ಸುಪ್ರೀಂ ಕೋರ್ಟ್‌ನಲ್ಲಿ ಮಹತ್ತರ ಬದಲಾವಣೆ – ಎರಡನೇ, ನಾಲ್ಕನೇ ಶನಿವಾರವೂ ಕಚೇರಿಗಳು ಕಾರ್ಯನಿರ್ವಹಣೆ..!

ನವದೆಹಲಿ : ದೇಶದ ಸರ್ವೋಚ್ಛ ನ್ಯಾಯಾಲಯವು ತನ್ನ ಆಡಳಿತಾತ್ಮಕ ವ್ಯವಸ್ಥೆಯಲ್ಲಿ ಮಹತ್ತರವಾದ ಬದಲಾವಣೆ ಮಾಡಿದೆ. ಅದೇನೆಂದರೆ ಅಧಿಕಾರಿಗಳು ಮತ್ತು ಸಿಬ್ಬಂದಿಯ ಕೆಲಸದ ಅವಧಿಯಲ್ಲಿನ ಮಾರ್ಪಾಡು. ಎರಡನೇ ಮತ್ತು ನಾಲ್ಕನೇ ಶನಿವಾರ ಸರ್ಕಾರಿ ರಜೆ ಇದ್ದು, ಈವರೆಗೆ ಅದು ಸುಪ್ರೀ ಕೋರ್ಟ್ ಕಚೇರಿ ವ್ಯಾಪ್ತಿಗೂ ಅನ್ವಯವಾಗಿತ್ತು. ಆದರೆ ಈಗ ಆಗಿರುವ ಸುಪ್ರೀಂ ಕೋರ್ಟ್ ತಿದ್ದುಪಡಿ ನಿಯಮದ ಪ್ರಕಾರ ಈ ಎರಡು ದಿನಗಳನ್ನು ಕೆಲಸದ ವ್ಯಾಪ್ತಿಗೆ ತರಲಾಗಿದೆ. ಅಂದರೆ ಇನ್ನು ಮುಂದೆ ತಿಂಗಳ ಎರಡನೇ ಹಾಗೂ ನಾಲ್ಕನೇ ಶನಿವಾರ ಕೂಡಾ […]
ಯೋಗ ಭಾರತಿ ಹಾಗೂ ಯೋಗ ಸಂಧ್ಯಾ ವತಿಯಿಂದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

ಮಡಿಕೇರಿ : ಯೋಗ ಭಾರತಿ ಹಾಗೂ ಯೋಗ ಸಂಧ್ಯಾ ವತಿಯಿಂದ ೧೧ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಜೂ. ೧೧ರಂದು ನಡೆಯಲಿದೆ. ಅಂದು ಬೆಳಗ್ಗೆ 6.30ರಿಂದ 8.30ರವರೆಗೆ ಮಡಿಕೇರಿಯ ಗೌಡ ಸಮಾಜ ಸಭಾಂಗಣದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಸರಳ ಯೋಗ ಮತ್ತು ಪ್ರಾಣಾಯಾಮ ಅಭ್ಯಾಸವನ್ನು ಯೋಗ ಗುರುಗಳು ಮಾಡಿಸಲಿದ್ದಾರೆ. ಈ ಬಾರಿ ʼಒನ್ ಅರ್ಥ್ ಒನ್ ಹೆಲ್ತ್ʼ(one earth, one health) ಧ್ಯೇಯದೊಂದಿಗೆ ನಡೆಯುತ್ತಿರುವ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮಕ್ಕೆ ಆಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಸಂಸ್ಥೆ ಪ್ರಮುಖರು ಕೋರಿದ್ದಾರೆ. ಯೋಗ […]
ಸೋಮವಾರಪೇಟೆ ತಹಸೀಲ್ದಾರ್ ಕಚೇರಿಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಭೇಟಿ – ಮಳೆಗಾಲದ ಪರಿಸ್ಥಿತಿ ಎದುರಿಸಲು ಸಜ್ಜಾಗಿರುವಂತೆ ಸೂಚನೆ..!

ಸೋಮವಾರಪೇಟೆ : ತಹಶೀಲ್ದಾರರ ಕಚೇರಿಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಗುರುವಾರ ಭೇಟಿ ನೀಡಿ ಭೂಸುರಕ್ಷತೆ ಮತ್ತು ಕಂದಾಯ ದಾಖಲೆ ಡಿಜಿಟಲೀಕರಣ ಪ್ರಕ್ರಿಯೆ ಸಂಬಂಧ ಮಾಹಿತಿ ಪಡೆದರು. ಭೂ ಸುರಕ್ಷತಾ ಯೋಜನೆಯಡಿ ಸಾರ್ವಜನಿಕರಿಗೆ ಕಂದಾಯ ದಾಖಲೆಗಳನ್ನು ಡಿಜಿಟಲ್ ರೂಪದಲ್ಲಿ ವಿತರಿಸುವ ಹಿನ್ನೆಲೆ ಅಗತ್ಯ ಕ್ರಮವಹಿಸುವಂತೆ ತಹಶೀಲ್ದಾರರಿಗೆ ನಿರ್ದೇಶನ ನೀಡಿದರು. ಸರ್ಕಾರ ಕಂದಾಯ ಇಲಾಖೆಯಲ್ಲಿ ಭೂದಾಖಲೆಗಳಿಗೆ ಸಂಬಂಧಿಸಿದಂತೆ ಸಾಕಷ್ಟು ಸುಧಾರಣೆ ಮತ್ತು ಬದಲಾವಣೆ ಜಾರಿಗೊಳಿಸಿದ್ದು, ಅವುಗಳನ್ನು ಅನುಷ್ಠಾನಗೊಳಿಸಬೇಕು ಎಂದು ಸೂಚಿಸಿದರು. ಸಕಾಲ ಯೋಜನೆ, ಪಿಂಚಣಿ ಯೋಜನೆ ಸಂಬಂಧಿಸಿದಂತೆ ಇದೇ ಸಂದರ್ಭದಲ್ಲಿ […]
ಕೇಂದ್ರ ಸಾಹಿತ್ಯ ಅಕಾಡೆಮಿಯ ಪ್ರತಿಷ್ಠಿತ ಪ್ರಶಸ್ತಿಗೆ ಭಾಜನರಾದ ಕೊಡಗಿನ ಯುವ ಸಾಹಿತಿ ಮೂಕೊಂಡ ನಿತಿನ್ ಕುಶಾಲಪ್ಪ..!

ಬೆಂಗಳೂರು : ಕೇಂದ್ರ ಸಾಹಿತ್ಯ ಅಕಾಡೆಮಿ 2025ನೇ ಸಾಲಿನ ಯುವ ಪುರಸ್ಕಾರ ಹಾಗೂ ಬಾಲ ಸಾಹಿತ್ಯ ಪುರಸ್ಕಾರವನ್ನು ಪ್ರಕಟಿಸಿದ್ದು, ಕೊಡಗಿನ ಮೂಕೊಂಡ ನಿತಿನ್ ಕುಶಾಲಪ್ಪ ಸೇರಿದಂತೆ ಮೂವರು ಕನ್ನಡಿಗರಿಗೆ ಪ್ರಶಸ್ತಿ ಲಭಿಸಿದೆ. ಮೂಕೊಂಡ ನಿತಿನ್ ಅವರ ‘ದಕ್ಷಿಣ್ ಸೌಥ್ ಇಂಡಿಯನ್ ಮಿಥ್ಸ್ & ಫೇಬಲ್ಸ್ ರೀಟೋಲ್ಡ್’ ಕಥಾಸಂಕಲನಕ್ಕೆ ‘ಇಂಗ್ಲಿಷ್’ ವಿಭಾಗದಲ್ಲಿ ಬಾಲ ಸಾಹಿತ್ಯ ಪುರಸ್ಕಾರ ದೊರಕಿದೆ. ಆರ್. ದಿಲೀಪ್ ಕುಮಾರ್ ಅವರ ವಿಮರ್ಶಾ ಸಂಕಲನ ‘ಪಚ್ಚೆಯ ಜಗುಲಿ’ಗೆ ಯುವ ಪುರಸ್ಕಾರ ಲಭಿಸಿದೆ. ಕೆ.ಶಿವಲಿಂಗಪ್ಪ ಹಂದಿಹಾಳು ಅವರ ‘ನೋಟ್‌ಬುಕ್’ […]
ದಶಮಾನೋತ್ಸವ ಸಂಭ್ರಮದಲ್ಲಿ ನ್ಯೂಸ್ ಡೆಸ್ಕ್ – Coorg Buzz ಬಳಗದಿಂದ ಶುಭ ಹಾರೈಕೆ..!

ಮಡಿಕೇರಿ : ಜಿಲ್ಲೆಯ ಪ್ರಮುಖ ಸುದ್ದಿ ಸಂಸ್ಥೆ ಹಾಗೂ ಡಿಜಿಟಲ್ ಸುದ್ದಿ ಮಾಧ್ಯಮ News desk ಹತ್ತನೇ ವಾರ್ಷಿಕೋತ್ಸವ ಸಂಭ್ರಮದಲ್ಲಿದೆ. ಹಿರಿಯ ಪತ್ರಕರ್ತ ಎಸ್.ಕೆ. ಲಕ್ಷ್ಮೀಶ್ ಅವರ ಸಂಪಾದಕತ್ವದಲ್ಲಿ ಆರಂಭವಾಗಿ ಮುನ್ನಡೆಯುತ್ತಿರುವ ಸಂಸ್ಥೆ ಜೂನ್ 19, 2025ಕ್ಕೆ ಹತ್ತು ವಸಂತಗಳನ್ನು ಪೂರೈಸಿ ಹನ್ನೊಂದರ ಹರೆಯಕ್ಕೆ ಕಾಲಿಟ್ಟಿದೆ. ಕೊಡಗಿನ ಡಿಜಿಟಲ್ ಮಾಧ್ಯಮ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ನ್ಯೂಸ್ ಡೆಸ್ಕ್‌ನ ದಶ ವಾರ್ಷಿಕೋತ್ಸವ ಶುಭ ಸಂದರ್ಭದಲ್ಲಿ ಮತ್ತಷ್ಟು ಯಶಸ್ಸು, ಕೀರ್ತಿ, ಪ್ರೋತ್ಸಾಹ ಗಳಿಸಲಿ ಎಂದು Coorg Buzz ಬಳಗವು ಪ್ರೀತಿಯಿಂದ ಹಾರೈಸುತ್ತಿದೆ. […]
ದುಬೈ ಕೂರ್ಗ್ ಕ್ರಿಕೆಟ್ ಫೆಸ್ಟ್ ಸೀಸನ್ 02 – ತಂಡಗಳ ಖರೀದಿಗೆ ಜು.20ರವರೆಗೆ ಅವಕಾಶ..!

Coorg Buzz Correspondent Dubai : ಉದ್ಯೋಗ ಹಾಗೂ ವಿವಿಧ ಕಾರಣಗಳಿಂದ ದುಬೈನಲ್ಲಿ ನೆಲೆಸಿರುವ ಕೊಡಗಿನ ಯುವಕರಿಗಾಗಿ ದುಬೈ ಕೂರ್ಗ್ ಕ್ರಿಕೆಟ್ ಫೆಸ್ಟ್ ಸೀಸನ್ 02 ಆಯೋಜಿಸಲಾಗಿದೆ. ಕೊಡಗಿನ ಯುವಕರ ತಂಡ ಕಳೆದ ಬಾರಿ ಸೀಸನ್ 01 ಅನ್ನು ಯಶಸ್ವಿಯಾಗಿ ಆಯೋಜಿಸಿತ್ತು. ಇದೀಗ ಎರಡನೇ ವರ್ಷದ ಟೂರ್ನಿಗಾಗಿ ವೇದಿಕೆ ಸಿದ್ಧ ಮಾಡಿಕೊಳ್ಳುತ್ತಿದೆ. ಈ ಬಾರಿ ಹತ್ತು ತಂಡಗಳಿಗೆ ಅವಕಾಶ ಕಲ್ಪಿಸಲಾಗಿದೆ. ಎರಡು ಗ್ರೂಪ್‌ಗಳಾಗಿ ಮಾಡಿ ಲೀಗ್ ಮಾದರಿಯಲ್ಲಿ ಪಂದ್ಯಾವಳಿ ನಡೆಸಲು ಉದ್ದೇಶಿಸಲಾಗಿದೆ. ಪ್ರತಿ ಪಂದ್ಯವು 05 ಓವರ್‌ಗೆ […]
ಮಾಜಿ ಸೈನಿಕ ಗಿರೀಶ್ ನಾಪತ್ತೆ: ಶೋಧ ಕಾರ್ಯ ಚುರುಕು

ಚೆಟ್ಟಳ್ಳಿ ನಿವಾಸಿ ಮಾಜಿ ಸೈನಿಕ ಗಿರೀಶ್ (Girish) (46)ಎಂಬವರು ನಾಪತ್ತೆ. ಗಿರೀಶ್ ಕುಶಾಲನಗರದ (Kushalnagara) ಎಸ್.ಎಲ್.ಎನ್ ಸಂಸ್ಥೆ ಯ ಉದ್ಯೋಗಿ ಇವರ ಬೈಕ್ ಕುಶಾಲನಗರದ ತೆಪ್ಪದಕಂಡಿ ಬಳಿ ಪತ್ತೆಯಾಗಿತ್ತು. ತೆಪ್ಪದಕಂಡಿ ಬಳಿ ಹರಿಯುತ್ತಿರುವ ಕಾವೇರಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವುದು ಎಂದು ಶಂಕೆಯಾಗಿದೆ ಕುಶಾಲನಗರ ಪಟ್ಟಣ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿದೆ. ಕುಶಾಲನಗರ ಪೊಲೀಸರು, ಅಗ್ನಿ ಶಾಮಕ ದಳ, ಎನ್ ಡಿಆರ್ ಎಫ್ ಸಿಬ್ಬಂದಿಗಳಿಂದ ಶೋಧ ಕಾರ್ಯಾಚರಣೆ (investigation) ನಡೆಯುತ್ತಿದೆ.
ಕೊಡಗಿನಲ್ಲಿ ತುರ್ತಾಗಿ BSNL ಸೇವೆ ಸರಿಪಡಿಸಲು ಕೇಂದ್ರ ಸಚಿವರಿಗೆ ಯದುವೀರ್ ಮನವಿ

ಕೊಡಗಿನಲ್ಲಿ ಹೆಚ್ಚಾಗಿರುವ ಬಿಎಸ್‌ಎನ್‌ಎಲ್ ನೆಟ್‌ವರ್ಕ್ ( BSNLNetwork) ವ್ಯವಸ್ಥೆಯನ್ನು ಸರಿಪಡಿಸಬೇಕು. ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಕೇಂದ್ರ ದೂರ ಸಂಪರ್ಕ ಸಚಿವ ಜ್ಯೋತಿರಾದಿತ್ಯ ಸಿಂಧಿಯಾಗೆ ಮೈಸೂರು-ಕೊಡಗು ಸಂಸದ ಯದುವೀರ್ (Yaduveer) ಕೃಷ್ಣದತ್ತ ಚಾಮರಾಜ ಒಡೆಯರ್ ಮನವಿ ಮಾಡಿದ್ದಾರೆ. ನವದೆಹಲಿಯಲ್ಲಿ ಕೇಂದ್ರ ಸಚಿವರನ್ನು ಭೇಟಿ ಮಾಡಿದ ಸಂಸದ ಯದುವೀರ್, ಕೊಡಗಿನಲ್ಲಿ ಈಗ ಅತ್ಯಂತ ತುರ್ತಾಗಿ ಈ ಸಮಸ್ಯೆ ಪರಿಹರಿಸಬೇಕು ಎಂದು ಮನವಿ ಮಾಡಿದರು.ಈ ಸಂಬಂಧ ಯದುವೀರ್ ಅವರು ಪತ್ರವೊಂದನ್ನು ಸಚಿವರಿಗೆ ನೀಡಿದ್ದಾರೆ ಕೊಡಗಿನಲ್ಲಿ ಇತ್ತೀಚೆಗೆ ಧಾರಾಕಾರ […]
ರಾಷ್ಟ್ರಮಟ್ಟದ ಫುಟ್ಬಾಲ್ ಪಂದ್ಯಾಟ: ದ್ವಿತೀಯ ಸ್ಥಾನ ಮುಡಿಗೇರಿಸಿಕೊಂಡ ಕೊಡಗು ಸೈನಿಕ ಶಾಲೆ

ಒಡಿಶಾದ (Odisha)ಭುವನೇಶ್ವರದಲ್ಲಿ ನಡೆದ ರಾಷ್ಟ್ರಮಟ್ಟದ ಅಂತರ ಸೈನಿಕ ಶಾಲೆಗಳ ಫುಟ್ಬಾಲ್ ಪಂದ್ಯಾವಳಿಯಲ್ಲಿ(National Inter-Sainik Schools Football Tournament)ಕೊಡಗು ಸೈನಿಕ ಶಾಲೆಯ ಜೂನಿಯರ್ ತಂಡವು ಪ್ರಥಮ ಬಾರಿಗೆ ದ್ವಿತೀಯ ಸ್ಥಾನವನ್ನು ಪಡೆದು ಪ್ರಶಸ್ತಿ ಹಾಗೂ ಟ್ರೋಫಿಯನ್ನು ಗಳಿಸಿದೆ. ಈ ಸಾಧನೆಯೊಂದಿಗೆ ಶಾಲೆಯು ಜಿಲ್ಲೆಗೆ ಕೀರ್ತಿ ತಂದಿದೆ. ಕ್ರೀಡಾಕೂಟದಿಂದ ಮರಳಿದ ವಿದ್ಯಾರ್ಥಿಗಳನ್ನು ಕೂಡಿಗೆ ಅಂಜಲಾ ವಿದ್ಯಾನಿಕೇತನ ಶಾಲೆಯಿಂದ ಅಲಂಕಾರಗೊಂಡ ವಾಹನದಲ್ಲಿ ಮೆರವಣಿಗೆಯ ಮೂಲಕ ಸೈನಿಕ ಶಾಲೆಗೆ ಕರೆತರಲಾಯಿತು. ಪ್ರಾಂಶುಪಾಲ ಕರ್ನಲ್ ಅಮರ್ ಜೀತ್ ಸಿಂಗ್ ಮಲ್ಲಾರ್ಪಣೆ ಮೂಲಕ ಮೆರವಣಿಗೆಗೆ ಚಾಲನೆ […]
ಬೆಂಗಳೂರಿನಲ್ಲಿ ಕೊಡಗಿನ ಯುವಕ ಆತ್ಮಹತ್ಯೆ

ಸುಂಟಿಕೊಪ್ಪ ಸಮೀಪದ ಕಂಬಿಬಾಣೆ ಕಾಲೋನಿ ನಿವಾಸಿ ಸುರೇಶ್ ಹಾಗೂ 7ನೇ ಹೊಸಕೋಟೆ ಗ್ರಾಮ ಪಂಚಾಯಿತಿ ಸದಸ್ಯೆ ಚಂದ್ರಾವತಿರವರ ಪುತ್ರ ಗಗನ್ (21) ಎಂಬುವವರು ನೆನ್ನೆ ರಾತ್ರಿ ಬೆಂಗಳೂರಿನಲ್ಲಿ(Bangalore) ತಾನು ವಾಸವಿದ್ದ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ (Sucide)ಮಾಡಿಕೊಂಡಿದ್ದಾರೆ. ತಾಯಿಯ ಮುಖ ನೋಡುವ ಮೊದಲೇ ಇಹಲೋಕ ತ್ಯಜಿಸಿದ ಬೆಂಗಳೂರಿನಲ್ಲಿ ಖಾಸಗಿ ಸಂಸ್ಥೆಯಲ್ಲಿ ಉದ್ಯೋಗದಲ್ಲಿದ್ದ ಗಗನ್ ರೀಲ್ಸ್ ಕೂಡ ಮಾಡುತ್ತಿದ್ದರು. ಕಳೆದ ಎರಡು ದಿವಸಗಳಿಂದ ತಾಯಿಗೆ ಕರೆ ಮಾಡಿ ನನಗೆ ಹುಷಾರಿಲ್ಲ, ಬನ್ನಿ ಎಂದು ಪದೇ ಪದೇ ಕರೆದಿದ್ದ ಎನ್ನಲಾಗಿದೆ. […]