‘CET’ ಸೀಟು ಹಂಚಿಕೆ ಕುರಿತು ಮಾರ್ಗದರ್ಶನ ಕಾರ್ಯಗಾರ ಜೂ.28ಕ್ಕೆ

ಮಡಿಕೇರಿ : ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮತ್ತು ಕುಶಾಲನಗರ ಸರ್ಕಾರಿ ಇಂಜಿನಿಯರಿಂಗ್ ಕಾಲೇಜು ವತಿಯಿಂದ ಜೂನ್ ೨೮ ರಂದು ಬೆಳಗ್ಗೆ ೯.೩೦ ರಿಂದ ಮಧ್ಯಾಹ್ನ ೧.೩೦ ಗಂಟೆವರೆಗೆ ಕುಶಾಲನಗರದ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನ ಆವರಣದಲ್ಲಿ ‘ಸಿಇಟಿ’ ಸೀಟು ಹಂಚಿಕೆ ಕುರಿತು ಮಾರ್ಗದರ್ಶನ (ನ್ಯೂ ಸೀಟ್ ಸೆಲೆಕ್ಷನ್ ಪ್ರೋಸೆಸ್) ಕಾರ್ಯಗಾರ ನಡೆಯಲಿದೆ. ಆದ್ದರಿಂದ ಎಲ್ಲಾ ಯುಜಿ ಸಿಇಟಿ ವಿದ್ಯಾರ್ಥಿಗಳು ಮತ್ತು ಪೋಷಕರು ತಪ್ಪದೇ ಹಾಜರಾಗಿ ಸೀಟು ಹಂಚಿಕೆಯ ಮಾರ್ಗದರ್ಶನದ ಕಾರ್ಯಗಾರ ಸದುಪಯೋಗ ಪಡೆಯಲು ಕೋರಿದೆ. ಜಿಲ್ಲೆಯ ಮತ್ತು ನೆರೆ […]

ಅತಿಸಾರ ಬೇಧಿ ತಡೆಯುವಿಕೆ ಅಭಿಯಾನಕ್ಕೆ ಚಾಲನೆ – ಮಕ್ಕಳ ಉತ್ತಮ ಆರೋಗ್ಯದತ್ತ ಗಮನ ಇರಲಿ: ಡಾ.ಸತೀಶ್ ಕುಮಾರ್

ಮಡಿಕೇರಿ : ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಹಾಗೂ ಬೋಧಕ ಆಸ್ಪತ್ರೆ(ಮಕ್ಕಳ ವಿಭಾಗ) ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದೊಂದಿಗೆ ಅತಿಸಾರ ಬೇಧಿ ತಡೆಗಟ್ಟುವಿಕೆ ಅಭಿಯಾನದ ಉದ್ಘಾಟನಾ ಕಾರ್ಯಕ್ರಮ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಹಾಗೂ ಬೋಧಕ ಆಸ್ಪತ್ರೆಯ ಮಕ್ಕಳ ವಿಭಾಗದಲ್ಲಿ ಸೋಮವಾರ ನಡೆಯಿತು. ಸ್ಟಾಪ್ ಡೈಯೇರಿಯ ಕ್ಯಾಂಪೇನ್ ಅನ್ನು ಜುಲೈ ೩೧ ರವರೆಗೆ ಆಯೋಜಿಸಲಾಗಿದೆ. ಎಲ್ಲಾ ಐದು ವರ್ಷದ ಒಳಗಿನ ಮಕ್ಕಳಿಗೆ ಆಶಾ ಕಾರ್ಯಕರ್ತರು ಮನೆ ಮನೆಗೆ ತೆರಳಿ ಒಂದು ಮಗುವಿಗೆ […]

ನೀಟ್‌ ಪರೀಕ್ಷೆಯಲ್ಲಿ ರಾಜ್ಯಕ್ಕೆ 7ನೇ ಸ್ಥಾನ: ವಿದ್ಯಾರ್ಥಿನಿ ನಿಧಿಗೆ ಶಾಸಕರಿಂದ ಸನ್ಮಾನ

NEET Exam

ಸೋಮವಾರಪೇಟೆ ತಾಲ್ಲೂಕಿನ ಚೌಡ್ಲು ಗ್ರಾಮದ ಮೂಲದವರು. ಇದೀಗ ರಾಷ್ಟ್ರೀಯ ಮಟ್ಟದ ನೀಟ್ (NEET) ಪರೀಕ್ಷೆಯಲ್ಲಿ 720 ಅಂಕಗಳಲ್ಲಿ 710 ಅಂಕಗಳನ್ನು ಪಡೆದು ಭಾರತದಲ್ಲಿ 84ನೇ ರ‍್ಯಾಂಕ್ ಮತ್ತು ಕರ್ನಾಟಕ ರಾಜ್ಯದಲ್ಲಿ ಗೌರವಾನ್ವಿತ 7ನೇ ಸ್ಥಾನವನ್ನು ಪಡೆದು ತಮ್ಮ ಗ್ರಾಮ ಹಾಗೂ ಜಿಲ್ಲೆಯ ಹೆಮ್ಮೆಗಾಗಿರುವ ವಿದ್ಯಾರ್ಥಿನಿ ಕೆ. ಜಿ. ನಿಧಿ ಅವರು ತಮ್ಮ ಈ ಅಪಾರ ಶ್ರದ್ಧೆ, ಪರಿಶ್ರಮ ಹಾಗೂ ಕನಸುಗಳನ್ನು ಪೂರೈಸುವ ದೃಢನಿಶ್ಚಯದಿಂದ ಉತ್ತಮ ಸಾಧನೆ ಮಾಡಿದ ಹಿನ್ನೆಲೆಯಲ್ಲಿ, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಮಂತರ್ […]

ಕೊಡಗು: ಕಳೆದ 24 ಗಂಟೆ ಅವಧಿಯಲ್ಲಿ ಸುರಿದ ಮಳೆ ವಿವರ

Kodagu rainfall

ಕೊಡಗು  (kodagu)ಜಿಲ್ಲೆಯಲ್ಲಿ ಸೋಮವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ  68.54 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 6.55 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 1142.47 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 529.05 ಮಿ.ಮೀ ಮಳೆಯಾಗಿತ್ತು. ಮಡಿಕೇರಿ : ಇಂದಿನ ಸರಾಸರಿ ಮಳೆ 99.60 ಮಿ.ಮೀ. ಕಳೆದ ವರ್ಷ ಇದೇ ದಿನ 13.08 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1713.65 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ […]

ಕುಶಾಲನಗರ : ಮಳೆ ಗಾಳಿಯಿಂದ ಮನೆಯ ಹಿಂಬದಿಯ ಗೋಡೆ ಕುಸಿತ

kusharnagar

ಕುಶಾಲನಗರ (Kushalnagar) ತಾಲೂಕು, ಸುಂಟಿಕೊಪ್ಪ ಹೋಬಳಿಯ ಕಾನ್ ಬೈಲು ಬೈಚನಹಳ್ಳಿ ಗ್ರಾಮದ ನಿವಾಸಿಯಾದ ಪಿ ಬಿ ಗುರುವ ಪೌತಿ ಬಾಬು ಇವರ ವಾಸದ ಮನೆ ಭಾನುವಾರ ಸುರಿದ ಬಾರಿ ಮಳೆ ಗಾಳಿಯಿಂದ ಮನೆಯ ಹಿಂಬದಿಯ ಗೋಡೆ ಕುಸಿತವಾಗಿದ್ದು ಅಂದಾಜು 30% ಹಾನಿ ಉಂಟಾಗಿದೆ‌. ಸೋಮವಾರ ಕಂದಾಯ ಪರೀವಿಕ್ಷಕರು ಸುಂಟಿಕೊಪ್ಪ ಹೋಬ ಳಿ ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ನಾಕೂರು ಶಿರಂಗಾಲರವರೊಂದಿಗೆ ಜಂಟಿ ಪರಿಶೀಲಿಸಿದರು.

ಭಾಗಮಂಡಲದಲ್ಲಿ ಆರೋಗ್ಯ ತಪಾಸಣಾ ಉಚಿತ ಶಿಬಿರ ಜೂನ್‌ 30ಕ್ಕೆ

ಭಾಗಮಂಡಲ : ಇಲ್ಲಿನ ಗಜಾನನ ಯುವಕ ಸಂಘ ವತಿಯಿಂದ ರೋಟರಿ ಮಡಿಕೇರಿ ವುಡ್ಸ್ ಸಹಯೋಗದೊಂದಿಗೆ ರಕ್ತದಾನ ಹಾಗೂ ಆರೋಗ್ಯ ತಪಾಸಣಾ ಉಚಿತ ಶಿಬಿರ ಹಮ್ಮಿಕೊಳ್ಳಲಾಗಿದೆ. ಜೂನ್ 30ರಂದು ಭಾಗಮಂಡಲ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಶಿಬಿರ ನಡೆಯಲಿದೆ. ಶಿಬಿರದಲ್ಲಿ ಮಧುಮೇಹ, ರಕ್ತದೊತ್ತಡ, ಕ್ಯಾನ್ಸರ್ ತಪಾಸಣೆ, ಸ್ತ್ರೀರೋಗ, ಹೃದಯ ಸಂಬಂಧಿಸಿದ ಕಾಯಿಲೆಗಳ ತಪಾಸಣೆ ಮಾಡಲಾಗುವುದು. ಶಿಬಿರಕ್ಕೆ ಬರುವ ಮಂದಿಗೆ ಭಾಗಮಂಡಲ ಶ್ರೀ ಕಾವೇರಿ ಆಟೋ ಚಾಲಕರ ಮತ್ತು ಮಾಲೀಕರ ಸಂಘದ ವತಿಯಿಂದ ಉಚಿತ ಸೇವೆ ಇರಲಿದೆ ಎಂದು ಆಯೋಜಕರು ತಿಳಿಸಿದ್ದಾರೆ. […]

ಸಾಂಸ್ಕೃತಿಕ ನಗರಿಯಲ್ಲಿ ಕೊಡವ ಹಾಕಿ ಪ್ರೀಮಿಯರ್‌ ಲೀಗ್‌ – ಜೂ. 27ರಿಂದ ಮೈಸೂರಿನಲ್ಲಿ ಚೊಟ್ಟಲ ಟೂರ್ನಿ

ವರದಿ : ಚೆಯ್ಯಂಡ ಬನೀತ್ ಬೋಜಣ್ಣ ಮೈಸೂರು : ಕೊಡಗು ಅಥವಾ ಕೊಡವರು ಎಂದಾಗ ನಮಗೆ ನೆನಪಿಗೆ ಬರುವ ಹಲವು ವಿಷಯಗಳಲ್ಲಿ ಕ್ರೀಡೆಯು ಒಂದು. ಅದರಲ್ಲೂ ಹಾಕಿ ಕ್ರೀಡೆ ಕೊಡಗಿನಲ್ಲಿ ಬಹಳ ಪ್ರಾಮುಖ್ಯತೆ ಪಡೆದುಕೊಂಡಿದೆ. ಭಾರತದ ಹಾಕಿ ತಂಡಕ್ಕೆ ನಮ್ಮ ಜಿಲ್ಲೆಯ ಅಸಂಖ್ಯಾತ ಆಟಗಾರರು ಆಡಿದ್ದಾರೆ. ಇದರಿಂದ ಕೊಡಗನ್ನು ಭಾರತದ ಹಾಕಿಯ ತೊಟ್ಟಿಲು ಎಂದು ಕರೆಯುತ್ತಾರೆ. ಹಾಕಿಯ ಮೂಲಕ ಕೊಡವ ಜನಾಂಗವನ್ನು ಮತ್ತಷ್ಟು ಒಗ್ಗೂಡಿಸುವ ನಿಟ್ಟಿನಲ್ಲಿ ಪ್ರತಿ ವರ್ಷ ಕೊಡಗಿನಲ್ಲಿ ಕೊಡವ ಕೌಟುಂಬಿಕ ಹಾಕಿ ಉತ್ಸವ ನಡೆಯುತ್ತದೆ. […]

ಪಾಲಿಬೆಟ್ಟ : ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ಯೋಗ ದಿನಾಚರಣೆ

ಪಾಲಿಬೆಟ್ಟ : ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯ ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ಅಂತಾರಾಷ್ಟ್ರೀಯ ಯೋಗ ದಿನ ಆಚರಿಸಲಾಯಿತು. ಮೇಲ್ವಿಚಾರಕಿ ಸುಮಯ್ಯ ಕೆ. ಎಂ., ಸಿಬ್ಬಂದಿ ಸುಜಾತ, ಪ್ರೀತು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಕೊಡಗು ಜಿಲ್ಲಾ ಮಟ್ಟದ ತ್ರೈಮಾಸಿಕ ಕೆಡಿಪಿ ಸಭೆ ಜೂ.27ಕ್ಕೆ

ಮಡಿಕೇರಿ : ೨೦೨೫-೨೬ನೇ ಸಾಲಿನ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (೨೦ ಅಂಶಗಳ ಕಾರ್ಯಕ್ರಮ ಸೇರಿದಂತೆ) ಜಿಲ್ಲಾ ಮಟ್ಟದ ತ್ರೆöÊಮಾಸಿಕ ಕೆಡಿಪಿ ಸಭೆಯು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅಧ್ಯಕ್ಷತೆಯಲ್ಲಿ ಜೂನ್, ೨೭ ರಂದು ಬೆಳಗ್ಗೆ ೧೦.೩೦ ಗಂಟೆಗೆ ಕೊಡಗು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ ಎಂದು ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ ತಿಳಿಸಿದ್ದಾರೆ.

ದುಬೈ-ಕೊಡಗು ಹಳೆ ವಿದ್ಯಾರ್ಥಿಗಳ ಸಂಘದಿಂದ ವಾರ್ಷಿಕ ಪುರಸ್ಕಾರ ಮತ್ತು ವಿದ್ಯಾರ್ಥಿ ವೇತನ ವಿತರಣೆ..!

ಮಡಿಕೇರಿ : ಸಂಯುಕ್ತ ಅರಬ್ ಸಂಸ್ಥಾನದ ದುಬೈ ಕೇಂದ್ರೀಕರಿಸಿ ಕಾರ್ಯಾಚರಿಸುತ್ತಿರುವ ಕೊಡಗಿನ ಹಳೆ ವಿದ್ಯಾರ್ಥಿಗಳ ಸಂಘದ ಅವರ ವತಿಯಿಂದ ಎಸ್ಎಸ್ಎಲ್ಸಿ ಮತ್ತು ಪಿಯುಸಿಯಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ ಕೊಡಗಿನ ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹೊದವಾಡದ ರಾಫಲ್ಸ್ ಇಂಟರ್ನ್ಯಾಷನಲ್ ಸ್ಕೂಲ್ ಸಭಾಂಗಣದಲ್ಲಿ ನಡೆಯಿತು. ಶೈಕ್ಷಣಿಕವಾಗಿ ಸಾಧನೆಗೈಡ ಭಾಷಿತ, ಡಿಯಾನ, ಚರಿಷ್ಮಾ, ಹೇಮಾವತ, ಸಫಾನಾ, ಫಾಹಿನ ಅವರನ್ನು ಅಸೋಸಿಯೇಷನ್ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಹಳೆ […]