ರಾಜ್ಯಮಟ್ಟದ ಸಾಹಿತ್ಯ ಸ್ಪರ್ಧೆ – ಸ್ಮಿತಾ ಅಮೃತರಾಜ್ ಅವರ ಅತೀ ಸಣ್ಣ ಕಥೆಗೆ ಪ್ರಶಸ್ತಿ..!

ಮಡಿಕೇರಿ : ಬಂಟ್ವಾಳದ ಯುವವಾಹಿನಿ ವತಿಯಿಂದ ಆಯೋಜಿಸಲಾಗಿದ್ದ ರಾಜ್ಯಮಟ್ಟದ ಸಾಹಿತ್ಯ ಸ್ಪರ್ಧೆಯಲ್ಲಿ ಕೊಡಗಿನ ಸಾಹಿತಿ ಸ್ಮಿತಾ ಅಮೃತರಾಜ್ ಸಂಪಾಜೆ ಅವರಿಗೆ ಪ್ರಶಸ್ತಿ ಲಭಿಸಿದೆ. ಕವಿ, ಸಾಹಿತಿ ಬಿ. ತಮ್ಮಯ್ಯ ಅವರ ನೆನಪಿಗಾಗಿ ಅತೀ ಸಣ್ಣ ಕಥೆ ಹಾಗೂ ಲಲಿತ ಪ್ರಬಂಧ ಸ್ಪರ್ಧೆ ಆಯೋಜಿಸಲಾಗಿತ್ತು. ಅತೀ ಸಣ್ಣ ಕಥೆ ವಿಭಾಗದಲ್ಲಿ ಸ್ಮಿತಾ ಅವರ ʼಸ್ಪೋಟʼ ಕಥೆಗೆ ದ್ವಿತೀಯ ಬಹುಮಾನ ಸಿಕ್ಕಿದೆ. ಪ್ರಥಮ ಬಹುಮಾನ ಸುಲ್ತಾನ್ ಮನ್ಸೂರು ಮಂಚಿ(ಜಾಥಾ) ಪಾಲಾಗಿದೆ. ಲಲಿತ ಪ್ರಬಂಧ ಸ್ಪರ್ಧೆಯಲ್ಲಿ ರೂಪಕಲಾ ಆಳ್ವ ಅವರ ಬೂಬು […]
ಕಾಂಗ್ರೆಸ್‌ಗೆ ಪ್ರತೀಕ್ ಪೊನ್ನಣ್ಣ ಗುಡ್ ಬೈ? – ಉಸಿರುಗಟ್ಟಿಸುವ ವಾತಾವರಣದಲ್ಲಿ ನಾನು ಇರಲ್ಲ ಎಂದ ಯುವ ನಾಯಕ..!

ಮಡಿಕೇರಿ : ಕೆಲ ವರ್ಷದ ಹಿಂದಷ್ಟೇ ಕಾಂಗ್ರೆಸ್ ಸೇರ್ಪಡೆಯಾಗಿದ್ದ ಸಾಮಾಜಿಕ ಕಾರ್ಯಕರ್ತ ಪ್ರತೀಕ್ ಪೊನ್ನಣ್ಣ ಇದೀಗ ದಿಢೀರ್ ಆಗಿ ಕಾಂಗ್ರೆಸ್ ತ್ಯಜಿಸುವ ನಿರ್ಧಾರಕ್ಕೆ ಬಂದಿದ್ದಾರೆ. ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಈ ಬಗ್ಗೆ ಅವರು ಮಾಹಿತಿ ಹಂಚಿಕೊಂಡಿದ್ದು, ತಾನು ಈ ನಿರ್ಧಾರಕ್ಕೆ ಬರಲು ಕಾರಣ ಏನು ಅನ್ನೋದನ್ನೂ ಉಲ್ಲೇಖಿಸಿದ್ದಾರೆ. ನಿನ್ನೆ ಬೆಂಗಳೂರಿನಲ್ಲಿ ನಡೆದ ಕೊಡವ ಸಮಾಜದಕ್ಕೆ ಜಮೀನು ನೀಡಿದ್ದಕ್ಕಾಗಿ ಶಾಸಕರು ಹಾಗೂ ಸರ್ಕಾರಕ್ಕೆ ಅಭಿನಂದನೆ ಸಲ್ಲಿರುವ ಕಾರ್ಯಕ್ರಮದ ವಿಚಾರವೇ ಈಗ ಪ್ರತೀಕ ಈ ನಿರ್ಧಾರಕ್ಕೆ ಕಾರಣವಾಗಿದೆ. ಈ […]
ಕೊಡಗಿನಲ್ಲಿ ಧಾರಾಕಾರ ಮಳೆ ಹಿನ್ನೆಲೆ – ಸೋಮವಾರ ಜಿಲ್ಲೆಯ ಶಾಲೆ, ಕಾಲೇಜಿಗೆ ರಜೆ ಘೋಷಣೆ..!

ಮಡಿಕೇರಿ : ಕೊಡಗು ಜಿಲ್ಲೆಯ ಬಹುತೇಕ ಕಡೆ ಭಾನುವಾರ ನಿರಂತರ ಮಳೆಯಾಗಿದೆ. ಮಳೆ ಬಿರುಸಿನಿಂದ ಮುಂದುವರೆಯುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ನಾಳೆ (ಜೂನ್ 16) ಜಿಲ್ಲೆ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜಿಗೆ ರಜೆ ಘೋಷಿಸಲಾಗಿದೆ. ದ್ವಿತೀಯ ಪಿಯುಸಿ ಪರೀಕ್ಷೆ ನಿಗದಿಯಂತೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಮಂತರ್ ಗೌಡ ಮತ್ತು ಪೊನ್ನಣ್ಣರಿಗೆ ಉತ್ತಮ ರಾಜಕೀಯ ಭವಿಷ್ಯ ಇದೆ – ಎ.ಎಸ್.ಪಿ ಫೈರ್ ಬ್ರಾಂಡ್ ಆಗ್ತಾರೆ : ಸಿ.ಎಂ ಸಿದ್ದರಾಮಯ್ಯ ಭವಿಷ್ಯ

ಬೆಂಗಳೂರು : ವೀರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ ಹಾಗೂ ಮಡಿಕೇರಿ ಶಾಸಕ ಡಾ. ಮಂತರ್ ಗೌಡ ಅವರಿಗೆ ರಾಜಕೀಯದಲ್ಲಿ ಉತ್ತಮ ಭವಿಷ್ಯವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯ ವ್ಯಕ್ತಪಡಿಸಿದರು. ವಸಂತನಗರದ ಕೊಡವ ಸಭಾಂಗಣದಲ್ಲಿ ಕೊಡವ ಸಮಾಜದ ಸನ್ಮಾನ ಸ್ವೀಕರಿಸಿ ಮಾತನಾಡಿದರು. ಪೊನ್ನಣ್ಣ ಕೊಡವ ಸಮಾಜದ ಆಸ್ತಿ ಆಗಿದ್ದಾರೆ. ಮುಂದೆ ರಾಜ್ಯದ ಆಸ್ತಿ ಆಗ್ತಾರೆ ಎಂದ ಅವರು, ಕೊಡವ ಸಮಾಜ ಸಂಖ್ಯೆಯಲ್ಲಿ ಅಲ್ಪಸಂಖ್ಯಾತರಾದರೂ ದೇಶ ಸೇವೆಯಲ್ಲಿ ಇವರಿಗೆ ಸರಿಸಮಾನವಾದವರು ಬೇರೆ ಇಲ್ಲ. ಸಂಸ್ಕೃತಿ, ಶಿಸ್ತಿನಲ್ಲಿ ಕೊಡವರು ಮುಂಚೂಣಿಯಲ್ಲಿದ್ದಾರೆ. ಸೈನ್ಯಕ್ಕೆ, […]
CSIR-NIIST ಮತ್ತು ಕೊಡಗು ವಿಶ್ವವಿದ್ಯಾಲಯದ ನಡುವೆ ಒಪ್ಪಂದಕ್ಕೆ ಸಹಿ – ಏನಿದರ ವಿಶೇಷತೆ..?

ಕುಶಾಲನಗರ : ಮುಂದಿನ ಪೀಳಿಗೆಯ ಆಹಾರ ಸಂಸ್ಕರಣೆಯು ಸ್ಮಾರ್ಟ್, ಸ್ವಚ್ಛ ಮತ್ತು ಸುಸ್ಥಿರ ಆಹಾರ ವ್ಯವಸ್ಥೆಯತ್ತ ಒಂದು ಹೆಜ್ಜೆಯಾಗಿದೆ ಎಂದು ಕೊಡಗು ವಿಶ್ವವಿದ್ಯಾಲಯದ ಕುಲಪತಿಗಳಾಗಿರುವ ಪ್ರೊ. ಅಶೋಕ ಸಂಗಪ್ಪ ಆಲೂರರವರು ಅಭಿಪ್ರಾಯ ವ್ಯಕ್ತಪಡಿಸಿದರು. ತಿರುವನಂತಪುರಂನ ಸಿಎಸ್ಐಆರ್-ರಾಷ್ಟ್ರೀಯ ಅಂತರಶಿಸ್ತೀಯ ವಿಜ್ಞಾನ ಮತ್ತು ತಂತ್ರಜ್ಞಾನ ಸಂಸ್ಥೆ (ಸಿಎಸ್ಐಆರ್-ಎನ್ಐಐಎಸ್ಟಿ)ಯಲ್ಲಿ ಎನ್ಐಐಎಸ್ಟಿಯ ಸುವರ್ಣ ಮಹೋತ್ಸವ ಆಚರಣೆಗಾಗಿ ಆಯೋಜಿಸಿದ್ದ ‘ಮುಂದಿನ ಪೀಳಿಗೆಯ ಆಹಾರ ತಂತ್ರಜ್ಞಾನಗಳು: ಸುಸ್ಥಿರ ನಾಳೆಗಾಗಿ ಸಂಸ್ಕರಣೆ’ ಕುರಿತ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮುಂದಿನ ಪೀಳಿಗೆಯ ಆಹಾರ ಸಂಸ್ಕರಣೆ ಕೇವಲ ತಾಂತ್ರಿಕ […]
ʼಕೊಡವ ಮುಸ್ಲಿಂ ಅಸೋಸಿಯೇಷನ್ ದಫ್ ಮುಟ್ಟ್’ ತಂಡ ಅಸ್ತಿತ್ವಕ್ಕೆ – ದೂರದರ್ಶನ ಕೇಂದ್ರದಲ್ಲಿ ಪ್ರದರ್ಶನ ಮತ್ತು ದಾಖಲೀಕರಣ…

ಪೊನ್ನಂಪೇಟೆ : ಕೊಡವ ಮುಸ್ಲಿಂ ಅಸೋಸಿಯೇಷನ್ (ಕೆಎಂಎ) ಅಧೀನದಲ್ಲಿ ‘ಕೆ.ಎಂ.ಎ. ದಫ್ ಮುಟ್ಟ್ (ರಾತೀಬ್)’ ತಂಡವನ್ನು ನೂತನವಾಗಿ ಅಸ್ತಿತ್ವಕ್ಕೆ ತರಲಾಗಿದೆ. ಕೊಡವ ಮುಸ್ಲಿಂ ಸಮುದಾಯದ ಸಾಂಪ್ರದಾಯಿಕ ಧಾರ್ಮಿಕ ಕಲೆಯಾದ ‘ದಫ್ ಮುಟ್ಟ್’ ಅನ್ನು ಮತ್ತಷ್ಟು ಪ್ರೋತ್ಸಾಹಿಸಿ ಅದರ ಅಸ್ತಿತ್ವವನ್ನು ಉಳಿಸಿ ಬೆಳೆಸುವ ಹಿನ್ನೆಲೆಯಲ್ಲಿ ಈ ತಂಡವನ್ನು ರಚಿಸಲಾಗಿದೆ. ಹೊಸದಾಗಿ ರಚನೆಯಾದ ಈ ತಂಡ ಬೆಂಗಳೂರು ದೂರದರ್ಶನ ಕೇಂದ್ರದಲ್ಲಿ ದಫ್ ಮುಟ್ಟ್ ಪ್ರದರ್ಶನವನ್ನು ಪ್ರಸ್ತುತಪಡಿಸಿತು. ಈ ಮೂಲಕ ಕೊಡವ ಮುಸ್ಲಿಮರ ಸಾಂಪ್ರದಾಯಿಕ ಧಾರ್ಮಿಕ ಕಲೆಯನ್ನು ಬೆಂಗಳೂರು ದೂರದರ್ಶನ ಚಂದನ […]
ಕೃತಕ ಕಾಲು ಜೋಡಣೆ ಯಶಸ್ವಿ – ಅಸಹಾಯಕನಿಗೆ ನೆರವಾದ ಮಾಧ್ಯಮ ಸ್ಪಂದನ ಟೀಂ..!

ಗೋಣಿಕೊಪ್ಪ : ತಿತಿಮತಿ ಸಮೀಪದ ನೊಕ್ಯಾ ನಿವಾಸಿ ಪಿ.ಡಿ. ಸುಬ್ರಮಣಿ ಅವರಿಗೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಶನಿವಾರ ಕೃತಕ ಕಾಲು ಅಳವಡಿಸಲಾಗಿದೆ. ಮನೆಯಿಂದ ಬೆಂಗಳೂರಿಗೆ ತೆರಳಲು ಅವರಿಗೆ ವಾಹನದ ಅಗತ್ಯತೆ ಪಾಲಿಬೆಟ್ಟ ಚೆಶೆರ್ ಹೋಮ್ ಪ್ರಾಂಶುಪಾಲರಾದ ಶಿವರಾಜ ಮಾಧ್ಯಮ ಸ್ಪಂದನ ಗಮನ ಸೆಳೆದಿದ್ದರು. ಯುವ ಕಾಂಗ್ರೆಸ್ ಮಡಿಕೇರಿ ವಿಧಾನಸಭಾ ಅಧ್ಯಕ್ಷರಾದ ಅನೂಪ್ ಕುಮಾರ್ ಸುಂಟಿಕೊಪ್ಪ ಅವರು ವ್ಯವಸ್ಥೆ ಮಾಡಿದ ವಾಹನದಲ್ಲಿ ಶುಕ್ರವಾರ ರಾತ್ರಿ ಬೆಂಗಳೂರಿಗೆ ಕರೆದುಕೊಂಡು ಹೋಗಲಾಯಿತು. ಮಾಧ್ಯಮ ಸ್ಪಂದನ ತಂಡದ ಸದಸ್ಯ ಪುತ್ತಂ ಪದೀಪ್ ಬಾಲನ್, […]
ಕ್ಲೋಸ್‌ಬರ್ನ್ ಸರ್ಕಾರಿ ಶಾಲೆ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ ಕೊಡುಗೆಯಾಗಿ ನೀಡಿದ ಬೆಳೆಗಾರ…

ಮಡಿಕೇರಿ : ಕ್ಲೋಸ್‌ಬರ್ನ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಸ್ಥಳೀಯ ಬೆಳೆಗಾರರಾದ ಜೆ. ಶರತ್ ಬಾಬುರವರು ಪ್ರಸಕ್ತ ಶೈಕ್ಷಣಿಕ ಸಾಲಿಗೆ ಅಗತ್ಯವಿರುವ ನೋಟ್ ಪುಸ್ತಕಗಳನ್ನು ಕೊಡುಗೆಯಾಗಿ ನೀಡಿದರು. ಶಾಲೆಯಲ್ಲಿ ೧ರಿಂದ ೭ನೇ ತರಗತಿವರೆಗೆ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಎಲ್ಲಾ ವಿದ್ಯಾರ್ಥಿಗಳಿಗೆ ಅಗತ್ಯವಿರುವ ನೋಟ್ ಪುಸ್ತಕಗಳನ್ನು ಖರೀದಿಸಿ ಶಿಕ್ಷಕರಿಗೆ ತಲುಪಿಸಿದ್ದರು. ಶಿಕ್ಷಕರು ಅದನ್ನು ಇತ್ತೀಚೆಗೆ ವಿದ್ಯಾರ್ಥಿಗಳಿಗೆ ವಿತರಿಸಿದರು. ಸರ್ಕಾರಿ ಶಾಲೆ ಹಾಗೂ ವಿದ್ಯಾರ್ಥಿಗಳ ಮೇಲಿನ ಕಾಳಜಿಯಿಂದ ನೆರವಾದ ಶರತ್ ಬಾಬು ಅವರ ಕಾರ್ಯಕ್ಕೆ ಶಿಕ್ಷಕರು ಹಾಗೂ ಶಾಲಾಭಿವೃದ್ಧಿ […]
16 ನೇ ಹಣಕಾಸಿನ ಆಯೋಗಕ್ಕೆ ಹೆಚ್ಚುವರಿ ಜ್ಞಾಪನಾ ಪತ್ರ ಸಲ್ಲಿಸಿದ ಮುಖ್ಯಮಂತ್ರಿ – ಒಕ್ಕೂಟದ ವ್ಯವಸ್ಥೆಯನ್ನು ಬಲಪಡಿಸಿ ಎಲ್ಲಾ ರಾಜ್ಯಗಳಿಗೂ ನ್ಯಾಯ ಒದಗಿಸಲು ಒತ್ತಾಯ

ನವದೆಹಲಿ : 16 ನೇ ಹಣಕಾಸಿನ ಆಯೋಗಕ್ಕೆ ಹೆಚ್ಚುವರಿ ಮನವಿಯನ್ನು ಸಲ್ಲಿಸುವುದರ ಜೊತೆಗೆ ಜೊತೆ ಒಕ್ಕೂಟದ ವ್ಯವಸ್ಥೆಯನ್ನು ಬಲಪಡಿಸಿ ಎಲ್ಲಾ ರಾಜ್ಯಗಳಿಗೂ ನ್ಯಾಯ ಒದಗಿಸಬೇಕು ಎಂದು ಒತ್ತಿ ಹೇಳಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು 16 ನೇ ಹಣಕಾಸಿನ ಆಯೋಗದ ಸಭೆಯಲ್ಲಿ ಭಾಗವಹಿಸಿದ ನಂತರ ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದರು. 16 ನೇ ಹಣಕಾಸಿನ ಆಯೋಗದ ಅಧ್ಯಕ್ಷ ಅರವಿಂದ ಪರಗಾರಿಯಾ ಮತ್ತು ಸದಸ್ಯರನ್ನು ಭೇಟಿಯಾಗಿ ಹೆಚ್ಚುವರಿ ಜ್ಞಾಪನಾ ಪತ್ರವನ್ನು ಆಯೋಗಕ್ಕೆ ಸಲ್ಲಿಸಲಾಗಿದೆ ಎಂದರು. ಯಾರಿಗೂ ಅನ್ಯಾಯವಾಗಬಾರದು […]
ದುಬಾರೆ ಹಾಗೂ ಬರಪೊಳೆಯಲ್ಲಿ ರಿವರ್ ರ‍್ಯಾಫ್ಟಿಂಗ್ - ಪರವಾನಗಿ ನವೀಕರಣ ಹಾಗೂ ಫಿಟ್ನೆಸ್ ಪ್ರಮಾಣಪತ್ರ ಪಡೆದು ಕಾರ್ಯನಿರ್ವಹಿಸಲು ಸೂಚನೆ

ಮಡಿಕೇರಿ : ಜಿಲ್ಲೆಯ ದುಬಾರೆ ಹಾಗೂ ಬರಪೊಳೆಯಲ್ಲಿ ರಿವರ್ ರ‍್ಯಾಫ್ಟಿಂಗ್ (ಜಲಕ್ರೀಡೆ) ನಡೆಸುವ ರ್ಯಾಪ್ಟ್ ಮಾಲೀಕರು ಕಡ್ಡಾಯವಾಗಿ ಪರವಾನಗಿ ನವೀಕರಣ ಹಾಗೂ ಫಿಟ್ನೆಸ್ ಪ್ರಮಾಣಪತ್ರ ಪಡೆದು ಜಲಕ್ರೀಡೆ ನಡೆಸಲು ರಿವರ್ ರ್ಯಾಪ್ಟಿಂಗ್ ನಿರ್ವಹಣೆ ಮತ್ತು ಮೇಲುಸ್ತುವಾರಿ ಸಮಿತಿ ಸಭೆಯಲ್ಲಿ ನಿರ್ಧರಿಸಲಾಯಿತು. ಹಾರಂಗಿ ಜಲಾಶಯದ ಬಳಿಯ ಪ್ರವಾಸಿ ಮಂದಿರದಲ್ಲಿ ಶಾಸಕರಾದ ಡಾ.ಮಂತರ್ ಗೌಡ ಅವರ ಉಪಸ್ಥಿತಿಯಲ್ಲಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರ ಅಧ್ಯಕ್ಷತೆಯಲ್ಲಿ ನಡೆದ ರಿವರ್ ರ‍್ಯಾಫ್ಟಿಂಗ್ ನಿರ್ವಹಣೆ ಮತ್ತು ಮೇಲುಸ್ತುವಾರಿ ಸಮಿತಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಯಿತು. […]