೆಯಲ್ಲಿ ಮಳೆಯಿಂದ ಮನೆಗೆ ಹಾನಿ

ವಿರಾಜಪೇಟೆ (virajpet)ಹೋಬಳಿ ಪೊದಕೋಟೆ ಗ್ರಾಮದ ನಿವಾಸಿಯಾದ ಹೆಚ್ ಕೆ ಬಾಬು ಅವರ ವಾಸದ ಮನೆಯು ಇಂದು ಮಳೆಯಿಂದಾಗಿ ಭಾಗಶಃ ಹಾನಿಯಾಗಿದೆ. ಈ ಸಂಬಂಧ ಕಂದಾಯ ಪರಿವೀಕ್ಷಕರು,ಸಹಾಯಕ ಅಭಿಯಂತರರು,ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ಪಂಚಾಯತಿ ಸದಸ್ಯರುಗಳು, ತಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪರಿಹಾರದ ಭರವಸೆಯನ್ನು ನೀಡಿದ್ದಾರೆ.
ಕೊಡಗು: ಕಳೆದ 24 ಗಂಟೆ ಅವಧಿಯಲ್ಲಿ ಸುರಿದ ಮಳೆ ವಿವರ

ಕೊಡಗು ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 31.52 ಮಿ.ಮೀ. ಮಳೆಯಾಗಿದೆ (Average rainfall) . ಕಳೆದ ವರ್ಷ ಇದೇ ದಿನ 30.77 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 1173.99 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ (During this same period) 559.82 ಮಿ.ಮೀ ಮಳೆಯಾಗಿತ್ತು. ಮಡಿಕೇರಿ: ಇಂದಿನ ಸರಾಸರಿ ಮಳೆ 29.37 ಮಿ.ಮೀ. ಕಳೆದ ವರ್ಷ ಇದೇ ದಿನ 51.35 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ […]
ವಿರಾಜಪೇಟೆ: ತಾಂತ್ರಿಕ ವ್ಯವಸ್ಥಾಪಕರ ಹುದ್ದೆಗೆ ಅರ್ಜಿ ಆಹ್ವಾನ

ಮಡಿಕೇರಿ: ಕೊಡಗು ಜಿಲ್ಲೆ ಕೃಷಿ ಇಲಾಖೆಯ ಕೃಷೋನ್ನತಿ ಕೃಷಿ ವಿಸ್ತರಣೆ ಉಪ ಅಭಿಯಾನ (Agriculture Extension Sub-Mission) ಯೋಜನೆಯಡಿ ತಾಲ್ಲೂಕು ತಾಂತ್ರಿಕ ವ್ಯವಸ್ಥಾಪಕರ 1 ಹುದ್ದೆಯನ್ನು ಒಪ್ಪಂದದ ಆಧಾರದ ಮೇಲೆ 2025-26 ನೇ ಸಾಲಿನ ಸೀಮಿತ ಅವಧಿಗೆ ವಿರಾಜಪೇಟೆ ತಾಲ್ಲೂಕಿನಲ್ಲಿ ಖಾಲಿ ಇರುವ ಹುದ್ದೆಗೆ ನೇಮಕಾತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. ತಾಲ್ಲೂಕು ತಾಂತ್ರಿಕ ವ್ಯವಸ್ಥಾಪಕರ ಹುದ್ದೆಗೆ ( post of Taluk Technical Manager )ಎಂಎಸ್ಸಿ(ಕೃಷಿ, ತೋಟಗಾರಿಕೆ, ಮೀನುಗಾರಿಕೆ, ಅರಣ್ಯ, ರೇಷ್ಮೆ) ವಿದ್ಯಾರ್ಹತೆ ಹೊಂದಿರಬೇಕು. ಕನಿಷ್ಟ 2 […]
ಅರಣ್ಯ ಹಕ್ಕು ಪತ್ರದ ಪ್ರಕ್ರಿಯೆಗೆ ವೇಗ: ಮಡಿಕೇರಿಯಲ್ಲಿ ಡಿಜಿಟಲ್ ಸಹಾಯ ಕೋಶ ಆರಂಭ

ಮಡಿಕೇರಿ: ಸಮಗ್ರ ಗಿರಿಜನ ಅಭಿವೃದ್ಧಿ ಯೋಜನಾ ಇಲಾಖೆ (Department of Integrated Tribal Development Planning) ಕಚೇರಿಯಲ್ಲಿ ನೂತನವಾಗಿ ಅರಣ್ಯ ಹಕ್ಕು ಕೋಶ (Forest Rights Cell) ಆರಂಭಿಸಲಾಗಿದೆ ಎಂದು ಸಮಗ್ರ ಗಿರಿಜನ ಅಭಿವೃದ್ಧಿ ಯೋಜನಾ ಇಲಾಖೆಯ ಯೋಜನಾ ಸಮನ್ವಯಾಧಿಕಾರಿ ಎಸ್.ಹೊನ್ನೇಗೌಡ ಅವರು ತಿಳಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ(CM Siddaramaiah )ಅವರು ಏಕಕಾಲದಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ಅರಣ್ಯ ಹಕ್ಕು ಕೋಶವನ್ನು ಉದ್ಘಾಟಿಸಿದರು. ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರ ಮಾರ್ಗದರ್ಶನದಲ್ಲಿ ನಗರದ ಜಿ.ಪಂ.ಭವನದ ಐಟಿಡಿಪಿ ಕಚೇರಿಯಲ್ಲಿ ಅರಣ್ಯಹಕ್ಕು ಕೋಶ […]